- Tag results for Military helicopter crash
![]() | ಸೇನಾ ಹೆಲಿಕಾಪ್ಟರ್ ದುರಂತ: ಬದುಕುಳಿದಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ; ಪ್ರಧಾನಿ ಸೇರಿ ಹಲವರು ಸಂತಾಪತಮಿಳು ನಾಡಿನ ಕೂನ್ನೂರು ಬಳಿ ಕಳೆದ ಡಿಸೆಂಬರ್ 8ರಂದು ಸೇನಾ ಹೆಲಿಕಾಪ್ಟರ್ ದುರಂತದಲ್ಲಿ (TamilNadu military helicopter crash) ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ವಿಧಿವಶರಾಗಿದ್ದಾರೆ. |
![]() | ಸೇನಾ ಹೆಲಿಕಾಪ್ಟರ್ ದುರಂತ: 11 ಅಧಿಕಾರಿಗಳ ಮೃತದೇಹ ಗುರುತು ಪತ್ತೆ, ಇನ್ನಿಬ್ಬರ ಗುರುತು ಪತ್ತೆಗೆ ಡಿಎನ್ ಎ ಪರೀಕ್ಷೆತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ನಾಲ್ವರು ಭಾರತೀಯ ವಾಯುಪಡೆಯ ಸಿಬ್ಬಂದಿ ಗುರುತು ಪತ್ತೆ ಕಾರ್ಯ ಪೂರ್ಣವಾಗಿದೆ. ಇನ್ನು ಇಬ್ಬರ ಗುರುತು ಪತ್ತೆ ಕಾರ್ಯ ಆಗಬೇಕಿದ್ದು ಮೃತದೇಹಗಳ ಡಿಎನ್ ಎ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಮೂಲಕ ಇದುವರೆಗೆ 11 ಮಂದಿಯ ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ. |
![]() | ಸೇನಾ ಹೆಲಿಕಾಪ್ಟರ್ ದುರಂತ; ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ ಆರಂಭ: ರಕ್ಷಣಾ ಸಚಿವ ರಾಜನಾಥ್ ಸಿಂಗ್ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಮಿ-17 ವಿ-5(Mi-17 V-5 )ಭೀಕರ ದುರಂತಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆ ಕಲಾಪದ ಆರಂಭದಲ್ಲಿ ಹೇಳಿಕೆ ನೀಡಿದ್ದಾರೆ. |
![]() | ತಮಿಳು ನಾಡಿನ ಕೂನೂರು ಬಳಿ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನ ಬ್ಲ್ಯಾಕ್ ಬಾಕ್ಸ್ ಪತ್ತೆ: ಇಂದು ಸಂಸತ್ತಿನಲ್ಲಿ ರಕ್ಷಣಾ ಸಚಿವರು ಹೇಳಿಕೆರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನ ಎರಡೂ ಸದನಗಳಲ್ಲಿ ಇಂದು ಗುರುವಾರ ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ನಿನ್ನೆ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ರಾಜ್ಯಸಭೆಯಲ್ಲಿ ಮತ್ತು ಮಧ್ಯಾಹ್ನ 12.15ಕ್ಕೆ ಲೋಕಸಭೆಯಲ್ಲಿ ರಕ್ಷಣಾ ಸಚಿವರು ಅಧಿಕೃತ ಹೇಳಿಕೆ ನೀಡಲಿದ್ದಾರೆ. |
![]() | ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಜ.ಬಿಪಿನ್ ರಾವತ್ ಸೇರಿ 13 ಮಂದಿ ನಿಧನ: ಸ್ಥಳಕ್ಕೆ ಏರ್ ಚೀಫ್ ಮಾರ್ಷಲ್ ಭೇಟಿತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಮಿಐ-17 ವಿ-5 ಸೇನಾ ಹೆಲಿಕಾಪ್ಟರ್ ಭೀಕರ ಅಪಘಾತಕ್ಕೀಡಾಗಿ ಭಾರತದ ರಕ್ಷಣಾ ಪಡೆ(CDS) ಮುಖ್ಯಸ್ಥ ಜ.ಬಿಪಿನ್ ರಾವತ್ ಸೇರಿದಂತೆ 13 ಮಂದಿ ಸಜೀವ ದಹನವಾದ ಘಟನೆ ನಡೆದ ಸ್ಥಳಕ್ಕೆ ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಗುರುವಾರ ಬೆಳಗ್ಗೆ ಭೇಟಿ ನೀಡಿದ್ದಾರೆ. |