• Tag results for Meeting

ಪ್ರಧಾನಿ ಮೋದಿ ಭೇಟಿ ಮಾಡಿದ ನೂತನ ಸಿಎಂ ಬೊಮ್ಮಾಯಿ; ಏಮ್ಸ್ ಮಂಜೂರು ಮಾಡಲು ಮನವಿ

ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ಬಸವರಾಜ ಬೊಮ್ಮಾಯಿ ಅವರು ಜು.30 ರಂದು ನವದೆಹಲಿಗೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

published on : 30th July 2021

ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ದಿವ್ಯಾಂಗ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ. 

published on : 28th July 2021

ಅತಿವೃಷ್ಟಿ: ಪ್ರವಾಹ ಬಾಕಿ ಪರಿಹಾರ ಬಿಡುಗಡೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ  

ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ ತಕ್ಷಣವೇ ಸಂಬಂಧಿಸಿದವರ ಗಮನಕ್ಕೆ ತಂದು ಸರಿಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.

published on : 25th July 2021

8.5 ಕೋಟಿ ರೂ. ವೆಚ್ಚದ ವಸತಿ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮುಂದಿನ 2 ವರ್ಷಗಳಲ್ಲಿ ರೂ.8,500 ಕೋಟಿ ವೆಚ್ಚದಲ್ಲಿ 5 ಲಕ್ಷ ಮನೆಗಳನ್ನು ನಿರ್ಮಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

published on : 23rd July 2021

ಕೈಗಾರಿಕಾ ಸ್ನೇಹಿ ಆಸ್ತಿ ತೆರಿಗೆ ಅನುಷ್ಠಾನಕ್ಕೆ ಸುಧಾರಣೆ ಅಗತ್ಯ: ಅಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ  

ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ತೆರಿಗೆ ಸುಧಾರಣೆಗೆ ಮುಂದಾಗಿದ್ದು, ಈ ಬಗ್ಗೆ ಶೀಘ್ರ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

published on : 22nd July 2021

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ: ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ನಿರೀಕ್ಷೆ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಕೇಳಿಬರುವುದರ ಮಧ್ಯೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನೇತೃತ್ವದ ಸಚಿವ ಸಂಪುಟ ಗುರುವಾರ ಸಭೆ ಸೇರಲಿದ್ದು ಹಲವು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ಪಡೆಯಲಿದೆ.

published on : 22nd July 2021

ಕೋವಿಡ್ ಸಂಬಂಧಿತ ಸರ್ಕಾರದ ಸಭೆಗೆ ಪ್ರತಿಪಕ್ಷ ಕಾಂಗ್ರೆಸ್, ಎಸ್ಎಡಿ ಗೈರು

ಇಂದು ಸಂಜೆ ಕೋವಿಡ್-19 ಕುರಿತು ಎಲ್ಲಾ ಪಕ್ಷಗಳ ಸದನದ ಮುಖಂಡರೊಂದಿಗೆ ನಡೆಯಲಿರುವ ಸರ್ಕಾರದ ಸಭೆಗೆ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಗೈರಾಗುತ್ತಿದೆ. ಈ ಸಭೆಯನ್ನು ಕಾಂಗ್ರೆಸ್ ಬಹಿಷ್ಕರಿಸಿರುವುದಾಗಿ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

published on : 20th July 2021

ನಾಯಕತ್ವ ಬದಲಾವಣೆ ಕುರಿತು ಮುಂದುವರೆದ ನಿಗೂಢತೆ: ಜು.22 ಸಂಪುಟ ಸಭೆ, ಜು.26 ಶಾಸಕಾಂಗ ಸಭೆ ಕರೆದ ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ನಿಗೂಢತೆ ಮುಂದುವರೆದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜು.22ರಂದು ಸಂಪುಟ ಸಭೆ ಹಾಗೂ ಜು.26 ರಂದು ಶಾಸಕಾಂಗ ಸಭೆ ಕರೆದಿದ್ದು, ತೀವ್ರ ಕುತೂಹಲ ಕೆರಳಿಸಿದೆ. 

published on : 19th July 2021

ನಾಳೆ ಪಂಜಾಬ್ ಕಾಂಗ್ರೆಸ್ ಶಾಸಕರು, ಜಿಲ್ಲಾ ಘಟಕದ ಅಧ್ಯಕ್ಷರ ಸಭೆ

ಪಂಜಾಬ್ ರಾಜ್ಯ ಕಾಂಗ್ರೆಸ್ ಘಟಕದ ಪುನರ್ ರಚನೆ ಸಾಧ್ಯತೆ ಹಿನ್ನೆಲೆಯಲ್ಲಿ ಸೋಮವಾರ ಪಕ್ಷದ ಶಾಸಕರು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರ ಸಭೆಯನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಸುನೀಲ್ ಜಖಾರ್ ಕರೆದಿದ್ದಾರೆ.

published on : 18th July 2021

"ಕರ್ನಾಟಕ ಸಿಎಂ ಆಗಿ ಮುಂದುವರೆಯುವಂತೆ ಹೈಕಮಾಂಡ್ ಸೂಚನೆ": ನಾಯಕತ್ವ ಬದಲಾವಣೆ ವದಂತಿ ತಳ್ಳಿ ಹಾಕಿದ ಯಡಿಯೂರಪ್ಪ

ಸಿಎಂ ಯಡಿಯೂರಪ್ಪ ಅವರ ಆಡಳಿತಾವಧಿ 2 ವರ್ಷ ಪೂರ್ಣಗೊಳ್ಳುತ್ತಿರುವುದರ ನಡುವೆ ಅವರ ದೆಹಲಿ ಭೇಟಿ ಹಲವು ಊಹಾಪೋಹ, ವದಂತಿಗಳಿಗೆ ದಾರಿ ಮಾಡಿಕೊಟ್ಟಿದೆ. 

published on : 17th July 2021

ಪ್ರಧಾನಿ ಮೋದಿ ಭೇಟಿಯಾದ ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಶನಿವಾರ ನವದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. 

published on : 17th July 2021

ಬಿಬಿಎಂಪಿ ಚುನಾವಣೆ: ಕಾರ್ಯತಂತ್ರ ರೂಪಿಸಲು ನಿವಾಸದಲ್ಲಿ ಡಿಕೆ ಶಿವಕುಮಾರ್ ಸಭೆ

ಬಿಬಿಎಂಪಿ ಚುನಾವಣೆ ಹತ್ತಿರಬರುತ್ತಿದ್ದು, ಈ ನಡುವಲ್ಲೇ ಪಕ್ಷವನ್ನು ಸಜ್ಜುಗೊಳಿಸುವ ಸಂಬಂಧ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಪಕ್ಷದ ಹಿರಿಯ ನಾಯಕರು, ನಗರದ ಶಾಸಕರು, ಸಂಸದರು, ವಿಧಾನ ಪರಿಷತ್‌ ಸದಸ್ಯರು ಮತ್ತು ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿಗಳ ಜತೆ ಶುಕ್ರವಾರ ರಾತ್ರಿ ತಮ್ಮ ನಿವಾಸದಲ್ಲಿ ಸಭೆ ನಡೆಸಿದರು.

published on : 17th July 2021

ಮುಂದಿನ ವರ್ಷ ಫೆಬ್ರವರಿಯಲ್ಲಿ 'ಇನ್ವೆಸ್ಟ್ ಕರ್ನಾಟಕ' ಜಾಗತಿಕ ಹೂಡಿಕೆದಾರರ ಸಮಾವೇಶ

ದೀರ್ಘ ವಿಳಂಬದ ನಂತರ ಮುಂದಿನ ವರ್ಷ ಫೆಬ್ರವರಿಯಲ್ಲಿ ಬಹು ನಿರೀಕ್ಷಿತ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ರಾಜ್ಯ ಸರ್ಕಾರ ಆಯೋಜಿಸುತ್ತಿದೆ.

published on : 15th July 2021

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 19ಕ್ಕೆ ಆರಂಭ: ಸರ್ವಪಕ್ಷ ಸಭೆ ಕರೆದಿರುವ ಸರ್ಕಾರ

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 19 ರಿಂದ ಆಗಸ್ಟ್ 13ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ  ಅದರ ಮುನ್ನಾದಿನ ಜುಲೈ 18ರಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸರ್ವಪಕ್ಷ ಸಭೆ ಕರೆದಿದ್ದಾರೆ. ಅದೇ ದಿನ ಸರ್ಕಾರದಿಂದಲೂ ಸರ್ವಪಕ್ಷ ಸಭೆ ಕರೆಯಲಾಗಿದೆ.

published on : 14th July 2021

ಕೋವಿಡ್-19: ಇದೇ 16 ರಂದು ಕರ್ನಾಟಕ ಸೇರಿದಂತೆ 6 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಂವಾದ

ಪ್ರಧಾನಿ ನರೇಂದ್ರ ಮೋದಿ ಇದೇ 16 ರಂದು ಆರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್ ಸಭೆ ನಡೆಸಲಿದ್ದಾರೆ. ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟ್ರ ಮತ್ತು ಕೇರಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದು, ಕೋವಿಡ್-19 ಪರಿಸ್ಥಿತಿ ಕುರಿತು ಸಮಾಲೋಚನೆ ನಡೆಸಲಿದ್ದಾರೆ.

published on : 13th July 2021
1 2 3 4 5 6 >