social_icon
  • Tag results for Lokayukta police

ಬೆಳಗಾವಿ: ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ

ಶಿಕ್ಷಣ ಸಂಸ್ಥೆಯ ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಬೆಳಗಾವಿ ಡಿಡಿಪಿಐ ಬಸವರಾಜ್​ ನಾಲತವಾಡ ಅವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

published on : 20th October 2023

ಆದಾಯ ಮೀರಿ ಆಸ್ತಿ ಗಳಿಕೆ: ಬೆಂಗಳೂರಿನ ಕೆ.ಆರ್.ಪುರಂ ಸರ್ವೆ ಸೂಪರ್ ವೈಸರ್ ಕೆ ಟಿ ಶ್ರೀನಿವಾಸ್ ಮೂರ್ತಿ ಲೋಕಾಯುಕ್ತ ಬಲೆಗೆ

ನಗರದ ಲೋಕಾಯುಕ್ತ ಪೊಲೀಸರು ಇಂದು ಮಂಗಳವಾರ ಕೆ ಆರ್ ಪುರಂ ತಾಲ್ಲೂಕು ಕಚೇರಿಯ ಸರ್ವೆ ಸೂಪರ್ ವೈಸರ್ ಕೆ ಟಿ ಶ್ರೀನಿವಾಸ ಮೂರ್ತಿಯವರ ಹಲವು ಮನೆಗಳ ಮೇಲೆ ದಾಳಿ ನಡೆಸಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

published on : 22nd August 2023

ಬೆಂಗಳೂರು: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಹದೇವಪುರ ರೆವಿನ್ಯೂ ಇನ್ಸ್ ಪೆಕ್ಟರ್

5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಬಿಎಂಪಿ ಕಂದಾಯ ನಿರೀಕ್ಷಕ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

published on : 5th August 2023

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆಯಿಂದ ಐವರು ಸಾವು ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಸ್ವಯಂ ಪ್ರೇರಿತ ಕೇಸು ದಾಖಲು

ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ವಾಂತಿ-ಬೇಧಿಯಿಂದ ತೀವ್ರ ಅಸ್ವಸ್ಥಗೊಂಡಿದ್ದ ಐವರು ನಾಗರಿಕರು ಮೃತಪಟ್ಟು 41 ಮಂದಿ ತೀವ್ರ ಅಸ್ವಸ್ಥಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ.

published on : 5th August 2023

ರಾಮನಗರ: 50 ಸಾವಿರ ರೂ. ಲಂಚ ಸ್ವೀಕಾರ; ಸ್ನೇಹಿತ ಸೇರಿ ಹೆಡ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

50 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಹೆಡ್‌ಕಾನ್ಸ್‌ಟೇಬಲ್‌ ಭಾನುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತ ಪೊಲೀಸ್ ಪೇದೆಯನ್ನು ರಾಮನಗರದ ಸೈಬರ್ ಕ್ರೈಮ್ಸ್, ಆರ್ಥಿಕ ಅಪರಾಧಗಳು ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯ ಮಹೇಶ್ (43) ಎಂದು ಗುರುತಿಸಲಾಗಿದೆ.

published on : 17th July 2023

ಲಂಚ ಪಡೆದು ಎಸ್ಕೇಪ್ ಆಗುತ್ತಿದ್ದ ಅಧಿಕಾರಿ: ಲೋಕಾಯುಕ್ತ ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ; ಚೇಸ್ ಮಾಡಿ ವಶಕ್ಕೆ!

ಮಹಾಂತೇಗೌಡ ಬಿ. ಕಡಬಾಳು ಎಂಬವರೇ ಬಂಧಿತ ಆಹಾರ ನಿರೀಕ್ಷಕ ಎಂದು ತಿಳಿದು ಬಂದಿದೆ. ಮಹಾಂತೇಗೌಡ, ಇತ್ತೀಚೆಗೆ ರಂಗಧಾಮಯ್ಯ ಎಂಬುವವರ ಬಳಿ ಉದ್ದಿಮೆ ಪರವಾನಗಿ ಪರಿಶೀಲನೆಗಾಗಿ 1ಲಕ್ಷ‌ ಲಂಚಕ್ಕೆ ಬೇಡಿಕೆ ಇಟ್ಟಿದ್ದರು

published on : 15th July 2023

ಅಕ್ರಮ ಆಸ್ತಿ ಗಳಿಕೆ ಆರೋಪ: ತಹಶೀಲ್ದಾರ್ ಅಜಿತ್ ರೈ 7 ದಿನ ಲೋಕಾಯುಕ್ತ ಪೊಲೀಸ್ ವಶಕ್ಕೆ!

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಕೆ.ಆರ್. ಪುರದ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

published on : 30th June 2023

ನೆಲಮಂಗಲ: ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಡಿಒ!

ಜಮೀನಿನ ಖಾತೆ ವರ್ಗಾವಣೆಗೆ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್  ಆಗಿ ಸಿಕ್ಕಿ ಬಿದ್ದಿದ್ದಾರೆ.

published on : 9th June 2023

ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: 48.75 ಕೋಟಿ ರೂ ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಕಳೆದೆರಡು ದಿನಗಳಿಂದ ಲೋಕಾಯುಕ್ತ ಪೊಲೀಸರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 15 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 48.75 ಕೋಟಿ ರೂ ಮೌಲ್ಯದ ನಗದು, ಚಿನ್ನಾಭರಣ ಮತ್ತು ಇತರ ಮೌಲ್ಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 

published on : 2nd June 2023

ಅವ್ಯವಹಾರ ಆರೋಪ: ದೇವರಾಜ ಅರಸು ಟರ್ಮಿನಲ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

55 ಕೋಟಿ ರೂ ಅವ್ಯವಹಾರ ಆರೋಪದ ಮೇರೆಗೆ ದೇವರಾಜ ಅರಸು ಟರ್ಮಿನಲ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.

published on : 18th April 2023

ಅಕ್ರಮ ಆಸ್ತಿ ಪ್ರಕರಣದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಸಂಕಷ್ಟ: ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

published on : 5th April 2023

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಸ್ಟಡಿಗೆ ಕೋರಿ ಸುಪ್ರೀಂ ಕೋರ್ಟ್ ಗೆ ಲೋಕಾಯುಕ್ತ ಅರ್ಜಿ: ಇಂದು ವಿಚಾರಣೆ ಸಾಧ್ಯತೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ತಡೆ ನೀಡುವಂತೆ ಲೋಕಾಯುಕ್ತ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. 

published on : 14th March 2023

ಭ್ರಷ್ಟಾಚಾರ ಪ್ರಕರಣ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿಚಾರಣೆ; ಪುತ್ರನ ವಿರುದ್ಧ ಮತ್ತೆರಡು ಎಫ್ಐಆರ್ ದಾಖಲು

ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ  ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸುದೀರ್ಘ ವಿಚಾರಣೆಗೊಳಪಡಿಸಿದರು.

published on : 10th March 2023

ಬಿಜೆಪಿ ಶಾಸಕ ಮಾಡಾಲ್ ವಿರೂಪಾಕ್ಷಪ್ಪ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಕೇಸ್ ದಾಖಲು ಸಾಧ್ಯತೆ?

ತನ್ನ ಪುತ್ರ ಪ್ರಶಾಂತ್ ಲಂಚ ಸ್ವೀಕಾರ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದು, ತಲೆಮರಿಸಿಕೊಂಡಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಕೇಸ್ ದಾಖಲಿಸುವ ಸಾಧ್ಯತೆಯಿದೆ. 

published on : 6th March 2023

ಲೈಸೆನ್ಸ್ ನವೀಕರಣಕ್ಕೆ ಲಂಚ: ಬಿಬಿಎಂಪಿ ಹೆಲ್ತ್ ಇನ್ಸ್'ಪೆಕ್ಟರ್ ಲೋಕಾಯುಕ್ತ ಪೊಲೀಸರ ಬಲೆಗೆ

ಲೈಸೆನ್ಸ್ ನವೀಕರಣಕ್ಕಾಗಿ ಲಂಚ ಸ್ವೀಕರಿಸುವ ವೇಳೆ ಬಿಬಿಎಂಪಿ ಹೆಲ್ತ್ ಇನ್ಸ್'ಪೆಕ್ಟರ್'ವೊಬ್ಬರು ಶನಿವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

published on : 5th March 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9