• Tag results for Indira Canteen

ಇಂದಿರಾ ಕ್ಯಾಂಟೀನ್ ಹಣ ದುರುಪಯೋಗ ಆರೋಪ: ಸಿದ್ದರಾಮಯ್ಯ ವಿರುದ್ಧದ ದೂರು ವಜಾ

ನಗರದಲ್ಲಿ ಇಂದಿರಾ ಕ್ಯಾಂಟೀನ್‌ಗಳ ಸ್ಥಾಪನೆ ಹಾಗೂ ಈ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಯಲ್ಲಿ ಆಗಿದೆ ಎನ್ನಲಾಗಿದ್ದ  ಹಣದ ದುರುಪಯೋಗಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಬೃಹತ್ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅವರ ವಿರುದ್ಧದ ದೂರನ್ನು ತಳ್ಳಿಹಾಕಿದೆ.

published on : 4th June 2020

ಇಂದಿರಾ ಕ್ಯಾಂಟೀನ್ ಗಳಿಗೆ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ವಿವಿಧ ಬಡಾವಣೆಯ ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಅಲ್ಲಿ ನೀಡಲಾಗುತ್ತಿರುವ ಆಹಾರ ಪದಾರ್ಥಗಳ ಪರಿಶೀಲನೆ ನಡೆಸಿದರು.

published on : 8th April 2020

ಇಂದಿರಾ ಕ್ಯಾಂಟೀನ್‌ ಆಹಾರ ಸ್ಥಗಿತ: ಸಿದ್ದರಾಮಯ್ಯ ಜತೆ ದೂರವಾಣಿ ಸಂಭಾಷಣೆ ನಡೆಸಿದ ಸಿಎಂ ಬಿಎಸ್ ವೈ

ಇಂದಿರಾ ಕ್ಯಾಂಟೀನ್ ನಲ್ಲಿ ನೀಡುತ್ತಿದ್ದ ತಿಂಡಿ, ಊಟ ನಿಲ್ಲಿಸಿರುವ ವಿಷಯದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಇಂದು ಮಾತುಕತೆ ನಡೆಸಿದರು.

published on : 6th April 2020

ನಾಳೆಯಿಂದ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟ, ತಿಂಡಿ ಇಲ್ಲ: ಬಿಬಿಎಂಪಿ

ಲಾಕ್ ಡೌನ್ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಬಡವರಿಗೆ ಉಚಿತ ಊಟ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಿಸಿದ್ದರು.

published on : 4th April 2020

ಇಂದಿರಾ ಕ್ಯಾಂಟಿನ್ ನಲ್ಲಿ ಉಚಿತ ಊಟವಿಲ್ಲ: ಅಚ್ಚರಿ ಮೂಡಿಸಿದ ಸಿಎಂ ನಿರ್ಧಾರ

ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟ ನೀಡುವುದನ್ನು ನಿಲ್ಲಿಸಲು ಸರ್ಕಾರ ನಿರ್ಧರಿಸಿದೆ.ಆರ್ಥಿಕ ಹೊರೆ ಹೆಚ್ಚುತ್ತಿರುವ ಹಿನ್ನೆಲೆಯೊಳಗೆ ಉಚಿತ ಊಟದ ಬದಲು ಹಿಂದೆ ಜಾರಿಯಲ್ಲಿದ್ದ ರಿಯಾಯಿತಿ ದರದಲ್ಲಿ ಊಟ–ಉಪಾಹಾರ ನೀಡಲು ಸರ್ಕಾರ ತೀರ್ಮಾನಿಸಿದೆ.

published on : 4th April 2020

ಕೊರೋನಾ ಸೋಂಕು ಹಿನ್ನೆಲೆ: ಇಂದಿರಾ ಕ್ಯಾಂಟೀನ್‌ಗೆ ಮಾರ್ಗಸೂಚಿ

ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ವಿತರಿಸುವ ಸಂಬಂಧ ಸರ್ಕಾರ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದೆ.

published on : 28th March 2020

ಬೆಂಗಳೂರು: ಇಂದಿರಾ ಕ್ಯಾಂಟೀನ್ ಪುನಾರಾಂಭ

ಜನಜಂಗುಳಿಯ ಕಾರಣದಿಂದ ಎರಡು ದಿನಗಳ ಹಿಂದೆ ಸ್ಥಗಿತಗೊಳಿಸಿದ್ದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆ ಇಂದಿರಾ ಕ್ಯಾಂಟೀನ್‌ ಅನ್ನು ಸರ್ಕಾರ ಪುನರಾಂಭಿಸಿದೆ.

published on : 26th March 2020

ಸಾಲು ಸಾಲಾಗಿ ನಿಂತ ಜನ:  ಇಂದಿರಾ ಕ್ಯಾಂಟೀನ್ ದಿಢೀರ್ ಬಂದ್ ಮಾಡಿದ ರಾಜ್ಯ ಸರ್ಕಾರ 

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್‌ಡೌನ್‌ ಇರುವುದರಿಂದ ಬಡವರಿಗೆ ಅನುಕೂಲವಾಗಲೆಂದು ಇಂದಿರಾ ಕ್ಯಾಂಟೀನ್‌ನಲ್ಲಿ ಊಟ, ತಿಂಡಿ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿತ್ತು. ಆದರೆ ಇದೀಗ ದಿಢೀರ್ ಆಗಿ ಇಂದಿರಾ ಕ್ಯಾಂಟೀನನ್ನು ಬಂದ್ ಮಾಡಲು ಸರ್ಕಾರ ನಿರ್ಧರಿಸಿದೆ. 

published on : 24th March 2020

ಸಂಪೂರ್ಣ ಲಾಕ್ ಡೌನ್ ಬಗ್ಗೆ ಸಂಜೆ ನಿರ್ಧಾರ: ಬಡವರಿಗೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಊಟ: ಸಿಎಂ ಯಡಿಯೂರಪ್ಪ 

ಕೋವಿಡ್-19 ಸೋಂಕು ತಡೆಗಟ್ಟಲು ಸಂಪೂರ್ಣ ರಾಜ್ಯ ಲಾಕ್ ಡೌನ್ ಮಾಡುವ ಬಗ್ಗೆ ಇಂದು ಸಂಜೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

published on : 23rd March 2020

ಇಂದಿರಾ ಕ್ಯಾಂಟೀನ್ ಬೆಲೆ ಏರಿಕೆಯಿಂದ ಬಡಜನತೆಯ ಮೇಲಿನ ಬರೆ; ಎಎಪಿ ಆರೋಪ

ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ದರಗಳನ್ನು ಹೆಚ್ಚಿಸಲು ಮುಂದಾಗಿರುವ ಕ್ರಮಕ್ಕೆ ಆಮ್ ಆದ್ಮಿ ಪಕ್ಷ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

published on : 1st March 2020

ಸಬ್ಸಿಡಿ ಕೊಡದ ಸರ್ಕಾರ: ಇಂದಿರಾ ಕ್ಯಾಂಟೀನ್ ಆಹಾರ ದರ ಏರಿಕೆ

ಬಡ ಜನರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಸುತ್ತಿರುವ ಇಂದಿರಾ ಕ್ಯಾಂಟೀನ್ ಗಳಲ್ಲಿನ ಆಹಾರದ ದರವನ್ನು ಏರಿಕೆ ಮಾಡಲು ಬಿಬಿಎಂಪಿ ಮುಂದಾಗಿದೆ ಎಂದು ತಿಳಿದುಬಂದಿದೆ. 

published on : 1st March 2020

ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರ ವಿರುದ್ಧ ಬೆಂಗಳೂರಿನಲ್ಲಿ ಕೇಸು ದಾಖಲು 

ಹಣವನ್ನು ದುರುಪಯೋಗಪಡಿಸಿದ ಆರೋಪದ ಮೇಲೆ ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಬ್ಬರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. 

published on : 24th January 2020

ವಾಲ್ಮೀಕಿ ಹೆಸರಿನ ಕ್ಯಾಂಟೀನ್ ಬದಲು ವಿವಿ ಸ್ಥಾಪಿಸಿ, ಮೀಸಲಾತಿ ಹೆಚ್ಚಿಸಿ, ಬಿಜೆಪಿ ಸರ್ಕಾರಕ್ಕೆ ಉಗ್ರಪ್ಪ ಆಗ್ರಹ

ಇಂದಿರಾ ಕ್ಯಾಂಟಿನ್ ಗೆ ಇಂದಿರಾ ಹೆಸರು ತೆಗೆದು ಮಹರ್ಷಿ ವಾಲ್ಮೀಕಿ ಅನ್ನ ಕುಟೀರ ಎಂದು ಮರುನಾಮಕರಣ ಮಾಡಲು ಹೊರಟಿರುವುದು ವಾಲ್ಮೀಕಿ ಮಹರ್ಷಿಗೆ ಮಾಡುವ ಅಪಮಾನ ಎಂದು ಮಾಜಿ ಸಂಸದ ಹಾಗೂ ವಾಲ್ಮೀಕಿ ಸಮುದಾಯದ ನಾಯಕ ವಿ.ಎಸ್.ಉಗ್ರಪ್ಪ ಕಿಡಿಕಾರಿದ್ದಾರೆ.  

published on : 19th December 2019

ಇಂದಿರಾ ಕ್ಯಾಂಟೀನ್‌ಗೆ ವಾಲ್ಮೀಕಿ ಹೆಸರು: ವಾಲ್ಮೀಕಿ‌ ಹೆಸರನ್ನು ರಾಜಕೀಯಕ್ಕೆ ಬಳಸಬೇಡಿ, ಸಿದ್ದರಾಮಯ್ಯ

ಇಂದಿರಾ ಕ್ಯಾಂಟೀನ್ ಗಳಿಗೆ ಐತಿಹಾಸಿಕ ಕವಿ ಮಹರ್ಷಿ ವಾಲ್ಮೀಕಿಯವರ ಹೆಸರು ಇಡುವ ಯೋಚನೆ ಇದೆಯಂತೆ. ಮಹರ್ಷಿ ವಾಲ್ಮೀಕಿಯವರ ಬಗ್ಗೆ ನಮಗೆಲ್ಲ ಅಪಾರವಾದ ಗೌರವ ಇದೆ. ಅವರ ಹೆಸರನ್ನು ಬಿಜೆಪಿ ತನ್ನ ಕ್ಷುಲಕ ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಂಡು ಮಹಾಕವಿ ಗೆ ಅವಮಾನ ಮಾಡಲಾಗುತ್ತಿದೆ...

published on : 18th December 2019

ಇಂದಿರಾ ಕ್ಯಾಂಟೀನ್ ಬದಲು ವಾಲ್ಮೀಕಿ ಅನ್ನ ಕುಟೀರ ಎಂದು ಮರುನಾಮಕರಣ ಮಾಡಲು ಚಿಂತನೆ: ಆರ್.ಅಶೋಕ್

ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ತಂದಿದ್ದ ಇಂದಿರಾ ಕ್ಯಾಂಟೀನ್ ಗೆ ಮಹರ್ಷಿ ವಾಲ್ಮೀಕಿ ಅನ್ನ ಕುಟೀರ ಎಂದು ಮರುನಾಮಕರಣ ಮಾಡುವ ಬಗ್ಗೆ ಗಂಭೀರ ಚಿಂತನೆ ಮಾಡಲಾಗಿದೆ ಎಂದು ಕಂದಾಯ‌ ಸಚಿವ ಆರ್.ಅಶೋಕ್ ಅವರು ಮಂಗಳವಾರ ಹೇಳಿದ್ದಾರೆ.

published on : 17th December 2019
1 2 >