- Tag results for Reservation
![]() | ಮತ ಸೆಳೆಯಲು ಮಹಿಳಾ ಮೀಸಲಾತಿ ಮಸೂದೆ ತರುತ್ತಿದ್ದಾರೆ ಹೊರತು ಮಹಿಳೆಯರ ಮೇಲೆ ಕಾಳಜಿಯಿಂದಲ್ಲ: ಸಿದ್ದರಾಮಯ್ಯಹೆಣ್ಣುಮಕ್ಕಳಿಗೆ ಮೀಸಲಾತಿ ಕೊಡಬೇಕೆಂದು ಪ್ರಾಮಾಣಿಕ ಮನೋಭಾವ ಇರುತ್ತಿದ್ದರೆ ಆ ಮಸೂದೆ ಜಾರಿಗೆ 15 ವರ್ಷ ಎಂದು ಹೇಳುತ್ತಿರಲಿಲ್ಲ. ಎರಡನೆಯದಾಗಿ ಕ್ಷೇತ್ರ ಮರುವಿಂಗಡಣೆ ಮತ್ತು ಜನಗಣತಿಗೆ ಏಕೆ ಮೀನಮೇಷ ಎಣಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. |
![]() | ಮುಂಬರುವ ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಗೆಲುವು ಎಷ್ಟರಲ್ಲಿ?: ರಾಹುಲ್ ಗಾಂಧಿ ಕೊಟ್ಟ ವಿವರಣೆ ಹೀಗಿದೆ...ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸದ್ಯದ ಪ್ರಕಾರ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಖಂಡಿತವಾಗಿಯೂ ಗೆಲ್ಲುತ್ತಿದೆ, ಬಹುಶಃ ತೆಲಂಗಾಣವನ್ನು ಗೆಲ್ಲಬಹುದು. |
![]() | ಮಹಿಳಾ ಮೀಸಲಾತಿ ಒಳ್ಳೆಯದು, ಆದರೆ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ಆಗಬೇಕು: ರಾಹುಲ್ ಗಾಂಧಿಮಹಿಳಾ ಮೀಸಲಾತಿ ಮಸೂದೆ ಒಳ್ಳೆಯದೇ, ಆದರೆ ಇಲ್ಲಿ ಎರಡು ಅಂಶಗಳು ಮುಖ್ಯವಾಗಿದೆ. ಒಂದು ಮಹಿಳಾ ಮೀಸಲಾತಿ ಮಸೂದೆ ಅನುಷ್ಠಾನಕ್ಕೆ ಮೊದಲು ಜನಗಣತಿಯನ್ನು ಮಾಡಬೇಕು ಮತ್ತು ಎರಡನೆಯದು ಕ್ಷೇತ್ರ ಮರುವಿಂಗಡಣೆ. ಇದನ್ನು ಮಾಡಲು ಹಲವಾರು ವರ್ಷಗಳನ್ನು ತೆಗೆದುಕೊಳ್ಳುತ್ತದೆ. |
![]() | ಬದ್ಧತೆ ಈಡೇರಿಸಿದ್ದೇವೆ: ಮಹಿಳಾ ಮೀಸಲಾತಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಕ್ಕೆ ಮಹಿಳಾ ವೃಂದಕ್ಕೆ ಪ್ರಧಾನಿ ಮೋದಿ ಅಭಿನಂದನೆಸಂಸತ್ತು ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದ ನಂತರ ಇಂದು ಶುಕ್ರವಾರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಹಿಳಾ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರ ಮಹಿಳೆಗೆ ನೀಡಿದ ಬದ್ಧತೆಯನ್ನು ಈಡೇರಿಸಿದ್ದೇವೆ ಎಂದಿದ್ದಾರೆ. |
![]() | ಮಹಿಳಾ ಮೀಸಲಾತಿ ಮಸೂದೆ ಸಾಮಾನ್ಯ ಕಾನೂನಲ್ಲ, ನವ ಭಾರತದ ಹೊಸ ಪ್ರಜಾಸತ್ತಾತ್ಮಕ ಬದ್ಧತೆಯ ಘೋಷಣೆ: ಪ್ರಧಾನಿ ಮೋದಿಮಹಿಳೆಯರಿಗೆ ಶೇಕಡಾ 33ರಷ್ಟು ರಾಜಕೀಯ ಪ್ರಾತಿನಿಧ್ಯ ನೀಡುವ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲಿ ಕೂಡ ಅಂಗೀಕಾರವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. |
![]() | ಕೇಂದ್ರದ ಮಹಿಳಾ ಮೀಸಲಿಗೆ ಬದಲಾಗಿ ರಾಜ್ಯ ಸರ್ಕಾರದಿಂದ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಸಮುದಾಯಕ್ಕೆ ಮೀಸಲಾತಿ!ಕೇಂದ್ರ ಸರ್ಕಾರವು ಬುಧವಾರ ತಂದ ಮಹಿಳಾ ಮೀಸಲಾತಿ ಮಸೂದೆಗೆ ಪ್ರತಿಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಗೇಮ್ ಪ್ಲಾನ್ ಮಾಡುತ್ತಿದೆ. |
![]() | ಸಂಸತ್ ಭವನದ ಹೊರಗೆ ಮಹಿಳಾ ಸಂಸದರೊಂದಿಗೆ ಪೋಸ್ ನೀಡಿದ ಪ್ರಧಾನಿ ನರೇಂದ್ರ ಮೋದಿ! ವಿಡಿಯೋಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 'ನಾರಿ ಶಕ್ತಿ'ಯಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. |
![]() | ಮೇಲ್ಮನೆಯಲ್ಲೂ ಐತಿಹಾಸಿಕ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರ! ಸಂಸತ್ ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಿಕೆಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಒದಗಿಸುವ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲೂ ಗುರುವಾರ ಅಂಗೀಕಾರವಾಯಿತು. ಇದರೊಂದಿಗೆ ಸಂಸತ್ತಿನ ಉಭಯ ಸದನಗಳಲ್ಲಿಯೂ ಮಸೂದೆ ಅಂಗೀಕಾರವಾಗಿದೆ. |
![]() | ಮಹಿಳಾ ಮೀಸಲಾತಿ ಮಸೂದೆಯನ್ನು ಬಿಜೆಡಿ ಬಲವಾಗಿ ಬೆಂಬಲಿಸುತ್ತದೆ: ಒಡಿಶಾ ಸಿಎಂ ಪಟ್ನಾಯಕ್ಸಂಸತ್ತಿನಲ್ಲಿ ಮಂಡಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ತಮ್ಮ ಪಕ್ಷ ಬಲವಾಗಿ ಬೆಂಬಲಿಸುತ್ತದೆ ಎಂದು ಬಿಜೆಡಿ ಅಧ್ಯಕ್ಷ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಗುರುವಾರ ಹೇಳಿದ್ದಾರೆ. |
![]() | ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಎಸ್‌ಸಿ/ಎಸ್‌ಟಿ ಮಹಿಳೆಯರಿಗೆ ಒಳಮೀಸಲಾತಿ ಆಗತ್ಯ- ಸಿಎಂ ಸಿದ್ದರಾಮಯ್ಯಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. |
![]() | ಲೋಕಸಭೆ, ರಾಜ್ಯ ವಿಧಾನಸಭೆಗಳಲ್ಲಿ ಎಸ್‌ಸಿ/ಎಸ್‌ಟಿಗೆ ಮೀಸಲಾತಿ ವಿಸ್ತರಣೆ: ಸುಪ್ರೀಂ ಕೋರ್ಟ್ ಪರಿಶೀಲನೆಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿಯ ಗಡುವನ್ನು ವಿಸ್ತರಿಸಲು ಸಂಸತ್ತು ತನ್ನ ಸಂವಿಧಾನಾತ್ಮಕ ಅಧಿಕಾರವನ್ನು ಬಳಸಬಹುದೇ ಎಂಬುದನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. |
![]() | 454-2: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆ ಅಸ್ತು, ಇಂದು ರಾಜ್ಯಸಭೆಯಲ್ಲಿ ಮಂಡನೆನೂತನ ಸಂಸತ್ತು ಕಟ್ಟಡದ ಕೆಳಮನೆಯ ಲೋಕಸಭೆಯಲ್ಲಿ ಬುಧವಾರ ಮಹಿಳಾ ಮೀಸಲಾತಿ ಮಸೂದೆಯನ್ನು 454 ಮತಗಳ ಬಹುಮತದಿಂದ ಅಂಗೀಕರಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಸಂಸತ್ತಿನಲ್ಲಿ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಮಸೂದೆಯ ವಿರುದ್ಧ ಕೇವಲ ಇಬ್ಬರು ಸಂಸದರು ಮತ ಚಲಾಯಿಸಿದ್ದಾರೆ. |
![]() | ಲೋಕಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ; ನಾಳೆ ರಾಜ್ಯಸಭೆಯಲ್ಲಿ ಮಂಡನೆ ಸಾಧ್ಯತೆಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಬಹು ನಿರೀಕ್ಷಿತ ನಾರಿ ಶಕ್ತಿ ವಂದನ್ ವಿಧೇಯಕ(ಮಹಿಳಾ ಮೀಸಲಾತಿ ಮಸೂದೆ)ಯನ್ನು ಬುಧವಾರ ಲೋಕಸಭೆಯಲ್ಲಿ... |
![]() | ಒಬಿಸಿ ಕೋಟಾ ಇಲ್ಲದೆ ಮಹಿಳಾ ಮೀಸಲಾತಿ ಮಸೂದೆ ಅಪೂರ್ಣ: ಲೋಕಸಭೆಯಲ್ಲಿ ರಾಹುಲ್ ಗಾಂಧಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಆದರೆ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡದ ಕಾರಣ ಇದು "ಅಪೂರ್ಣ" ಮಸೂದೆ... |
![]() | ಲಿಂಗ ಸಮಾನತೆ ನ್ಯಾಯಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಅತ್ಯಂತ ಪರಿವರ್ತಕ ಕ್ರಾಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮುಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸರ್ಕಾರ ಮಂಡಿಸಿದ ಒಂದು ದಿನದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲಿಂಗ ಸಮಾನತೆ ನ್ಯಾಯಕ್ಕಾಗಿ ಇದು ನಮ್ಮ ಕಾಲದಲ್ಲಿ ಅತ್ಯಂತ ಪರಿವರ್ತನೆಯ ಕ್ರಾಂತಿಯಾಗಲಿದೆ ಎಂದು ಬುಧವಾರ ಹೇಳಿದ್ದಾರೆ. |