• Tag results for Jammu and Kashmir

ರಾಷ್ಟ್ರ ಧ್ವಜದ ಕುರಿತು ಮುಫ್ತಿ ಮೆಹಬೂಬಾ ಹೇಳಿಕೆ: ಪಿಡಿಪಿಗೆ 3 ಹಿರಿಯ ನಾಯಕರು 'ಗುಡ್ ಬೈ'!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಅರ್ಟಿಕಲ್ 370 ಪುನಃಸ್ಥಾಪನೆ ಕುರಿತು ಪಣ ತೊಟ್ಟಿರುವ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರಂಭದಲ್ಲೇ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಮುಫ್ತಿ ಅವರ ನಡೆ ವಿರೋಧಿಸಿ ಪಿಡಿಪಿ ಪಕ್ಷದ ಮೂವರು ಹಿರಿಯ ನಾಯಕರು ರಾಜಿನಾಮೆ ನೀಡಿದ್ದಾರೆ.

published on : 27th October 2020

ನಾವು ಬಿಜೆಪಿ ವಿರೋಧಿಗಳೇ ಹೊರತು ರಾಷ್ಟ್ರ ವಿರೋಧಿಗಳಲ್ಲ: ಫಾರೂಕ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಪುನಃಸ್ಥಾಪಿಸಲು ಹೋರಾಡುತ್ತಿರುವ ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲರೇಷನ್(ಪಿಎಜಿಡಿ) ಬಿಜೆಪಿ ವಿರೋಧಿ ವೇದಿಕೆಯಾಗಿದೆ ಹೊರತು ರಾಷ್ಟ್ರ ವಿರೋಧಿಯಲ್ಲ ಎಂದು ನಾಷನಲ್ ಕಾನ್ಫರೇನ್ಸ್(ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

published on : 24th October 2020

ತ್ರಿವರ್ಣ ಧ್ವಜ ವಿವಾದ: ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿರನ್ನು ಬಂಧಿಸಿ, 'ದೇಶದ್ರೋಹ' ಪ್ರಕರಣ ದಾಖಲಿಸಲು ಬಿಜೆಪಿ ಆಗ್ರಹ!

ಭಾರತದ ಐಕ್ಯತೆ ಮತ್ತು ಸಾರ್ವಭೌಮತೆಯನ್ನು ಸಾರುವ ತ್ರಿವರ್ಣ ಧ್ವಜ ಕುರಿತಂತೆ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕೂಡಲೇ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಅವರನ್ನು ಬಂಧಿಸುವಂತೆ ಬಿಜೆಪಿ ಆಗ್ರಹಿಸಿದೆ.

published on : 24th October 2020

ಕದನವಿರಾಮ ಉಲ್ಲಂಘನೆ ವೇಳೆ ನಾಗರಿಕರ ರಕ್ಷಣೆಗೆ 120 ಬಂಕರ್ ಗಳ ನಿರ್ಮಾಣಕ್ಕೆ ಭಾರತೀಯ ಸೇನೆ ಮುಂದು

ಪಾಕಿಸ್ತಾನದ ಅಪ್ರಚೋದಿತ ದಾಳಿಗಳಿಂದಾಗಿ ಗಡಿಯಲ್ಲಿ ಸಾಕಷ್ಟು ನಾಗರಿಕರು ಸಾವನ್ನಪ್ಪುತ್ತಿದ್ದಾರೆ. ಇಂತಹ ಸಾವುಗಳನ್ನು ತಡೆಯುವ ಉದ್ದೇಶದಿಂದ ಭಾರತೀಯ ಸೇನೆ ಗಡಿಯಲ್ಲಿ 120 ಹೊಸ ಬಂಕರ್ ಗಳ ನಿರ್ಮಾಣಕೆ ಮುಂದಾಗಿದೆ.

published on : 24th October 2020

ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಗುಪ್ಕರ್ ಮೈತ್ರಿಯಿಂದ ಅಂತಿಮ ನಿರ್ಧಾರ: ಮೆಹ್ ಬೂಬಾ ಮುಫ್ತಿ 

ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದಲ್ಲಿ ಚುನಾವಣೆಗೆ ಸ್ಪರ್ಧಿಸಬೇಕೋ ಬೇಡವೋ ಎಂಬ ನಿರ್ಧಾರವನ್ನು ತಮ್ಮ ಪಕ್ಷ ಹಾಗೂ ಇತ್ತೀಚೆಗೆ ಸ್ಥಾಪನೆಯಾಗಿರುವ ಪೀಪಲ್ಸ್ ಅಲಾಯನ್ಸ್ ಫಾರ್ ಗುಪ್ಕರ್ ನಿರ್ಧರಿಸಲಿವೆ ಎಂದು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೇಳಿದ್ದಾರೆ. 

published on : 23rd October 2020

ಶ್ರೀನಗರದಲ್ಲಿ 'ಕಾಶ್ಮೀರ್ ಟೈಮ್ಸ್' ಕಚೇರಿಗಳಿಗೆ ಬೀಗಮುದ್ರೆ: ಎಡಿಟರ್ಸ್‍ ಗಿಲ್ಡ್ ಖಂಡನೆ

'ಕಾಶ್ಮೀರ್ ಟೈಮ್ಸ್' ಕಚೇರಿಗಳಿಗೆ ಜಮ್ಮು-ಕಾಶ್ಮೀರ ಆಡಳಿತ ಬೀಗಮುದ್ರೆ ಹಾಕಿರುವ ಕೇಂದ್ರ ಸರ್ಕಾರದ ನಿಲುವನ್ನು ಭಾರತೀಯ ಸಂಪಾದಕರ ಕೂಟ (ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ) ತೀವ್ರವಾಗಿ ಖಂಡಿಸಿದೆ.

published on : 23rd October 2020

ಉತ್ತರ ಕಾಶ್ಮೀರದಲ್ಲಿ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗತಿ

ಉತ್ತರ ಕಾಶ್ಮೀರದ ಸೇಬು ಪಟ್ಟಣವಾದ ಸೊಪೋರ್ ನಲ್ಲಿ ಭದ್ರತಾ ಪಡೆಗಳು ಗುರುವಾರ ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

published on : 22nd October 2020

ಜಮ್ಮು ಮತ್ತು ಕಾಶ್ಮೀರ ಪಂಚಾಯತಿ ರಾಜ್ ಕಾಯ್ದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಜಮ್ಮು ಮತ್ತು ಕಾಶ್ಮೀರ ಪಂಚಾಯತಿ ರಾಜ್ ಕಾಯ್ದೆ 1989 ಅನ್ನು ಜಾರಿಗೊಳಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

published on : 21st October 2020

ಶೋಪಿಯಾನ್‌ನಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ; ಓರ್ವ ಉಗ್ರ ಮಟಾಶ್!

ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್‌ನಲ್ಲಿ ಇಂದು ಮಧ್ಯಾಹ್ನ ನಡೆದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಈ ವೇಳೆ ಓರ್ವ ಭಯೋತ್ಪಾದಕನನ್ನು ಸೇನೆ ಹೊಡೆದುರುಳಿಸಿದೆ.

published on : 19th October 2020

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ಕೌಂಟರ್: ಓರ್ವ ಉಗ್ರ ಹತ

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 

published on : 17th October 2020

ಗಡಿಯಲ್ಲಿ ಮತ್ತೆ ಪಾಕಿಸ್ತಾನದಿಂದ ಅಪ್ರಚೋದಿತ ದಾಳಿ, ಶೆಲ್ಲಿಂಗ್ ದಾಳಿಯಲ್ಲಿ ಭಾರತದ ಸೇನಾಧಿಕಾರಿಗೆ ಗಾಯ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಪಾಕಿಸ್ತಾನ ಸೇನೆಯ ಅಪ್ರಚೋದಿತ ದಾಳಿ ಮುಂದುವರೆದಿದ್ದು, ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಭಾರತದ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಒಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

published on : 15th October 2020

ಕಣಿವೆ ರಾಜ್ಯದಲ್ಲಿ ವಿಧಿ 370 ಪುನಃಸ್ಥಾಪನೆಗೆ ಕೈ ಜೋಡಿಸಿದ ಶತ್ರು ಪಕ್ಷಗಳು; ಮೆಹಬೂಬಾ ಮುಫ್ತಿ, ಫಾರೂಕ್ ಆಬ್ದುಲ್ಲಾ ಮೈತ್ರಿಕೂಟ ಘೋಷಣೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಿ 370ರ ಪುನಃಸ್ಥಾಪನೆಗಾಗಿ ಬದ್ಧ ಶತ್ರುಗಳು ಎಂದೇ ಕರೆಯಲ್ಪಡುತ್ತಿದ್ದ ಮೆಹಬೂಬಾ ಮುಫ್ತಿ ಮತ್ತು ಫಾರೂಕ್ ಆಬ್ದುಲ್ಲಾ ಪರಸ್ಪರ ಕೈ ಜೋಡಿಸಿದ್ದು ಮೈತ್ರಿಕೂಟ ಘೋಷಣೆ ಮಾಡಿದ್ದಾರೆ.

published on : 15th October 2020

ಜಮ್ಮು ಕಾಶ್ಮೀರ: ಇಬ್ಬರು ಭದ್ರತಾ ಸಿಬ್ಬಂದಿ ನಾಪತ್ತೆ, 2 ಎಕೆ ರೈಫಲ್, 3 ಮ್ಯಾಗಜಿನ್ ಕಾಣೆ!

ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದು, ಕ್ಯಾಂಪ್ ನಲ್ಲಿದ್ದ ಶಸ್ತ್ರಾಸ್ತ್ರಗಳು ಕಾಣೆಯಾಗಿವೆ. 

published on : 14th October 2020

ಎನ್‌ಕೌಂಟರ್ ವೇಳೆ ಇಬ್ಬರು ಉಗ್ರರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

published on : 14th October 2020

14 ತಿಂಗಳ ಬಳಿಕ ಗೃಹ ಬಂಧನದಿಂದ ಮೆಹಬೂಬಾ ಮುಫ್ತಿ ಬಿಡುಗಡೆ!

ಮಹತ್ವದ ಬೆಳವಣಿಗೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡಲಾಗಿದೆ.

published on : 14th October 2020
1 2 3 4 5 6 >