- Tag results for Ink
![]() | ಬೆಂಗಳೂರಿನ ವಿವಿಧೆಡೆ ನಾಳೆ 'ಕಾವೇರಿ ನೀರು' ಪೂರೈಕೆಯಲ್ಲಿ ವ್ಯತ್ಯಯತಾತಗುಣಿ 220 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್ ಮತ್ತು ಕರೆಂಟ್ ಟ್ರಾನ್ಸ್ ಫಾರ್ಮರ್ ಗಳನ್ನು ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಹಿನ್ನೆಲೆ ನಗರದಲ್ಲಿ ಶನಿವಾರ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯಗಳು ಕಂಡು ಬರಲಿದೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಹೇಳಿದೆ. |
![]() | ಬೆಂಗಳೂರು: ಮದ್ಯದ ಅಮಲು, ಅತಿವೇಗದ ಚಾಲನೆ; ಕಂಬಕ್ಕೆ BMW ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರ ಸಾವುಯಶವಂತಪುರದ ಆರ್ ಎಂಸಿ ಯಾರ್ಡ್ ಬಳಿ ಮುಂಜಾನೆ 3.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು 31 ವರ್ಷದ ಮನಮೋಹನ್ ಹಾಗೂ 25 ವರ್ಷದ ನಿಖಿಲ್ ಎಂದು ಗುರುತಿಸಲಾಗಿದೆ. |
![]() | ತಮಿಳುನಾಡಿಗೆ ಮತ್ತಷ್ಟು ನೀರು ಬಿಡುಗಡೆ ಮಾಡಿದರೆ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗುತ್ತದೆ: ಸಿಎನ್‌ಎನ್‌ಎಲ್ ಎಚ್ಚರಿಕೆಸಿಡಬ್ಲ್ಯುಎಂಎ ಮತ್ತು ಸಿಡಬ್ಲ್ಯುಆರ್‌ಸಿ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ತಮಿಳುನಾಡಿಗೆ ಮತ್ತಷ್ಟು ನೀರು ಬಿಡುಗಡೆ ಮಾಡಿದ್ದೇ ಆದರೆ, ರಾಜ್ಯದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗಲಿದೆ ಎಂದು ಕಾವೇರಿ ನೀರಾವರಿ ನಿಗಮ ಲಿಮಿಟೆಡ್ (ಸಿಎನ್‌ಎನ್‌ಎಲ್) ಎಚ್ಚರಿಕೆ ನೀಡಿದೆ. |
![]() | ಬಂಧಿತ ಉಗ್ರನೊಂದಿಗೆ ನಂಟು, ಯಾದಗಿರಿಯಲ್ಲಿನ ಯುವಕನ ಮನೆಯಲ್ಲಿ ಎನ್ಐಎ ತಪಾಸಣೆಐಸಿಸಿ ಉಗ್ರನನ್ನು ಜಾರ್ಖಂಡ್ ನ ರಾಂಚಿಯಲ್ಲಿ ಬಂಧಿಸಿರುವ ಎನ್ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕರ್ನಾಟಕ ಯಾದಗಿರಿ ಜಿಲ್ಲೆಯ ಯುವನೊಂದಿಗೆ ಸಂಪರ್ಕ ಹೊಂದಿದ್ದ... |
![]() | ಅಪಘಾತ ತಡೆಯಲು ರೈಲುಗಳಲ್ಲಿ AI ಚಾಲಿತ ಸುರಕ್ಷತಾ ಸಾಧನ 'ಬ್ಲಿಂಕ್ ಡಿಟೆಕ್ಟಿಂಗ್' ಅಳವಡಿಕೆಇತ್ತೀಚಿಗೆ ರೈಲುಗಳ ಅಪಘಾತ ಹೆಚ್ಚುತ್ತಿದ್ದು, ಭಾರತೀಯ ರೈಲ್ವೆ ತನ್ನ ರೈಲು ಕಾರ್ಯಾಚರಣೆಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸುವ ಭಾಗವಾಗಿ, ಕೃತಕ ಬುದ್ಧಿಮತ್ತೆ (AI) ಆಧಾರಿತ "ರೈಲ್ವೆ ಚಾಲಕ ಸಹಾಯ ವ್ಯವಸ್ಥೆ" (RDAS) ಎಂಬ ವಿಶಿಷ್ಟ ಸಾಧನ... |
![]() | ಅಕ್ಟೋಬರ್‌ನಲ್ಲಿ ಎತ್ತಿನಹೊಳೆ ನೀರಿಗೆ ಟಿ.ಜಿ.ಹಳ್ಳಿ ಜಲಾಶಯ ಸಿದ್ಧ: ಭೂ ಸ್ವಾಧೀನ ಪ್ರಕ್ರಿಯೆ ಸಮಸ್ಯೆಯಿಂದ ಪೈಪ್ ಲೈನ್ ವಿಳಂಬಸಕಲೇಶಪುರ ತಾಲ್ಲೂಕಿನ ನೇತ್ರಾವತಿ ನದಿಯ ಉಪನದಿಯಾದ ಎತ್ತಿನಹೊಳೆಯಿಂದ ಬೆಂಗಳೂರಿಗೆ ಪ್ರತಿದಿನ 110 ಮಿಲಿಯನ್ ಲೀಟರ್ ಕುಡಿಯುವ ನೀರಿನ ಪೂರೈಕೆಯನ್ನು (MLD) ಮಾಡುವ ದೀರ್ಘಾವಧಿಯ ಯೋಜನೆ ಶೀಘ್ರದಲ್ಲಿಯೇ ಈಡೇರುವ ಭರವಸೆಯಿಲ್ಲ. |
![]() | ಎತ್ತಿನಹೊಳೆ ಯೋಜನೆಯಿಂದ ಏಳು ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಡಿಸಿಎಂ ಡಿಕೆ ಶಿವಕುಮಾರ್ಎತ್ತಿನಹೊಳೆ ಯೋಜನೆಯಿಂದ ಏಳು ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದು ಜಲ ಸಂಪನ್ಮೂಲ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. |
![]() | ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುವುದರಿಂದ ಬೆಂಗಳೂರಿನ ಮೇಲೆ ಪರಿಣಾಮವಿಲ್ಲ- ಬಿಡಬ್ಲ್ಯೂಎಸ್ಎಸ್'ಬಿಈ ಬಾರಿ ಮಳೆ ಕೊರತೆಯಿಂದಾಗಿ ಈಗಾಗಲೇ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತಗೊಂಡಿದ್ದು, ಈ ನಡುವಲ್ಲೇ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುತ್ತಿರುವುದು ನಗರ ವಾಸಿಗಳಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. |
![]() | ಉತ್ತರ ಪ್ರದೇಶ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮೇಲೆ ಶಾಯಿ ಎಸೆತಉತ್ತರ ಪ್ರದೇಶದ ಮಾಜಿ ಸಚಿವ ಮತ್ತು ಬಿಜೆಪಿ ಅಭ್ಯರ್ಥಿ ದಾರಾ ಸಿಂಗ್ ಚೌಹಾಣ್ ಮೇಲೆ ಭಾನುವಾರ ಶಾಯಿ ದಾಳಿ ನಡೆದಿದೆ. ಮೌ ಜಿಲ್ಲೆಯ ಘೋಸಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾಗ ಯುವಕನೊಬ್ಬ ಮಸಿ ಎಸೆದಿದ್ದಾನೆ. |
![]() | ಮಹಾರಾಷ್ಟ್ರ: ಮುಳುಗುತ್ತಿದ್ದ ದೋಣಿಯಿಂದ ಏಳು ಮೀನುಗಾರರ ರಕ್ಷಣೆ!ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಕರಾವಳಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಿಂದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಭಾರತೀಯ ಕರಾವಳಿ ರಕ್ಷಣಾ ಪಡೆಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | ಮನ್ರೇಗಾ ಯೋಜನೆ: ಸುಮಾರು 1 ಕೋಟಿಗೂ ಹೆಚ್ಚು ಜಾಬ್ ಕಾರ್ಡ್‌ಗಳು ಇನ್ನೂ ಆಧಾರ್ ಲಿಂಕ್ ಆಗಿಲ್ಲ!ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ ನಾಲ್ಕು ತಿಂಗಳಲ್ಲಿ ಒಟ್ಟು 33.23 ಲಕ್ಷ ಜಾಬ್ ಕಾರ್ಡ್‌ಗಳನ್ನು ವಿವಿಧ ಕಾರಣಗಳಿಗಾಗಿ ಡಿಲೀಟ್ ಮಾಡಲಾಗಿದ್ದು, ಇನ್ನೂ 1. 14 ಕೋಟಿ ಉದ್ಯೋಗ ಕಾರ್ಡ್ ಗಳು ಆಧಾರ್ ಲಿಂಕ್ ಆಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ಮಂಗಳವಾರ ಲೋಕಸಭೆಗೆ ತಿಳಿಸಿದೆ. |
![]() | ಉತ್ತರ ಪ್ರದೇಶ: ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿ, ಗುದದ್ವಾರಕ್ಕೆ ಮೆಣಸಿಕಾಯಿ ತುರುಕಿ ವಿಕೃತಿಇಬ್ಬರು ಅಪ್ರಾಪ್ತ ಬಾಲಕರಿಗೆ ಮೂತ್ರ ಕುಡಿಸಿ ಗುದದ್ವಾರದಲ್ಲಿ ಹಸಿ ಮೆಣಸಿನಕಾಯಿ ತುರುಕಿ, ಪತ್ತೆ ಮಾಡಲು ಸಾಧ್ಯವಾಗದಂತಹ ಚುಚ್ಚು ಮದ್ದನ್ನು ನೀಡಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ವರದಿಯಾಗಿದೆ. |
![]() | ಸಂಸತ್ ಅಧಿವೇಶನ: ಎಎಪಿಯ ಮತ್ತೊಬ್ಬ ಸಂಸದ ಸುಶೀಲ್ ಕುಮಾರ್ ರಿಂಕು ಅಮಾನತುಸದನದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಎಎಪಿ ಸಂಸದ ಸುಶೀಲ್ ಕುಮಾರ್ ರಿಂಕು ಅವರನ್ನು ಮುಂಗಾರು ಅಧಿವೇಶನದ ಉಳಿದ ಭಾಗಕ್ಕೆ ಅಮಾನತುಗೊಳಿಸಿದ್ದಾರೆ. |
![]() | ಸಾರ್ವಜನಿಕ ಹಿತಕ್ಕಿಂತ ದೇಶದ ಭದ್ರತೆ ಮುಖ್ಯ: ಚೀನಾ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದ ಕಂಪನಿ ಟೆಂಡರ್ ರದ್ದುಗೊಳಿಸಿದ ಹೈಕೋರ್ಟ್ಸಾರ್ವಜನಿಕ ಹಿತಾಸಕ್ತಿಗಿಂತ ರಾಷ್ಟ್ರೀಯ ಭದ್ರತೆಯೇ ಮುಖ್ಯ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್‌ಇಎಲ್) ಚೀನಾದ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿರುವ ಖಾಸಗಿ ಕಂಪನಿಗೆ ನೀಡಿದ್ದ ಟೆಂಡರ್ ಅನ್ನು ನ್ಯಾಯಾಲಯ ರದ್ದುಗೊಳಿಸಿದ್ದು, ಟೆಂಡರ್ ನೀಡಿರುವುದನ್ನು ಅಮಾನ್ಯ ಎಂದು ಘೋಷಿಸಿದೆ. |
![]() | ಉತ್ತರ ಪ್ರದೇಶ: ಲೈಂಗಿಕ ಕಿರುಕುಳ, ಸ್ಯಾನಿಟೈಸರ್ ಸೇವನೆಗೆ ಒತ್ತಾಯ, 16 ವರ್ಷದ ಬಾಲಕಿ ಸಾವು!ಕೆಲವು ಯುವಕರು ನೀಡುತ್ತಿದ್ದ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 16 ವರ್ಷದ ಬಾಲಕಿಯೊಬ್ಬಳಿಗೆ ಬಲವಂತವಾಗಿ ಸ್ಯಾನಿಟೈಸರ್ ಕುಡಿಯುವಂತೆ ಒತ್ತಾಯಿಸಿದ್ದು, ಆಕೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. |