• Tag results for Jammu And Kashmir

ಪಾಕಿಸ್ತಾನದಿಂದ ಉಗ್ರರಿಗೆ ಡ್ರೋನ್ ಮೂಲಕ ಶಸ್ತ್ರಾಸ್ತ್ರ ರವಾನೆ; ರಜೌರಿಯಲ್ಲಿ 3 ಎಲ್ಇಟಿ ಉಗ್ರರ ಬಂಧನ

ಪಾಕಿಸ್ತಾನದಿಂದ ಉಗ್ರರಿಗೆ ಡ್ರೋನ್ ಮೂಲಕ ಶಸ್ತ್ರಾಸ್ತ್ರ ರವಾನೆ ಮಾಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಭರ್ಜರಿ ಕಾರ್ಯಾಚರಣೆ ನಡೆಸಿದ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ರಜೌರಿಯಲ್ಲಿ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಬಂಧಿಸಿದ್ದಾರೆ.

published on : 19th September 2020

ಶ್ರೀನಗರದಲ್ಲಿ ಎನ್'ಕೌಂಟರ್: 3 ಉಗ್ರರನ್ನು ಸದೆಬಡಿದ ಭಾರತೀಯ ಸೇನಾಪಡೆ, ಓರ್ವ ನಾಗರೀಕ ಸಾವು

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ. 

published on : 17th September 2020

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಉದ್ಧಟತನ, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಸುಂದರ್ಬನಿ ಸೆಕ್ಟರ್'ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ. 

published on : 16th September 2020

'ಆಪರೇಷನ್ ಆಲ್ ಔಟ್' ಆಗಸ್ಟ್‌ನಲ್ಲಿ 18 ಭಯೋತ್ಪಾದಕರು ಹತ, 108 ಸ್ಥಳೀಯ ಮಟ್ಟದ ಕಾರ್ಯಕರ್ತರ ಬಂಧನ

ಆಪರೇಷನ್‍ ಆಲ್‍ ಔಟ್‍ ಕಾರ್ಯಾಚರಣೆಯಡಿ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದಾಗಿನಿಂದ ಭದ್ರತಾ ಪಡೆಗಳು ಭಯೋತ್ಪಾದಕ ಸಂಘಟನೆಗಳ ಹಿರಿಯ ಕಮಾಂಡರ್‍ ಗಳು ಸೇರಿದಂತೆ ಅನೇಕ ಉಗ್ರರನ್ನು ನಿರ್ನಾಮ ಮಾಡಿವೆ.

published on : 13th September 2020

ಜಮ್ಮು-ಕಾಶ್ಮೀರದ ಪೂಂಛ್ ನಲ್ಲಿ ಪಾಕಿಸ್ತಾನ ಸೇನೆಯಿಂದ ಶೆಲ್ ದಾಳಿ 

ಪಾಕಿಸ್ತಾನದ ಸೇನೆ ಜಮ್ಮು-ಕಾಶ್ಮೀರದ ಪೂಂಛ್ ಸೆಕ್ಟರ್ ನ ಎಲ್ಒಸಿ ಯಾದ್ಯಂತ ವ್ಯಾಪಕ ಶೆಲ್ ದಾಳಿ ನಡೆಸಿದೆ. 

published on : 13th September 2020

ಬಾರಾಮುಲ್ಲಾದಲ್ಲಿ ಸೇನೆ ಭರ್ಜರಿ ಕಾರ್ಯಾಚರಣೆ: ಓರ್ವ ಉಗ್ರ, ಇಬ್ಬರು ಉಗ್ರರ ಸಹಚರರ ಬಂಧನ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ ಓರ್ವ ಉಗ್ರ ಹಾಗೂ ಇಬ್ಬರು ಉಗ್ರರ ಸಹಚರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. 

published on : 12th September 2020

ಕುಪ್ವಾರ: ಜೈಶ್ ಇ ಮಹಮದ್ ನ ಇಬ್ಬರು ಉಗ್ರರ ಬಂಧಿಸಿದ ಭಾರತೀಯ ಸೇನೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆ ಜೈಶ್ ಇ ಮಹಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಿದೆ.

published on : 10th September 2020

ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಭಾರತೀಯ ಸೇನಾ ಪಡೆಗಳಿಂದ ತಕ್ಕ ಪ್ರತ್ಯುತ್ತರ

ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಅಪ್ರಚೋದಿತ ಗುಂಡು ಹಾರಿಸುವ ಮೂಲಕ ಪಾಕಿಸ್ತಾನ ಪಡೆಗಳು ಸೋಮವಾರ ಮತ್ತೊಮ್ಮೆ ಕದನ ವಿರಾಮವನ್ನು ಉಲ್ಲಂಘಿಸಿವೆ.

published on : 7th September 2020

ನಮ್ಮ ಮುಖಂಡರು ಮನೆಯಿಂದ ಪಕ್ಷದ ಸಭೆಗಳಿಗೆ ತೆರಳದಂತೆ ನಿರ್ಬಂಧಿಸಲಾಗಿದೆ: ಪಿಡಿಪಿ

ನಮ್ಮ ಪಕ್ಷದ ಹಲವು ಮುಖಂಡರಿಗೆ ಇಲ್ಲಿ ನಡೆದ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಜಮ್ಮು ಮತ್ತು ಕಾಶ್ಮೀರ ಆಡಳಿತ ಗುರುವಾರ ಅವಕಾಶ ನೀಡಿಲ್ಲ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ)ಯ ವಕ್ತಾರರು ಆರೋಪಿಸಿದ್ದಾರೆ.

published on : 3rd September 2020

ಜಮ್ಮು-ಕಾಶ್ಮೀರಕ್ಕೆ ಇನ್ನು 5 ಅಧಿಕೃತ ಭಾಷೆ: ಕೇಂದ್ರ ಸಚಿವ ಸಂಪುಟ ಸಮ್ಮತಿ

ಹಿಂದಿ, ಉರ್ದು, ಕಾಶ್ಮೀರಿ, ಡೋಗ್ರಿ ಮತ್ತು ಇಂಗ್ಲಿಷ್ ಅನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಅಧಿಕೃತ ಭಾಷೆಗಳನ್ನಾಗಿ ಘೋಷಿಸಲಾಗುತ್ತದೆ. ಈ ಸಂಬಂಧ ಸಂಸತ್ತಿನಲ್ಲಿ ಮಸೂದೆ ತರಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಬುಧವಾರ ತಿಳಿಸಿದ್ದಾರೆ.

published on : 3rd September 2020

ಕಾಶ್ಮಿರ: ಶೂಟ್ ಮಾಡಿಕೊಂಡು ಸಿಆರ್ ಪಿಎಫ್ ಎಎಸ್ ಐ ಆತ್ಮಹತ್ಯೆಗೆ ಶರಣು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕೇಂದ್ರ ರಿಸರ್ವ್ ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಹಾಯಕ ಸಬ್ ಇನ್ಸ್‌ಪೆಕ್ಟರ್(ಎಎಸ್‌ಐ)ರೊಬ್ಬರು ತಮ್ಮ ಸರ್ವಿಸ್ ರಿವಾಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 2nd September 2020

ಜಮ್ಮು-ಕಾಶ್ಮೀರದಲ್ಲಿ ಸೇನೆ ಭರ್ಜರಿ ಕಾರ್ಯಾಚರಣೆ: 4 ಎಲ್ಇಟಿ ಸಹಚರರ ಬಂಧನ, ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳು ವಶಕ್ಕೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಹಾಗೂ ಬುದ್ಲಾಮ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಸಹಚರರನ್ನು ಬಂಧನಕ್ಕೊಳಪಡಿಸಿದೆ ಎಂದು ಬುಧವಾರ ತಿಳಿದುಬಂದಿದೆ. 

published on : 2nd September 2020

ಗಡಿಯಲ್ಲಿ ಪಾಕ್ ಉದ್ಧಟತನ: ಅಪ್ರಚೋದಿತ ಗುಂಡಿನ ದಾಳಿಗೆ ಸೇನಾಧಿಕಾರಿ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಖೇರಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ತನ್ನ ಉದ್ಧಟತನವನ್ನು ಪ್ರದರ್ಶಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಭಾರತದ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆಂದು ಬುಧವಾರ ವರದಿಗಳಿಂದ ತಿಳಿದುಬಂದಿದೆ.

published on : 2nd September 2020

ಸೇನಾಪಡೆಗಳ ಮೇಲೆ ಗ್ರೆನೇಡ್ ಎಸೆದ ಉಗ್ರರು: ಗುರಿ ತಪ್ಪಿ ರಸ್ತೆಯಲ್ಲೇ ಸ್ಫೋಟ, 6 ನಾಗರೀಕರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆಯ ವಾಹನದ ಮೇಲೆ ಉಗ್ರರು ಎಸೆದ ಗ್ರೆನೇಡ್ ಒಂದು ಗುರಿತಪ್ಪಿ ರಸ್ತೆಯಲ್ಲಿಯೇ ಸ್ಫೋಟಗೊಂಡಿದ್ದು, ಪರಿಣಾಮ ಸ್ಥಳದಲ್ಲಿದ್ದ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ. 

published on : 31st August 2020

ಜಮ್ಮು ಮತ್ತು ಕಾಶ್ಮೀರ: ಶಾರ್ಟ್ ಸರ್ಕ್ಯೂಟ್ ನಲ್ಲಿ ವಿಜಯಪುರದ ಯೋಧ ನಿಧನ

ಜಮ್ಮು ಮತ್ತು ಕಾಶ್ಮೀರದ ಗಡಿ ಭದ್ರತಾ ಪಡೆಯಲ್ಲಿ ಎಲೆಕ್ಟ್ರಿಕ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ವಿಜಯಪುರದ ಯೋಧ ಸಾವನ್ನಪ್ಪಿದ್ದಾರೆ. 

published on : 31st August 2020
1 2 3 4 5 6 >