social_icon
  • Tag results for KMF

ನಷ್ಟ ಮಾಡಿಕೊಂಡು ತಿರುಪತಿ ಲಡ್ಡುಗೆ ನಂದಿನಿ ತುಪ್ಪ ಪೂರೈಸಲು ಸಾಧ್ಯವಿಲ್ಲ: ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್

‘ನಷ್ಟ ಮಾಡಿಕೊಂಡು ತಿರುಪತಿ ಲಡ್ಡುಗೆ ನಂದಿನಿ ತುಪ್ಪವನ್ನು ಪೂರೈಸುವ ಪ್ರಶ್ನೆಯೇ ಇಲ್ಲ’ ಎಂದು ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ (ಕೆಎಂಎಫ್) ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟಪಡಿಸಿದರು. 

published on : 29th August 2023

ತಿರುಪತಿ ಲಡ್ಡುಗೆ ಮತ್ತೆ ನಂದಿನಿ ತುಪ್ಪ ಪೂರೈಸಲು ಉತ್ಸುಕ; ಟಿಟಿಡಿಗೆ ಪತ್ರ ಬರೆದ ಕೆಎಂಎಫ್

ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳಿಗೆ ನಂದಿನ ತುಪ್ಪ ಪೂರೈಕೆ ವಿಚಾರ ರಾಜ್ಯದಲ್ಲಿ ರಾಜಕೀಯ ನಾಯಕರ ವಾಕ್ಸಮರಕ್ಕೆ ಕಾರಣವಾದ ಬೆನ್ನಲ್ಲೇ, ಟಿಟಿಡಿಗೆ ಪತ್ರ ಬರೆದಿರುವ ಕೆಎಂಎಫ್,...

published on : 3rd August 2023

ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳಿಗೆ ಶಿವಣ್ಣ ನೂತನ ರಾಯಬಾರಿ!

ಕರ್ನಾಟಕದ ಹೆಮ್ಮೆ ನಂದಿನಿ ಬ್ರ್ಯಾಂಡ್ ಉತ್ಪನ್ನಗಳಿಗೆ ನೂತನ ರಾಯಭಾರಿಯಾಗಿ ಡಾ. ಶಿವರಾಜ್ ಕುಮಾರ್ ನೇಮಕವಾಗಿದ್ದಾರೆ. ಸುಮಾರು ವರ್ಷಗಳ ಕಾಲ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರಾಯಭಾರಿಯಾಗುವ ಮೂಲಕ ನಂದಿನಿ ಉತ್ಪನ್ನಗಳಿಗೆ ಪ್ರಚಾರ ಮಾಡಿದ್ದರು.

published on : 1st August 2023

ತಿರುಪತಿಗೆ ನಂದಿನಿ ತುಪ್ಪ ಸ್ಥಗಿತ: ಕೆಎಂಎಫ್ ಆರೋಪ ತಿರಸ್ಕರಿಸಿದ ಟಿಟಿಡಿ; 'ವರ್ಷದ ಹಿಂದಿನ ವಿಚಾರ' ಎಂದ ಸಿಎಂ ಸಿದ್ದರಾಮಯ್ಯ

ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್‌ (ಟಿಟಿಡಿ) ಲಡ್ಡು ತಯಾರಿಕೆಗೆ ತುಪ್ಪ ಪೂರೈಕೆ ಮಾಡಲು ಅನುಮತಿ ನೀಡಿಲ್ಲ ಎಂಬ ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ಅಧ್ಯಕ್ಷ ಹೇಳಿರುವ ಮಾತು ಸತ್ಯಕ್ಕೆ ದೂರವಾದದ್ದು ಎಂದು ಟಿಟಿಡಿ ಮಂಗಳವಾರ ಸ್ಪಷ್ಟಪಡಿಸಿದೆ.

published on : 1st August 2023

ಒಂದು ವರ್ಷದಿಂದಲೇ ತಿರುಪತಿಗೆ ಕೆಎಂಎಫ್ ತುಪ್ಪ ಪೂರೈಸುತ್ತಿಲ್ಲ; ಬೆಲೆಯಲ್ಲಿ ರಾಜಿ ಇಲ್ಲ: ಭೀಮಾ ನಾಯ್ಕ್

ಆಂಧ್ರ ಪ್ರದೇಶದ ಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳನ್ನು ತಯಾರಿಸಲು 'ನಂದಿನಿ' ಬ್ರಾಂಡ್ ತುಪ್ಪವನ್ನು ಸರಬರಾಜು ಮಾಡುತ್ತಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅವರು ಸೋಮವಾರ...

published on : 31st July 2023

ಇನ್ನು ಮುಂದೆ ತಿರುಪತಿ ಲಡ್ಡುಗಳಲ್ಲಿ ನಂದಿನಿ ತುಪ್ಪ ಇರಲ್ಲ!

ಸುಮಾರು 50 ವರ್ಷಗಳ ನಂತರ ತಿರುಪತಿ ತಿರುಮಲ ಟ್ರಸ್ಟ್ (ಟಿಟಿಡಿ) ತನ್ನ ಪ್ರಸಿದ್ಧ ಲಡ್ಡುಗಳನ್ನು ತಯಾರಿಸಲು ಕರ್ನಾಟಕ ಹಾಲು ಒಕ್ಕೂಟದಿಂದ (ಕೆಎಂಎಫ್) ತುಪ್ಪ ಖರೀದಿಯನ್ನು ಸ್ಥಗಿತಗೊಳಿಸಿದೆ.

published on : 31st July 2023

ಕೇರಳದಲ್ಲಿ ಸದ್ಯಕ್ಕಿಲ್ಲ ನಂದಿನಿ ಮಳಿಗೆ; ವಿಸ್ತರಣೆ ಯೋಜನೆ ಸ್ಥಗಿತಗೊಳಿಸಿದ ಕರ್ನಾಟಕ ಸರ್ಕಾರ!

ಕೇರಳದಲ್ಲಿ ನಂದಿನಿ (Nandini Milk) ಹಾಲಿನ ಡೈರಿಯ ವಿಸ್ತರಣೆ ಮಾಡುವ ಕೆಎಂಎಫ್ ಪ್ರಯತ್ನಕ್ಕೆ ಹಿನ್ನಡೆಯಾಗಿದ್ದು, ವಿಸ್ತರಣೆ ಯೋಜನೆ ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

published on : 28th June 2023

ಕೆಎಂಎಫ್ ನೂತನ ಅಧ್ಯಕ್ಷರಾಗಿ ಭೀಮಾ ನಾಯಕ್ ಅವಿರೋಧ ಆಯ್ಕೆ; ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಮನವಿ!

ಕಾಂಗ್ರೆಸ್ ಮಾಜಿ ಶಾಸಕ ಭೀಮಾ ನಾಯಕ್ ಅವರು ಕರ್ನಾಟಕ ಹಾಲು ಮಾರಾಟ ಮಹಾಮಂಡಳ(ಕೆಎಂಎಫ್)ದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು ನೀಡಿದ್ದಾರೆ.

published on : 21st June 2023

ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸದಿರಿ: ಕೆಎಂಎಫ್'ಗೆ ಸಿಎಂ ಸಿದ್ದರಾಮಯ್ಯ ಸೂಚನೆ

ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡಬಾರದು ಎಂದು ಕರ್ನಾಟಕ ಹಾಲು ಮಹಾ ಮಂಡಳ (ಕೆಎಂಎಫ್‌)ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

published on : 6th June 2023

ಕರ್ನಾಟಕ ಹಾಲು ಮಹಾಮಂಡಳದ ದರ ಇಳಿಕೆ ನಿರ್ಧಾರ ನಮ್ಮ ಮೇಲೆ ಪರಿಣಾಮ ಬೀರುತ್ತದೆ: ರೈತರ ಅಳಲು

ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾಲಿನ ದರ ಇಳಿಕೆ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರೈತರು, ಕಳೆದ ನಾಲ್ಕು ತಿಂಗಳಿಂದ ಬೆಂಬಲ ಬೆಲೆ ನೀಡದ ಕಾರಣ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. 

published on : 5th June 2023

ಅಮೂಲ್ ಜೊತೆ ಕೆಎಂಎಫ್ ವಿಲೀನ ಅಸಾಧ್ಯ: ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

‘ಕೆಎಂಎಫ್‌ ಹಾಗೂ ಅಮೂಲ್‌ ವಿಲೀನಗೊಳಿಸುವ ಉದ್ದೇಶ ಸರ್ಕಾರದ ಮುಂದೆ ಇಲ್ಲ. ಇದು ಅಸಾಧ್ಯ ಕೂಡ. ಕಾಂಗ್ರೆಸ್‌ ಮುಖಂಡರು ವಿನಾಕಾರಣ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ’ ಎಂದು ಕೆಎಂಎಫ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು.

published on : 12th April 2023

ಕೆಎಂಎಫ್-ಅಮುಲ್ ವಿವಾದ ಜೀವಂತವಾಗಿರಿಸಿ ಸರ್ಕಾರದ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಮುಂದು!

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ 30 ದಿನಗಳು ಬಾಕಿಯಿದ್ದು, ಈ ನಡುವಲ್ಲೇ ಕೆಎಂಎಫ್-ಅಮುಲ್ ವಿವಾದ ಜೀವಂತವಾಗಿರಿ ಸರ್ಕಾರದ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಮುಂದಾಗಿದೆ ಎಂದು ತಿಳಿದುಬಂದಿದೆ.

published on : 12th April 2023

ಕೆಎಂಎಫ್ ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರ ಹುನ್ನಾರ: ಡಿಕೆ ಸುರೇಶ್ ಗಂಭೀರ ಆರೋಪ

ಕೆಎಂಎಫ್ ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರದ ಹುನ್ನಾರ ನಡೆಸಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.

published on : 10th April 2023

ಅಮುಲ್‌ನಿಂದ ಕೆಎಂಎಫ್‌ಗೆ ಯಾವುದೇ ಅಪಾಯವಿಲ್ಲ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಗುಜರಾತ್‌ನಿಂದ ರಾಜ್ಯಕ್ಕೆ ಅಮೂಲ್‌ ಬಂದರೆ ನಂದಿನಿ ಬ್ರ್ಯಾಂಡ್‌ಗೆ ಯಾವುದೇ ತೊಂದರೆ ಇಲ್ಲ. ಸಿದ್ದರಾಮಯ್ಯ ಹಾಗೂ ಸಿಎಂ ಇಬ್ರಾಹಿಂ ರಾಜಕೀಯಕ್ಕಾಗಿ ರೈತರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭಾನುವಾರ ಹೇಳಿದ್ದಾರೆ.

published on : 10th April 2023

ಕೆಎಂಎಫ್-ಅಮುಲ್ ವಿಲೀನವಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ: KMF MD ಬಿ.ಸಿ ಸತೀಶ್

ಕರ್ನಾಟಕದ ಕೆಎಂಎಫ್ ಮತ್ತು ಗುಜರಾತ್ ನ ಅಮುಲ್ ಸಂಸ್ಥೆಗಳ ವಿಲೀನವಿಲ್ಲ.. ವದಂತಿಗಳಿಗೆ ಕಿವಿಗೊಡಬೇಡಿ ಎಂದು KMF MD ಬಿ.ಸಿ ಸತೀಶ್ ಸ್ಪಷ್ಟನೆ ನೀಡಿದ್ದಾರೆ.

published on : 9th April 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9