• Tag results for High Court

ನ್ಯಾಯಬೆಲೆ ಅಂಗಡಿಗಳ ಹಂಚಿಕೆ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸಂಬಂಧಿಸಿದ ಪ್ರಕರಣಗಳು, ವಿಶೇಷವಾಗಿ ನ್ಯಾಯಬೆಲೆ ಅಂಗಡಿಗಳು ಹಾಗೂ ಕಾರ್ಡ್‌ಗಳ ಹಂಚಿಕೆಗೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಆಯುಕ್ತರಿಗೆ ಈ ಸಮಸ್ಯೆಯನ್ನು ಪರಿಶೀಲಿಸಿ ಪರಿಹರಿಸುವಂತೆ ಸೂಚಿಸಿದೆ.

published on : 4th December 2022

ಪಿಎಸ್ಐ ನೇಮಕಾತಿ ಹಗರಣ: ಜಾಮೀನು ಕೋರಿ ಬಿಜೆಪಿ ನಾಯಕಿ ದಿವ್ಯಾ, ವೈಜನಾಥ್‌ರಿಂದ ಅರ್ಜಿ, ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಹಗರಣದ ಪ್ರಮುಖ ಆರೋಪಿ, ಬಿಜೆಪಿಯ ನಾಯಕಿ ಹಾಗೂ ಕಲಬುರ್ಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಮತ್ತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪಡೆಯ (ಕೆಎಸ್‌ಆರ್‌ಪಿ) ಸಹಾಯಕ ಕಮಾಡೆಂಟ್‌ (ಡಿವೈಎಸ್ಪಿ) ವೈಜನಾಥ್‌ ಕಲ್ಯಾಣಿ ರೇವೂರ ಅವರು ಜಾಮೀನು ಕೋರಿ ಹೈಕೋರ್ಟ್‌ನ ಕಲಬುರ್ಗಿ ಪೀಠದಲ್ಲಿ ಅರ್ಜಿ ಸಲ್

published on : 4th December 2022

ನೋಂದಾಯಿತರು ಆಸ್ಪತ್ರೆ-ಔಷಧಾಲಯ ನಿರ್ವಹಿಸುವಂತೆ ನೋಡಿಕೊಳ್ಳುವುದು ಫಾರ್ಮಸಿ ಕೌನ್ಸಿಲ್, ಸರ್ಕಾರದ ಕರ್ತವ್ಯ: ಸುಪ್ರೀಂ

ನಕಲಿ ಆಸ್ಪತ್ರೆಗಳು, ಔಷಧಾಲಯಗಳು ಮತ್ತು ಮೆಡಿಕಲ್ ಸ್ಟೋರ್‌ಗಳನ್ನು ನಡೆಸುವುದು ಅಂತಿಮವಾಗಿ ನಾಗರಿಕರ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಟೀಕಿಸಿದ ಸುಪ್ರೀಂ ಕೋರ್ಟ್, ಆಸ್ಪತ್ರೆಗಳು/ಮೆಡಿಕಲ್ ಸ್ಟೋರ್‌ಗಳನ್ನು ನೋಂದಾಯಿತರು ನಿರ್ವಹಿಸುವಂತೆ ನೋಡಿಕೊಳ್ಳುವುದು ಫಾರ್ಮಸಿ ಕೌನ್ಸಿಲ್ ಮತ್ತು ರಾಜ್ಯ ಸರ್ಕಾರಗಳ ಕರ್ತವ್ಯ ಎಂದು ಅಭಿಪ್ರಾಯಪಟ್ಟಿದೆ. 

published on : 3rd December 2022

ಬೇರೊಂದು ಧರ್ಮಕ್ಕೆ ಮತಾಂತರಗೊಂಡ ಬಳಿಕ ಜಾತಿಯಾಧಾರಿತ ಮೀಸಲಾತಿ ಬಯಸುವಂತಿಲ್ಲ: ಮದ್ರಾಸ್‌ ಹೈಕೋರ್ಟ್‌ ಮಹತ್ವದ ತೀರ್ಪು

ಮತಾಂತರದೊಂದಿಗೆ ಜಾತಿ ಮುಂದುವರಿಯುವುದಿಲ್ಲ ಎಂದು ಹೇಳುವ ಮೂಲಕ ಇಸ್ಲಾಂಗೆ ಮತಾಂತರಗೊಂಡ ಹಿಂದೂ ಯುವಕನ ಹಿಂದುಳಿದ ಕೋಟಾ ಹಕ್ಕನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದೆ.

published on : 3rd December 2022

ಟ್ರಾಫಿಕ್ ಕಂಟ್ರೋಲ್ ರೂಮ್ ಸಂಖ್ಯೆಗಳನ್ನು ಆಸ್ಪತ್ರೆಗಳೊಂದಿಗೆ ಹಂಚಿಕೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಮೀಸಲಾದ ತುರ್ತು ಸಂಚಾರ ನಿಯಂತ್ರಣ ಕೊಠಡಿ ಸಂಖ್ಯೆಗಳನ್ನು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳೊಂದಿಗೆ ಹಂಚಿಕೊಳ್ಳಲು ಮತ್ತು ಆ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆ್ಯಂಬುಲೆನ್ಸ್ ಚಾಲಕರ ದತ್ತಾಂಶ ಪಡೆದುಕೊಂಡು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.

published on : 3rd December 2022

ತಮಿಳುನಾಡಿನ ದೇವಾಲಯಗಳಾದ್ಯಂತ ಮೊಬೈಲ್ ಫೋನ್ ನಿಷೇಧ: ಮದ್ರಾಸ್ ಹೈಕೋರ್ಟ್

ತಮಿಳುನಾಡಿನಾದ್ಯಂತ ಎಲ್ಲಾ ದೇವಾಲಯಗಳಲ್ಲೂ ಮೊಬೈಲ್ ಫೋನ್ ಗಳನ್ನು ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಆದೇಶ ಪ್ರಕಟಿಸಿದೆ.

published on : 3rd December 2022

ಇಸ್ರೋ ಬೇಹುಗಾರಿಕೆ ಪ್ರಕರಣ: ನಾಲ್ವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಕೇರಳ ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

1994ರ ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸೇರಿದಂತೆ ನಾಲ್ವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಕೇರಳ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

published on : 2nd December 2022

ಹರಾಜಿನ ಮೂಲಕವೇ ಸರ್ಕಾರಿ ಆಸ್ತಿಗಳ ಹಂಚಿಕೆ ಮಾಡಬೇಕು: ಸರ್ಕಾರಕ್ಕೆ ಹೈಕೋರ್ಟ್ ತಾಕೀತು

ಸರ್ಕಾರಿ ಆಸ್ತಿಯನ್ನು ಹಂಚಿಕೆ ಮಾಡುವ ವಿಚಾರದಲ್ಲಿ ನಡೆಯವ ರಾಜಕೀಯ ಹಸ್ತಕ್ಷೇಪದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ಸಾರ್ವಜನಿಕ ಆಸ್ತಿ ಹಂಚಿಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಗುರುವಾರ ತಾಕೀತು ಮಾಡಿದೆ.

published on : 2nd December 2022

ವಕೀಲರಿಂದ ಭಕ್ಷೀಸು ಪಡೆಯಲು ಪೇಟಿಎಂ ಬಳಕೆ: ಜಮಾದಾರ್‌ ಅಮಾನತು ಮಾಡಿದ ಅಲಹಾಬಾದ್‌ ಹೈಕೋರ್ಟ್‌

ನ್ಯಾಯಾಲಯದ ಆವರಣದಲ್ಲೇ ವಕೀಲರಿಂದ ಇನಾಮಿನ ರೂಪದಲ್ಲಿ ಪೇಟಿಎಂನಲ್ಲಿ ಹಣ ಸಂಗ್ರಹಿಸುತ್ತಿದ್ದ ಜಮಾದಾರ್‌ ಒಬ್ಬರನ್ನು ಗುರುವಾರ ಅಲಾಹಾಬಾದ್‌ ಹೈಕೋರ್ಟ್‌ ಅಮಾನತು ಮಾಡಿದೆ.

published on : 1st December 2022

ಸುನಂದಾ ಪುಷ್ಕರ್ ಸಾವು ಪ್ರಕರಣ: ಶಶಿ ತರೂರ್ ಗೆ ಹೈಕೋರ್ಟ್ ನೋಟಿಸ್

ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಆರೋಪ ಮುಕ್ತಗೊಂಡಿರುವುದರ ವಿರುದ್ಧ ದೆಹಲಿ ಪೊಲೀಸರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

published on : 1st December 2022

ಬಾಬಾ ಬುಡನ್‌ ಗಿರಿಯಲ್ಲಿ 'ದತ್ತಾತ್ರೇಯ ಜಯಂತಿ' ನಡೆಸಲು ಹೈಕೋರ್ಟ್‌ ಅನುಮತಿ

ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ ಗಿರಿಯ ದತ್ತಾತ್ರೇಯ ಪೀಠದಲ್ಲಿ ಡಿಸೆಂಬರ್ 6 ರಿಂದ 3  ದಿನಗಳ ಕಾಲ ದತ್ತಾತ್ರೇಯ ಜಯಂತಿ ಆಚರಿಸಲು ಕರ್ನಾಟಕ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.

published on : 1st December 2022

ಪಿಎಫ್ಐ ಮೇಲಿನ ನಿಷೇಧ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್

ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.

published on : 30th November 2022

ಎಂಬೆಸಿ ಸಮೂಹದ ಅಧ್ಯಕ್ಷರಿಗೆ ಜಾರಿಯಾಗಿದ್ದ ಐಟಿ ನೋಟಿಸ್ ರದ್ದು

ಕಪ್ಪು ಹಣ (ಅಘೋಷಿತ ವಿದೇಶಿ ಆದಾಯ ಮತ್ತು ಆಸ್ತಿಗಳು) ಮತ್ತು ತೆರಿಗೆ ವಿಧಿಸುವ ಕಾಯ್ದೆಯಡಿಯಲ್ಲಿ ಎಂಬೆಸಿ ಸಮೂಹದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಜಿತೇಂದ್ರ ವಿರ್ವಾನಿ ಅವರಿಗೆ ಆದಾಯ ತೆರಿಗೆ ಇಲಾಖೆ ಜಾರಿ ಮಾಡಿದ್ದ ಮೌಲ್ಯಮಾಪನ ನೋಟಿಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

published on : 30th November 2022

ಪಿಎಫ್‌ಐ ನಿಷೇಧ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ)ಅಡಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

published on : 29th November 2022

ಜಾರ್ಖಂಡ್: ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಸ್ನೇಹಿತೆಯ ಬಾಲ್ಯವಿವಾಹ ತಡೆದ ಬಾಲಕಿ!

ಜಾರ್ಖಂಡ್‌ನ ಕೊಡೆರ್ಮಾದಲ್ಲಿ 13 ವರ್ಷದ ಬಾಲಕಿ ತನ್ನ ಸ್ನೇಹಿತೆಯ ಬಾಲ್ಯವಿವಾಹವನ್ನು ತಡೆದ ಘಟನೆ ನಡೆದಿದೆ. ಈ ಬಾಲಕಿ ಧೈರ್ಯ ಮಾಡಿ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿದ್ದಾಳೆ.

published on : 29th November 2022
1 2 3 4 5 6 > 

ರಾಶಿ ಭವಿಷ್ಯ