- Tag results for MTB Nagaraj
![]() | 248 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ರೂ.8691 ಕೋಟಿ ಮೊತ್ತದ ಯೋಜನೆ- ಎಂಟಿಬಿ ನಾಗರಾಜ್ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಪೂರೈಸುವ ಅಮೃತ-2.0 ಯೋಜನೆಯನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು. |
![]() | ಸಚಿವ ಎಂಟಿಬಿ ನಾಗರಾಜ್ ಸೇರಿದಂತೆ ಇತರರಿಂದ ನೀರಿನ ಬಿಲ್ ಬಾಕಿ; ಒಟ್ಟು 19 ಕೋಟಿ ರೂ. ವಸೂಲಿ!ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ನೋಟಿಸ್ ಜಾರಿ ಮಾಡಿದ ನಂತರ ಮತ್ತು ಬಿಡಬ್ಲ್ಯುಎಸ್‌ಎಸ್‌ಬಿ ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಿಸಿದ ಬಳಿಕ ಕಳೆದ ಐದು ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ಸುಸ್ತಿದಾರರಿಂದ 19.35 ಕೋಟಿ ರೂ. ನೀರಿನ ಬಿಲ್‌ಗಳನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ವಸೂಲಿ ಮಾಡಿದೆ. |
![]() | 'ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆ'ಯಡಿ 5,188 ಮನೆಗಳ ನಿರ್ಮಾಣ: ರಾಜ್ಯ ಸರ್ಕಾರಪೌರಕಾರ್ಮಿಕರಿಗೆ ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ ಕರ್ನಾಟಕದಲ್ಲಿ ಒಟ್ಟು 5,188 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ಎಂಟಿಬಿ ನಾಗರಾಜ್ ಅವರು ಮಂಗಳವಾರ ಹೇಳಿದರು. |
![]() | ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆ, ಅದಕ್ಕೆ ಜನ ನನ್ನನ್ನು ಸೋಲಿಸಿದರು: ಎಂಟಿಬಿ ನಾಗರಾಜ್ನಾನು ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆ. ಬಿಜೆಪಿಗೆ ಬಂದಿದ್ದಕ್ಕೆ ಜನ ನನ್ನನ್ನು ಸೋಲಿಸಿಬಿಟ್ಟರು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರು ಶನಿವಾರ ಸಾರ್ವಜನಿಕ ಸಭೆಯಲ್ಲಿ ಬಹಿರಂಗವಾಗಿಯೇ ಹೇಳಿದ್ದಾರೆ. |
![]() | ವಿಶ್ವ ಶೌಚಾಲಯ ದಿನ; ನಗರಗಳ ಸ್ವಚ್ಚತೆ ಕಾಪಾಡಲು ತಂತ್ರಜ್ಞಾನ ಬಳಕೆಗೆ ಆದ್ಯತೆ- ಸಚಿವ ಎಂಟಿಬಿ ನಾಗರಾಜ್ನಗರಗಳಲ್ಲಿ ಸ್ವಚ್ಚತೆ ಹಾಗೂ ನೈರ್ಮಲ್ಯವನ್ನು ಕಾಪಾಡುವುದು ಅತ್ಯವಶ್ಯಕವಾಗಿದೆ. ನಗರಾಭಿವೃದ್ದಿಗೆ ಹೆಚ್ಚು ಒತ್ತು ನೀಡಿ ತ್ಯಾಜ್ಯ ನೀರು ಸಂಸ್ಕರಣೆ, ಘನತ್ಯಾಜ್ಯ ವಿಲೇವಾರಿ ಹಾಗೂ ನಗರಗಳ ಸ್ವಚ್ಚತೆ ಕಡೆಗೆ ಹೆಚ್ಚಿನ ಆಧ್ಯತೆ ನೀಡುವುದು ಅನಿವಾರ್ಯವಾಗಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. |
![]() | ಎಂಟಿಬಿ ಆಡಿಯೋ ಕ್ಲಿಪ್'ನಿಂದ ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ ಇರುವುದು ಸಾಬೀತಾಗಿದೆ: ಡಿಕೆಶಿಎಂಟಿಬಿ ಆಡಿಯೋ ಕ್ಲಿಪ್'ನಿಂದ ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ ಇರುವುದು ಸಾಬೀತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷಧ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಆರೋಪಿಸಿದ್ದಾರೆ. |
![]() | ಪೋಸ್ಟಿಂಗ್ ಪಡೆಯಲು 80 ಲಕ್ಷ ರೂ.; ಸಚಿವ ಎಂಟಿಬಿ ನಾಗರಾಜ್ ರಿಂದ 40 ಪರ್ಸೆಂಟ್ ಸರ್ಕಾರದ ಭ್ರಷ್ಟಾಚಾರ ಬಯಲುಅಮಾನತುಗೊಂಡಿದ್ದ ಕೆ.ಆರ್. ಪುರಂ ಪೊಲೀಸ್ ಠಾಣೆಯ ಇನ್ಪೆಕ್ಟರ್ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಂಟಿಬಿ ನಾಗರಾಜ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ... |
![]() | ಇನ್‌ಸ್ಪೆಕ್ಟರ್ ಹುದ್ದೆಗೆ 70-80 ಲಕ್ಷ ರೂ. ಕೊಟ್ಟು ಬಂದರೆ ಹೃದಯಾಘಾತವಾಗದೆ ಇನ್ನೇನಾಗುತ್ತದೆ: ಎಂಟಿಬಿ ನಾಗರಾಜ್ ಹೇಳಿಕೆ ಟ್ವೀಟ್ ಮಾಡಿ ಎಚ್ ಡಿಕೆ ಕಿಡಿ!ಅಮಾನತುಗೊಂಡಿದ್ದ ಪೊಲೀಸ್ ಇನ್ಪೆಕ್ಟರ್ ನಂದೀಶ್ ಸಾವು, ಹೃದಯಾಘಾತದಿಂದ ಅಲ್ಲ ಬದಲಾಗಿ ಇದೊಂದು ಕೊಲೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. |
![]() | ರೋಗಗ್ರಸ್ಥ ಕೈಗಾರಿಕಾ ಘಟಕಗಳ ಪುನಶ್ಚೇತನಕ್ಕೆ ಕ್ರಮ: ಸಚಿವ ಎಂಟಿಬಿ ನಾಗರಾಜ್ಕೋವಿಡ್ ಸಾಂಕ್ರಮಿಕದಿಂದಾಗಿ ಕಳೆದ ಎರಡು ವರ್ಷಗಳಲ್ಲಿ ಬಹಳಷ್ಟು ಘಟಕಗಳು ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ಮುಚ್ಚಲ್ಪಟ್ಟಿರುವ ಅಂಶವು ಸರ್ಕಾರದ ಗಮನಕ್ಕೆ ಬಂದಿದ್ದು, ಅವುಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕೆಗಳ ಸಚಿವ ಎಂ.ಟಿ.ಬಿ. ನಾಗರಾಜ್ ಹೇಳಿದ್ದಾರೆ. |
![]() | ಪೀಣ್ಯ ಅಭಿವೃದ್ಧಿಗೆ 100 ಕೋಟಿ ರೂ. ಯೋಜನೆಗೆ ಅನುಮೋದನೆ!ಪೀಣ್ಯ ಕೈಗಾರಿಕಾ ಪ್ರದೇಶದ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಿರುವ ಕಾಮಗಾರಿಗಳಿಗೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು ಅವರ ಅಧ್ಯಕ್ಷತೆಯ ಉನ್ನತಮಟ್ಟದ ಸಮಿತಿ ಅನುಮೋದನೆ ನೀಡಿದೆ. |
![]() | ಬೆಂಗಳೂರು: 1,250 ಸಣ್ಣ ಕೈಗಾರಿಕೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಅನುಮೋದನೆ- ಎಂಟಿಬಿ ನಾಗರಾಜ್ಜಿಲ್ಲಾ ಮಟ್ಟದ ಏಕ ಗವಾಕ್ಷಿ ಸಮಿತಿಗಳ ಮೂಲಕ 577 ಕೋಟಿ ರೂ. ಬಂಡವಾಳ ಹೂಡಿಕೆಯ 1,250 ಸಣ್ಣ ಕೈಗಾರಿಕೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಇದರಿಂದ 57,055 ಉದ್ಯೋಗಾವಕಾಶವನ್ನು ನಿರೀಕ್ಷಿಸಲಾಗಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. |
![]() | ರಾಜ್ಯದ 15 ಜಿಲ್ಲೆಗಳ 1,519 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆರಾಜ್ಯದ 15 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯ 4ನೇ ಹಂತದಲ್ಲಿ ರೂ.1519.43 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಬುಧವಾರ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ. |
![]() | ನನ್ನ ಹೇಳಿಕೆ ಸೈದ್ಧಾಂತಿಕವಾದದ್ದು, ಬಿಜೆಪಿ ಬಗ್ಗೆ ಅಸಮಾಧಾನ ಇಲ್ಲ: ಸಚಿವ ಎಂಟಿಬಿ ನಾಗರಾಜು ಸ್ಪಷ್ಟನೆಪಕ್ಷಾಂತರದ ಬಗೆಗಿನ ನನ್ನ ಹೇಳಿಕೆ ನೈತಿಕ ಮತ್ತು ಸೈದ್ಧಾಂತಿಕವಾದದ್ದು,ಯಾರೇ ಆಗಲಿ ಪಕ್ಷಾಂತರ ಮಾಡುವುದು ತಪ್ಪು ಎನ್ನುವ ಅರ್ಥದಲ್ಲಿ ಮಾತನಾಡಿದ್ದೇನೆಯೇ ಹೊರತು ಬಿಜೆಪಿ ಬಗ್ಗೆ ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ. |
![]() | ಟೇಪ್ ಕಟ್ ಮಾಡುವ ವಿಚಾರಕ್ಕೆ ಶಾಸಕ-ಸಚಿವರ ಜಟಾಪಟಿ; ಬಚ್ಚೇಗೌಡ ಕುಟುಂಬದಿಂದ ಹೊಸಕೋಟೆ ಬಿಹಾರವಾಗಿತ್ತು; ಎಂಟಿಬಿ ಆಕ್ರೋಶಚಿಕ್ಕಬಳ್ಳಾಪುರ ಸಂಸದ ಬಿ.ಎನ್. ಬಚ್ಚೇಗೌಡ ಕುಟುಂಬದವರು ಹೊಸಕೋಟೆಯನ್ನು ಬಿಹಾರ ಮಾಡಿದ್ದರು. ಎಷ್ಟೋ ಜನರ ಹತ್ಯೆಗಳನ್ನು ಮಾಡಿದ್ದಾರೆ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ ಆರೋಪಿಸಿದ್ದಾರೆ. |
![]() | ಉಸ್ತುವಾರಿ ಸಚಿವ ಹೊಣೆಗಾರಿಕೆಯಲ್ಲಿ ಯಾರೂ ಅಸಮಾಧಾನಗೊಂಡಿಲ್ಲ, ಎಲ್ಲರ ಜೊತೆ ಚರ್ಚಿಸಿಯೇ ನಿರ್ಧಾರಕ್ಕೆ ಬಂದಿದ್ದು: ಸಿಎಂ ಬಸವರಾಜ ಬೊಮ್ಮಾಯಿಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿರುವುದರಲ್ಲಿ ಯಾವ ಸಚಿವರುಗಳಿಗೂ ಅಸಮಾಧಾನವಿಲ್ಲ, ಯಾರೂ ಕೂಡ ಅಸಮಾಧಾನ ವ್ಯಕ್ತಪಡಿಸಿಲ್ಲ, ಎಲ್ಲರ ಜೊತೆ ನಾನು ಮಾತನಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. |