• Tag results for Ramanagar

ಗ್ರೀನ್ ಝೋನ್ ರಾಮನಗರಕ್ಕೂ ವಕ್ಕರಿಸಿದ ಕೊರೋನಾ; ರಾಜ್ಯದಲ್ಲಿ 69 ಹೊಸ ಪ್ರಕರಣ; ಸೋಂಕಿತರ ಸಂಖ್ಯೆ 2,158ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿನ ಅಬ್ಬರ ಮುಂದುವರೆದಿದ್ದು, ಸೋಮವಾರ ಮತ್ತೆ 69 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಅಲ್ಲದೆ, ಗ್ರೀನ್ ಝೋನ್ ರಾಮನಗರಕ್ಕೂ ಕೊರೋನಾ ವಕ್ಕರಿಸಿದ್ದು, ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,158ಕ್ಕೆ ಏರಿಕೆಯಾಗಿದೆ. 

published on : 25th May 2020

ರಾಮನಗರ: ಅರಣ್ಯಾಧಿಕಾರಿಗಳಿಂದ 2 ಚಿರತೆ ಮರಿಗಳ ಸೆರೆ

ರಾಮನಗರ ಜಿಲ್ಲೆಯಲ್ಲಿ ಚಿರತಣಗಳ ಹಾವಳಿ ಹೆಚ್ಚಾಗಿದ್ದು, ಯಾವ ಭಾಗದಲ್ಲಿ ನೋಡಿದರೂ ಚಿರತೆ ದಾಳಿಯ ಮಾತುಗಳೇ ಕೇಳಿ ಬರುತ್ತಿವೆ. ಈ ಹಿಂದೆ ನರಭಕ್ಷಕ ಚಿರತೆ ರಾಮನಗರದಲ್ಲಿ 62 ವರ್ಷದ ಮಹಿಳೆಯೊಬ್ಬರನ್ನು ಕೊಂದು ಹಾಕಿತ್ತು. ಈ ಬೆಳವಣಿಗೆ ಬಳಿಕ ಚಿರತೆ ಸೆರೆಹಿಡಿಯಲು ಬಲೆ ಬೀಸಿದ್ದ ಅರಣ್ಯಾಧಿಕಾರಿಗಳು ಇದೀಗ ಎರಡು ಚಿರತೆ ಮರಿಗಳನ್ನು ಸೆರೆ ಹಿಡಿದಿದ್ದಾರೆ. 

published on : 18th May 2020

ರಾಮನಗರ: ಮಲಗಿದ್ದ ವೃದ್ಧೆ ಚಿರತೆಗೆ ಬಲಿ

ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ‌ಮತ್ತೆ ಚಿರತೆ ಅಟ್ಟಹಾಸ ಮೆರೆದಿದೆ. ಮನೆಯ ಹೊರಗಡೆ ಮಲಗಿದ್ದ ವೃದ್ಧೆ ಮೇಲೆ ಚಿರತೆಯೊಂದು ದಾಳಿ ಮಾಡಿ ಕೊಂದು ಹಾಕಿರುವ ಘಟನೆ ಮಾಗಡಿ ತಾಲ್ಲೂಕಿನ ಕೊತ್ತಗಾನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

published on : 16th May 2020

ರಾಮನಗರ ಜಾತ್ರೆ: ಅಧಿಕಾರಿಗಳ ವಿರುದ್ಧ ಡಿಸಿಎಂ ಅಶ್ವತ್ಥ್ ನಾರಾಯಣ್ ತೀವ್ರ ಕಿಡಿ

ಲಾಕ್'ಡೌನ್ ನಡುವಲ್ಲೂ ರಾಮನಗರದಲ್ಲಿ ಜಾತ್ರೆಗೆ ಅನುಮತಿ ನೀಡಿದ್ದ ಅಧಿಕಾರಿಗಳನ್ನು ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. 

published on : 16th May 2020

ರಾಮನಗರ: ಮಗುವನ್ನು ಕೊಂದಿದ್ದ ಚಿರತೆ ಸೆರೆ

ಪೋಷಕರ ಜತೆ ಮಲಗಿದ್ದ ಮೂರು ವರ್ಷದ ಮಗುವನ್ನು ಹೊತ್ತೊಯ್ದು ಕೊಂದು ಹಾಕಿದ್ದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಮಾಗಡಿ ತಾಲೂಕಿನ ಕದಿರಯ್ಯನ ಪಾಳ್ಯದಲ್ಲಿ ಈ ನರಭಕ್ಷಕ ಚಿರತೆ ಸೆರೆಯಾಗಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.  

published on : 13th May 2020

ರಾಮನಗರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ, ಮಾವು ಸಂಸ್ಕರಣಾ ಘಟಕ: ಡಾ. ಸಿ.ಎನ್. ಅಶ್ವತ್ಥ ನಾರಾಯಣ

ಗರದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ಹಾಗೂ ಮಾವು ಸಂಸ್ಕರಣಾ ಘಟಕವನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ  ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. 

published on : 11th May 2020

ರಾಮನಗರ: ಮಲಗಿದ್ದ ಮಗು ಚಿರತೆಗೆ ಬಲಿ

ಮನೆಯಲ್ಲಿ ಮಲಗಿದ್ದ 3 ವರ್ಷದ ಗಂಡು ಮಗುವನ್ನು ಚಿರತೆಯೊಂದು ಹೊತ್ತೊಯ್ದು ಕೊಂದು ತಿಂದಿರುವ ಘಟನೆ ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

published on : 9th May 2020

ರಾಮನಗರದಲ್ಲಿ ಹೋಟೆಲ್ ಉದ್ಯಮ ತೆರೆಯಲು ಅವಕಾಶ ನೀಡಿ: ಸಂಸದ ಡಿ.ಕೆ. ಸುರೇಶ್ 

ರಾಮನಗರ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕೊರೋನಾ ಪ್ರಕರಣ ಕಂಡುಬಂದಿಲ್ಲ. ಹೀಗಾಗಿ ಜಿಲ್ಲೆಯನ್ನು ಹಸಿರು ವಲಯ ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ.  ಹೋಟೆಲ್ ತೆರೆಯಲು ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಸಂಸದ ಡಿ.ಕೆ. ಸುರೇಶ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

published on : 6th May 2020

ರಾಮನಗರವನ್ನು ಕೋವಿಡ್-19 ಹಸಿರು ವಲಯ ಎಂದು ಘೋಷಿಸಿ: ಎಚ್‌ಡಿ ಕುಮಾರಸ್ವಾಮಿ

ರಾಮನಗರವನ್ನು ಕೋವಿಡ್ ಹಸಿರು ವಲಯ ಎಂದು ಘೋಷಿಸಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

published on : 28th April 2020

ಕಾಸರಗೋಡಿನಿಂದ ಮಂಗಳೂರಿಗೆ ಜನ ಬರಲು ಮಾಜಿ ಪಿಎಂ ವಿರೋಧವಿಲ್ಲ: ಪಾದರಾಯನಪುರದವರು ರಾಮನಗರಕ್ಕೆ ಬರಬಾರದೇ?

ಪಾದರಾಯನಪುರ ಗಲಾಟೆಯ ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ರಾಜ್ಯವೆಂದರೇ ಕೇವಲ ರಾಮನಗರ ಜಿಲ್ಲೆ ಮಾತ್ರವೇ ಎಂದು ವಿಪಕ್ಷ ನಾಯಕರಿಗೆ ಪ್ರಶ್ನೆ ಕೇಳಿದ್ದಾರೆ.

published on : 25th April 2020

ರಾಮನಗರ ಜೈಲು ಸಿಬ್ಬಂದಿಯ ಕ್ವಾರಂಟೈನ್: ಬಸವರಾಜ ಬೊಮ್ಮಾಯಿ

ರಾಮನಗರದಲ್ಲಿ ಐವರಿಗೆ ಪಾಸಿಟಿವ್ ಆಗಿದೆ. ಅವರನ್ನು ವಿಕ್ಟೋರಿಯಾಗೆ ಸ್ಥಳಾಂತರ ಮಾಡುತ್ತಿದ್ದೇವೆ. ಉಳಿದವರು ಹಜ್‌ ಭವನಕ್ಕೆ ಶಿಫ್ಟ್ ಆಗುತ್ತಾರೆ. ಜೈಲು ಸಿಬ್ಬಂದಿಗಳು ಕ್ವಾರೈಂಟೆನ್ ಆಗುತ್ತಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 24th April 2020

ಕೆ.ಸಿ ಜನರಲ್ ಆಸ್ಪತ್ರೆಗೆ ಸೋಂಕಿತರು ಬೇಡ ಎನ್ನುವವರು ರಾಮನಗರಕ್ಕೆ ಕಳುಹಿಸಿದ್ದೇಕೆ: ಡಿಕೆ ಸುರೇಶ್

ಪಾದರಾಯನಪುರ ಕೊರೊನಾ‌ ಸೋಂಕಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕೊಡಲಾಗಿತ್ತು. ಆದರೆ ಅವರನ್ನು ಸರ್ಕಾರ ರಾಮನಗರಕ್ಕೆ ಸ್ಥಳಾಂತರ ಮಾಡಿದ್ದು ಸರಿಯಲ್ಲ ಎಂದು ಸಂಸದ ಡಿ.ಕೆ‌.ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

published on : 24th April 2020

ರಾಮನಗರ ರಕ್ಷಿಸಿ ಇಲ್ಲದಿದ್ದರೆ ಬೀದಿಗಿಳಿಯುವೆ: ಶಾಸಕಿ ಅನಿತಾ ಕುಮಾರಸ್ವಾಮಿ

ರಾಮನಗರ: ಬೆಂಗಳೂರಿನ ಪಾದರಾಯನಪುರದ ಗಲಭೆಕೋರರನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ  

published on : 24th April 2020

ಪಾದರಾಯನಪುರ ಗಲಭೆ ಪ್ರಕರಣ: ರಾಮನಗರ ಜೈಲಲ್ಲಿರುವ 3 ಆರೋಪಿಗಳಲ್ಲಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ

ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿ, ರಾಮನಗರ ಜೈಲು ಸೇರಿರುವ 54 ಆರೋಪಿಗಳ ಪೈಕಿ ಇದೀಗ ಮತ್ತೆ ಮೂವರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ. 

published on : 24th April 2020

ರಾಮನಗರ ಜೈಲಿನಲ್ಲಿರುವ ಕೈದಿಗಳನ್ನು ಸ್ಥಳಾಂತರ ಮಾಡದಿದ್ದರೆ ಉಗ್ರ ಹೋರಾಟ: ಹೆಚ್ ಡಿ ಕುಮಾರಸ್ವಾಮಿ

ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿರುವ ಪಾದರಾಯನಪುರ ಗಲಭೆಕೋರರ ಪೈಕಿ ಇಬ್ಬರಿಗೆ ಕೊರೋನಾ ವೈರಸ್ ತಗುಲಿದ್ದು ಅವರ ಬಗ್ಗೆ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ತಕ್ಷಣವೇ ಸ್ಥಳಾಂತರಿಸದಿದ್ದರೆ ಉಗ್ರ ಪ್ರತಿಭಟನೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

published on : 24th April 2020
1 2 3 4 5 >