• Tag results for Ramesh Jarkiholi

ಮಾಜಿ ಸಚಿವ ರಮೇಶ್ ಜಾರಕಿಹೊಳಿಯಿಂದ 819 ಕೋಟಿ ರೂ. ಲೂಟಿ: ಕಾಂಗ್ರೆಸ್ ಗಂಭೀರ ಆರೋಪ!

ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರ ತಂದ ರೂವಾರಿ ರಮೇಶ್ ಜಾರಕಿಹೊಳಿ ಅವರು ಸುಮಾರು 819 ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಗಂಭೀರ ಆರೋಪ ಮಾಡಿದೆ.

published on : 26th June 2022

ರಮೇಶ್ ಜಾರಕಿಹೊಳಿ 600 ಕೋಟಿ ರೂ. ಹಗರಣದಲ್ಲಿ ಭಾಗಿಯಾಗಿದ್ದಾರೆ: ಕಾಂಗ್ರೆಸ್ ಆರೋಪ

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರೂ.600 ಕೋಟಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಮಂಗಳವಾರ ಆರೋಪಿಸಿದ್ದಾರೆ.

published on : 4th May 2022

ಜಾರಕಿಹೊಳಿ ಮತ್ತು ಕತ್ತಿ ಕುಟುಂಬವನ್ನು ಬೆಳಗಾವಿ ರಾಜಕೀಯದಿಂದ ಹೊರಗಿಡಲು ಬಿಜೆಪಿ ಮೆಗಾ ಪ್ಲಾನ್!

ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನ ಕಳೆದುಕೊಂಡಿದ್ದು, ಮತ್ತೆ ಸಂಪುಟ ಸೇರಿಕೊಳ್ಳಲು ಕಸರತ್ತು ನಡೆಸುತ್ತಿರುವುದು ರಹಸ್ಯವಾಗಿ ಉಳಿದಿಲ್ಲ. ಕೇಂದ್ರ ಗೃಹ  ಸಚಿವ ಅಮಿತ್ ಶಾ ಮತ್ತು ಇತರ ನಾಯಕರನ್ನು  ಭೇಟಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ.

published on : 2nd May 2022

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲೂ 'ಮಹಾನಾಯಕನ' ಕೈವಾಡ: ರಮೇಶ್ ಜಾರಕಿಹೊಳಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲೂ 'ಮಹಾನಾಯಕನ' ಕೈವಾಡವಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಆರೋಪಿಸಿದ್ದಾರೆ.

published on : 14th April 2022

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಅರ್ಜಿಯ ವಿಚಾರಣೆ ಏಕ ಸದಸ್ಯ ಪೀಠಕ್ಕೆ ವರ್ಗಾವಣೆ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೊರಡಿಸಿದ ಆದೇಶ ರದ್ದು ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ.

published on : 11th March 2022

ರಮೇಶ್ ಜಾರಕಿಹೊಳಿಗೆ ಅತ್ಯಾಚಾರ ಪ್ರಕರಣದಲ್ಲಿ ಬಿಗ್ ರಿಲೀಫ್: ಎಸ್ ಐಟಿ ಕ್ಲೀನ್ ಚಿಟ್; ಮತ್ತೆ  ಸಿಗುತ್ತಾ ಸಚಿವ ಸ್ಥಾನ?

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ವಿಶೇಷ ತನಿಖಾ ದಳ 'ಬಿ' ರಿಪೋರ್ಟ್ ಸಲ್ಲಿಸಿದೆ.

published on : 4th February 2022

ಜಾರಕಿಹೊಳಿಗೆ ಇತರ ಪಕ್ಷಗಳ ಎಷ್ಟು ಮಂದಿ ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರುವಷ್ಟು ಶಕ್ತಿ ಇದೆ: ಗೋವಿಂದ ಕಾರಜೋಳ

ರಮೇಶ್ ಜಾರಕಿಹೊಳಿಯವರಿಗೆ ಇತರ ಪಕ್ಷಗಳ ಎಷ್ಟು ಮಂದಿ ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರುವಷ್ಟು ಶಕ್ತಿ ಇದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಬುಧವಾರ ಹೇಳಿದ್ದಾರೆ.

published on : 27th January 2022

ಪಕ್ಷಾಂತರ ಪರ್ವ: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ: ಭವಿಷ್ಯ ನುಡಿದ ರಮೇಶ್ ಜಾರಕಿಹೊಳಿ ಹೇಳಿದ್ದೇನು?

ರಾಜ್ಯದಲ್ಲಿ ಪಕ್ಷಾಂತರ ಪರ್ವ ಆರಂಭವಾಗುವ ಎಲ್ಲ ಮುನ್ಸೂಚನೆಗಳೂ ದೊರೆಯುತ್ತಿದ್ದು, ಇದಕ್ಕೆ ಇಂಬು ನೀಡುವಂತೆ ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ನಡೆಯುವ ಸಾಧ್ಯತೆಯನ್ನು ಸ್ವತಃ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

published on : 26th January 2022

ಘಟಾನುಘಟಿಗಳಿದ್ದರೂ ಬೆಳಗಾವಿಯಲ್ಲಿ 'ಮಕಾಡೆ ಮಲಗಿದ 'ಬಿಜೆಪಿ'!: ಹೆಬ್ಬಾಳ್ಕರ್ ವಿರುದ್ಧ ತಿರುಗಿ ಬಿದ್ದಿದ್ದ 'ಸಾಹುಕಾರ್' ಗೆ ಮುಖಭಂಗ!

ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಳಗಾವಿ  ದ್ವಿಸದಸ್ಯ ವಿಧಾನಪರಿಷತ್  ಕ್ಷೇತ್ರದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಬೆಳಗಾವಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಎರಡನೇ  ಪ್ರಾಶಸ್ತ್ಯದಲ್ಲಿ ಗೆಲುವು ಸಾಧಿಸಿದ್ದಾರೆ.

published on : 15th December 2021

'ಸಿದ್ದರಾಮಯ್ಯ ಈಗಲೂ ನನ್ನ ಗುರುಗಳು, ನಾನು ಅವರ ಅಭಿಮಾನಿ, ಆದರೆ ಸುಳ್ಳು ಹೇಳುವುದನ್ನು ಕಲಿತಿದ್ದಾರೆ'

ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಈಗಲೂ ನಮ್ಮ ನಾಯಕರೇ ಎನ್ನುವ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

published on : 7th December 2021

ಜಾರಕಿಹೊಳಿ ಸಿಡಿ ಕೇಸ್: ತನಿಖಾಧಿಕಾರಿ ವರದಿಗೆ ಎಸ್ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಅಸ್ತು

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿ ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳದ (ಎಸ್ಐಟಿ) ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರು ಎಸ್ಐಟಿ ವರದಿಯನ್ನು ಒಪ್ಪಿಕೊಂಡಿದ್ದಾರೆ.

published on : 1st December 2021

ರಮೇಶ್ ಜಾರಕಿಹೊಳಿ ಬಿಜೆಪಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ: ಸಚಿವ ಈಶ್ವರಪ್ಪ

ಬೆಳಗಾವಿ ಬಿಜೆಪಿಯಲ್ಲಿ ಯಾವುದೂ ಸರಿಯಿಲ್ಲ ಎಂಬ ವದಂತಿಗಳ ವಿರುದ್ಧ ಕಿಡಿಕಾರಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ರಮೇಶ್ ಜಾರಕಿಹೊಳಿ ಎಂದಿಗೂ ಬಿಜೆಪಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ ಎಂದು ಹೇಳಿದ್ದಾರೆ.

published on : 29th November 2021

ವಿಧಾನ ಪರಿಷತ್ ಚುನಾವಣೆ: ಕಣದಲ್ಲಿ 91 ಅಭ್ಯರ್ಥಿಗಳು; ಹೆಬ್ಬಾಳ್ಕರ್ ಸಹೋದರನನ್ನು ಸೋಲಿಸುವುದೇ ಗುರಿ- ಜಾರಕಿಹೊಳಿ

ಸ್ಥಳೀಯ ಸಂಸ್ಥೆಗಳಿಂದ  ವಿಧಾನಪರಿಷತ್ತಿನ 25 ಸ್ಥಾನಗಳಿಗೆ ನಡೆಯುವ ಚುನಾವಣೆಗೆ  ನಾಮಪತ್ರ ವಾಪಸಾತಿ ಪ್ರಕ್ರಿಯೆ ಶುಕ್ರವಾರ ಮುಗಿದಿದ್ದು, ಅಂತಿಮವಾಗಿ 91 ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದಾರೆ.

published on : 27th November 2021

ನನ್ನನ್ನು ಮತ್ತೆ ಮಂತ್ರಿ ಮಾಡಿ, ಇಲ್ಲವೇ ಸಹೋದರನಿಗಾದರೂ ಸಚಿವ ಸ್ಥಾನ ನೀಡಿ: ಸಿಎಂ ಬಳಿ ಜಾರಕಿಹೊಳಿ ದುಂಬಾಲು!

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೋಮವಾರ ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸುದೀರ್ಘ 1 ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.

published on : 29th September 2021

ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿಸಿದ ರಮೇಶ್ ಜಾರಕಿಹೊಳಿ, ಯೋಗೇಶ್ವರ್ ದೆಹಲಿ ಭೇಟಿ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ರಚನೆಯಾಗಿ, ಖಾತೆಗಳು ಹಂಚಿಕೆಯಾದ ನಂತರ ಬಿಜೆಪಿಯಲ್ಲಿ ಅಸಮಾಧಾನ, ಅತೃಪ್ತಿ ಹೊಗೆಯಾಡುತ್ತಿದೆ.

published on : 11th August 2021
1 2 3 4 5 6 > 

ರಾಶಿ ಭವಿಷ್ಯ