• Tag results for Nalin Kumar Kateel

ಬಿಜೆಪಿ ಕಾರ್ಯಕಾರಿಣಿಗೆ 69 ಮಂದಿ ಸದಸ್ಯರು, 25 ಮಂದಿ ವಿಶೇಷ ಸದಸ್ಯರ ಹೆಸರು ಪ್ರಕಟ

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರ ಹೆಸರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದ್ದಾರೆ. 69 ಮಂದಿ ಸದಸ್ಯರು ಮತ್ತು ವಿಶೇಷ ಆಹ್ವಾನಿತರಾದ 25 ಮಂದಿಯ ಹೆಸರನ್ನು ಅವರು ಅಂತಿಮಗೊಳಿಸಿ, ಪ್ರಕಟಿಸಿದ್ದಾರೆ.

published on : 30th November 2020

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ: ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ

ಇದೂವರೆಗೂ ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಯಾವುದೇ ಚರ್ಚೆಗಳೂ ನಡೆದಿಲ್ಲ. ಯಾರೊಬ್ಬರು ನಾಯಕತ್ವ ಬದಲಾವಣೆ ಕುರಿತು ಪ್ರಶ್ನೆಯನ್ನೇ ಎತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ.

published on : 29th November 2020

ಡ್ರಗ್ ಮಾಫಿಯಾ ಹಣದಲ್ಲಿ ಸಿದ್ದು ಸರ್ಕಾರ ನಡೆಸುತ್ತಿದ್ದರು ಹೇಳಿಕೆ: ನಳಿನ್ ಕುಮಾರ್ ಕಟೀಲ್ ವಿರುದ್ಧ ಹರಿಹಾಯ್ದ ಡಿಕೆಶಿ

ಸಿದ್ದರಾಮಯ್ಯ ಅವರು ಮಾದಕ ದ್ರವ್ಯದ ಹಣದಲ್ಲಿ ಸರ್ಕಾರ ನಡೆಸುತ್ತಿದ್ದರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 

published on : 28th November 2020

ಸಿದ್ದರಾಮಯ್ಯ ಡ್ರಗ್ ಮಾಫಿಯಾ ಹಣದಲ್ಲಿ 5 ವರ್ಷ ಸರ್ಕಾರ ನಡೆಸುತ್ತಿದ್ದರು: ನಳಿನ್ ಕುಮಾರ್ ಕಟೀಲ್

ರಾಜ್ಯದಲ್ಲಿ ಆಡಳಿತ ನಡೆಸಿದ್ದ ಈ ಹಿಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ಅವರು ಮಾದಕ ದ್ರವ್ಯದ ಹಣದಲ್ಲಿ 5 ವರ್ಷ ಸರ್ಕಾರ ನಡೆಸುತ್ತಿದ್ದರು ಎಂದು ಆರೋಪಿಸಿದ್ದಾರೆ. 

published on : 28th November 2020

ಗ್ರಾಮ ಪಂಚಾಯತಿ ಚುನಾವಣೆಗಳು ಭವಿಷ್ಯದ ನಾಯಕನನ್ನು ರೂಪಿಸುತ್ತವೆ: ನಳಿನ್ ಕುಮಾರ್ ಕಟೀಲ್

ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಸ್ಥಳೀಯ ಮತ್ತು ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಂಡು ಚುನಾವಣೆ ಎದುರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ,

published on : 28th November 2020

ಸಂಪುಟ ವಿಸ್ತರಣೆ ಯಾವಾಗ ಎಂದು ಕಾದು ನೋಡಿ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಅವರ ವಿವೇಚನೆಗೆ ಬಿಟ್ಟಿದ್ದಾಗಿದ್ದು, ಯಾವಾಗ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿದೆ ಎನ್ನುವುದನ್ನು ಕಾದು ನೋಡಿ...

published on : 19th November 2020

ಉಪಚುನಾವಣೆ ಫಲಿತಾಂಶದಿಂದ ಪಾಠ ಕಲಿಯದಿದ್ದರೆ ಕಾಂಗ್ರೆಸ್ ಪಕ್ಷವನ್ನೆ ಜನರು ಅರಬ್ಬೀ ಸಮುದ್ರಕ್ಕೆ ಬಿಸಾಡುತ್ತಾರೆ: ಕಟೀಲ್

ಜನತಾ ಜನಾರ್ದನನ ಎದುರು ಕನಕಪುರ ಬಂಡೆ ಪುಡಿಯಾಗಿದೆ.‌ ಹುಲಿಯಾ ಗೂಡು ಸೇರಿದ್ದಾರೆ. ಇನ್ನೂ ಎರಡುವರೆ ವರ್ಷಗಳ ಕಾಲ ಯಡಿಯೂರಪ್ಪ ಅವರ ಆಡಳಿತದಲ್ಲಿ ನೆಮ್ಮದಿಯಿಂದ ಇರಿ ಎಂದು ಜನರು ಬಿಜೆಪಿಗೆ ಆಶೀರ್ವದಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

published on : 11th November 2020

'ಶಿರಾ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ಡಿಕೆಶಿ ಮಗ್ನ, ಆರ್ ಆರ್ ನಗರ ಕೈ ಅಭ್ಯರ್ಥಿ ಸೋಲಿಸಲು ಸಿದ್ದರಾಮಯ್ಯ ಪಣ'

ಕಾಂಗ್ರೆಸ್ ಪಕ್ಷದ ಆಂತರಿಕ ಜಗಳದಿಂದ ಬಿಜೆಪಿಗೆ ಪ್ರಯೋಜನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ.

published on : 9th November 2020

ನಳಿನ್ ಕುಮಾರ್ ಕಟೀಲ್ ಒಬ್ಬ ಕಾಮಿಡಿ ಕಿಲಾಡಿ: ಕೆಪಿಸಿಸಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಚಾರವಿಲ್ಲದ ನಾಲಿಗೆ, ವಿಚಾರವಿಲ್ಲದ ತಲೆ ಹೊಂದಿದ ಕಾಮಿಡಿ ಕಿಲಾಡಿ ಎಂದು ರಾಜ್ಯ ಕೆಪಿಸಿಸಿ ಟೀಕಿಸಿದೆ.

published on : 8th November 2020

ಶಿರಾದಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಗೆಲುವು ಸಾಧಿಸಲಿದೆ: ಕಟೀಲ್

ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದ್ದಾರೆ. 

published on : 30th October 2020

ಉಪಚುನಾವಣೆಗೆ ಕೆಲವೇ ದಿನ: ಶಿರಾದಲ್ಲಿ ರಾಜಕೀಯ ಪಕ್ಷಗಳ ಅಬ್ಬರದ ಪ್ರಚಾರ!

ಉಪಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವಲ್ಲೇ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯದ ಪ್ರಮುಖ ಮೂರು ರಾಜಕೀಯ ಪಕ್ಷಗಳ ನಾಯಕರು ಅಬ್ಬರ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. 

published on : 29th October 2020

ರಾಜ್ಯದ ಜನತೆಗೆ ಉಚಿತವಾಗಿ ಕೊರೋನಾ ಲಸಿಕೆ ಕೊಡುವ ಧಮ್ ಇದೆಯೇ: ಸಿದ್ದರಾಮಯ್ಯ ಪ್ರಶ್ನೆ

ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ  ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವುರಾ ಅವರೇ? ಎಂದು ಸಿದ್ದರಾಮ್ಯ ಟ್ವೀಟ್ ಮಾಡಿದ್ದಾರೆ.

published on : 23rd October 2020

ಸಿದ್ದರಾಮಯ್ಯನವರು ಕಾಂಗ್ರೆಸ್ ನ ವಿದೂಷಕ, 'ಕಾಡು ಮನುಷ್ಯ' ಪದ ಬಳಕೆ ಶೋಭೆಯಲ್ಲ: ಬಿಜೆಪಿ ತಿರುಗೇಟು

ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ನಾಯಕರ ಮಧ್ಯೆ ಬಿರುಸಿನ ವಾಗ್ದಾಳಿ ನಡೆಯುವುದು ಸಾಮಾನ್ಯ. ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಡುವಿನ ವಾಕ್ಸಮರ ತಾರಕಕ್ಕೇರಿದೆ.

published on : 23rd October 2020

ನಳಿನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ; ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬು ಇಲ್ಲ: ಸಿದ್ದರಾಮಯ್ಯ

ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

published on : 22nd October 2020

'ಉಪಚುನಾವಣೆ ಮುಗಿದ ಮೇಲೆ ಬಂಡೆ ಛಿದ್ರವಾಗುತ್ತೆ; ಹುಲಿಯಾ ಕಾಡಿಗೆ ಹೋಗುತ್ತೆ'

ಈ ಉಪ ಚುನಾವಣೆ ಮುಗಿದ ಮೇಲೆ ಬಂಡೆ ಛಿದ್ರವಾಗತ್ತೆ. ಹುಲಿಯಾ ಕಾಡಿಗೆ ಹೋಗುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಬಗ್ಗೆ ಕಟೀಲ್ ವ್ಯಂಗ್ಯ ಮಾಡಿದರು.

published on : 21st October 2020
1 2 3 4 5 6 >