- Tag results for Lok Sabha
![]() | ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಂದ ಗದ್ದಲ, ಮಧ್ಯಾಹ್ನ 12 ಗಂಟೆಯವರೆಗೂ ಲೋಕಸಭೆ ಮುಂದೂಡಿಕೆಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರ ಉಚ್ಚಾಟನೆ ಕುರಿತು ನೈತಿಕ ಸಮಿತಿ ಶಿಫಾರಸ್ಸು ವಿಷಯ ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ್ದರಿಂದ ಲೋಕಸಭೆಯನ್ನು ಮಧ್ಯಾಹ್ನ 12 ಗಂಟೆಯವರೆಗೂ ಮುಂದೂಡಲಾಯಿತು. |
![]() | ಚುನಾವಣಾ ಫಲಿತಾಂಶಗಳು ಪ್ರಧಾನಿ ಮೋದಿ ಮೇಲಿನ ಜನರ ನಂಬಿಕೆಯನ್ನು ತೋರಿಸುತ್ತವೆ: ಬಿವೈ ವಿಜಯೇಂದ್ರನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಪಕ್ಷದ ಕರ್ನಾಟಕ ಘಟಕದ ಮುಖ್ಯಸ್ಥ ಬಿವೈ ವಿಜಯೇಂದ್ರ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭಾನುವಾರ ಹೇಳಿದ್ದಾರೆ. |
![]() | ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 28 ಸ್ಥಾನಗಳನ್ನು ಗೆಲ್ಲುತ್ತದೆ: ಬಿಎಸ್ ಯಡಿಯೂರಪ್ಪಇಂದಿನ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಮೂರರಲ್ಲಿ ಪಕ್ಷವು ಗಮನಾರ್ಹ ಮುನ್ನಡೆ ಸಾಧಿಸಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ. |
![]() | ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಸವಾಲಾಗಿರುವ ಹಾಸನ ಲೋಕಸಭಾ ಕ್ಷೇತ್ರ!ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಮ್ಮ ತವರು ಕ್ಷೇತ್ರವಾದ ಹಾಸನದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಮೊದಲ ಸಭೆಯನ್ನು ನಡೆಸಲಿದ್ದಾರೆ. |
![]() | ಬೆಳಗಾವಿ, ಚಿಕ್ಕೋಡಿ ಮೇಲೆ ಕಾಂಗ್ರೆಸ್ ಕಣ್ಣು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅದೃಷ್ಟ ಯಾರಿಗೆ?ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ. |
![]() | 2024ರ ಲೋಕಸಭೆ ಚುನಾವಣೆ: ಮೊಹಮ್ಮದ್ ಶಮಿ ಬಿಜೆಪಿ ಸೇರ್ತಾರಾ? ಅಮಿತ್ ಶಾ ಭೇಟಿ ನಂತರ ಊಹಾಪೋಹ!ಇತ್ತೀಚೆಗೆ ಮುಕ್ತಾಯಗೊಂಡ ಕ್ರಿಕೆಟ್ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಮೊಹಮ್ಮದ್ ಶಮಿ, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. |
![]() | 'ಉಚ್ಛಾಟನೆಯಿಂದ ಮಹುವಾಗೆ ಮತ್ತಷ್ಟು ಪ್ರಚಾರ, ಜನಪ್ರಿಯತೆ': ಮೊದಲ ಬಾರಿಗೆ ಮೌನ ಮುರಿದ ಮಮತಾ ಬ್ಯಾನರ್ಜಿ!ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 'ಉಚ್ಛಾಟನೆಯಿಂದ ಮಹುವಾ ಮೋಯಿತ್ರಾಗೆ ಮತ್ತಷ್ಟು ಪ್ರಚಾರ ಸಿಗಲಿದ್ದು, ಆಕೆ ಮತ್ತಷ್ಟು ಜನಪ್ರಿಯಳಾಗುತ್ತಾರೆ ಎಂದು ಹೇಳಿದ್ದಾರೆ. |
![]() | ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ: ಯಡಿಯೂರಪ್ಪ ಬಣದ ವಿರುದ್ಧ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ!2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯ ಅಷ್ಟೇನು ಜನಪ್ರಿಯವಲ್ಲದ ಇಬ್ಬರು ನಾಯಕರನ್ನು ಪಕ್ಷದ ಅಧ್ಯಕ್ಷರಾಗಿ ಮತ್ತು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿರುವುದು ಇದೀಗ ಪಕ್ಷದೊಳಗೆ ಅಸಮಧಾನ ಭುಗಿಲೇಳಲು ಕಾರಣವಾಗಿದೆ. |
![]() | ಜಾತಿ ಸಮೀಕ್ಷೆ ವರದಿ: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಇಕ್ಕಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ಬಹುಚರ್ಚಿತ ಜಾತಿ ಸಮೀಕ್ಷೆಯನ್ನು ಸಿಎಂ ಸಿದ್ದರಾಮಯ್ಯನವರು ಕಳೆದ ಬಾರಿ 2013ರಲ್ಲಿ ಅಧಿಕಾರಕ್ಕೆ ಬಂದಿದ್ದಾಗ ಆರಂಭಿಸಿದ್ದು, ಅದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. |
![]() | ಲೋಕಸಭೆಯಲ್ಲಿ 700 ಕ್ಕೂ ಹೆಚ್ಚು ಖಾಸಗಿ ಮಸೂದೆಗಳು ಬಾಕಿ!ಲೋಕಸಭೆಯಲ್ಲಿ 700ಕ್ಕೂ ಹೆಚ್ಚು ಖಾಸಗಿ ಮಸೂದೆಗಳು ಬಾಕಿ ಉಳಿದಿದ್ದು, ಅವುಗಳಲ್ಲಿ ಹಲವು ದಂಡದ ನಿಬಂಧನೆಗಳು ಮತ್ತು ಚುನಾವಣಾ ಕಾನೂನುಗಳನ್ನು ತಿದ್ದುಪಡಿ ಮಾಡುವಂತೆ ಕೋರಿವೆ. |
![]() | ಬಿಜೆಪಿಯಲ್ಲಿ 'ವಿಜಯ' ಶಕೆ ಆರಂಭ: ಹಿರಿಯರ ಮುನಿಸು ತಣಿಸಿ ಎಲ್ಲರನ್ನೊಟ್ಟಿಗೆ ಕರೆದೊಯ್ಯುವುದು ದೊಡ್ಡ ಸವಾಲು!ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಇರುವ ಹೊತ್ತಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿ. ವೈ. ವಿಜಯೇಂದ್ರ ಎದುರಿಗೆ ಬೆಟ್ಟದಷ್ಟು ಸವಾಲುಗಳಿವೆ. ಹಿರಿಯರು, ಕಿರಿಯರ ನಡುವೆ ಸಾಮರಸ್ಯ ಸಾಧಿಸಿ, ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯಬೇಕಾದ ಅನಿವಾರ್ಯತೆ ಇದೆ. |
![]() | ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ: ಪಕ್ಷ ಪುನಶ್ಚೇತನಕ್ಕೆ ಕಾಂಗ್ರೆಸ್, ಬಿಜೆಪಿ ಮುಂದು!2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೆ ರಾಜಕೀಯ ಪಕ್ಷಗಳುು ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ. ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿದ್ದು, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪದಾಧಿಕಾರಿಗಳ ಬದಲಾವಣೆ ಕುರಿತು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. |
![]() | ಮೊಯಿತ್ರಾ ಉಚ್ಚಾಟನೆಗೆ ಸಂಬಂಧಿಸಿದ ಲೋಕಸಭೆ ನೈತಿಕ ಸಮಿತಿ ವರದಿ ಸ್ಪೀಕರ್ ಕಚೇರಿಗೆ ಸಲ್ಲಿಕೆ: ಮೂಲಗಳುಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆಗೆ... |
![]() | ಇದು 'ಕಾಂಗರೂ ಕೋರ್ಟ್' ತೀರ್ಪು; ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆ; ದೊಡ್ಡ ಜನಾದೇಶದೊಂದಿಗೆ ಮರಳುತ್ತೇನೆ: ಮೊಯಿತ್ರಾಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ನೈತಿಕ ಸಮಿತಿಯು ಗುರುವಾರ ಉಚ್ಛಾಟನೆಗೆ ಶಿಫಾರಸ್ಸು ಮಾಡಿರುವ ಟಿಎಂಸಿ ಹಿರಿಯ ನಾಯಕಿ ಮಹುವಾ ಮೊಯಿತ್ರಾ, ಇದು "ಕಾಂಗರೂ ಕೋರ್ಟ್ ನಿಂದ ಪೂರ್ವ ನಿಯೋಜಿತ ಪಂದ್ಯ' ಎಂದು ಬಣ್ಣಿಸಿದ್ದಾರೆ. |
![]() | ಸದನದಲ್ಲಿ ಪ್ರಶ್ನೆ ಕೇಳಲು ಹಣ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಛಾಟನೆಗೆ ಲೋಕಸಭೆಯ ನೈತಿಕ ಸಮಿತಿ ಶಿಫಾರಸುಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ನೈತಿಕ ಸಮಿತಿಯು ಗುರುವಾರ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದಿಂದ ಉಚ್ಛಾಟಿಸಲು ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. |