• Tag results for H D Kumaraswamy

ಪಕ್ಷ ಸಂಘಟನೆಯ ಕೊರತೆಯೇ ಜೆಡಿಎಸ್ ಸೋಲಿಗೆ ಕಾರಣ: ಹೆಚ್ ಡಿ ಕುಮಾರಸ್ವಾಮಿ

ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಕಾರ್ಯಕರ್ತರ ಒತ್ತಾಸೆ ಮೇರೆಗೆ ಅಭ್ಯರ್ಥಿಗಳನ್ನು ಸ್ಪರ್ಧೆಗೆ ನಿಲ್ಲಿಸಿದ್ದೆವು ಹೊರತು ನಮಗೆ ಈ ಫಲಿತಾಂಶದ ಬಗ್ಗೆ ತಿಳಿದಿತ್ತು ಎಂದು ಹೇಳಿದ್ದಾರೆ.

published on : 2nd November 2021

ಈ ವರ್ಷದ ಕನ್ನಡ ಹಬ್ಬ 'ಯುವರತ್ನ' ಪುನೀತ್ ಗೆ ಅರ್ಪಣೆ: ಹೆಚ್ ಡಿ ಕುಮಾರಸ್ವಾಮಿ   

ಕನ್ನಡಿಗರ ಪಾಲಿಗೆ ಇಂದು ನವೆಂಬರ್ 1 ಹಬ್ಬದ ದಿನ. 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಇಡೀ ಕರುನಾಡಿನಲ್ಲಿ ಮನೆ ಮಾಡಿದೆ. ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕಿದ್ದ ಹೊತ್ತಲ್ಲೇ ಅಭಿಮಾನಿಗಳಿಂದ ಪ್ರೀತಿಯಿಂದ ಅಪ್ಪು, ಪವರ್ ಸ್ಟಾರ್, ಯುವರತ್ನ ಎಂದು ಕರೆಸಿಕೊಳ್ಳುವ ನಟ ಪುನೀತ್ ರಾಜಕುಮಾರ್ ಹಠಾತ್ ನಿಧನರಾಗಿ ಕಾರ್ಮೋಡ ಕವಿದಿದೆ.

published on : 1st November 2021

ಸಿಂದಗಿ-ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ, ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಕಣ 

ರಾಜ್ಯದ ಪ್ರಮುಖ ಮೂರು ಪಕ್ಷಗಳಿಗೆ ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಬುಧವಾರ ಸಾಯಂಕಾಲ 7 ಗಂಟೆಗೆ ತೆರೆ ಬೀಳಲಿದೆ.

published on : 27th October 2021

ಆರ್ ಎಸ್ ಎಸ್ ಬಗ್ಗೆ ಸಿದ್ದರಾಮಯ್ಯ, ಕುಮಾರಸ್ವಾಮಿಯವರು ಮನಬಂದಂತೆ ಮಾತನಾಡುವುದು ಸರಿಯಲ್ಲ: ಬಿ ಎಸ್ ಯಡಿಯೂರಪ್ಪ 

ಆರ್ ಎಸ್ ಎಸ್ ಬಗ್ಗೆ ರಾಜಕೀಯ ನಾಯಕರು ಹಗುರವಾಗಿ, ಮನಬಂದಂತೆ ಮಾತನಾಡುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

published on : 21st October 2021

'ಬಿಜೆಪಿ ನಾಯಕರ ಮನೆಯಲ್ಲಿ ಹೆಗ್ಗಣ ಸತ್ತು ಬಿದ್ದಿದೆ, ಒಬ್ಬೊಬ್ಬರದ್ದು ಒಂದೊಂದು ಇತಿಹಾಸವಿದೆ': ವೈಯಕ್ತಿಕ ಟೀಕೆಗೆ ಕುಮಾರಸ್ವಾಮಿ ತಿರುಗೇಟು

ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರಿಗೆ ಇಬ್ಬರು ಹೆಂಡತಿಯರು ಎಂದು ವೈಯಕ್ತಿಕವಾಗಿ ಟ್ವೀಟ್ ಮೂಲಕ ಟೀಕಿಸಿರುವ ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

published on : 20th October 2021

'ಬೈಗಮಿ' ಕುಮಾರಸ್ವಾಮಿ ಬೇರೆಯವರ ತಪ್ಪುಗಳ ಬಗ್ಗೆ ಮಾತನಾಡುವಾಗ ಜಾಗರೂಕರಾಗಿರಬೇಕು; ವೈಯಕ್ತಿಕವಾಗಿ ಬಿಜೆಪಿ ಟೀಕೆ 

ಅಕ್ಟೋಬರ್ 30ರಂದು ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ, ಆರೋಪ-ಪ್ರತ್ಯಾರೋಪ ತಾರಕಕ್ಕೇರುತ್ತಿದೆ. ಟೀಕಿಸುವ ಭರದಲ್ಲಿ ರಾಜಕೀಯ ನಾಯಕರಿಗೆ ತಾವೇನು ಮಾತನಾಡುತ್ತಿದ್ದೇವೆ, ಹೇಳುತ್ತಿದ್ದೇವೆ ಎಂಬ ಪರಿವೆಯೇ ಇಲ್ಲದಂತೆ ಕಂಡುಬರುತ್ತಿದೆ.

published on : 20th October 2021

'ಆರ್ ಎಸ್ ಎಸ್ ನಿಂದ ನಾನು ಕಲಿಯುವುದು ಏನೂ ಇಲ್ಲ, ಪ್ರಧಾನಿ ಮೋದಿ ಅದರ ಕೈಗೊಂಬೆ': ಹೆಚ್.ಡಿ. ಕುಮಾರಸ್ವಾಮಿ

ಆರ್ ಎಸ್ ಎಸ್ ಶಾಖೆಯಿಂದ ತಮಗೆ ಕಲಿಯುವುದು ಏನೂ ಇಲ್ಲ, ಆರ್ ಎಸ್ ಎಸ್ ನಿಂದ ತರಬೇತಿ ಪಡೆದು ಬಂದವರು ವಿಧಾನಸೌಧದಲ್ಲಿ ಕಲಾಪ ನಡೆಯುವಾಗ ನೀಲಿ ಚಿತ್ರ ವೀಕ್ಷಣೆ ಮಾಡುತ್ತಿರುತ್ತಾರೆ ಎಂದು ಬಿಜೆಪಿ ನಾಯಕರಿಗೆ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

published on : 20th October 2021

ಆರ್ ಎಸ್ ಎಸ್ ಬಗ್ಗೆ ಕುಮಾರಸ್ವಾಮಿಯವರು ಪದೇಪದೇ ಮಾತನಾಡುವುದು ಯಾರನ್ನು ಮೆಚ್ಚಿಸೋಕೆ: ಸಿಎಂ ಬೊಮ್ಮಾಯಿ ಪ್ರಶ್ನೆ 

ಹಾನಗಲ್‌ನಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಬಿಜೆಪಿ ಅಂದ್ರೆನೆ ಅಭಿವೃದ್ಧಿ. ಬಿಜೆಪಿ ಸರಕಾರದಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 17th October 2021

ಸಿದ್ಧಹಸ್ತ ಸೂತ್ರಧಾರಿಯಿಂದ ಅಲ್ಪಸಂಖ್ಯಾತರ ನರಮೇಧ: ಕುಮಾರಸ್ವಾಮಿ

ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ, ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ...

published on : 16th October 2021

ಸಿದ್ದರಾಮಯ್ಯ v/s ಡಿಕೆ ಶಿವಕುಮಾರ್ ಷಡ್ಯಂತ್ರ ನಡೀತಿದೆ; 23 ಜನ ಏಕೆ ಹೋದರೆಂದು ಕುಮಾರಸ್ವಾಮಿ ಯೋಚಿಸಲಿ: ಎಸ್.ಟಿ. ಸೋಮಶೇಖರ್

ರಾತ್ರಿ ಎಂಟು ಗಂಟೆಗೆ ಬಂದ್ ಆಗುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಇಂದು ಮತ್ತು ನಾಳೆ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

published on : 14th October 2021

ದೇವೇಗೌಡರೂ ವಿರೋಧ ಪಕ್ಷ ನಾಯಕರಾಗಿದ್ದರು; 'ಪುಟಗೋಸಿ' ಎನ್ನುವುದು ಸಾಂವಿಧಾನಿಕ ಹುದ್ದೆಗೆ ತೋರಿಸುವ ಅಗೌರವ: ಸಿದ್ದರಾಮಯ್ಯ

ಹಿಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಮುರಿದು ಬೀಳಲು ಹೆಚ್ ಡಿ ಕುಮಾರಸ್ವಾಮಿಯವರೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

published on : 13th October 2021

ಪುಟಗೋಸಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಮೈತ್ರಿ ಸರ್ಕಾರವನ್ನು ಕಿತ್ತೆಸೆದರು: ಹೆಚ್.ಡಿ. ಕುಮಾರಸ್ವಾಮಿ

ಈ ಸರ್ಕಾರದ ಅವಧಿಯೊಳಗೆ ವಿರೋಧ ಪಕ್ಷದ ನಾಯಕ ಸ್ಥಾನ ಗಿಟ್ಟಿಸಿಕೊಳ್ಳಲು ಕುಮಾರಸ್ವಾಮಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ಅವರ ಪಕ್ಷದಲ್ಲಿದ್ದ 23 ಮಂತ್ರಿಗಳನ್ನು ಬೀದಿಗೆ ತಂದು ನಿಲ್ಲಿಸಿದರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

published on : 12th October 2021

'ಆರ್ ಎಸ್ ಎಸ್ ಜೊತೆ ನನಗೆ ಸಂಬಂಧವಿಲ್ಲ': ಹೆಚ್.ಡಿ. ದೇವೇಗೌಡ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿಯವರು ಪ್ರತಿಪಾದಿಸಿದಂತೆ ತಮಗೆ ಆರ್ ಎಸ್ ಎಸ್ ಜೊತೆ ಯಾವುದೇ ಸಂಬಂಧವಿಲ್ಲ. ಈ ಹಿಂದೆ ತಾವು ಆರ್ ಎಸ್ ಎಸ್ ನ್ನು ಹೊಗಳಿದ್ದು ಕೂಡ ಇಲ್ಲ ಎಂದು ಹೇಳಿದ್ದಾರೆ.

published on : 9th October 2021

'ನೆಹರೂ, ಇಂದಿರಾ ಗಾಂಧಿಯವ್ರೇ ಆರ್ ಎಸ್ ಎಸ್ ಬಗ್ಗೆ ಮಾತನಾಡಿದಾಗ ಹಚಾ ಅಂತ ಹೋದ್ವಿ, ಇನ್ನು ಇವರ್ಯಾರ್ರಿ ನಮ್ಮ ಲೆಕ್ಕಕ್ಕೆ'?: ಕೆ.ಎಸ್. ಈಶ್ವರಪ್ಪ

ದೇಶದ ಮೊದಲ ಪ್ರಧಾನ ಮಂತ್ರಿ ಜವಹರಲಾಲ್ ನೆಹರೂ ಮತ್ತು ಅವರ ಪುತ್ರಿ ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

published on : 8th October 2021

ಕರ್ನಾಟಕ ವಿಧಾನಸಭೆ ಚುನಾವಣೆ: '123 ಮಿಷನ್' ಘೋಷವಾಕ್ಯದೊಂದಿಗೆ ಜೆಡಿಎಸ್ ಸ್ಪರ್ಧೆ, ಮೂರು ಕ್ಷೇತ್ರಗಳಿಗೆ ಬದಲಿ ಅಭ್ಯರ್ಥಿಗಳ ಹುಡುಕಾಟ 

2023ರ ವಿಧಾನಸಭೆ ಚುನಾವಣೆಯಲ್ಲಿ 123 ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಜೆಡಿಎಸ್ ಪಣತೊಟ್ಟಿದೆ.  ಜೆಡಿಎಸ್ ಎಲ್ಲಾ 224 ಕ್ಷೇತ್ರಗಳ ಮೇಲೆ ಗಮನಹರಿಸುವುದಿಲ್ಲ. ಗೆಲುವಿಗೆ ಸಾಧ್ಯತೆಯಿರುವ ಕ್ಷೇತ್ರಗಳ ಮೇಲೆ ಗಮನಹರಿಸಲಿದೆ. 20-25 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸುತ್ತಿದೆ.

published on : 28th September 2021
1 2 3 4 > 

ರಾಶಿ ಭವಿಷ್ಯ