- Tag results for Kasmir
![]() | ಬಾರಾಮುಲ್ಲಾದಲ್ಲಿ ಅಡಗಿ ಕುಳಿತಿರುವ ಇಬ್ಬರು ಉಗ್ರರು: ಸೇನಾಪಡೆ ಕಾರ್ಯಾಚರಣೆ, ಓರ್ವ ಯೋಧನಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ವಾನಿಗಾಮ್ ಎಂಬಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರಿಗಾಗಿ ಭಾರತೀಯ ಸೇನಾಪಡೆ ಭಾರೀ ಕಾರ್ಯಾಚರಣೆ ನಡೆಯುತ್ತಿದೆ ಎಂದು ಗುರುವಾರ ತಿಳಿದುಬಂದಿದೆ. |
![]() | ಹತ್ಯೆಯಾದ ಜೆಇಎಂ ಉಗ್ರರು ಅಂತರಾಷ್ಟ್ರೀಯ ಗಡಿಯಲ್ಲಿ ಪತ್ತೆಯಾದ ಸುರಂಗದಿಂದ ಭಾರತಕ್ಕೆ ಬಂದಿದ್ದರು!ಉಗ್ರರ ಕಾರ್ಖಾನೆಯಾಗಿರುವ ಪಾಕಿಸ್ತಾನ ಭಾರತಕ್ಕೆ ಉಗ್ರರನ್ನು ರವಾನಿಸುವ ತನ್ನ ಚಾಳಿಯನ್ನು ಎಂದಿನಿಂತೆ ಮುಂದುವರೆಸಿದೆ. ಭಾರತದೊಳಗೆ ನುಸುಳಲು ಉಗ್ರರಿಗೆ ಪಾಕಿಸ್ತಾನವೇ ಸಹಾಯ ಮಾಡಿದೆ ಎಂಬುದಕ್ಕೆ ಸಾಕ್ಷ್ಯ ದೊರೆತಿದೆ. |
![]() | ಭಾರತೀಯ ಸೇನೆ ಪ್ರತಿದಾಳಿಗೆ 8 ಮಂದಿ ಪಾಕ್ ಯೋಧರು ಹತ, ಉಗ್ರರ ಶಿಬಿರ, ಬಂಕರ್'ಗಳು, ಶಸ್ತ್ರಾಸ್ತ್ರ ನಾಶಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪದೇ ಪದೇ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಲಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿದೆ. |
![]() | ಪುಲ್ವಾಮ ಎನ್ಕೌಂಟರ್: ಓರ್ವ ಉಗ್ರನ ಹತ್ಯೆ, ಓರ್ವ ನಾಗರೀಕ ಸಾವುಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆ ಪಾಂಪೋರ್'ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. |
![]() | ಕುಪ್ವಾರಾದಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಇಬ್ಬರು ಭಾರತೀಯ ಯೋಧರು ಹುತಾತ್ಮ, ನಾಲ್ವರಿಗೆ ಗಾಯಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿಯಲ್ಲಿ ಪಾಕಿಸ್ತಾನ ಪಡೆಗಳು ಗುರುವಾರ ಅಪ್ರಚೋದಿತ ಮತ್ತು ಮನಸೋಚ್ಛೆ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದ್ದು, ದಾಳಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮಜಮ್ಮು-ಕಾಶ್ಮೀರದ ಕೃಷ್ಣಘಾಟಿ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಈ ವೇಳೆ ಭಾರತೀಯ ಸೇನೆಯನ್ನು ಗುರಿಯಾಗಿರಿಸಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. |
![]() | ಅವಂತಿಪೋರಾದಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನಾಪಡೆಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ. |
![]() | ವರ್ಷದ ಬಳಿಕ ಜಮ್ಮು ಮತ್ತು ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ 4ಜಿ ಇಂಟರ್ನೆಟ್ ಸೇವೆ ಪುನರಾರಂಭವರ್ಷದ ಬಳಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ರಾತ್ರಿ ಗಂದೇರ್ಬಲ್ ಮತ್ತು ಉಧಂಪುರ್ ಜಿಲ್ಲೆಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೈ-ಸ್ಪೀಡ್ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. |
![]() | ಪುಲ್ವಾಮದಲ್ಲಿ ಮತ್ತೊಮ್ಮೆ ದೊಡ್ಡಮಟ್ಟದ ದಾಳಿಗೆ ಉಗ್ರರ ಸಂಚು: ಯೋಧರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಮತ್ತೊಮ್ಮೆ ಭಾರೀ ದಾಳಿ ನಡೆಸಲು ಉಗ್ರರು ನಡೆಸಿದ್ದ ಸಂಚನ್ನು ಭಾರತೀಯ ಯೋಧರು ವಿಫಲಗೊಳ್ಳುವಂತೆ ಮಾಡಿದ್ದಾರೆ. ಬರೋಬ್ಬರಿ 20 ಕೆಜಿಗೂ ಹೆಚ್ಚು ತೂಕದ ಸುಧಾರಿತ ಸ್ಫೋಟಕ ಸಾಧನ (ಐಟಿಡಿ) ಹೊತ್ತು ಸಾಗುತ್ತಿದ್ದ ವಾಹನವನ್ನು ಭದ್ರತಾ ಪಡೆಗಳು ತಡೆದಿದ್ದು, ಈ ಮೂಲಕ ಭಾರೀ ಅನಾಹುತವೊಂದು ತಪ್ಪುವಂತೆ ಮಾಡಿದ್ದಾರೆ. |
![]() | ಕುಪ್ವಾರ: ಉಗ್ರ ಸಂಘಟನೆಗೆ ಹೊಸದಾಗಿ ಸೇರಿಕೊಂಡಿದ್ದ ಮೂವರು ಭಯೋತ್ಪಾದಕರ ಬಂಧನಇತ್ತೀಚೆಗಷ್ಟೇ ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿದ್ದ ಮೂವರು ಉಗ್ರರನ್ನು ಬಂಧಿಸುವಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಯಶಸ್ವಿಯಾಗಿದ್ದಾರೆ. |
![]() | ಭಾರತ-ಪಾಕ್ ಸಮ್ಮತಿಸಿದರೆ ಕಾಶ್ಮೀರಕ್ಕಾಗಿ ಮಧ್ಯಸ್ಥಿಕೆಗೆ ಸಿದ್ದ-ಡೊನಾಲ್ಡ್ ಟ್ರಂಪ್ ಪುನರುಚ್ಚಾರಭಾರತ-ಪಾಕಿಸ್ತಾನ ಎರಡೂ ರಾಷ್ಟ್ರಗಳು ಸಮ್ಮತಿಸಿದರೆ ಕಾಶ್ಮೀರ ವಿಚಾರವಾಗಿ ಮಧ್ಯಸ್ಥಿಕೆ ವಹಿಸಲು ನಾನು ಸಿದ್ದನಿದ್ದೇನೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಭಾರತ ಪ್ರವಾಸದಲ್ಲಿರುವ ಟ್ರಂಪ್ ಇಂದು ದೆಹಲಿಯಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಮಾತುಗಳನ್ನಾಡಿದ್ದಾರೆ. |