- Tag results for Karnataka government
![]() | ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಕಾರವಾರದಲ್ಲಿ ವೈದ್ಯಕೀಯ ಕಾಲೇಜಿದೆ. ಕರಾವಳಿ ಘಟ್ಟದ ಮೇಲಿರುವ ತಾಲ್ಲೂಕುಗಳ ಜನರಿಗೆ ಅನುಕೂಲವಾಗುವಂತೆ ಕುಮಟಾ ಕ್ಷೇತ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಮೌಲ್ಯಯುತ ಜೀವನಕ್ಕೆ ಅಡಿಪಾಯ: ಶಾಲೆಯಲ್ಲಿ ಮಕ್ಕಳಿಗೆ ಧಾರ್ಮಿಕ ಪಠ್ಯ -ಸಾತ್ವಿಕ ಆಹಾರ; ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿ?ಮಾಜದಲ್ಲಿ ಮೌಲ್ಯ ಕುಸಿತ ಉಂಟಾಗಿದೆ. ಶಿಕ್ಷಣದಲ್ಲಿ ಮಕ್ಕಳಿಗೆ ಮೌಲ್ಯ ಆಧಾರಿತ ಶಿಕ್ಷಣ ದೊರಕುತ್ತಿಲ್ಲ. ಸ್ವಾಮೀಜಿಗಳಿಂದ ಮೌಲ್ಯ ಆಧಾರಿತ ಶಿಕ್ಷಣ ನೀಡಬೇಕು ಎಂಬ ಆಗ್ರಹ ಕೇಳಿ ಬಂದಿತ್ತು. ಸುಮಾರು ವರ್ಷಗಳಿಂದ ಮೌಲ್ಯ ಆಧಾರಿತ ಶಿಕ್ಷಣವನ್ನು ಭಾರತ ನೀಡಿದೆ. |
![]() | ಕರ್ನಾಟಕ ಕಾನೂನು ಪ್ರಾಧಿಕಾರ ಸ್ಥಾಪಿಸಿ: ರಾಜ್ಯ ಸರ್ಕಾರಕ್ಕೆ ಕಾನೂನು ತಜ್ಞರ ಆಗ್ರಹಉನ್ನತ ನ್ಯಾಯಾಂಗದ ಮಹತ್ವದ ತೀರ್ಪುಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮತ್ತು ಕನ್ನಡದಲ್ಲಿ ಕಾನೂನು ಪುಸ್ತಕಗಳ ಬರವಣಿಗೆ ಮತ್ತು ಪ್ರಕಟಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕರ್ನಾಟಕ ಕಾನೂನು ಪ್ರಾಧಿಕಾರವನ್ನು ಸ್ಥಾಪಿಸಬೇಕು ಎಂದು ಕಾನೂನು ತಜ್ಞರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. |
![]() | ರಾಜ್ಯಕ್ಕೆ ಅಮಿತ್ ಶಾ ಭೇಟಿ ಅಂಗವಾಗಿ ಸರ್ಕಾರ ವಿಧಾನಮಂಡಲ ಅಧಿವೇಶನ ಮೊಟಕುಗೊಳಿಸಿದೆ: ಸಿದ್ದರಾಮಯ್ಯಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗಾಗಿ ಬಿಜೆಪಿ ಸರ್ಕಾರ ವಿಧಾನಮಂಡಲದ ಅಧಿವೇಶನವನ್ನು ಒಂದು ದಿನ ಮುಂಚಿತವಾಗಿ ಮೊಟಕುಗೊಳಿಸಿದೆ ಎಂದು ಆರೋಪಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಅಧಿವೇಶನದ ಸಮಯದಲ್ಲಿ ಬರಬೇಡಿ ಎಂದು ಹೇಳುವ ಧೈರ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗಿಲ್ಲ ಎಂದು ಗುರುವಾರ ಹೇಳಿದ್ದಾರೆ. |
![]() | ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ಮಂದಿರ ಅಭಿವೃದ್ಧಿ: ಯೋಜನೆ ರೂಪಿಸಲು ಸಿಎಂ ಸೂಚನೆ- ಸಚಿವ ಅಶ್ವತ್ಥ್ ನಾರಾಯಣರಾಮನಗರದಲ್ಲಿರುವ ಪ್ರಸಿದ್ಧ ರಾಮ ದೇವರ ಬೆಟ್ಟದಲ್ಲಿ ಅಯೋಧ್ಯೆಯ ರಾಮ ಮಂದಿರದ ಮಾದರಿ ದೇವಾಲಯ ನಿರ್ಮಾಣ, ಅಭಿವೃದ್ಧಿಗೆ ಯೋಜನೆ ರೂಪಿಸಲು ಸಿಎಂ ಸೂಚನೆ ನೀಡಿದ್ದಾರೆ. |
![]() | ಹಲಾಲ್ ವಿರೋಧಿ ಮಸೂದೆ ತರಲು ರಾಜ್ಯ ಸರ್ಕಾರ ಯೋಜನೆ: ಅತ್ಯಂತ ದುರಾದೃಷ್ಟಕರ- ಬಿಕೆ ಹರಿಪ್ರಸಾದ್ರಾಜ್ಯದಲ್ಲಿ ಹಲಾಲ್ ಮಾಂಸದ ವಿರುದ್ಧ ಮಸೂದೆ ತರಲು ರಾಜ್ಯ ಸರ್ಕಾರ ಯೋಜಿಸಿರುವುದು ಅತ್ಯಂತ ದುರಾದೃಷ್ಟಕರವಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ. |
![]() | ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆರಾಜ್ಯದಾದ್ಯಂತ ಇರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ನಿಷೇಧಿಸುವ ಕುರಿತು ಅನೇಕರಿಂದ ಮನವಿಗಳನ್ನು ಸ್ವೀಕರಿಸಿದ ನಂತರ ರಾಜ್ಯದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮ ದತ್ತಿ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಚರ್ಚಿಸುತ್ತಿದ್ದಾರೆ. |
![]() | ಕಾಡಾನೆ ದಾಳಿ ಪರಿಹಾರವನ್ನು ದ್ವಿಗುಣಗೊಳಿಸಲು ಸರ್ಕಾರ ನಿರ್ಧಾರ; ₹ 7.5 ಲಕ್ಷದಿಂದ ₹ 15 ಲಕ್ಷಕ್ಕೆ ಹೆಚ್ಚಳಕಾಡಾನೆ ದಾಳಿಯಿಂದ ಸಾವಿಗೀಡಾದವರ ಕುಟುಂಬಕ್ಕೆ ನೀಡುವ ಪರಿಹಾರವನ್ನು ದ್ವಿಗುಣಗೊಳಿಸಲು ಸರ್ಕಾರ ನಿರ್ಧರಿಸಿದೆ. |
![]() | ಪಿಎಸ್ಐ ನೇಮಕಾತಿ ಹಗರಣ: ಎಡಿಜಿಪಿ ಅಮೃತ್ ಪಾಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಒಪ್ಪಿಗೆಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಎಡಿಜಿಪಿ ಆಗಿದ್ದ ಅಮೃತ್ ಪಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ. |
![]() | ಹಳೆ ವಾಹನಗಳನ್ನು ರದ್ದಿಗೆ ಹಾಕಿ, ಹೊಸ ವಾಹನ ಖರೀದಿ ಮೇಲೆ ರಿಯಾಯಿತಿ ಪಡೆಯಿರಿಕರ್ನಾಟಕ ಸರ್ಕಾರವು ಮುಂದಿನ 15 ದಿನಗಳಲ್ಲಿ ವಾಹನಗಳನ್ನು ರದ್ದಿಗೆ ಹಾಕುವ ನೀತಿ(vehicle scrappage policy)ಯನ್ನು ಹೊರತರಲಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು 15 ವರ್ಷ ಪೂರೈಸಿದ ಎಲ್ಲಾ ಸರ್ಕಾರಿ ವಾಹನಗಳನ್ನು ರದ್ದಿಗೆ ಹಾಕಬೇಕೆಂದು ಘೋಷಿಸಿದ ಬಳಿಕ ರಾಜ್ಯ ಸರ್ಕಾರ ಈ ನಿಯಮ ಜಾರಿಗೆ ತಂದಿದೆ. |
![]() | ಪರಿಣಾಮಕಾರಿ ಆಡಳಿತಕ್ಕೆ ಕ್ರಮ: ಸಿಇಜಿಐಎಸ್ ಹಾಗೂ ಕರ್ನಾಟಕ ಸರ್ಕಾರ ನಡುವೆ ಒಪ್ಪಂದಕ್ಕೆ ಸಹಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಮ್ಮುಖದಲ್ಲಿ ಸೆಂಟರ್ ಫಾರ್ ಎಫೆಕ್ಟಿವ್ ಗವರ್ನನ್ಸ್ ಆಫ್ ಇಂಡಿಯನ್ ಸ್ಟೇಟ್ಸ್(CEGIS) ಹಾಗೂ ಕರ್ನಾಟಕ ಸರ್ಕಾರದ ನಡುವೆ ಇಂದು ಮಂಗಳವಾರ 5 ವರ್ಷಗಳ ಒಪ್ಪಂದಕ್ಕೆ ಸಹಿ ಮಾಡಲಾಯಿತು. |
![]() | ರವಿಕಾಂತೇಗೌಡ, ರವಿ ಚನ್ನಣ್ಣನವರ್ ಸೇರಿ 11 ಐಪಿಎಸ್ ಅಧಿಕಾರಿಗಳ ವರ್ಗಾವಣೆರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು, ಬಿಆರ್ ರವಿಕಾಂತೇಗೌಡ ಹಾಗೂ ರವಿ ಚನ್ನಣ್ಣನವರ್ ಸೇರಿದಂತೆ 11 ಐಪಿಎಸ್ ಅಧಿಕಾರಿಗಳ ವರ್ಗಾವಣೆಮಾಡಿ ಸೋಮವಾರ ಆದೇಶ ಹೊರಡಿಸಿದೆ. |
![]() | 'ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ' ಎಂದು ಮುಂದಿನ ವರ್ಷ ದೊಡ್ಡ ಮಟ್ಟದಲ್ಲಿ ಆಚರಿಸಲು ಸರ್ಕಾರ ಯೋಜನೆಕರ್ನಾಟಕ ರಾಜ್ಯ ಸಿರಿಧಾನ್ಯಗಳ ಬೆಳೆಗಳಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ. ವಿಶ್ವಸಂಸ್ಥೆಯು ಗೊತ್ತುಪಡಿಸಿದ 2023 ನೇ ವರ್ಷವನ್ನು 'ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ' ಎಂದು ಆಚರಿಸುವ ಪ್ರಯತ್ನದ ಭಾಗವಾಗಿ, ಜನರಲ್ಲಿ ಅದರ ಬಳಕೆಯನ್ನು ಹೆಚ್ಚಿಸುವ ಮೂಲಕ ಬೆಳೆಯನ್ನು ಉತ್ತೇಜಿಸಲು ಸರ್ಕಾರ ಯೋಜಿಸುತ್ತಿದೆ. |
![]() | ಓಲಾ, ಉಬರ್ ಆಟೋರಿಕ್ಷಾ ಸೇವೆ ಪ್ರಕರಣ: ಸೌಹಾರ್ದವಾಗಿ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ 4 ವಾರ ಸಮಯ: ಹೈಕೋರ್ಟ್ಓಲಾ ಮತ್ತು ಉಬರ್ ತಮ್ಮ ಆ್ಯಪ್ ಮೂಲಕ ಆಟೋರಿಕ್ಷಾ ಸೇವೆ ನೀಡುವುದಕ್ಕೆ ಸಂಬಂಧಿಸಿದಂತೆ ಉದ್ಭವಿಸಿರುವ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಕರ್ನಾಟಕ ಹೈಕೋರ್ಟ್ 4 ವಾರಗಳ ಕಾಲ ಸಮಯ ನೀಡಿದೆ. |
![]() | ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ; ಅಪ್ಪು ದೇವರ ಮಗ-ರಜನಿ, ನಗುವಿನಿಂದಲೇ ರಾಜ್ಯ ಗೆದ್ದ ರಾಜ ಪುನೀತ್- ಜ್ಯೂ.ಎನ್ ಟಿಆರ್ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ, ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ, ಗಣ್ಯರ ಸಮ್ಮುಖದಲ್ಲಿ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ನ.1 ರಂದು ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. |