social_icon
  • Tag results for PM modi

ನಾಳೆ ಈಶಾನ್ಯ ಭಾರತದ ಮೊದಲ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಈಶಾನ್ಯ ಭಾರತವನ್ನು ಸಂಪರ್ಕಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚಾಲನೆ ನೀಡಲಿದ್ದಾರೆ.

published on : 28th May 2023

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಭಾನುವಾರ ಸಭೆ ನಡೆಸಿದರು.

published on : 28th May 2023

ನಾವು ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದ್ದೇವೆಯೇ?: ಶರದ್ ಪವಾರ್

ಹೊಸ ಸಂಸತ್ ಭವನ ಉದ್ಘಾಟನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ತಾವು ಅಲ್ಲಿಗೆ ಹೋಗುವುದಿಲ್ಲ ಎಂದು ಭಾನುವಾರ ಹೇಳಿದ್ದಾರೆ.

published on : 28th May 2023

ನೂತನ ಸಂಸತ್ ಭವನ ಕೇವಲ ಕಟ್ಟಡವಲ್ಲ, ಇದು ಭಾರತದ 140 ಕೋಟಿ ಜನರ ಆಕಾಂಕ್ಷೆಯ ಸಂಕೇತವಾಗಿದೆ: ಪ್ರಧಾನಿ ಮೋದಿ

ನೂತನ ಸಂಸತ್ ಭವನ ಕೇವಲ ಕಟ್ಟಡವಲ್ಲ, ಇದು ಭಾರತದ 140 ಕೋಟಿ ಜನರ ಆಕಾಂಕ್ಷೆಯ ಸಂಕೇತವಾಗಿದೆ. ಇದು ಭಾರತದ ಸಂಕಲ್ಪ ಕುರಿತು ಜಗತ್ತಿಗೆ ಸಂದೇಶ ನೀಡುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ.

published on : 28th May 2023

ಪ್ರಧಾನಿ ಮೋದಿ ಸಂಸತ್ ಭವನ ಉದ್ಘಾಟಿಸಿದ್ದನ್ನು ಸ್ವಾಗತಿಸಿದ ರಾಷ್ಟ್ರಪತಿ ಮುರ್ಮು

ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರುತ್ತಿದ್ದು, ಕಾರ್ಯಕ್ರಮದಲ್ಲಿ ಸಾಕ್ಷ್ಯಚಿತ್ರದ ಮೂಲಕ ಭಾರತದ ಇತಿಹಾಸವನ್ನು ಪ್ರದರ್ಶನ ಮಾಡಲಾಯಿತು.

published on : 28th May 2023

ನೂತನ ಸಂಸತ್ ಭವನ ಉದ್ಘಾಟನೆ: ರಾಷ್ಟ್ರಗೀತೆ ಮೂಲಕ 2ನೇ ಹಂತದ ಕಾರ್ಯಕ್ರಮ ಆರಂಭ, ಗಣ್ಯಾತಿಗಣ್ಯರು ಭಾಗಿ

ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರುತ್ತಿದ್ದು, 2ನೇ ಹಂತದ ಕಾರ್ಯಕ್ರಮ ರಾಷ್ಟ್ರಗೀತೆ ಮೂಲಕ ಆರಂಭಗೊಂಡಿದೆ.

published on : 28th May 2023

ನೂತನ ಸಂಸತ್ ಭವನ ಲೋಕಾರ್ಪಣೆ: ಐತಿಹಾಸಿಕ ಕಟ್ಟಡವು ಸಬಲೀಕರಣದ ತೊಟ್ಟಿಲಾಗಿರಲಿದೆ; ಪ್ರಧಾನಿ ಮೋದಿ

ನೂತನ ಸಂಸತ್ ಭವನ ಕಟ್ಟಡವು ಸಬಲೀಕರಣದ ತೊಟ್ಟಿಲಾಗಿರಲಿದೆ ಎಂದು ಪ್ರದಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ.

published on : 28th May 2023

'ಪ್ರಜಾಪ್ರಭುತ್ವದ ದೇಗುಲ' ನೂತನ ಸಂಸತ್ ಭವನ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಭಾರತ!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ತಲೆಯೆತ್ತಿ ನಿಂತಿರುವ ಪ್ರಜಾಪ್ರಭುತ್ವದ ನೂತನ ದೇಗುಲ 'ಸಂಸತ್ ಭವನ'ವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಲೋಕಾರ್ಪಣೆಗೊಳಿಸಿದರು.

published on : 28th May 2023

ನೂತನ ಸಂಸತ್ ಭವನ ಲೋಕಾರ್ಪಣೆ: ಕಟ್ಟಡ ನಿರ್ಮಾಣಕ್ಕೆ ಶ್ರಮಿಸಿದ ಕಾರ್ಮಿಕರ ಸನ್ಮಾನಿಸಿದ ಪ್ರಧಾನಿ ಮೋದಿ

ನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಶ್ರಮಿಸಿದ ಕಾರ್ಮಿಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಸನ್ಮಾನ ಮಾಡಿದರು.

published on : 28th May 2023

ನೂತನ ಸಂಸತ್ ಕಟ್ಟಡದ ಸ್ಮರಣಾರ್ಥ 75 ರೂಪಾಯಿ ನಾಣ್ಯ, ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ

ನೂತನ ಸಂಸತ್ ಕಟ್ಟಡವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಿದ್ದು, ಕಟ್ಟಡ ಉದ್ಘಾಟನೆ ಸ್ಮರಣಾರ್ಥ 75 ರೂಪಾಯಿ ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಭಾನುವಾರ ಬಿಡುಗಡೆಗೊಳಿಸಿದ್ದಾರೆ.

published on : 28th May 2023

ನೂತನ ಸಂಸತ್ ಭವನ ಲೋಕಾರ್ಪಣೆ: ಸ್ಪೀಕರ್​ ಆಸನದ ಬಳಿ ಐತಿಹಾಸಿಕ 'ಸೆಂಗೋಲ್'​ ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ನೂತನ ಸಂಸತ್ ಭವನದ ಲೋಕಾರ್ಪಣೆ ಸಮಾರಂಭ ಭಾನುವಾರ ಆರಂಭಗೊಂಡಿದ್ದು, ಪುರೋಹಿತರಿಂದ ಸೆಂಗೋಲ್​​ ಸ್ವೀಕರಿಸಿದ ಪ್ರಧಾನಿ ಮೋದಿಯವರು ಲೋಕಸಭಾ ಸ್ಪೀಕರ್​ ಆಸನದ ಬಳಿ​ ಪ್ರತಿಷ್ಠಾಪನೆ ಮಾಡಿದ್ದಾರೆ.

published on : 28th May 2023

ಸೆಂಗೋಲ್: ಇದು ಧರ್ಮದಂಡ ಮಾತ್ರವಲ್ಲ. ಸ್ವಾತಂತ್ರ್ಯದ ಸಂಕೇತ, ಗುಲಾಮಗಿರಿ ಅಂತ್ಯಗೊಳಿಸಿದ ಸಂಕೇತ: ಪ್ರಧಾನಿ ಮೋದಿ

ಸೆಂಗೋಲ್ ಕೇವಲ ಧರ್ಮದಂಡ ಮಾತ್ರವಲ್ಲ. ಸ್ವಾತಂತ್ರ್ಯದ ಸಂಕೇತ, ಗುಲಾಮಗಿರಿ ಅಂತ್ಯಗೊಳಿಸಿದ ಸಂಕೇತ ಎಂದು ಪ್ರಧಾನಿ ಮೋದಿ ಶನಿವಾರ ಹೇಳಿದ್ದಾರೆ.

published on : 27th May 2023

ನೂತನ ಸಂಸತ್ ಭವನ ಉದ್ಘಾಟನೆ: ಪ್ರಧಾನಿ ಮೋದಿಗೆ ‘ಸೆಂಗೋಲ್’ ರಾಜದಂಡ ಹಸ್ತಾಂತರಿಸಿದ ಅಧೀನಂ ಪೀಠಾಧಿಪತಿ

ನೂತನ ಸಂಸತ್ ಭವನ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಅಧೀನಂ ಪೀಠಾಧಿಪತಿಗಳು ‘ಸೆಂಗೋಲ್’ (ರಾಜದಂಡ) ಹಸ್ತಾಂತರಿಸಿದರು.

published on : 27th May 2023

ಮುಂಬೈ: ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ, ಆರ್‌ಟಿಐ ಕಾರ್ಯಕರ್ತ ಬಂಧನ

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತಿತರರ ವಿರುದ್ಧ "ಅವಹೇಳನಕಾರಿ" ಹೇಳಿಕೆ ನೀಡಿದ ಆರೋಪದ ಮೇರೆಗೆ ಮಾಹಿತಿ ಹಕ್ಕು ಕಾರ್ಯಕರ್ತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

published on : 27th May 2023

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗ ಸಭೆ: ಕೇರಳ, ರಾಜಸ್ಥಾನ ಸೇರಿ 8 ರಾಜ್ಯಗಳ ಮುಖ್ಯಮಂತ್ರಿಗಳು ಗೈರು!

ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನೀತಿ ಆಯೋಗ ಸಮಿತಿ ಸಭೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್ ಸೇರಿದಂತೆ8 ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದಾರೆಂದು ತಿಳಿದುಬಂದಿದೆ.

published on : 27th May 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9