• Tag results for Kashmir

10 ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿ ಬಿಡುಗಡೆ ಮಾಡಿದ ಜಮ್ಮು-ಕಾಶ್ಮೀರ ಪೊಲೀಸರು

ಕಣಿವೆ ರಾಜ್ಯದಲ್ಲಿ ಆತಂಕ ಸೃಷ್ಟಿಸಲು ಸಂಚು ರೂಪಿಸಿರುವ 10 ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಸೋಮವಾರ ಬಿಡುಗಡೆ ಮಾಡಿದ್ದಾರೆ. 

published on : 3rd August 2021

ಬಂಡಿಪೋರಾ ಎನ್ಕೌಂಟರ್: ಓರ್ವ ಉಗ್ರನ ಹತ್ಯೆಗೈದ ಭಾರತೀಯ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ. 

published on : 3rd August 2021

ಜಮ್ಮು ಕಾಶ್ಮೀರ: ಸಾಂಬಾ ಜಿಲ್ಲೆಯ 3 ಕಡೆ ಡ್ರೋಣ್ ಹಾರಾಟ, ಆತಂಕಗೊಂಡ ಸ್ಥಳೀಯರು

ಭಾರತದ ಗಡಿ ಪ್ರದೇಶದಲ್ಲಿ ಡ್ರೋಣ್'ಗಳ ಹಾರಾಟ ಹೆಚ್ಚಾಗುತ್ತಲೇ ಇದೆ .ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ಬ್ಯಾರಿ ಬ್ರಾಹ್ಮಣ ಏರಿಯಾದ ಮೂರು ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಡ್ರೋಣ್ ಗಳ ಹಾರಾಟ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. 

published on : 2nd August 2021

ಆಗಸ್ಟ್ 17ಕ್ಕೆ ಜಮ್ಮು-ಕಾಶ್ಮೀರ, ಲಡಾಖ್'ಗೆ ಸಂಸದೀಯ ಸ್ಥಾಯಿ ಸಮಿತಿ ಭೇಟಿ

ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಆಗಸ್ಟ್ 17 ರಿಂದ 22 ರವರೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ಗೆ ಭೇಟಿ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. 

published on : 1st August 2021

ಭಯೋತ್ಪಾದನಾ ಪ್ರಕರಣ: ಜಮ್ಮು-ಕಾಶ್ಮೀರದ 14 ಪ್ರದೇಶಗಳಲ್ಲಿ ಎನ್ಐಎ ದಾಳಿ, ಪರಿಶೀಲನೆ

ಎರಡು ಪ್ರತ್ಯೇಕ ಭಯೋತ್ಪಾದನಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ 14 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆಂದು ಶನಿವಾರ ತಿಳಿದುಬಂದಿದೆ. 

published on : 31st July 2021

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 

published on : 31st July 2021

ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ, ಮೂವರು ಭದ್ರತಾ ಸಿಬ್ಬಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಉಗ್ರರು ಶುಕ್ರವಾರ ನಡೆಸಿದ ಗ್ರೆನೇಡ್ ದಾಳಿಯಲ್ಲಿ ಭದ್ರತಾ ಪಡೆಯ ಮೂವರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 30th July 2021

ಜಮ್ಮು ಮತ್ತು ಕಾಶ್ಮೀರ: ಸಾಂಬಾ ಜಿಲ್ಲೆಯ 3 ಪ್ರದೇಶಗಳಲ್ಲಿ ಡ್ರೋಣ್ ಗಳ ಅನುಮಾನಾಸ್ಪದ ಹಾರಾಟ, ಸೇನೆ ದಾಳಿ ಮಾಡುತ್ತಿದ್ದಂತೆ ಪಾಕಿಸ್ತಾನದತ್ತ ಪಯಣ

ಭಾರತದ ಗಡಿ ಪ್ರದೇಶದಲ್ಲಿ ಇತ್ತೀಚೆಗೆ ಅನುಮಾನಾಸ್ಪದವಾಗಿ ಡ್ರೋಣ್'ಗಳ ಹಾರಾಟ ಹೆಚ್ಚಾಗಿದ್ದು, ಗುರುವಾರ ರಾತ್ರಿ 8.30-9.30ರ ಸಮಯದಲ್ಲಿ ಸಾಂಬಾ ಜಿಲ್ಲೆಯ ಮೂರು ಪ್ರದೇಶಗಳಲ್ಲಿ ಡ್ರೋಣ್ ಹಾರಾಟ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. 

published on : 30th July 2021

ಸಹಜ ಸ್ಥಿತಿಗೆ ಬಂದ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ: ರಾಜ್ಯಸಭೆಗೆ ಕೇಂದ್ರ ಮಾಹಿತಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಮಾನ್ಯ ಸ್ಥಿತಿ ಪುನಃಸ್ಥಾಪಿಸಿದ ನಂತರ "ಸೂಕ್ತ" ಸಮಯದಲ್ಲಿ ರಾಜ್ಯದ ಸ್ಥಾನಮಾನ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಸಂಸತ್ತಿನಲ್ಲಿ ತಿಳಿಸಿದೆ.

published on : 28th July 2021

ಕಾಶ್ಮೀರದಲ್ಲಿ ಮೇಘಸ್ಫೋಟ: ಸಾವಿನ ಸಂಖ್ಯೆ 7ಕ್ಕೆ ಏರಿಕೆ, 17 ಮಂದಿಯ ರಕ್ಷಣೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದ್ದು, ಇದುವರೆಗೆ 17 ಮಂದಿಯನ್ನು ರಕ್ಷಿಸಲಾಗಿದೆ. 

published on : 28th July 2021

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ; ಕನಿಷ್ಠ 4 ಮಂದಿ ಸಾವು, 40 ಮಂದಿ ನಾಪತ್ತೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

published on : 28th July 2021

ಕುಲ್ಗಾಮ್ ನಲ್ಲಿ ಭದ್ರತಾ ಪಡೆಗಳ ಗುಂಡೇಟಿಗೆ ಉಗ್ರ ಬಲಿ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಅಪರಿಚಿತ ಉಗ್ರನೋರ್ವನನ್ನು ಹೊಡೆದುರುಳಿಸಿರುವುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ.

published on : 26th July 2021

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರ ದಾಳಿ; ಓರ್ವ ಪೊಲೀಸ್ ಸಿಬ್ಬಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಪೊಲೀಸ್ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. 

published on : 26th July 2021

ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ, ಯೋಧನಿಗೆ ಗಾಯ 

ಭದ್ರತಾ ಪಡೆ ಪೊಲೀಸರು ಮತ್ತು ಉಗ್ರಗಾಮಿಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿ ಯೋಧರೊಬ್ಬರು ಗಾಯಗೊಂಡಿರುವ ಘಟನೆ ಉತ್ತರ ಕಾಶ್ಮೀರದ ಬಂಡಿಪೊರಾದಲ್ಲಿ ಭಾನುವಾರ ನಡೆದಿದೆ.

published on : 25th July 2021

ಶಸ್ತ್ರಾಸ್ತ್ರ ಪರವಾನಗಿ ಹಗರಣ; ಶ್ರೀನಗರದ ಹಲವೆಡೆ ಸಿಬಿಐ ದಾಳಿ

ಜಮ್ಮು ಮತ್ತು ಕಾಶ್ಮೀರದ ವಿವಿಧ ಜಿಲ್ಲೆಗಳಲ್ಲಿ ಶಸ್ತ್ರಾಸ್ತ್ರ ಪರವಾನಗಿ ನೀಡುವಲ್ಲಿ ಅಕ್ರಮ ನಡೆದ ಆರೋಪ ಸಂಬಂಧ ಕೇಂದ್ರ ತನಿಖಾ ದಳ (ಸಿಬಿಐ)ದ ಅಧಿಕಾರಿಗಳು ಶ್ರೀನಗರ ಹಲವೆಡೆ ಶನಿವಾರ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 

published on : 24th July 2021
1 2 3 4 5 6 >