• Tag results for HUBBALLI

ಬ್ಯಾಂಕ್ ರಾಬರಿ: ಇನ್ನೆರಡೇ ದಿನದಲ್ಲಿ ಮದುವೆಯಾಗಬೇಕಿದ್ದ ಆರೋಪಿ ಬಂಧನ; ಪೊಲೀಸರಿಗೆ ಬಹುಮಾನ ಘೋಷಣೆ

ಮಂಕಿ ಕ್ಯಾಪ್ ಧರಿಸಿದ ಕಳ್ಳ ಕೊಪ್ಪಿಕರ್ ರಸ್ತೆಯಲ್ಲಿನ ಎಸ್ ಬಿ ಐ ಬ್ಯಾಂಕಿಗೆ ನುಗ್ಗಿದ್ದ. ಕೈಯ್ಯಲ್ಲಿ ಚಾಕು ಹಿಡಿದಿದ್ದ.

published on : 18th January 2022

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿ ಸಾವು ಪ್ರಕರಣ, ವರದಿ ಕೇಳಿದ ಜಿಲ್ಲಾಧಿಕಾರಿ

ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಕೋವಿಡ್-19 ರೋಗಿಯೊಬ್ಬರು ಮೃತಪಟ್ಟಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಿ.ಸಿ. ಕರಿಗೌಡರ್ ಅವರಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನಿರ್ದೇಶಿಸಿದ್ದಾರೆ.

published on : 18th January 2022

ಹುಬ್ಬಳ್ಳಿ-ಧಾರವಾಡ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ ಕೊರೋನಾ: 150ಕ್ಕೂ ಹೆಚ್ಚು ಸಿಬ್ಬಂದಿಯಲ್ಲಿ ಸೋಂಕು ಪತ್ತೆ

ಅವಳಿ ನಗರದ ಪೊಲೀಸರಿಗೆ ಮಹಾಮಾರಿ ಕೊರೋನಾ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹುಬ್ಬಳ್ಳಿ - ಧಾರವಾಡ ಕಮೀಷನರೇಟ್ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚೂ ಪೊಲೀಸರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

published on : 17th January 2022

ಹುಬ್ಬಳ್ಳಿಯಲ್ಲಿ ಕೊರೋನಾ ಆರ್ಭಟ: 2 ದಿನಗಳಲ್ಲಿ 18 ವಿದ್ಯಾರ್ಥಿಗಳಿಗೆ ಸೋಂಕು

ಕಳೆದ ಎರಡು ದಿನಗಳ ಅವಧಿಯಲ್ಲಿ ಹುಬ್ಬಳ್ಳಿ ನಗರದ 18 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಎಲ್ಲಾ ವಿದ್ಯಾರ್ಥಿಗಳು ಲಕ್ಷಣರಹಿತರಾಗಿದ್ದಾರೆ ಮತ್ತು ನಗರದಲ್ಲಿ ಮನೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ .

published on : 10th January 2022

ಹುಬ್ಬಳ್ಳಿ: ಚೇತನ್ ಪಬ್ಲಿಕ್ ಶಾಲೆಯ ಒಂದೇ ತರಗತಿಯ 9 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

ಹುಬ್ಬಳ್ಳಿಯ ಚೇತನ್ ಪಬ್ಲಿಕ್ ಶಾಲೆಯಲ್ಲಿ ಒಂದೇ ತರಗತಿಯ ಕನಿಷ್ಠ ಒಂಬತ್ತು ವಿದ್ಯಾರ್ಥಿಗಳಿಗೆ ಕೋವಿಡ್-ಪಾಸಿಟಿವ್ ದೃಢಪಟ್ಟಿದೆ. 

published on : 4th January 2022

ಬಿಜೆಪಿ ರಾಜ್ಯ ಕಾರ್ಯಕಾರಿಣಿ: 2023'ರ ಚುನಾವಣೆಗೆ "ಮಿಷನ್ 150" ಕಾರ್ಯಸೂಚಿ

ರಾಜ್ಯ ವಿಧಾನಸಭೆ ಚುನಾವಣೆ 2023 ರಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ನಡೆದಿರುವ 2 ದಿನಗಳ ಕಾರ್ಯಕಾರಿಣಿ ಸಭೆಯಲ್ಲಿ ಮಿಷನ್ 150 ನ್ನು  ಬಿಜೆಪಿಯ ಮುಖ್ಯಕಾರ್ಯಸೂಚಿಯನ್ನಾಗಿರಿಸಿಕೊಳ್ಳಲಾಗಿದೆ. 

published on : 28th December 2021

ಬಿಜೆಪಿ ಕಾರ್ಯಕಾರಣಿ ಸಭೆ: ಪಕ್ಷ ಸಂಘಟನೆ ಕುರಿತು ಚರ್ಚೆ

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಪಕ್ಷದ ಸಾಧನೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧತೆ ಮತ್ತು ಮತಾಂತರ ವಿರೋಧಿ ಮಸೂದೆಗೆ ಒತ್ತು ನೀಡುವ ವಿಚಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ.

published on : 28th December 2021

ಹುಬ್ಬಳ್ಳಿಯಲ್ಲಿಂದು ಬಿಜೆಪಿ ಕಾರ್ಯಕಾರಿಣಿ ಸಭೆ: ಜೆಪಿ. ನಡ್ಡಾ ಗೈರು

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬರೋಬ್ಬರಿ 11 ವರ್ಷದ ಬಳಿಕ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಗೆ ಸಜ್ಜಾಗಿ ನಿಂತಿದೆ. ಮಂಗಳವಾರದಿಂದ 2 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕಾರಿಣಿಗೆ ಹುಬ್ಬಳ್ಳಿ ರಸ್ತೆಗಳು ಸಿಂಗಾರಗೊಂಡಿದೆ. ಇಡೀ ಹುಬ್ಬಳ್ಳಿ ನಗರದಲ್ಲಿ ಕೇಸರಿ ರಾರಾಜಿಸುತ್ತಿದೆ.

published on : 28th December 2021

ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಅಸೆಂಬ್ಲಿ ಚುನಾವಣೆ: ಅರುಣ್ ಸಿಂಗ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ನೇತೃತ್ವದಲ್ಲಿಯೇ ಪಕ್ಷ ಮುಂದಿನ ಅಸೆಂಬ್ಲಿ ಚುನಾವಣೆಯನ್ನು ಎದುರಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

published on : 28th December 2021

ನಾಯಕತ್ವ ಬದಲಾವಣೆ ಗುಸುಗುಸು: ಬಿರುಕು- ಭಿನ್ನಮತಕ್ಕೆ ಬ್ರೇಕ್ ಹಾಕಲು ನಡ್ಡಾ ಎಂಟ್ರಿ; ಪಕ್ಷ ತೊರೆಯುುವವರಿಗೆ ತಕ್ಕ ಶಾಸ್ತಿ!

ಬುಧವಾರ ಹುಬ್ಬಳ್ಳಿಯಲ್ಲಿ ನಡೆಯುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.

published on : 27th December 2021

ಡಿ. 28ರಂದು ಬಿಜೆಪಿ ಕೋರ್ ಕಮಿಟಿ ಸಭೆ: ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ; ಚುನಾವಣೆ ಫಲಿತಾಂಶದ ಕೂಲಂಕುಷ ಚರ್ಚೆ

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕಳೆದ ಕೆಲವು ದಿನಗಳಿಂದ ಸರ್ಕಾರ ಮತ್ತು ಸಂಘಟನೆಗಳಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಕೂಲಂಕುಷ ವಾಗಿ  ಚರ್ಚೆ ಮಾಡಲಾಗುವುದು.

published on : 24th December 2021

ದೇಶಭಕ್ತರ ಮೂರ್ತಿಗಳಿಗೆ ಅಗೌರವ ತೋರಿಸುವುದು ಸರಿಯಲ್ಲ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಸರ್ಕಾರ ಸಹಿಸುವುದಿಲ್ಲ: ಸಿಎಂ ಬೊಮ್ಮಾಯಿ

ದೇಶಭಕ್ತರ ಮೂರ್ತಿಗಳನ್ನು ಅವರು ದೇಶಕ್ಕೆ ಮಾಡಿದ ತ್ಯಾಗ, ಬಲಿದಾನ, ಸೇವೆಗಳ ಗೌರವಾರ್ಥವಾಗಿ ಸ್ಥಾಪನೆ ಮಾಡಲಾಗುತ್ತದೆ. ಅದು ಶಿವಾಜಿ ಮಹಾರಾಜರ ಪ್ರತಿಮಯಾಗಿರಲಿ, ಸಂಗೊಳ್ಳಿ ರಾಯಣ್ಣ ಪ್ರತಿಮೆಯಾಗಿರಲಿ, ಅವರಿಗೆ ಗೌರವವನ್ನು ಕೊಡಬೇಕಾದದ್ದು ನಮ್ಮ ಕರ್ತವ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 19th December 2021

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಜನ್ಮದಿನವನ್ನು 'ಹೊಂಡ ಗುಂಡಿಗಳ' ದಿನವನ್ನಾಗಿ ಆಚರಿಸಿದ ಕಾಂಗ್ರೆಸ್!

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಹುಟ್ಟುಹಬ್ಬವನ್ನು 'ಹೊಂಡ ಗುಂಡಿಗಳ' ದಿನವನ್ನಾಗಿ ಆಚರಿಸುವಂತೆ ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡಿ ಮಠ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟರ್ ವೊಂದನ್ನು ಹಾಕಿದ ನಂತರ, ಶೆಟ್ಟರ್ ಗೆ  ಅದೇ ರೀತಿಯ ಶುಭಾಶಯಗಳು ಹರಿದುಬರುತ್ತಿವೆ.

published on : 17th December 2021

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸದ್ಯದಲ್ಲಿಯೇ ಆಪ್ ಆಧಾರಿತ ಟ್ಯಾಕ್ಸಿ ಸೇವೆ: ಪ್ರಯಾಣಿಕರು ನಿರಾತಂಕ

ಪ್ರಯಾಣಿಕರಿಗೆ ಯಾವುದೇ ರೀತಿಯಲ್ಲಿ ಕಷ್ಟವಾಗದೆ ನಿರಾತಂಕವಾಗಿ ವಿಮಾನ ನಿಲ್ದಾಣಕ್ಕೆ ಬಂದು ಹೋಗಲು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೆ ನಿಲ್ದಾಣದ ಆವರಣದಲ್ಲಿ ಸದ್ಯದಲ್ಲಿಯೇ ಆಪ್ ಆಧಾರಿತ ಟ್ಯಾಕ್ಸಿ ಸೇವೆ ಲಭ್ಯವಾಗಲಿದೆ.

published on : 11th December 2021

ದಟ್ಟ ಮಂಜಿನ ಕಾರಣ ಲ್ಯಾಂಡಿಂಗ್ ಆಗದ ವಿಮಾನ: ಆಗಸದಲ್ಲೇ 3 ಸುತ್ತು ಸುತ್ತಿದ ಸಿಎಂ ಬೊಮ್ಮಾಯಿ ಇದ್ದ ಪ್ಲೈಟ್

ಪ್ರತಿಕೂಲ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ವಿಮಾನ  ಲ್ಯಾಂಡಿಂಗ್ ಗೆ ಸಮಸ್ಯೆಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

published on : 10th December 2021
1 2 3 4 5 6 > 

ರಾಶಿ ಭವಿಷ್ಯ