• Tag results for Jds

ಶಿರಾ, ಆರ್​​​.ಆರ್​​ ನಗರ ವಿಧಾನಸಭಾ ಉಪಚುನಾವಣೆ: ಕೊರೋನಾ ಭೀತಿ ನಡುವಲ್ಲೇ ಪ್ರಚಾರ ಕಾರ್ಯಕ್ಕೆ ರಾಜಕೀಯ ಪಕ್ಷಗಳ ಸಿದ್ಧತೆ!

ಶಿರಾ, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಕ ನಿಗದಿಯಾಗಿದ್ದು, ಕೊರೋನಾ ಸೋಂಕು ಆತಂಕದ ನಡುವೆ ಪ್ರಚಾರ ಕಾರ್ಯ ನಡೆಸುವುದು ರಾಜಕೀಯ ನಾಯಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. 

published on : 1st October 2020

ಶಿರಾ ಉಪಚುನಾವಣೆ: ನಮಗೆ ಎಲ್ಲಾ ಚುನಾವಣೆಯೂ ಪ್ರತಿಷ್ಠೆಯೇ; ಎಚ್‌ಡಿಕೆ ಟ್ವೀಟ್‌ಗೆ ಡಿಕೆಶಿ ತಿರುಗೇಟು

ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ನಡುವೆ ವಾಕ್ ಸಮರ ಶುರುವಾಗಿದೆ. ಇನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

published on : 30th September 2020

ಶಿರಾ ಉಪಚುನಾವಣೆ ಹಿನ್ನೆಲೆ: ಕಾಡುಗೊಲ್ಲ ಅಭಿವೃದ್ಧಿ ನಿಗಮ ಅಸ್ಥಿತ್ವಕ್ಕೆ

ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ ಮತ್ತು ಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆಯ ವಿಚಾರ ಗೊಂದಲ ತಾರಕಕ್ಕೇರಿ, ಸರ್ಕಾರ ಅಂತಿಮವಾಗಿ "ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ" ಸ್ಥಾಪನೆ ಮಾಡಲು ಆದೇಶ ಹೊರಡಿಸಿದೆ. ಈ ಮೂಲಕ ಗೊಂದಲಕ್ಕೆ ತೆರೆ ಎಳೆದಂತಾಗಿದೆ.

published on : 30th September 2020

ಪರಿಷತ್ ನಲ್ಲಿ ಪಾಸಾಗದ ಮಸೂದೆ: ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ; ಹೊಸ ಅಧ್ಯಕ್ಷರ ನೇಮಕ?

ಬಿಜೆಪಿ ಸರ್ಕಾರದ ಉದ್ದೇಶಿತ ಭೂ ಸುಧಾರಣಾ ತಿದ್ದುಪಡಿ ಕಾಯಿದೆ ವಿಧಾನ ಪರಿಷತ್ ನಲ್ಲಿ ಅಂಗೀಕಾರವಾಗದ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.

published on : 30th September 2020

ಶಿರಾ, ಆರ್.ಆರ್.ನಗರ ಉಪ ಚುನಾವಣೆ: ಪ್ರಬಲ ಸ್ಪರ್ಧಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸಿದ್ಧತೆ

ತುಮಕೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಗಳು ಭರದ ಸಿದ್ಧತೆ ಮಾಡಿಕೊಳ್ಳುತ್ತಿವೆ.

published on : 30th September 2020

ಕರ್ನಾಟಕ ಬಂದ್ ಗೆ ಜೆಡಿಎಸ್ ಬೆಂಬಲ: ಎಚ್.ಡಿ ದೇವೇಗೌಡ

ರಾಜ್ಯ ಸರ್ಕಾರ ಜಾರಿ ಮಾಡಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೋಮವಾರದ ಕರ್ನಾಟಕ ಬಂದ್ ಗೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹೇಳಿದ್ದಾರೆ.

published on : 27th September 2020

ಕಾರ್ಯನಿರ್ವಾಹಕರು, ನ್ಯಾಯಾಂಗ ಅಧಿಕಾರಿಗಳ ವೇತನವನ್ನೂ ಕಡಿತಗೊಳಿಸಿ: ಸರ್ಕಾರಕ್ಕೆ ವಿಪಕ್ಷಗಳ ಆಗ್ರಹ

ಕೊರೋನಾ ಸಂಕಷ್ಟ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದೂಗಿಸಬೇಕಿರುವ ಕಾರಣ ಮುಖ್ಯಮಂತ್ರಿಯಾಗಿ ಸಚಿವರು, ಶಾಸಕರ ಶೇ.30ರಷ್ಟು ವೇತನ ಕಡಿತ ಮಾಡುವ ಸಂಬಂಧ ಸಂಬಳಗಳು, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳನ್ನು ಅಂಗೀಕಲಿಸಲಾಗಿದ್ದು, 8 ವಿಧೇಯಕಗಳನ್ನು ಮಂಡಿಸಲಾಯಿತು. 

published on : 23rd September 2020

ಪಕ್ಷ ವಿರೋಧಿಗಳಿಗೆ ಮಣೆ: ವರಿಷ್ಠರ ವಿರುದ್ಧ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಆಕ್ರೋಶ

ಜೆಡಿಎಸ್‌ನಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಮಣೆ ಹಾಕಲಾಗುತ್ತಿದ್ದು, ಇದಕ್ಕೆ ವರಿಷ್ಠರು ಬೆಂಬಲ ನೀಡುತ್ತಿರುವುದು ನೋವಿನ ಸಂಗತಿ’ ಎಂದು ಶಾಸಕ ಎ.ಟಿ.ರಾಮಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

published on : 19th September 2020

ಕಾಂಗ್ರೆಸ್ -ಜೆಡಿಎಸ್ ಸರ್ಕಾರದಲ್ಲಿ ಡ್ರಗ್ಸ್ ದಂಧೆಗೆ ರಕ್ಷಣೆ- ಶೆಟ್ಟರ್ ಕಿಡಿ

ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ  ಡ್ರಗ್ಸ್ ದಂಧೆ ಪ್ರಕರಣಗಳು ಹೊರಗಡೆ ಬಾರದಿರುವುದಕ್ಕೆ  ಆಡಳಿತಗಾರರ ರಕ್ಷಣೆಯೇ ಪ್ರಮುಖ  ಕಾರಣ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ದೂರಿದ್ದಾರೆ.

published on : 14th September 2020

ಜೆಡಿಎಸ್ ಸರ್ಕಾರ ಪತನಕ್ಕೆ ಡ್ರಗ್ ಮಾಫಿಯಾ ಹಣ ಬಳಕೆ: ಕುಮಾರಸ್ವಾಮಿ ಹೇಳಿಕೆ ಹಾಸ್ಯಾಸ್ಪದವಲ್ಲ- ಸಾರಾ ಮಹೇಶ್   

ಜೆಡಿಎಸ್ ಸರ್ಕಾರವನ್ನು ಪತನಗೊಳಿಸಲು ಡ್ರಗ್ ಮಾಫಿಯಾ ಹಣವನ್ನು ಬಳಸಿಕೊಳ್ಳಲಾಗಿತ್ತು ಎಂಬ ಕುಮಾರಸ್ವಾಮಿ ಹೇಳಿಕೆ ಹಾಸ್ಯಾಸ್ಪದ ಅಲ್ಲ ಎಂದು ಮಾಜಿ ಸಚಿವ ಸಾ. ರಾ. ಮಹೇಶ್ ಹೇಳಿದ್ದಾರೆ.

published on : 11th September 2020

ಸರ್ಕಾರಿ ಆಸ್ಪತ್ರೆಯಲ್ಲಿನ ವೆಂಟಿಲೇಟರ್ ಕೊರತೆಯಿಂದಾಗಿ ಮಾಜಿ ಶಾಸಕ ಅಪ್ಪಾಜಿ ಗೌಡ ಸಾವನ್ನಪ್ಪಿದರು: ಜೆಡಿಎಸ್ ನಾಯಕ 

ಸರ್ಕಾರಿ ಆಸ್ಪತ್ರೆಯಲ್ಲಿ ಎದುರಾಗಿದ್ದ ವೆಂಟಿಲೇಟರ್ ಕೊರತೆಯಿಂದಾಗಿ ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಮಾಜಿ ಶಾಸಕ ಅಪ್ಪಾಜಿ ಗೌಡ ಸಾವನ್ನಪ್ಪಿದ್ದರು ಎಂದು ಜೆಡಿಎಸ್ ನಾಯಕ ವೈಎಸ್'ವಿ ದತ್ತ ಅವರು ಹೇಳಿದ್ದಾರೆ. 

published on : 6th September 2020

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೋನಾಗೆ ಬಲಿ

ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡ (67) ಅವರು ಕೋವಿಡ್‌ನಿಂದಾಗಿ ಬುಧವಾರ ರಾತ್ರಿ ನಿಧನರಾದರು. 

published on : 3rd September 2020

ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು: ಸಿ.ಟಿ ರವಿ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು

ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

published on : 1st September 2020

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳಿಸಲು ಮಾಫಿಯಾ ಹಣ ಬಳಕೆ: ಎಚ್‌ಡಿ ಕುಮಾರಸ್ವಾಮಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳಿಸಲು ಮಾಫಿಯಾದ ಹಣ ಬಳಸಲಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ‌ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸ್ಫೋಟಿಸಿದ್ದಾರೆ.

published on : 31st August 2020

ನೆರೆ ಪರಿಹಾರ ವಿತರಣೆಯಲ್ಲಿ ಸರ್ಕಾರ ವಿಫಲ: ವಿಡಿಯೋ ಕಾನ್ಪ್ ರೆನ್ಸ್  ನಲ್ಲಿ ದೇವೇಗೌಡ ಆರೋಪ

ರಾಜ್ಯ ಸರ್ಕಾರ ನೆರೆ ಪರಿಹಾರ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.

published on : 29th August 2020
1 2 3 4 5 6 >