- Tag results for Himachal
![]() | ಹಿಮಾಚಲ ಪ್ರದೇಶ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ವಾದ್ರಾ ಪತ್ರ2013ರ ಕೇದಾರನಾಥ ದುರಂತದಂತೆಯೇ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ವಿನಾಶವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. |
![]() | ಜನ ಮಾಂಸ ತಿನ್ನುತ್ತಿದ್ದಾರೆ, ಆದ್ದರಿಂದಲೇ ಹಿಮಾಚಲದಲ್ಲಿ ಅನಾಹುತಗಳು ಮತ್ತೆ ಮತ್ತೆ ಸಂಭವಿಸುತ್ತಿವೆ: ಐಐಟಿ ನಿರ್ದೇಶಕಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಭಾರಿ ಹಾನಿಯನ್ನುಂಟು ಮಾಡಿದೆ. ಭೂಕುಸಿತಗಳು ಮತ್ತು ಮುಳುಗುವ ಮನೆಗಳ ವೀಡಿಯೊಗಳನ್ನು ನೋಡಿ ಪ್ರಪಂಚದಾದ್ಯಂತ ಜನರು ಆಘಾತಕ್ಕೊಳಗಾಗಿದ್ದಾರೆ. ಈ ಮಳೆಗಾಲದಲ್ಲಿ 238ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. |
![]() | ಅದಾನಿ ಗ್ರೂಪ್ ಖರೀದಿ ಬೆಲೆ ನಿಗದಿ ನಂತರ ಹಿಮಾಚಲದ ರೈತರು ಸೇಬುಗಳನ್ನು ಕಡಿಮೆ ಬೆಲೆಗೆ ಮಾರುತ್ತಿದ್ದಾರೆ: ಪ್ರಿಯಾಂಕಾಅದಾನಿ ಗ್ರೂಪ್ ಸೇಬು ಖರೀದಿ ಬೆಲೆ ಬಿಡುಗಡೆ ಮಾಡಿದ ನಂತರ ವಿಪತ್ತು ಪೀಡಿತ ಹಿಮಾಚಲ ಪ್ರದೇಶದಲ್ಲಿ ಸೇಬು ಬಾಕ್ಸ್‌ಗಳನ್ನು ಮೂರನೇ ಒಂದು ಭಾಗದಷ್ಟು ಅತಿ ಕಡಿಮೆ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ. |
![]() | ಈ ಸಂಕಷ್ಟಕ್ಕಿಂತ ಸಾವೇ ಉತ್ತಮ: ಹಿಮಾಚಲ ಭೂಕುಸಿತದ ಸಂತ್ರಸ್ತರು"ಇಂತಹ ದುಸ್ಥಿತಿಯಲ್ಲಿ ನೋವು ಅನುಭವಿಸುವುದಕ್ಕಿಂತ ಸಾಯುವುದೇ ಉತ್ತಮ" ಎಂದು ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಎಲ್ಲವನ್ನೂ ಕಳೆದುಕೊಂಡಿರುವ ಮಹಿಳೆ ಪ್ರಮೀಳಾ ತಮ್ಮ ಅಳಲು ತೋಡಿಕೊಂಡಿದ್ದಾರೆ. |
![]() | ಹಿಮಾಚಲದಲ್ಲಿ ಭೂಕುಸಿತ; ಕುಸಿದು ಬಿದ್ದ 8 ಕಟ್ಟಡಗಳು, ಶಿಮ್ಲಾದಲ್ಲಿ ಮತ್ತೊಂದು ಮೃತದೇಹ ಪತ್ತೆಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಅನ್ನಿ ಪ್ರದೇಶದಲ್ಲಿ ಗುರುವಾರ ಭಾರಿ ಭೂಕುಸಿತ ಸಂಭವಿಸಿದ್ದು, ಅಸುರಕ್ಷಿತವೆಂದು ಘೋಷಿಸಲಾದ ಕನಿಷ್ಠ ಎಂಟು ಕಟ್ಟಡಗಳು ಕುಸಿದು ಬಿದ್ದಿವೆ. ಹಲವು ಜನ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. |
![]() | ಹಿಮಾಚಲ ಪ್ರದೇಶ: ಭೂಕುಸಿತದಿಂದ ಧರೆಗುರುಳಿದ ಬಹುಮಹಡಿ ಕಟ್ಟಡಗಳು, ಹಲವರು ಸಿಲುಕಿರುವ ಶಂಕೆಹಿಮಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮಳೆಯಿಂದಾಗಿ ಪ್ರತೀನಿತ್ಯ ಅವಘಡ, ಪ್ರಾಣಹಾನಿ ವರದಿಯಾಗುತ್ತಲೇ ಇದೆ. |
![]() | ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಗೆ ಐವರು ಬಲಿ; ಪಂಜಾಬ್‌ನಲ್ಲಿ ಹೈ ಅಲರ್ಟ್ ಘೋಷಣೆಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೂಕುಸಿತ ಮತ್ತು ಮೇಘಸ್ಫೋಟದ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ ಐವರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ನಾಪತ್ತೆಯಾಗಿದ್ದಾರೆ. ಹಠಾತ್ ಪ್ರವಾಹದಿಂದಾಗಿ ಕೆಲವರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಪ್ರವಾಹದಿಂದ ತತ್ತರಿಸಿದ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ನೆರವು: 15 ಕೋಟಿ ರೂ. ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಆದೇಶಪ್ರವಾಹ ಹಾಗೂ ಭೂ ಕುಸಿತದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಆರ್ಥಿಕ ನೆರವು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ 15 ಕೋಟಿ ರೂಪಾಯಿಯನ್ನು ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. |
![]() | ಹಿಮಾಚಲ ಪ್ರದೇಶ: ಭಾರಿ ಮಳೆಯಿಂದಾಗಿ ವ್ಯಾಪಕ ನಷ್ಟ, ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಪ್ರಯತ್ನ: ಜೆಪಿ ನಡ್ಡಾಭಾರಿ ಮಳೆಯಿಂದಾಗಿ ಹಿಮಾಚಲ ಪ್ರದೇಶ ತತ್ತರಿಸಿದ್ದು, ಭಾರಿ ನಷ್ಟ ಉಂಟಾಗಿದೆ ಮತ್ತು ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾನುವಾರ ಹೇಳಿದ್ದಾರೆ. |
![]() | ಹಿಮಾಚಲ ಪ್ರದೇಶ ಪ್ರವಾಹ: 250ಕ್ಕೂ ಹೆಚ್ಚು ಜನರ ಸಾವಿನ ನಂತರ ಎಚ್ಚೆತ್ತ ಸರ್ಕಾರ, ರಸ್ತೆ ನಿರ್ಮಾಣ ನಿಯಮದಲ್ಲಿ ಬದಲಾವಣೆಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಪ್ರವಾಹದಲ್ಲಿ 250ಕ್ಕೂ ಮಂದಿ ಸಾವನ್ನಪ್ಪಿದ್ದ ನಂತರ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನಿಯಮಗಳನ್ನು ರಸ್ತೆ ನಿರ್ಮಾಣದಲ್ಲಿ ನಿಯಮಗಳನ್ನು ಬದಲಾಯಿಸಿದ್ದಾರೆ. ರಾಜ್ಯದ ಎಲ್ಲಾ ರಸ್ತೆಗಳಿಗೆ ಸರಿಯಾದ ಒಳಚರಂಡಿ ಮತ್ತು ಅಡ್ಡ ಚರಂಡಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಅವರು ಶುಕ್ರವಾರ ಹೇಳಿದ್ದಾರೆ. |
![]() | ಮಳೆ ಹೊಡೆತಕ್ಕೆ ತತ್ತರಿಸಿದ ಹಿಮಾಚಲ ಪ್ರದೇಶ: ಮೃತರ ಸಂಖ್ಯೆ 74ಕ್ಕೆ ಏರಿಕೆಮಳೆಯಿಂದ ತತ್ತರಿಸಿರುವ ಹಿಮಾಚಲ ಪ್ರದೇಶದಲ್ಲಿ ಮೃತಪಟ್ಟವರ ಸಂಖ್ಯೆ 74ಕ್ಕೆ ಏರಿಕೆಯಾಗಿದೆ. ಶಿಮ್ಲಾದಲ್ಲಿನ ಶಿವ ದೇವಾಲಯವೊಂದರ ಅವಶೇಷಗಳಿಂದ ಮತ್ತೊಂದು ದೇಹವನ್ನು ಹೊರತೆಗೆಯಲಾಗಿದ್ದು, ಚಂಬಾ ಜಿಲ್ಲೆಯಲ್ಲಿ ಮತ್ತಿಬ್ಬರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. |
![]() | ವರುಣನ ಆರ್ಭಟಕ್ಕೆ ಉತ್ತರಾಖಂಡ, ಹಿಮಾಚಲ ಪ್ರದೇಶ ತತ್ತರ: ಸಾವಿನ ಸಂಖ್ಯೆ 66ಕ್ಕೆ ಏರಿಕೆ, ಜೋಶಿಮಠ ಬಳಿ ಕಟ್ಟಡ ಕುಸಿತಕಳೆದ ಕೆಲವು ದಿನಗಳಿಂದ ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 66 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದಲ್ಲಿ 6 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. |
![]() | ಹಿಮಾಚಲದಲ್ಲಿ ಮೇಘಸ್ಫೋಟ: ಶಿಮ್ಲಾದಲ್ಲಿ ದೇಗುಲ ಕುಸಿತ; 9 ಸಾವು, ಕನಿಷ್ಟ 20 ಮಂದಿ ಅವಶೇಷಗಳಡಿ!ಹಿಮಾಚಲ ಪ್ರದೇಶದಲ್ಲಿ ಮಳೆಯ ರೌದ್ರಾವಾತಾರ ಮುಂದುವರೆದಿದ್ದು, ಮೇಘಸ್ಫೋಟದ ಹಿನ್ನಲೆಯಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಸೋಮವಾರ ಶಿಮ್ಲಾದಲ್ಲಿ ಶಿವನ ದೇವಾಲಯ ಕುಸಿದು ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. |
![]() | ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಭಾರೀ ಮಳೆ ಪ್ರವಾಹಕ್ಕೆ ಭೂಕುಸಿತ, 7 ಮಂದಿ ಸಾವುಕಂದಘಾಟ್ ವಿಭಾಗದ ಜಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಕೆಲವೆಡೆ ಭೂಕುಸಿತ ಸಂಭವಿಸಿದೆ. ಇನ್ನು ಪ್ರವಾಹದ ಅಬ್ಬರಕ್ಕೆ ಎರಡು ಮನೆಗಳು, ಹತ್ತಾರು ವಾಹನಗಳು ಕೊಚ್ಚಿಹೋಗಿವೆ. ಕಳೆದ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ರಸ್ತೆಗಳು, ಕಟ್ಟಡಗಳು ಕೂಡ ಕೊಚ್ಚಿಹೋಗಿವೆ. |
![]() | ಹಸಿರು ಇಂಧನ ಉತ್ಪಾದನೆಯಲ್ಲಿ ಕರ್ನಾಟಕ, ಹಿಮಾಚಲ ಪ್ರದೇಶ, ರಾಜಸ್ಥಾನ, ಮುಂಚೂಣಿ!ಹವಾಮಾನ ಬದಲಾವಣೆ ಸಂಬಂಧಿತ ವಿಪತ್ತು ಹೆಚ್ಚಳದ ನಡುವೆ ಮೂರು ರಾಜ್ಯಗಳಾದ ಕರ್ನಾಟಕ, ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನ ಹಸಿರು ಇಂಧನ ಉತ್ಪಾದನೆಯ ಮುಂಚೂಣಿ ರಾಜ್ಯಗಳಾಗಿ ಹೊರಹೊಮ್ಮಿವೆ. |