- Tag results for Jagadish shettar
![]() | ಬಿಜೆಪಿ ವಿರುದ್ಧ ಶೆಟ್ಟರ್ ಸೇಡು: ಇಬ್ಬರು ಮಾಜಿ ಶಾಸಕರು ಕೈ ಸೇರ್ಪಡೆಗೆ ಮುಹೂರ್ತ!ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದೆ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸೋಲು ಕಂಡಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೇಡು ತೀರಿಸಿಕೊಳ್ಳಲು ಸೆಟೆದು ನಿಂತಿದ್ದಾರೆ. |
![]() | ಇಬ್ಬರು ದುರ್ಬಲರಿಂದ ಮೈತ್ರಿ: ಜೆಡಿಎಸ್-ಬಿಜೆಪಿ ಹೊಂದಾಣಿಕೆ ಕುರಿತು ಜಗದೀಶ್ ಶೆಟ್ಟರ್ ವ್ಯಂಗ್ಯಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ವಿಧಾನಸಭೆ ಚುನಾವಣೆಯಲ್ಲಿ ಇಬ್ಬರು ಪರಸ್ಪರ ಫೈಟ್ ಮಾಡಿದ್ದರು. ಈಗ ಮತ್ತೆ ಮೈತ್ರಿ ವಿಚಾರ ಮಾತಾಡುತ್ತಿದ್ದಾರೆ . |
![]() | ಕೇಸರಿ ನಾಯಕರಿಗೆ ಬಿಸಿತುಪ್ಪವಾದ ಶೆಟ್ಟರ್: ಬಿಜೆಪಿ ಒಡೆಯಲು ಮಾಜಿ ಸಿಎಂ ಯತ್ನ; ಪ್ರಹ್ಲಾದ್ ಜೋಶಿ ಮೂಲೆಗುಂಪು!ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಪಕ್ಷದೊಳಗಿನ ನಾಯಕರ ಗುಂಪು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಮೂಲೆಗುಂಪು ಮಾಡಲು ಯತ್ನಿಸುತ್ತಿದೆಯೇ ಎಂಬ ಊಹಾಪೋಹಗಳು ಹರಿದಾಡುತ್ತಿವೆ. |
![]() | ಕರ್ನಾಟಕ ಬಿಜೆಪಿಯಲ್ಲಿ ನಾಯಕರೇ ಇಲ್ಲ, ಪಕ್ಷ ಮತ್ತಷ್ಟು ಹೀನಾಯ ಸ್ಥಿತಿಗೆ ತಲುಪಲಿದೆ: ಜಗದೀಶ್ ಶೆಟ್ಟರ್ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿ ಬರೋಬ್ಬರಿ ಮೂರು ತಿಂಗಳು ಕಳೆದಿದ್ದರೂ ರಾಜ್ಯ ಬಿಜೆಪಿಗೆ ಮಾತ್ರ ಇಂದಿಗೂ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ. ಇಇದೇ ವಿಚಾರವಾಗಿ ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಿಡಿಕಾರಿದ್ದು, ಸದ್ಯದ ಪರಿಸ್ಥಿತಿಯನ್ನು ನೋಡಿದರೆ ಬಿಜೆಪಿಯಲ್ಲಿ ನಾಯಕರಿಲ್ಲದಂತಾಗಿದೆ ಎಂದಿದ್ದಾರೆ. |
![]() | ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಶೀಘ್ರ ಆರಂಭವಾಗಲಿ: ಮಾಜಿ ಸಿಎಂ ಶೆಟ್ಟರ್ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗವನ್ನು ವಿಳಂಬ ಮಾಡದೆ ಶೀಘ್ರವೇ ಅನುಷ್ಠಾನಗೊಳಿಸಬೇಕು ಮತ್ತು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಅದರ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಶನಿವಾರ... |
![]() | ಧಾರವಾಡದಲ್ಲಿ ಆಪರೇಷನ್ ಹಸ್ತ ಚುರುಕು: ಯಡಿಯೂರಪ್ಪ ಸಂಬಂಧಿಗೆ ಜಗದೀಶ್ ಶೆಟ್ಟರ್ ಗಾಳ!ಲೋಕಸಭೆ ಚುನಾವಣೆ ಹಿನ್ನೆಲೆ ಸದ್ದಿಲ್ಲದೆ ಆಪರೇಷನ್ ಆರಂಭಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ಪ್ರಮುಖ ನಾಯಕರನ್ನು ಕಾಂಗ್ರೆಸ್ನತ್ತ ಸೆಳೆಯುತ್ತಿದ್ದಾರೆ |
![]() | ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡದಿರುವುದು ಅಕ್ಷಮ್ಯ ಅಪರಾಧ: ಜಗದೀಶ್ ಶೆಟ್ಟರ್ ವಾಗ್ದಾಳಿಭಾರತೀಯ ಆಹಾರ ನಿಗಮದ (ಎಫ್‌ಸಿಐ) ಮೂಲಕ ಕರ್ನಾಟಕ ಅಕ್ಕಿ ಖರೀದಿಗೆ ನಿರಾಕರಿಸಿರುವ ಕೇಂದ್ರದ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಎಂಎಲ್‌ಸಿ ಜಗದೀಶ್ ಶೆಟ್ಟರ್, ಇದು ಅಕ್ಷಮ್ಯ ಅಪರಾಧ’ ಎಂದು ಆರೋಪಿಸಿದರು. |
![]() | 2024 ಲೋಕಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ 6 ರಿಂದ 7 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಜಗದೀಶ್ ಶೆಟ್ಟರ್2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತರ ಕರ್ನಾಟಕದ 11 ಸ್ಥಾನಗಳಲ್ಲಿ 6ರಿಂದ 7 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ವಿಧಾನ ಪರಿಷತ್ ನ ನೂತನ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ. |
![]() | ವಿಧಾನ ಪರಿಷತ್ ಚುನಾವಣೆ: ಜಗದೀಶ್ ಶೆಟ್ಟರ್ ಸೇರಿ ಕಾಂಗ್ರೆಸ್ ನ ಮೂವರೂ ಅವಿರೋಧ ಆಯ್ಕೆಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್ ಸದಸ್ಯರಾಗಿ... |
![]() | ಜಗದೀಶ್ ಶೆಟ್ಟರ್ ಗೆ 'ಪುನರ್ವಸತಿ' ಕಲ್ಪಿಸಲು ಕಾಂಗ್ರೆಸ್ ಮುಂದು: ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಸವದಿಗಿಲ್ಲ ಸ್ಥಾನಮಾನ!ವಿಧಾನಸಭೆ ಚುನಾವಣೆಯಲ್ಲಿ ಸೋತಾಗಿನಿಂದ ಶೆಟ್ಟರ್‌ಗೆ ಪಕ್ಷದಲ್ಲಿ ಅಥವಾ ಸರ್ಕಾರದಲ್ಲಿ ಬೇರೆ ಸ್ಥಾನವನ್ನು ನೀಡುವ ಮೂಲಕ ಅವರಿಗಾಗಿರುವ ನಷ್ಟವನ್ನು ಸರಿದೂಗಿಸಲು ಕಾಂಗ್ರೆಸ್‌ನಲ್ಲಿ ಚರ್ಚೆ ಶುರುವಾಗಿವೆ. |
![]() | ಕಷ್ಟ ಕಾಲದಲ್ಲಿ ನಮ್ಮ ಕೈಹಿಡಿದವರನ್ನು ಈಗ ಕೈ ಬಿಡುವ ಪ್ರಶ್ನೆಯೇ ಇಲ್ಲ: ಹುಬ್ಬಳ್ಳಿಯಲ್ಲಿ ಶೆಟ್ಟರ್ ಭೇಟಿ ಮಾಡಿದ ಡಿಕೆ ಶಿವಕುಮಾರ್ಇಷ್ಟು ದಿನ ಚುನಾವಣೆಯಲ್ಲಿ ಬ್ಯುಸಿ ಇದ್ದೆ. ಪಕ್ಷಕ್ಕೆ ಶಕ್ತಿ ಕೊಟ್ಟ ಅನೇಕ ನಾಯಕರನ್ನು ಭೇಟಿಯಾಗಬೇಕಿತ್ತು. ನನಗೆ ಟೈಮ್ ಸಿಕ್ಕಿರಲಿಲ್ಲ, ಸರ್ಕಾರ ರಚನೆ, ಕ್ಯಾಬಿನೆಟ್ ರಚನೆ, ಶಾಸಕಾಂಗ ಸಭೆ, ಗ್ಯಾರಂಟಿಗಳು, ಇಲಾಖಾವಾರು ಪರಿಶೀಲನೆ ಕೆಲಸ ಆಗಬೇಕಿತ್ತು. ಇದರ ಮಧ್ಯದಲ್ಲಿ ಟೈಮ್ ಮಾಡಿಕೊಂಡು ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಭೇಟಿ ಆಗಲು ಬಂದಿದ್ದೇನೆ ಎಂದು ಬೆಳಗಾವಿಯಲ್ |
![]() | ಸಚಿವ ಸ್ಥಾನ ಮಿಸ್: ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಭೇಟಿ ಮಾಡಿ ಡಿ ಕೆ ಶಿವಕುಮಾರ್ ಮನ ಓಲೈಕೆ?ಕಳೆದ ಏಪ್ರಿಲ್ ನಲ್ಲಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ನಿರಾಕರಿಸಿದ ಕಾರಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿಗೆ ಕಾಂಗ್ರೆಸ್ ಪಕ್ಷ ಸರ್ಕಾರದಲ್ಲಿ ಉನ್ನತ ಸ್ಥಾನಮಾನ ನೀಡುವ ಬಗ್ಗೆ ಚರ್ಚೆಯಾಗುತ್ತಿದೆ. |
![]() | ನನ್ನ ಆತ್ಮವಿಶ್ವಾಸ ಕುಗ್ಗಿಲ್ಲ, ಖಿನ್ನತೆಗೊಳಗಾಗಿಲ್ಲ: ಫಲಿತಾಂಶದ ಬಳಿಕ ಮೊದಲ ಬಾರಿ ಶೆಟ್ಟರ್ ಬಹಿರಂಗ ಪ್ರತಿಕ್ರಿಯೆ!ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಶೆಟ್ಟರ್ ಯಾರೋ ಊಹಿಸಿದಂತೆ ನನ್ನ ಆತ್ಮವಿಶ್ವಾಸ ಕುಗ್ಗಿಲ್ಲ ಅಥವಾ ನಾನು ಖಿನ್ನತೆಗೆ ಒಳಗಾಗಿಲ್ಲ ಎಂದು ಸ್ಪಷ್ಟ ಪಡಿಸಿದರು. |
![]() | ಸಿದ್ದು ಸಂಪುಟದಲ್ಲಿ ಲಿಂಗಾಯತರಿಗೆ ಬಂಪರ್: 7 ಮಂದಿ ಮಿನಿಸ್ಟರ್; ಯೋಜನಾ ಆಯೋಗದ ಮುಖ್ಯಸ್ಥರಾಗಿ ಶೆಟ್ಟರ್?ಸಚಿವ ಸಂಪುಟ ರಚನೆಗೂ ಮುನ್ನ ತಮ್ಮ ಸಮುದಾಯಕ್ಕೆ ಐದಾರು ಸಚಿವ ಸ್ಖಾನ ಸಿಗುತ್ತದೆ ಎಂದು ವೀರಶೈವ ಲಿಂಗಾಯತರು ನಿರೀಕ್ಷೆಯಲ್ಲಿದ್ದರು, ಆದರೆ ಸಮುದಾಯಕ್ಕೆ ಏಳು ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಕಾಂಗ್ರೆಸ್ ಹೈಕಮಾಂಡ್ ಹೊಸ ಸಮೀಕರಣ: ಸ್ಪೀಕರ್ ಸ್ಥಾನ ನಿರಾಕರಿಸಿದವರಿಗೆ ಮಂತ್ರಿಗಿರಿ ಮಿಸ್; ಸಂಭಾವ್ಯ ಸಚಿವರ ಪಟ್ಟಿ ಇಂತಿದೆ!ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್‌ನ ಕೇಂದ್ರ ನಾಯಕರ ಜತೆಗೆ ಗುರುವಾರ ಬೆಳಿಗ್ಗೆಯಿಂದ ರಾತ್ರಿಯವರೆಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದರೂ ಕಗ್ಗಂಟು ಬಿಡಿಸಲಾಗಲಿಲ್ಲ. |