social_icon
  • Tag results for Police

ಅಜಾಗರೂಕತೆ: ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಮೊಬೈಲ್ ಕಳ್ಳರು ಪರಾರಿ, 11 ಪೊಲೀಸರ ಅಮಾನತು

ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಮೂವರು ಮೊಬೈಲ್ ಕಳ್ಳರು ಪರಾರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ಪ್ರಕರಣ ಸಂಬಂಧ 8 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

published on : 22nd September 2023

ಉತ್ತರ ಪ್ರದೇಶ: ರೈಲಿನಲ್ಲಿ ಮಹಿಳಾ ಪೇದೆ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಇಬ್ಬರಿಗೆ ಗಾಯ

ಉತ್ತರ ಪ್ರದೇಶದಲ್ಲಿ ಮತ್ತೊಂದು ಎನ್ಕೌಂಟರ್ ನಡೆದಿದ್ದು ಈ ಹಿಂದೆ ರೈಲಿನಲ್ಲಿ ಮಹಿಳಾ ಪೇದೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿ ಅನೀಸ್ ಖಾನ್‌ನನ್ನುಉತ್ತರ ಪ್ರದೇಶ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ.

published on : 22nd September 2023

ಅಭಿನವ ಹಾಲಸ್ವಾಮಿಯನ್ನು ಸ್ಥಳ ಮಹಜರು ಮಾಡಲು ಕರೆತಂದಿದ್ದ ವೇಳೆ ಮಠದಲ್ಲಿ ಕಂತೆ ಕಂತೆ ಹಣ ಪತ್ತೆ!

ಬಳ್ಳಾರಿ ಜಿಲ್ಲೆಯ ಹೊಸಪೇಟೆ ಸಮೀಪದ ಹಿರೇಹಡಗಲಿಯ ಹಾಲಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಅಭಿನವ ಹಾಲಸ್ವಾಮಿಯನ್ನು ಬಂಧಿಸಿದ ಒಂದು ದಿನದ ನಂತರ ನಿನ್ನೆ ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಸ್ಥಳ ಮಹಜರಿಗೆ ಹೋಗಿದ್ದ ಸಂದರ್ಭದಲ್ಲಿ ಲಕ್ಷ ಲಕ್ಷ ಕಂತೆ ನೋಟು ಸಿಕ್ಕಿದೆ. 

published on : 21st September 2023

ವೈಯಾಲಿಕಾವಲ್ ಪೊಲೀಸರಿಂದ ದೌರ್ಜನ್ಯ, ಚಿತ್ರಹಿಂಸೆ: ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ವೈಯಾಲಿಕಾವಲ್‌ ಪೊಲೀಸ್‌ ಇನ್ಸ್‌ಪೆಕ್ಟರ್‌ ಸೇರಿ ಐವರ ವಿರುದ್ಧ ಡೆತ್‌ನೋಟ್‌ ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.

published on : 21st September 2023

ಹೆದ್ದಾರಿಗಳಲ್ಲಿ ನಿಗದಿತ ವೇಗದ ಮಿತಿ ಕಟ್ಟುನಿಟ್ಟಾಗಿ ಪಾಲಿಸಿ: ಪೊಲೀಸ್ ಸಿಬ್ಬಂದಿಗೆ ಅಲೋಕ್ ಕುಮಾರ್ ಸೂಚನೆ

ಹೆದ್ದಾರಿಗಳಲ್ಲಿ ಪೊಲೀಸ್ ವಾಹನಗಳೇ ನಿಯಮ ಉಲ್ಲಂಘಿಸುತ್ತಿರುವುದು ಬೆಳಕಿಗೆ ಬರುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು, ಎಲ್ಲಾ ವರ್ಗದ ಪೊಲೀಸ್ ವಾಹನಗಳು ನಿಗದಿತ ವೇಗದ ಮಿತಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಸೂಚನೆ ನೀಡಿದ್ದಾರೆ.

published on : 21st September 2023

RSS ಕಾರ್ಯಕರ್ತರ ಸೋಗಿನಲ್ಲಿ ಗೋಮಾಂಸ ದರೋಡೆ, ನಾಲ್ವರ ಬಂಧನ

ತಮ್ಮನ್ನು ಆರ್‌ಎಸ್‌ಎಸ್ ಕಾರ್ಯಕರ್ತರು ಎಂದು ಹೇಳಿಕೊಂಡು ಗೋಮಾಂಸ ದರೋಡೆ ಮಾಡಿದ್ದ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದಾರೆ. 

published on : 20th September 2023

ಅಸ್ಸಾಂನಲ್ಲಿ ಒಂದು ತಿಂಗಳ ಮಗುವಿನ ತಾಯಿಯ ಅತ್ಯಾಚಾರ ಹಾಗೂ ಬರ್ಬರ ಹತ್ಯೆ!

ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಒಂದು ತಿಂಗಳ ಮಗುವಿನ ತಾಯಿಯನ್ನು ಅವರ ಮನೆಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

published on : 19th September 2023

ಮೈಸೂರು: ಮಹಿಳಾ ಎಸ್‌ಐ ಪುತ್ರನ ಬೈಕ್ ಸ್ಟಂಟ್ ನಿಂದ 68 ವರ್ಷದ ರೈತನ ಪ್ರಾಣಕ್ಕೆ ಕುತ್ತು, ಕ್ರಮಕ್ಕೆ ಆಗ್ರಹ

ನಂಜನಗೂಡು ತಾಲೂಕಿನ ಹಿಮ್ಮಾವು ಎಂಬಲ್ಲಿ ಶನಿವಾರ ನಂಜನಗೂಡಿನ ಮಹಿಳಾ ಪೊಲೀಸ್ ಸಬ್ಇನ್ಸ್‌ಪೆಕ್ಟರ್ ಮಗನ ಬೈಕ್ ಸ್ಟಂಟ್ 68 ವರ್ಷದ ರೈತನ ಪ್ರಾಣಕ್ಕೆ ಕುತ್ತು ತಂದಿದೆ.

published on : 19th September 2023

ಚಾಮರಾಜನಗರ: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ, ಪತಿಯನ್ನು ಬಿಟ್ಟು ಬರುವಂತೆ ಶಿಕ್ಷಕಿಗೆ ಧಮ್ಕಿ!

ಕೆಲವು ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. 10 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯು, ಪತಿಯನ್ನು ತೊರೆದು ಬರುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

published on : 19th September 2023

ಟಿಕೆಟ್ ವಂಚನೆ ಪ್ರಕರಣ: ಹಿಂದುತ್ವವಾದಿ ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಬಿಡುಗಡೆ, ವಿಚಾರಣೆ ಆರಂಭ

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಅಸ್ವಸ್ಥರಾಗಿದ್ದ ಚೈತ್ರಾ ಕುಂದಾಪುರ ಅವರು ಚಿಕಿತ್ಸೆ ಪಡೆಯುತ್ತಿದ್ದ ವಿಕ್ಟೋರಿಯಾ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

published on : 19th September 2023

ಮೈಸೂರಿನ ಎಲ್ಲಾ ಪೊಲೀಸ್ ಠಾಣೆಗಳಲ್ಲಿ 'ಲೋಕಸ್ಪಂದನ ಕ್ಯೂಆರ್ ಕೋಡ್' ವ್ಯವಸ್ಥೆ

ಪೊಲೀಸ್ ಠಾಣೆಗಳನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ  ನಗರ ಪೊಲೀಸರು ಎಲ್ಲಾ ಠಾಣೆಗಳಲ್ಲಿ ‘ಲೋಕ ಸ್ಪಂದನ’ಕ್ಯೂಆರ್ ಕೋಡ್ ವ್ಯವಸ್ಥೆ ಪರಿಚಯಿಸುತ್ತಿದ್ದಾರೆ. ನಗರದ ಎಲ್ಲಾ 18 ಕಾನೂನು ಮತ್ತು ಸುವ್ಯವಸ್ಥೆ ಠಾಣೆಗಳು ಮತ್ತು ಐದು ಸಂಚಾರ ಪೊಲೀಸ್ ಠಾಣೆಗಳಲ್ಲಿ ಕ್ಯೂಆರ್ ಕೋಡ್ ಅನ್ನು ಪ್ರದರ್ಶಿಸಲಾಗುತ್ತದೆ.

published on : 17th September 2023

ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಖರೀದಿಸಿದ್ದ ಕಾರು, ಮನೆ, ಸೈಟು, 2 ಕೋಟಿ ರೂ. ಎಫ್‌ಡಿ ಜಪ್ತಿ

ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಅವರಿಂದ ಕೋಟಿ ಕೋಟಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದುತ್ವವಾದಿ ಚೈತ್ರಾ ಕುಂದಾಪುರ ಅವರು ಇತ್ತೀಚಿಗೆ ಖರೀದಿಸಿದ್ದ ಕಿಯಾ...

published on : 17th September 2023

ಬೆಂಗಳೂರಿನಲ್ಲಿ 7.83 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ: ವಿದೇಶಿಗರು ಸೇರಿ 14 ಡ್ರಗ್ ಪೆಡ್ಲರ್‌ಗಳ ಬಂಧನ!

ವಿದೇಶಿ ಪ್ರಜೆಗಳು ಮತ್ತು ಇತರ ರಾಜ್ಯದವರು ಸೇರಿದಂತೆ 14 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದ್ದು, 7.83 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್ ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ದಳ ತಿಳಿಸಿದೆ.

published on : 16th September 2023

ಚೈತ್ರಾ ಕುಂದಾಪುರ ಮೂರ್ಛೆ ರೋಗದಿಂದ ಬಳಲುತ್ತಿದ್ದಾರೆ: ಪೊಲೀಸರು

ಚೈತ್ರಾ ಕುಂದಾಪುರ ಅವರು ಮೂರ್ಛೆ ರೋಗದಿಂದ ಬಳಲುತ್ತಿದ್ದಾರೆಂದು ಪೊಲೀಸರು ಹೇಳಿದ್ದಾರೆ.

published on : 16th September 2023

ಹೈದರಾಬಾದ್: ಮೋಸ್ಟ್ ವಾಂಟೆಡ್ ಮಾವೋವಾದಿ ಸಂಜಯ್ ದೀಪಕ್ ಬಂಧನ

ಕುಖ್ಯಾತ ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಸಂಜಯ್ ದೀಪಕ್ ನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

published on : 16th September 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9