• Tag results for Hathras

ಹತ್ರಾಸ್ ಪ್ರಕರಣ: ಮುಖ್ಯ ಆರೋಪಿ ತಲೆಗೆ ಒಂದು ಲಕ್ಷ ರೂ. ಬಹುಮಾನ ಘೋಷಣೆ

ತಮ್ಮ ಪುತ್ರಿಗೆ ಕಿರುಕುಳ ನೀಡಿದ್ದರ ವಿರುದ್ಧ ದೂರು ನೀಡಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆ ಮಾಡಿದ ಎರಡು ದಿನಗಳ ನಂತರ, ಪೊಲೀಸರು ಸಾಸ್ನಿ ಪ್ರದೇಶದ ನೊಜಲ್‌ಪುರ ಗ್ರಾಮದ ಪ್ರಮುಖ ಆರೋಪಿ ಗೌರವ್ ಸೊಂಗ್ರಾ ತಲೆಗೆ ಒಂದು ಲಕ್ಷ ರೂ ಬಹುಮಾನ ಘೋಷಿಸಲಾಗಿದೆ.

published on : 3rd March 2021

ಲೈಂಗಿಕ ಕಿರುಕುಳ ಸಂತ್ರಸ್ಥ ಬಾಲಕಿಯ ತಂದೆಯನ್ನು ಹತ್ಯೆಗೈದ ಆರೋಪಿ

ಲೈಂಗಿಕ ಕಿರುಕುಳ ಸಂಬಂಧ ದೂರು ನೀಡಿದ್ದ ಸಂತ್ರಸ್ಥೆಯ ತಂದೆಯನ್ನೇ ಆರೋಪಿ ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್‌ ನಲ್ಲಿ ನಡೆದಿದೆ.

published on : 2nd March 2021

ಅನಾರೋಗ್ಯ ಪೀಡಿತ ತಾಯಿಯ ಭೇಟಿ ಮಾಡಲು ಪತ್ರಕರ್ತ ಸಿದ್ದಿಕಿ ಕಪ್ಪನ್ ಗೆ 5 ದಿನಗಳ ಜಾಮೀನು ನೀಡಿದ 'ಸುಪ್ರೀಂ'!

ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿ ಮಾಡಲು ಕೇರಳದ ಪತ್ರಕರ್ತ ಸಿದ್ದಿಕಿ ಕಪ್ಪನ್ ಗೆ ಸುಪ್ರೀಂ ಕೋರ್ಟ್ 5 ದಿನಗಳ ಜಾಮೀನು ನೀಡಿದೆ.

published on : 15th February 2021

ಹತ್ರಾಸ್ ಗ್ಯಾಂಗ್ ರೇಪ್: ಪಿಎಫ್ಐ ವಿರುದ್ಧ ನ್ಯಾಯಾಲಯಕ್ಕೆ ಮೊದಲ ಚಾರ್ಜ್ ಶೀಟ್ ಸಲ್ಲಿಸಿದ ಇಡಿ!

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ನಂತರ 'ಕೋಮು ಗಲಭೆಗಳನ್ನು ಪ್ರಚೋದಿಸಲು ಮತ್ತು ಭಯೋತ್ಪಾದನೆಯನ್ನು ಹರಡಲು' ಯತ್ನಿಸಲಾಗಿತ್ತು ಎಂದು ಆರೋಪಿಸಿರುವ ಜಾರಿ ನಿರ್ದೇಶನಾಲಯ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ವಿದ್ಯಾರ್ಥಿ ಘಟಕದ ವಿರುದ್ಧ ತನ್ನ ಮೊದಲ ಚಾರ್ಜ್‌ಶೀಟ್ ಸಲ್ಲಿಸಿದೆ.

published on : 12th February 2021

ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ಚಾರ್ಜ್ ಶೀಟ್ ದಾಖಲಿಸಿದ ಸಿಬಿಐ

ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಚಾರ್ಜ್ ಶೀಟ್ ದಾಖಲಿಸಿದೆ. 

published on : 18th December 2020

ಪತ್ರಕರ್ತ ಸಿದ್ದಿಕ್ ಕಪ್ಪನ್ ಬಂಧನ ಪ್ರಶ್ನಿಸಿ ಅರ್ಜಿ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೊರ್ಟ್ ನೊಟೀಸ್

ಹತ್ರಾಸ್ ಗೆ ತೆರಳುತ್ತಿದ್ದ ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರತಿಕ್ರಿಯೆ ಕೇಳಿ ನೊಟೀಸ್ ಜಾರಿ ಮಾಡಿದೆ. 

published on : 16th November 2020

ಹತ್ರಾಸ್, ಬಲ್ಲಿಯಾ ಆರೋಪಿಗಳನ್ನು ಸಮರ್ಥಿಸಿಕೊಂಡ ಕರ್ಣಿ ಸೇನಾ 

ಕರ್ಣಿ ಸೇನಾ ಸಂಘಟನೆ ಹತ್ರಾಸ್, ಬಲ್ಲಿಯಾ ಆರೋಪಿಗಳ ಬೆಂಬಲಕ್ಕೆ ಧಾವಿಸಿದೆ. 

published on : 24th October 2020

ಹತ್ರಾಸ್ ಗ್ಯಾಂಗ್ ರೇಪ್: ಜನಾಂಗೀಯ, ಕೋಮು ಗಲಭೆ ಸೃಷ್ಟಿಸುವ ಸಂಚು ಆಗಿದೆಯೇ? ಎಸ್ ಟಿಎಫ್ ತನಿಖೆ

ಜನಾಂಗೀಯ ಮತ್ತು ಕೋಮು ಗಲಭೆಗಳನ್ನು ಪ್ರಚೋದಿಸುವ ಸಂಚಿನಿಂದಾಗಿ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆಯೇ ಎಂಬುದರ  ಕುರಿತು ವಿಶೇಷ ಕಾರ್ಯಪಡೆಯ ತಂಡ ತನಿಖೆ ನಡೆಸಲಿದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿದೆ.

published on : 16th October 2020

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಎಸ್ಐಟಿ ತನಿಖೆ ಪೂರ್ಣ, ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಕೆ

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪೂರ್ಣಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಶೀಘ್ರದಲ್ಲಿಯೇ ಉತ್ತರಪ್ರದೇಶ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

published on : 16th October 2020

ಹತ್ರಾಸ್ ಅತ್ಯಾಚಾರ ಪ್ರಕರಣ ತನಿಖೆ: ತೀರ್ಪು ಕಾಯ್ದಿರಿಸಿದ 'ಸುಪ್ರೀಂ'

ಉತ್ತರಪ್ರದೇಶದಲ್ಲಿ ನಡೆದ ಹತ್ರಾಸ್ ಘಟನೆಯ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ.

published on : 15th October 2020

ಮಧ್ಯರಾತ್ರಿ ಹತ್ರಾಸ್ ಗ್ಯಾಂಗ್ ರೇಪ್ ಸಂತ್ರಸ್ತೆಯ ಅಂತ್ಯ ಸಂಸ್ಕಾರ ಮಾನವ ಹಕ್ಕುಗಳಿಗೆ ವಿರುದ್ಧ: ಹೈಕೋರ್ಟ್

ಹತ್ರಾಸ್ ಗ್ಯಾಂಗ್ ರೇಪ್ ಸಂತ್ರಸ್ತೆಯ ಅಂತ್ಯ ಸಂಸ್ಕಾರವನ್ನು ರಾತ್ರೋರಾತ್ರಿ ನೆರವೇರಿಸಿದ್ದು ಮಾನವ ಹಕ್ಕುಗಳಿಗೆ ವಿರುದ್ಧವಾದದ್ದು ಎಂದು ಅಲ್ಲಹಾಬಾದ್ ಹೈಕೋರ್ಟ್ ಹೇಳಿದೆ.

published on : 14th October 2020

ಹತ್ರಾಸ್ ಪ್ರಕರಣ: ಮೃತಳ ಪೋಷಕರು ಮತ್ತು ಗ್ರಾಮಸ್ಥರ ಹೇಳಿಕೆಗಳನ್ನು ದಾಖಲಿಸಿದ ಸಿಬಿಐ

ಹತ್ರಾಸ್ ಸಂತ್ರಸ್ತೆಯ ಕುಟುಂಬದ ಮತ್ತು ಅನೇಕ ಗ್ರಾಮಸ್ಥರ ಹೇಳಿಕೆಗಳನ್ನು ಮಂಗಳವಾರ ದಾಖಲಿಸಿರುವ ಕೇಂದ್ರ ತನಿಖಾ ದಳ(ಸಿಬಿಐ), ಸಂತ್ರಸ್ತೆಯ ಮನೆ ಮತ್ತು ಶವ ಸಂಸ್ಕಾರ ಮಾಡಿದ ಜಾಗವನ್ನು ವಿಡಿಯೋ ಚಿತ್ರೀಕರಣವನ್ನೂ ಮಾಡಿದೆ ಎಂದು ಮೂಲಗಳು ತಿಳಿಸಿವೆ.

published on : 13th October 2020

ಹತ್ರಾಸ್‌ ಪ್ರಕರಣ: ಸರ್ಕಾರದ ನಡವಳಿಗೆ ಅನೈತಿಕ, ಅಮಾನವೀಯ- ರಾಹುಲ್‌ ಗಾಂಧಿ

ಉತ್ತರ ಪ್ರದೇಶದ ಹತ್ರಾಸ್‌ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್‌ ಸರ್ಕಾರ ಆರೋಪಿಗಳನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ, ರಾಜ್ಯ ಸರ್ಕಾರದ ವರ್ತನೆ ಅನೈತಿಕ ಮತ್ತು ಅಮಾನವೀಯ ಎಂದಿದ್ದಾರೆ.

published on : 12th October 2020

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರಕರಣ ದಾಖಲಿಸಿಕೊಂಡ ಸಿಬಿಐ!

ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಭಾನುವಾರ ಕೈಗೆತ್ತಿಕೊಂಡಿದೆ. 

published on : 11th October 2020

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ: ಸಿಬಿಐನಿಂದ ತನಿಖೆ!

ದೇಶಾದ್ಯಂತ ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿರುವ ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ತನಿಖಾ ದಳ (ಸಿಬಿಐ) ಅಧಿಕೃತವಾಗಿ ತನಿಖಾ ಜವಾಬ್ದಾರಿಯನ್ನು ವಹಿಸಿಕೊಂಡಿದೆ.

published on : 10th October 2020
1 2 3 4 5 >