- Tag results for New Parliament
![]() | ಹೊಸ ಸಂಸತ್ ಭವನವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎಂದು ಕರೆದ ಜೈರಾಮ್ ರಮೇಶ್: ಬಿಜೆಪಿ ತೀವ್ರ ಕಿಡಿನೂತನ ಸಂಸತ್ ಭವನವನ್ನು ಮೋದಿ ಮಲ್ಟಿಪ್ಲೆಕ್ಸ್ ಅಥವಾ ಮೋದಿ ಮ್ಯಾರಿಯೆಟ್ ಎಂದು ಕರೆಯಬೇಕೆಂದು ಟೀಕೆ ಮಾಡಿದ್ದ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. |
![]() | ‘ಹೊಸ ಸಂಸತ್ತಿನಲ್ಲಿ ರಾಷ್ಟ್ರಪತಿಗಳನ್ನು ನೋಡಲು ಬಯಸಿದ್ದೆ, ಏಕೆ ಆಹ್ವಾನಿಸಲಿಲ್ಲ’: ರಾಹುಲ್ ಗಾಂಧಿಮಹಿಳೆ ಮತ್ತು ಉನ್ನತ ಹುದ್ದೆ ಅಲಂಕರಿಸಿದ ಬುಡಕಟ್ಟು ಸಮುದಾಯದ ಮೊದಲ ವ್ಯಕ್ತಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನೂತನ ಸಂಸತ್ ಭವನದ ಉದ್ಘಾಟನೆಗೆ ಏಕೆ ಆಹ್ವಾನಿಸಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಪ್ರಶ್ನಿಸಿದ್ದಾರೆ. |
![]() | ಹೊಸ ಸಂಸತ್ ಭವನಕ್ಕೆ ಪ್ರವೇಶ: ಲೋಕಸಭಾ, ರಾಜ್ಯಸಭಾ ಸದಸ್ಯರಿಗೆ ಪ್ರಧಾನಿ ಮೋದಿ ಸಾಥ್, ವಿಶೇಷ ಅಧಿವೇಶನ ಆರಂಭಹೊಸ ಸಂಸತ್ ಭವನಕ್ಕೆ ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರು ಪ್ರವೇಶಿಸಿದ್ದು, ಈ ವೇಳೆ ಕೇಂದ್ರ ಸಚಿವರು ಮತ್ತು ಇತರ ಸಂಸದರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ನೂತನ ಕಟ್ಟಡದೊಳಗೆ ಆಗಮಿಸಿದರು. ಇದರೊಂದಿಗೆ ನೂತನ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ಆರಂಭಗೊಂಡಿದೆ. |
![]() | ಇತಿಹಾಸ ಪುಟಕ್ಕೆ ಹಳೇ ಸಂಸತ್ ಭವನ: ಇಂದಿನಿಂದ ಹೊಸ ಸಂಸತ್ ಕಟ್ಟಡದಲ್ಲಿ 5 ದಿನ ವಿಶೇಷ ಅಧಿವೇಶನಸಂಸತ್ತಿನ ವಿಶೇಷ ಅಧಿವೇಶನದ ಕಲಾಪಗಳು ಮಂಗಳವಾರದಿಂದ ಹೊಸ ಸಂಸತ್ ಕಟ್ಟಡದಲ್ಲಿ ಆರಂಭವಾಗುತ್ತಿದ್ದು, ಇದರ ನಡುವಲ್ಲೇ ಬ್ರಿಟೀಷರ ಆಳ್ವಿಕೆ, 2ನೇ ಮಹಾಯುದ್ಧ, ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಗಳಿಗೆ, ಸಂವಿಧಾನ ರಚನೆ ಹೀಗೆ ಹಲವಾರು ಐತಿಹಾಸಿಕ ಹಾಗೂ ವಿವಾದಾತ್ಮಕ ಮಸೂದೆಗಳಿಗೆ ಸಾಕ್ಷಿಯಾಗಿದ್ದ ನವದೆಹಲಿಯ ಹಳೆಯ ಸಂಸತ್ ಭವನ ಇತಿಹಾಸದ ಪುಟ ಸೇರಲು ಕ್ಷಣಗಣನೆ ಆರಂಭವಾಗಿದೆ. |
![]() | ವಿಶೇಷ ಅಧಿವೇಶನದಲ್ಲಿ CEC ಮತ್ತು EC ನೇಮಕಾತಿಗಳ ಮಸೂದೆ ಮಂಡನೆ ಇಲ್ಲ: ಮೂಲಗಳುಇಂದಿನಿಂದ ಆರಂಭವಾಗಿರುವ ಸಂಸತ್ತಿನ ಐದು ದಿನಗಳ ಅಧಿವೇಶನದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕದ ಮಸೂದೆಯನ್ನು ಅಂಗೀಕರಿಸಲು ಕೇಂದ್ರ ಸರ್ಕಾರ ಬಯಸಿಲ್ಲ ಎಂದು ಮೂಲಗಳು ತಿಳಿಸಿವೆ. |
![]() | ವಿಶೇಷ ಅಧಿವೇಶನ: ಉಭಯ ಸದನಗಳು ಮುಂದೂಡಿಕೆ; ನಾಳೆ ಹೊಸ ಸಂಸತ್ ಭವನದಲ್ಲಿ ಕಲಾಪ ಮುಂದುವರಿಕೆಸಂಸತ್ ನ ಸುಧೀರ್ಘ 75 ವರ್ಷಗಳ ಪಯಣ ಕುರಿತ ಚರ್ಚೆಯ ನಂತರ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು ನಾಳೆಗೆ ಮುಂದೂಡಲಾಯಿತು. ಮಂಗಳವಾರ ಮಧ್ಯಾಹ್ನ ಹೊಸ ಸಂಸತ್ ಭವನದಲ್ಲಿ ಮತ್ತೆ ಕಲಾಪ ಪುನರ್ ಆರಂಭವಾಗಲಿದೆ. |
![]() | ಸಂಸತ್ ಪ್ರವೇಶಿಸುತ್ತೇನೆಂದು ಕನಸಿನಲ್ಲೂ ಯೋಚಿಸಿರಲಿಲ್ಲ, ಹಳೆ ಸಂಸತ್ ಭವನ ನಮಗೆಂದಿಗೂ ಪ್ರೇರಣೆ: ಪ್ರಧಾನಿ ಮೋದಿಸಂಸತ್ನಲ್ಲಿ ಸೋಮವಾರ 5 ದಿನಗಳ ವಿಶೇಷ ಅಧಿವೇಶನ ಆರಂಭವಾಗಿದೆ. ಮಂಗಳವಾರ ನೂತನ ಸಂಸತ್ ಭವನದಲ್ಲಿ ಅಧಿವೇಶನ ಆರಂಭವಾಗುವುದರಿಂದ ಹಾಗೂ ಹಳೆಯ ಭವನದಲ್ಲಿ ಕೊನೆಯ ಅಧಿವೇಶನ ಆಗಿರುವುದರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಹಳೆಯ ಸಂಸತ್ ಭವನದ ಕುರಿತು ಮಾತನಾಡಿದರು. |
![]() | ಹೊಸ ಸಂಸತ್ ಭವನದಲ್ಲಿ ಮಂಗಳವಾರ ಅಧಿವೇಶನ ಆರಂಭ: ಪ್ರಹ್ಲಾದ್ ಜೋಷಿನಾಳೆಯಿಂದ ಐದು ದಿನ ಸಂಸತ್ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನದ ಅಧಿವೇಶನ ಹಳೆಯ ಸಂಸತ್ ಕಟ್ಟಡದಲ್ಲಿಯೇ ನಡೆಯಲಿದೆ. ಸೆಪ್ಟೆಂಬರ್ 19 ರಂದು ಹೊಸ ಸಂಸತ್ ಭವನದಲ್ಲಿ ಅಧಿವೇಶನ ಆರಂಭವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. |
![]() | ನೂತನ ಸಂಸತ್ ಭವನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ಸಂಸತ್ತಿನ ವಿಶೇಷ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು, ನೂತನ ಸಂಸತ್ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. |
![]() | ಹೊಸ ಸಂಸತ್ ಭವನದಲ್ಲಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಖರ್ಗೆ ಗೈರು, ಇದೇ ಕಾರಣ!ನೂತನ ಸಂಸತ್ ಭವನದಲ್ಲಿ ಭಾನುವಾರ ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ತಿಳಿಸಿದ್ದು, ‘ಸಾಕಷ್ಟು ತಡವಾಗಿ’ ಆಹ್ವಾನ ಬಂದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. |
![]() | ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿ ಆಹ್ವಾನಿಸದಿರುವುದೇ ಸನಾತನ ಧರ್ಮದ ತಾರತಮ್ಯ, ಕ್ಷಮೆ ಕೇಳಲ್ಲ: ಉದಯನಿಧಿ ಸ್ಟಾಲಿನ್ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದೇ ಸತಾನತ ಧರ್ಮದ ಜಾತಿ ವ್ಯವಸ್ಥೆಯಲ್ಲಿರುವ ತಾರತಮ್ಯಕ್ಕೆ ಉದಾಹರಣೆಯಾಗಿದ್ದು, ಕ್ಷಮೆ ಕೇಳುವುದಿಲ್ಲ ಎಂದು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಹೇಳಿದ್ದಾರೆ. |
![]() | ಜುಲೈ 3ನೇ ವಾರ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ ಸಾಧ್ಯತೆ, ಕಲಾಪ ಮಧ್ಯಭಾಗದಲ್ಲಿ ಹೊಸ ಸಂಸತ್ತು ಭವನಕ್ಕೆ ಶಿಫ್ಟ್ಸಂಸತ್ತಿನ ಮುಂಗಾರು ಅಧಿವೇಶನ ಜುಲೈ ಮೂರನೇ ವಾರದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ, ಅಧಿವೇಶನಗಳು ಹಳೆಯ ಸಂಸತ್ ಭವನದಲ್ಲಿ ಪ್ರಾರಂಭವಾಗಿ ಮಧ್ಯದಲ್ಲಿ ಹೊಸ ಸಂಸತ್ತು ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿವೆ ಎಂದು ಸಂಸತ್ತಿನ ಮೂಲಗಳು ತಿಳಿಸಿವೆ. |
![]() | 'ಹೊಸ ಸಂಸತ್ ಭವನದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ, ಜೀವಿತಾವಧಿಯ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿ ಆಗಿರುವುದು ನನ್ನ ಅದೃಷ್ಟ': ಎಚ್ ಡಿ ದೇವೇಗೌಡಹೊಸ ಸಂಸತ್ ಭವನದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ, ಜೀವಿತಾವಧಿಯ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿ ಆಗಿರುವುದು ನನ್ನ ಅದೃಷ್ಟ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ. |
![]() | ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ನೋಡಿದ ಮೇಲೆ ನಾನು ಹೋಗದೇ ಇದ್ದುದ್ದಕ್ಕೆ ಸಂತೋಷ ಪಡುತ್ತೇನೆ: ಶರದ್ ಪವಾರ್ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗದೇ ಇದ್ದುದ್ದಕ್ಕೆ ಸಂತೋಷವಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. |
![]() | ನೂತನ ಸಂಸತ್ ಭವನದಲ್ಲಿ ‘ಅಖಂಡ ಭಾರತ’ ನಕ್ಷೆ: 'ಸಂಕಲ್ಪ ಸ್ಪಷ್ಟ' ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ!ಇಂದು ಲೋಕಾರ್ಪಣೆಯಾದ ನೂತನ ಸಂಸತ್ ಭವನದ ಗೋಡೆಗಳ ಮೇಲೆ ಚಿತ್ರಿಸಲಾಗಿರುವ ಹಲವು ಚಿತ್ರಣಗಳು ಇದೀಗ ಎಲ್ಲರ ಗಮನ ಸೆಳೆಯುತ್ತಿದ್ದು ಪ್ರಮುಖವಾಗಿ ಅಖಂಡ ಭಾರತದ ಚಿತ್ರಣ ಇದೀಗ ಎಲ್ಲರ ಗಮನ ಕೇಂದ್ರೀಕರಿಸಿದೆ. |