- Tag results for Mallikarjun Kharge
![]() | ಕರ್ನಾಟಕದ ಬಳಿಕ ಮಧ್ಯ ಪ್ರದೇಶದತ್ತ ಕಾಂಗ್ರೆಸ್ ಚಿತ್ತ; ಮೇ 29ರಂದು ಸಭೆ ಕರೆದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಮುಂಬರುವ ವಿಧಾನಸಭೆ ಚುನಾವಣೆಗಳ ಮೇಲೆ ಕಣ್ಣಿಟ್ಟಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೇ 29ರಂದು ಮಧ್ಯಪ್ರದೇಶದ ಪಕ್ಷದ ಪ್ರಮುಖರ ಸಭೆಯನ್ನು ಕರೆದಿದ್ದು, ವಿಧಾನಸಭಾ ಚುನಾವಣೆಗೆ ಸಿದ್ಧತೆ ಕುರಿತು ಚರ್ಚಿಸಲಿದ್ದಾರೆ. |
![]() | ರಾಷ್ಟ್ರಪತಿ ಮುರ್ಮು ಜಾತಿ ಬಗ್ಗೆ ಪ್ರಚೋದನಕಾರಿ ಹೇಳಿಕೆ; ಅರವಿಂದ್ ಕೇಜ್ರಿವಾಲ್, ಮಲ್ಲಿಕಾರ್ಜುನ ಖರ್ಗೆ, ಇತರರ ವಿರುದ್ಧ ದೂರು ದಾಖಲುನೂತನ ಸಂಸತ್ ಭವನ ಉದ್ಘಾಟನೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜಾತಿಯನ್ನು ಉಲ್ಲೇಖಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ರಾಜಕೀಯ ನಾಯಕರ ವಿರುದ್ಧ ದೂರು ದಾಖಲಿಸಲಾಗಿದೆ. |
![]() | ಜವಾಹರಲಾಲ್ ನೆಹರು ಪುಣ್ಯತಿಥಿ: ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಗಣ್ಯರಿಂದ ನಮನಇಂದು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ 59ನೇ ಪುಣ್ಯತಿಥಿ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಾಂಧಿ ಸೇರಿದಂತೆ ಹಲವು ಗಣ್ಯರು ನಮನ ಸಲ್ಲಿಸಿದ್ದಾರೆ. |
![]() | ದೆಹಲಿ ಸೇವಾ ಸುಗ್ರೀವಾಜ್ಞೆ: ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಭೇಟಿಗೆ ಸಮಯ ಕೋರಿದ ಕೇಜ್ರಿವಾಲ್‘ಸುಪ್ರೀಂ ಕೋರ್ಟ್ ತೀರ್ಪನ್ನೂ ನಿರ್ಲಕ್ಷಿಸಿ ಲೆಫ್ಟಿನೆಂಟ್ ಗವರ್ನರ್‌ಗೆ ಆಡಳಿತಾತ್ಮಕ ಸೇವೆಗಳ ನಿಯಂತ್ರಣ ನೀಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ವಿರೋಧಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂದಿ ಅವರನ್ನು ಭೇಟಿ ಮಾಡಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಮಯ ಕೋರಿದ್ದಾರೆ. |
![]() | ಕಲಬುರಗಿ, ಬೀದರ್ ನಿಂದ ಬೆಂಗಳೂರಿಗೆ ಮೂರು ಹೊಸ ರೈಲು ಆರಂಭಿಸುವಂತೆ ರೈಲ್ವೆ ಸಚಿವರಿಗೆ ಖರ್ಗೆ ಪತ್ರಕಲಬುರಗಿಯಿಂದ ಬೆಂಗಳೂರಿಗೆ ಎರಡು ಹಾಗೂ ಬೀದರ್ ನಿಂದ ಬೆಂಗಳೂರಿಗೆ ಒಂದು ಹೊಸ ರೈಲು ಓಡಿಸುವಂತೆ ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರೈಲ್ವೆ ಸಚಿವ ಅಶ್ವಿನಿ... |
![]() | ಸಿದ್ದರಾಮಯ್ಯನವರ ಪ್ರಮಾಣ ವಚನ ದೇಶದಲ್ಲಿ ವಿಪಕ್ಷಗಳ ಒಗ್ಗಟ್ಟು ಪ್ರದರ್ಶಿಸಿದೆ: ಮಲ್ಲಿಕಾರ್ಜುನ ಖರ್ಗೆಬೆಂಗಳೂರಿನಲ್ಲಿ ಶನಿವಾರ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವಿಪಕ್ಷಗಳ ಬಹುತೇಕ ನಾಯಕರು ಸಮಾರಂಭದಲ್ಲಿ ಭಾಗವಹಿಸಿದ್ದರಿಂದ 2024ರ ಲೋಕಸಭೆ ಚುನಾವಣೆಗೂ ಮುನ್ನ ವಿಪಕ್ಷಗಳನ್ನು ಹುರಿದುಂಬಿಸುವ ಪ್ರಯತ್ನ ಬಹುತೇಕ ಯಶಸ್ವಿಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು. |
![]() | ಕಲಬುರಗಿಯಲ್ಲಿ ಗರಿಗೆದರಿದ ನಿರೀಕ್ಷೆ: ಕಿತ್ತೂರು ಕರ್ನಾಟಕ-ಕಲ್ಯಾಣ ಕರ್ನಾಟಕದ ಮೂರರಿಂದ ನಾಲ್ವರಿಗೆ ಸಂಪುಟ ಸ್ಥಾನ!ವಿಧಾನಸಭೆ ಅಧಿವೇಶನ ಮುಗಿದ ನಂತರ ಸಂಪುಟ ವಿಸ್ತರಣೆಯಾದಾಗ ಕಿತ್ತೂರು-ಕರ್ನಾಟಕ ಭಾಗದ ಮೂರ್ನಾಲ್ಕು ಶಾಸಕರು ಮತ್ತು ಕಲ್ಯಾಣ ಕರ್ನಾಟಕದ ಅಷ್ಟೇ ಸಂಖ್ಯೆಯ ಶಾಸಕರು ಸಂಪುಟ ಸ್ಥಾನ ಪಡೆಯಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. |
![]() | ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗಳಿಗೇ ಆಮಂತ್ರಣವಿಲ್ಲ.. ಮೋದಿ ಸರ್ಕಾರದಿಂದ ಅಪಮಾನ: ಮಲ್ಲಿಕಾರ್ಜುನ ಖರ್ಗೆ ಕಿಡಿನೂತನ ಸಂಸತ್ತ್ ಭವನ ಕಟ್ಟಡ ಉದ್ಘಾಟನೆಗೆ ರಾಷ್ಟ್ರಪತಿಗಳಿಗೆ ಆಹ್ವಾನ ನೀಡದೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಗೌರವ ತೋರಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. |
![]() | ರಾಜೀವ್ ಗಾಂಧಿ 32ನೇ ಪುಣ್ಯತಿಥಿ: ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಗಣ್ಯರಿಂದ ನಮನಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಅಂಗವಾಗಿ ದೆಹಲಿಯ ವೀರಭೂಮಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನಮನ ಸಲ್ಲಿಸಿದರು. |
![]() | ನ್ಯಾಯಯುತ ತನಿಖೆಯಿಂದ ಮಾತ್ರ ಸತ್ಯ ಬಯಲಾಗುತ್ತದೆ: ಚಲಾವಣೆಯಿಂದ 2000 ರೂ. ನೋಟು ಹಿಂಪಡೆದ ಬಗ್ಗೆ ಖರ್ಗೆಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, 2016ರಲ್ಲಿ ನೋಟು ಅಮಾನ್ಯೀಕರಣ ಆರ್ಥಿಕತೆಗೆ ಆಳವಾದ ಗಾಯವನ್ನು ಉಂಟುಮಾಡಿದೆ ಮತ್ತು ನ್ಯಾಯಯುತ ತನಿಖೆ ಮಾತ್ರ ಸತ್ಯವನ್ನು ಬಹಿರಂಗಪಡಿಸಲಿದೆ ಎಂದರು. |
![]() | ಸಿಎಂ ಆಯ್ಕೆ ಮತ್ತಷ್ಟು ಕಗ್ಗಂಟು: ಡಿಕೆಶಿಯಿಂದ ಇಂದು ಸಂಜೆ ಮತ್ತೆ ಖರ್ಗೆ, ರಾಹುಲ್ ಗಾಂಧಿ ಭೇಟಿಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್ ಗೆ ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರ ಮತ್ತಷ್ಟು ಕಗ್ಗಂಟಾಗಿದ್ದು, ಸಿಎಂ ಹುದ್ದೆಗಾಗಿ ಪಟ್ಟು ಹಿಡಿದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ... |
![]() | ಸಿದ್ದು ಬೇಡ: ನನ್ನನ್ನು ಸಿಎಂ ಮಾಡಿ, ಇಲ್ಲದಿದ್ದರೆ ನೀವೇ ಸಿಎಂ ಆಗಿ: ಖರ್ಗೆಗೆ ಡಿಕೆಶಿ ಪಟ್ಟುಸಿಎಂ ಹುದ್ದೆ ಆಯ್ಕೆ ಕಗ್ಗಂಟು ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕಾಂಗ್ರೆಸ್ ನ ಅಗ್ರ ನಾಯಕರ ಮನವೊಲಿಕೆಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಗ್ಗುತ್ತಿಲ್ಲ. ಸಿದ್ದರಾಮಯ್ಯ ಬೇಡ, ನನ್ನನ್ನು ಸಿಎಂ ಮಾಡಿ ಇಲ್ಲವೇ ನೀವೇ ಸಿಎಂ ಆಗಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. |
![]() | ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ: ಸುರ್ಜೇವಾಲಾಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ.. 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ ಹೊರಡಿಸುತ್ತೇವೆ ಎಂದು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. |
![]() | ನಾಳೆ ಬೆಂಗಳೂರಿನಲ್ಲಿಯೇ ಖರ್ಗೆಯಿಂದ ರಾಜ್ಯದ ಮುಂದಿನ ಮುಖ್ಯಮಂತ್ರಿಯ ಹೆಸರು ಘೋಷಣೆ ಸಾಧ್ಯತೆಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದು, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಇನ್ನೂ ಚರ್ಚೆ ನಡೆಸುತ್ತಿದೆ. |
![]() | ಸಿಎಂ ಪಟ್ಟಕ್ಕಾಗಿ ಫೈಟ್: ಡಿಕೆಶಿ, ಸಿದ್ದರಾಮಯ್ಯ ಜತೆ ಒನ್ ಟು ಒನ್ ಚರ್ಚಿಸಿದ ಖರ್ಗೆಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ನಂತರ ಮುಖ್ಯಮಂತ್ರಿ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್... |