- Tag results for JP Nadda
![]() | ಹೊಸ ಸಂಸತ್ ಭವನವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎಂದು ಕರೆದ ಜೈರಾಮ್ ರಮೇಶ್: ಬಿಜೆಪಿ ತೀವ್ರ ಕಿಡಿನೂತನ ಸಂಸತ್ ಭವನವನ್ನು ಮೋದಿ ಮಲ್ಟಿಪ್ಲೆಕ್ಸ್ ಅಥವಾ ಮೋದಿ ಮ್ಯಾರಿಯೆಟ್ ಎಂದು ಕರೆಯಬೇಕೆಂದು ಟೀಕೆ ಮಾಡಿದ್ದ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. |
![]() | ಸನಾತನ ಧರ್ಮದ ಕುರಿತು ಉದಯನಿಧಿ ಹೇಳಿಕೆ: 'INDIA' ಮೈತ್ರಿಕೂಟದ ವಿರುದ್ಧ ಅಮಿತ್ ಶಾ, ಜೆಪಿ ನಡ್ಡಾ ಕಿಡಿಸನಾತನ ಧರ್ಮದ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಅವರು ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವಿರೋಧ ಪಕ್ಷಗಳ ಒಕ್ಕೂಟವಾದ INDIA ವಿರುದ್ಧ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. |
![]() | ಹಿಮಾಚಲ ಪ್ರದೇಶ: ಭಾರಿ ಮಳೆಯಿಂದಾಗಿ ವ್ಯಾಪಕ ನಷ್ಟ, ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಪ್ರಯತ್ನ: ಜೆಪಿ ನಡ್ಡಾಭಾರಿ ಮಳೆಯಿಂದಾಗಿ ಹಿಮಾಚಲ ಪ್ರದೇಶ ತತ್ತರಿಸಿದ್ದು, ಭಾರಿ ನಷ್ಟ ಉಂಟಾಗಿದೆ ಮತ್ತು ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾನುವಾರ ಹೇಳಿದ್ದಾರೆ. |
![]() | ಆಗಸ್ಟ್ 15ರ ಬಳಿಕ ವಿಪಕ್ಷ ನಾಯಕ ಆಯ್ಕೆ: ಮಾಜಿ ಸಿಎಂ ಬೊಮ್ಮಾಯಿಆಗಸ್ಟ್ 15ರ ಬಳಿಕ ವಿಪಕ್ಷ ನಾಯಕನ ಆಯ್ಕೆ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. |
![]() | ಜೆಪಿ ನಡ್ಡಾ- ಬೊಮ್ಮಾಯಿ ಭೇಟಿ: ಶೀಘ್ರದಲ್ಲೇ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನ ನೇಮಕ ಸಾಧ್ಯತೆಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ಅವರು ಬುಧವಾರ ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಬಿಜೆಪಿ ಸಂಘಟನೆಯ ವಿಷಯಗಳ ಕುರಿತು ಚರ್ಚಿಸಿದರು. |
![]() | ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಎಫ್ಐಆರ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ಧದ ಎಫ್ಐಆರ್ ನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. |
![]() | ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಅಮಿತ್ ಶಾ ಮಾರ್ಗದರ್ಶನ: ವಿಜಯೇಂದ್ರರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ನಡುವೆ ಜಂಗೀಕುಸ್ತಿಗೆ ವೇದಿಕೆಯಾಗಿ ಪರಿಣಮಿಸಿದ್ದು, ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದು ಬಿಜೆಪಿಗೆ ಮುಜುಗರದ ಪ್ರಶ್ನೆಯಾಗಿ ಉಳಿದಿದೆ. |
![]() | ಎನ್‌ಡಿಎಗೆ 38 ಪಕ್ಷಗಳು ಸೇರಿದ್ದು ಇಡಿ ದಾಳಿಗಳಿಂದ: ಬಿಜೆಪಿಯನ್ನು ಕುಟುಕಿದ ಎಎಪಿಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಎನ್‌ಡಿಎ ಸಭೆಯಲ್ಲಿ 38 ಪಕ್ಷಗಳು ಭಾಗಿಯಾಗಲಿದೆ ಎಂದು ಹೇಳಿದ ಬೆನ್ನಲ್ಲೇ ಬಿಜೆಪಿ ವಿರುದ್ಧ ಕಿಡಿಕಾರಿರುವ ಎಎಪಿ ಇಡಿ ದಾಳಿಗಳ ಭೀತಿಯಿಂದಾಗಿ ಹಲವು ಪಕ್ಷಗಳು ಎನ್‌ಡಿಎ ಕೂಟ ಸೇರಿವೆ ಎಂದು ಕಿಡಿಕಾರಿದೆ. |
![]() | ರಾಷ್ಟ್ರೀಯ ಕಾರ್ಯಕಾರಿಣಿಗೆ 10 ಹೊಸ ಸದಸ್ಯರನ್ನು ನೇಮಕ ಮಾಡಿದ ಬಿಜೆಪಿಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಹತ್ತು ಹೊಸ ಸದಸ್ಯರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ನೇಮಿಸಿದ್ದಾರೆ. ಈ ಪೈಕಿ ಎಂಟು ಜನರು ಈ ಹಿಂದೆ ರಾಜ್ಯ ಘಟಕಗಳ ಅಧ್ಯಕ್ಷರಾಗಿದ್ದವರಾಗಿದ್ದಾರೆ. |
![]() | ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಜೆಪಿ ನಡ್ಡಾ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆರಾಜ್ಯದಲ್ಲಿ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. |
![]() | ಶೈಕ್ಷಣಿಕ ಪಠ್ಯಕ್ರಮದಿಂದ ಕಾರ್ಗಿಲ್ ಅಧ್ಯಾಯ ತೆಗೆದ ಕಾಂಗ್ರೆಸ್ ಸರ್ಕಾರದ ದೇಶಭಕ್ತಿ ಎಂಥದ್ದು: ಜೆಪಿ ನಡ್ಡಾಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಶಹದೋಲ್ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುವ ಒಂದು ದಿನಕ್ಕೂ ಮುನ್ನ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶುಕ್ರವಾರ ಅದೇ ವಿಧಾನಸಭಾ ಕ್ಷೇತ್ರದ ರಾಜ್ಯದ ಮತ್ತೊಂದು ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. |
![]() | ಜೆಪಿ ನಡ್ಡಾ ರ‍್ಯಾಲಿಗೆ ಹಾಜರಾಗದ ದಂಪತಿಗೆ ಥಳಿತ: ಅಸ್ಸಾಂ ಬಿಜೆಪಿ ನಾಯಕನ ಬಂಧನಜೂನ್ 18 ರಂದು ಜಿಲ್ಲೆಯಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ರ‍್ಯಾಲಿಗೆ ಹಾಜರಾಗದ ಕಾರಣ ದಂಪತಿಗೆ ಥಳಿಸಿದ ಆರೋಪದ ಮೇಲೆ ಬಿಜೆಪಿ ಯುವ ಮುಖಂಡನನ್ನು ಅಸ್ಸಾಂನ ಶಿವಸಾಗರ್‌ನಲ್ಲಿ ಬಂಧಿಸಲಾಗಿದೆ. |
![]() | ಚುನಾವಣಾ ಕಾರ್ಯತಂತ್ರ ರಚನೆಗೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಸಿಎಂಗಳನ್ನು ಭೇಟಿ ಮಾಡಲಿರುವ ಪ್ರಧಾನಿತನ್ನ ಮಿಷನ್ 2024ರ ಭಾಗವಾಗಿ ವಿಧಾನಸಭೆ ಮತ್ತು ಸಂಸತ್ತಿನ ಚುನಾವಣೆಗಳಿಗೆ ಪಕ್ಷದ ಚುನಾವಣಾ ಕಾರ್ಯಸೂಚಿ ಬಗ್ಗೆ ಚರ್ಚಿಸಲು ಬಿಜೆಪಿಯು ತನ್ನ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಭೆಯನ್ನು ಜೂನ್ 11-12 ರಂದು ದೆಹಲಿಯಲ್ಲಿ ಕರೆದಿದೆ ಎಂದು ತಿಳಿದುಬಂದಿದೆ. |
![]() | ಪಶ್ಚಿಮ ಬಂಗಾಳದಲ್ಲಿ 'ದಿ ಕೇರಳ ಸ್ಟೋರಿ' ಸಿನಿಮಾಗೆ ನಿಷೇಧ: ಕೋಮಾದಲ್ಲಿ ಪ್ರಜಾಪ್ರಭುತ್ವ; ಜೆ.ಪಿ ನಡ್ಡಾಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ‘ದಿ ಕೇರಳ ಸ್ಟೋರಿ’ ಚಿತ್ರದ ಮೇಲೆ ನಿಷೇಧ ಹೇರಿದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಟೀಕಾ ಪ್ರಹಾರ ನಡೆಸಿದ್ದಾರೆ. |
![]() | 'ದಿ ಕೇರಳ ಸ್ಟೋರಿ'- ನೂತನ ಭಯೋತ್ಪಾದನೆಯ ಮತ್ತೊಂದು ರೂಪ ಅನಾವರಣ: ಜೆಪಿ ನಡ್ಡಾಬಾಂಬ್ ಮತ್ತು ಮದ್ದುಗುಂಡುಗಳನ್ನು ಬಳಸದ ಭಯೋತ್ಪಾದನೆಯ ಹೊಸ, ವಿಷಕಾರಿ ರೂಪವನ್ನು ಕೇರಳ ಸ್ಟೋರಿ ಬಹಿರಂಗಪಡಿಸುತ್ತದೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. |