• Tag results for K. Sudhakar

ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.6: ಕೊಡಗು ಜಿಲ್ಲೆಯಲ್ಲಿ ಅತ್ಯಧಿಕ ಪ್ರಮಾಣ- ಸಚಿವ ಡಾ. ಕೆ. ಸುಧಾಕರ್ 

ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯಲು ನಿಗದಿಪಡಿಸಿದವರಲ್ಲಿ ಶೇ.62 ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

published on : 17th January 2021

ಕೊರೋನಾದಿಂದ ಸಮುದಾಯ ಉಳಿಸಿಕೊಳ್ಳಲು ಮಾದರಿ ಪ್ರಾಥಮಿಕ ಚಿಕಿತ್ಸಾ ಕೇಂದ್ರ ಸ್ಥಾಪನೆ: ಡಾ. ಸುಧಾಕರ್

ಸಮುದಾಯದ ಆರೋಗ್ಯವನ್ನು ಉಳಿಸಿಕೊಳ್ಳಬೇಕು ಎನ್ನುವ ದೃಷ್ಟಿಯಿಂದ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುತ್ತಿದ್ದು, ಆರೋಗ್ಯ ಸೇವೆಯಲ್ಲಿ ಇಡೀ ದೇಶದಲ್ಲೇ ಕರ್ನಾಟಕ ಮಾದರಿಯಾಗುವಂತೆ ಹೆಜ್ಜೆ ಇಡುತ್ತಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

published on : 24th December 2020

ಇಂದಿನಿಂದ ಪದವಿ ತರಗತಿ ಆರಂಭ; ಕೋವಿಡ್ ಮುಂಜಾಗ್ರತಾ ಕ್ರಮ ಪಾಲಿಸಿ: ವಿದ್ಯಾರ್ಥಿಗಳಿಗೆ ಸುಧಾಕರ್ ಮನವಿ

ರಾಜ್ಯದಲ್ಲಿ ಇಂದಿನಿಂದ ಪದವಿ ಕಾಲೇಜುಗಳು ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜುಗಳ ಆಡಳಿತ ವರ್ಗದವರು, ವಿದ್ಯಾರ್ಥಿಗಳು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

published on : 17th November 2020

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಉಸ್ತುವಾರಿಯಾಗಿ ಸಚಿವ ಸುಧಾಕರ್ ನೇಮಕ

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಸಹ-ಉಸ್ತುವಾರಿಯಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ನೇಮಕವಾಗಿದ್ದಾರೆ. 

published on : 15th November 2020

ರಾಜ್ಯದಲ್ಲಿ 24 ಗಂಟೆಯೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಣೆ- ಸಚಿವ ಡಾ. ಕೆ. ಸುಧಾಕರ್ 

ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವ ಜೊತೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪೂರಕವಾಗಿ ನೀತಿ, ನಿಯಮಗಳಲ್ಲಿ ಬದಲಾವಣೆ ತರಲಾಗುವುದು ಎಂದು ಆರೋಗ್ಯ, ವೈದ್ಯಕೀಯ ಮತ್ತು ವೈದ್ಯಕೀಯ  ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. 

published on : 12th November 2020

ಕೊರೋನಾ ಲಸಿಕೆ ಪೂರೈಕೆ, ಸಂಗ್ರಹಣೆ ಪ್ರಕ್ರಿಯೆಗಳ ಬಗ್ಗೆ ಸಲಹೆ ನೀಡಲು ತಜ್ಞರ ಸಮಿತಿ ರಚನೆ: ಡಾ. ಕೆ. ಸುಧಾಕರ್

ಕೊರೋನಾ ಲಸಿಕೆ ಲಭ್ಯವಾದ ನಂತರ ಪ್ರತಿಯೊಬ್ಬರಿಗೂ ತಲುಪಿಸಲು ಪೂರ್ವಸಿದ್ಧತೆಗಳು ನಡೆಯುತ್ತಿದ್ದು ಸರಬರಾಜು, ಸಂಗ್ರಹಣೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳ ಬಗ್ಗೆ ಸಲಹೆ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

published on : 27th October 2020

ಆರೋಗ್ಯ ಖಾತೆ ಶ್ರೀರಾಮುಲು ಬದಲಿಗೆ ಡಾ. ಸುಧಾಕರ್ ಹೆಗಲಿಗೆ?

ಮಹಾಮಾರಿ ಕೋವಿಡ್ 19 ನಿಯಂತ್ರಣ ರಾಜ್ಯ ಸರ್ಕಾರಕ್ಕೆ ಕಬ್ಬಿಣದ ಕಡಲೆಯಾಗಿದ್ದು ಈ ಹಿನ್ನೆಲೆಯಲ್ಲಿ ಆರೋಗ್ಯ ಖಾತೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಖಾತೆಯನ್ನು ಒಬ್ಬರಿಗೆ ನೀಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಂದಾಗಿದ್ದಾರೆ ಎನ್ನಲಾಗಿದೆ.

published on : 11th October 2020

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾರ್ಯಾರ ಮೇಲೆ ದಾಳಿ ನಡೆಸಿದ್ದೀರಿ ಮರೆತು ಹೋಯಿತೇ: ಡಾ. ಸುಧಾಕರ್ ಪ್ರಶ್ನೆ

ಪ್ರತೀ ಬಾರಿ ಸಿಬಿಐ ದಾಳಿ ನಡೆದಾಗ ಅದು ರಾಜಕೀಯ ಪ್ರೇರಿತ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕರು, ಈಗಿನ ಆಂಧ್ರ ಪ್ರದೇಶದ ಸಿಎಂ ಸೇರಿ ಹಲವಾರು ಕಾಂಗ್ರೆಸ್ಸೇತರ ನಾಯಕರ ಮೇಲೆ ಸಿಬಿಐ ದಾಳಿ ನಡೆದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್ ಎಂಬುದು ಮರೆತುಹೋಯಿತೇ ಎಂದು ಸಚಿವ ಡಾ.ಸುಧಾಕರ್ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ.

published on : 5th October 2020

ಸಭೆ-ಸಮಾರಂಭಕ್ಕೆ ನೂರು ಜನ ಸೀಮಿತ; ಕೊರೋನಾ ಸೂಚನೆ ನಿರ್ಲಕ್ಷಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಡಾ. ಕೆ.ಸುಧಾಕರ್

ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

published on : 30th September 2020

ವೈದ್ಯಕೀಯ ಶಿಕ್ಷಣ ಸಚಿವರೇ, ಕೊರೋನಾ ಸಾವಿನ ಅಂಕಿ ಸಂಖ್ಯೆಗಳ ಬಗ್ಗೆ ಆತ್ಮಾವಲೋಕ ಮಾಡಿಕೊಳ್ಳಿ-  ಎಚ್ ಕೆ ಪಾಟೀಲ್   

ವೈದ್ಯಕೀಯ ಶಿಕ್ಷಣ ಸಚಿವರೇ, ಕೊರೋನಾ ಸಾವಿನ ಅಂಕಿ-ಸಂಖ್ಯೆಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಮಾಜಿ ಸಚಿವ, ಹಾಲಿ ಶಾಸಕ ಎಚ್.ಕೆ.ಪಾಟೀಲ್ ಹೇಳುವ ಮೂಲಕ ಸರ್ಕಾರವನ್ನು ಎಚ್ಚರಿಸಿದ್ದಾರೆ.

published on : 3rd September 2020

ಜೆಇಇ ಪರೀಕ್ಷೆ ನಡೆಯುವ ಸ್ಥಳಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ  ಕ್ರಮ- ಡಾ. ಸುಧಾಕರ್ 

ಕೋವಿಡ್-19 ಹಿನ್ನೆಲೆಯಲ್ಲಿ ಇಂದಿನಿಂದ ಸೆಪ್ಟೆಂಬರ್ 6ರವರೆಗೂ ನಡೆಯಲಿರುವ  ಜೆಇಇ ಪರೀಕ್ಷೆಗಾಗಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್  ತಿಳಿಸಿದ್ದಾರೆ.

published on : 1st September 2020

ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ನೇಣಿಗೆ ಶರಣು: ಕೊರೋನಾ ವಾರಿಯರ್ಸ್ ಗೆ ಸಚಿವ ಸುಧಾಕರ್ ವಿಶೇಷ ಮನವಿ

ಮೈಸೂರಿನಲ್ಲಿ ಕೊರೋನಾ ವಾರಿಯರ್ ಆಗಿದ್ದ ನಂಜನಗೂಡು  ತಾಲೂಕು ಆರೋಗ್ಯಾಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಸಚಿವ ಡಾ. ಕೆ. ಸುಧಾಕರ್ ರಾಜ್ಯದ ಕೊರೋನಾ ವಾರಿಯರ್ಸ್ ಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

published on : 20th August 2020

ರಾಜ್ಯದಲ್ಲಿ ಇಂದು ಒಂದೇ ದಿನ 59,088 ಕೋವಿಡ್-19 ಪರೀಕ್ಷೆ- ಸಚಿವ ಡಾ.ಕೆ. ಸುಧಾಕರ್ 

ರಾಜ್ಯದಲ್ಲಿ ಇಂದು ಒಂದೇ ದಿನ 59,088 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. 

published on : 18th August 2020

ಇನ್ನೊಂದು ವಾರದಲ್ಲಿ ಎರಡು ಸಾವಿರ ಹೆಚ್ಚುವರಿ ವೈದ್ಯರು ಕೋವಿಡ್ ಚಿಕಿತ್ಸೆಗೆ ಲಭ್ಯ: ಡಾ.ಸುಧಾಕರ್

ಇನ್ನೊಂದು ವಾರದಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗೆ ಕನಿಷ್ಠ ಎರಡು ಸಾವಿರ ವೈದ್ಯರು ಹೆಚ್ಚುವರಿಯಾಗಿ ಲಭ್ಯರಾಗಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

published on : 14th August 2020

ಕೋವಿಡ್ ಗೆ ರಷ್ಯಾದಲ್ಲಿ ಮೊದಲ ಲಸಿಕೆ ಸಿದ್ಧವಾಗಿರುವುದು ವಿಶ್ವಕ್ಕೆ ಸಂತಸದ ಸುದ್ದಿ- ಡಾ.ಕೆ.ಸುಧಾಕರ್  

ಜಾಗತಿಕ ಮಹಾಮಾರಿ ಕೋವಿಡ್-19 ಗೆ ವಿಶ್ವದ ಮೊದಲ ಲಸಿಕೆ ಸಿದ್ಧವಾಗಿದೆ ಎಂಬ ರಷ್ಯಾ ಅಧ್ಯಕ್ಷ ವ್ಲಾದಿಮಿರ್  ಪುಟಿನ್ ಹೇಳಿಕೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸ್ವಾಗತಿಸಿದ್ದಾರೆ.

published on : 11th August 2020
1 2 >