social_icon
  • Tag results for Section 144

ಎಂಇಎಸ್'ನಿಂದ ಹುತಾತ್ಮ ದಿನ ಆಯೋಜನೆ: ಬೆಳಗಾವಿಯಲ್ಲಿ ಸೆಕ್ಷನ್ 144 ಜಾರಿ, ಭೇಟಿ ರದ್ದುಗೊಳಿಸಿದ ಸಂಸದ ಧೈರ್ಯಶೀಲ ಮಾನೆ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿಂಸಾಚಾರದಲ್ಲಿ ಮಡಿದವರಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸದಸ್ಯರು ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಿದರು.

published on : 18th January 2023

ಮಂಗಳೂರು: ಚೂರಿ ಇರಿತಕ್ಕೊಳಗಾಗಿದ್ದ ವರ್ತಕ ಜಲೀಲ್ ಸಾವು; 4 ಠಾಣೆಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

ಸುರತ್ಕಲ್ ಠಾಣೆ ವ್ಯಾಪ್ತಿಯ ಕೃಷ್ಣಾಪುರದಲ್ಲಿ ವರ್ತಕ ಜಲೀಲ್ ಅವರನ್ನು ಹತ್ಯೆ ಮಾಡಲಾಗಿದ್ದು, ಪ್ರಕರಣ ಸಂಬಂಧ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿದ್ದಾರೆ.

published on : 25th December 2022

ದರ್ಗಾದ ಒಂದು ಭಾಗ ಕೆಡವಲು ಹುಬ್ಬಳ್ಳಿ ಮಹಾನಗರ ಪಾಲಿಕೆ ನಿರ್ಧಾರ: ಮುಸ್ಲಿಂ ಸಂಘಟನೆಗಳಿಂದ ವಿರೋಧ, ಸ್ಥಳದಲ್ಲಿ ಬಿಗುವಿನ ವಾತಾವರಣ, ಸೆಕ್ಷನ್ 144 ಜಾರಿ  

ಹುಬ್ಬಳ್ಳಿಯ ಬೈರಿದೇವರಕೊಪ್ಪ ದರ್ಗಾ ತೆರವು ಕಾರ್ಯಾಚರಣೆ ಮುಸ್ಲಿಂ ಸಮುದಾಯವನ್ನು ಕೆರಳಿಸಿದ್ದು ಸದ್ಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಸೆಕ್ಷನ್ 144 ಹೇರಲಾಗಿದೆ. 

published on : 21st December 2022

ಸಾವರ್ಕರ್ - ಟಿಪ್ಪು ಫೋಟೋ ವಿವಾದ: ನಿಷೇಧಾಜ್ಞೆ ತೆರವು, ಸಹಜ ಸ್ಥಿತಿಗೆ ಮರಳಿದ ಶಿವಮೊಗ್ಗ

ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್- ಮೈಸೂರು ಹುಲಿ ಟಿಪ್ಪು ಸುಲ್ತಾನ್ ಫ್ಲೆಕ್ಸ್ ಹಾಕುವ ವಿಚಾರದಲ್ಲಿ ಹಿಂದೂ-ಮುಸ್ಲಿಂ ಕೋಮುಗಳ ಮಧ್ಯೆ ಗಲಾಟೆ ನಡೆದು ಬೂದಿಮುಚ್ಚಿದ ಕೆಂಡದಂತಿದ್ದ ಶಿವಮೊಗ್ಗದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ.

published on : 18th August 2022

ಟಿಪ್ಪು-ಸಾವರ್ಕರ್ ಪೋಸ್ಟರ್ ವಿವಾದ: ಶಿವಮೊಗ್ಗದಲ್ಲಿ ಜನಜೀವನ ಸಹಜ ಸ್ಥಿತಿಯತ್ತ; ಪೊಲೀಸ್ ಭದ್ರತೆ ಹೆಚ್ಚಳ

ಮಲೆನಾಡು ಶಿವಮೊಗ್ಗದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಹಿಂದೂ ಮಹಾಸಭಾ ನಾಯಕ ವೀರ ಸಾವರ್ಕರ್- ಮೈಸೂರು ಹುಲಿ ಟಿಪ್ಪು ಸುಲ್ತಾನ್ ಫ್ಲೆಕ್ಸ್ ಹಾಕುವ ವಿಚಾರದಲ್ಲಿ ಹಿಂದೂ-ಮುಸ್ಲಿಂ ಕೋಮುಗಳ ಮಧ್ಯೆ ಗಲಾಟೆ ಎದ್ದು ಅದು ಚಾಕು ಇರಿತದ ಹಿಂಸಾಚಾರಕ್ಕೆ ತಿರುಗಿ ಶಿವಮೊಗ್ಗದ ಪರಿಸ್ಥಿತಿ ಮತ್ತೊಮ್ಮೆ ನಿಗಿನಿಗಿ ಕೆಂಡದಂತಾಗಿದೆ. 

published on : 17th August 2022

ಕರಾವಳಿಯಲ್ಲಿ ನಿರ್ಬಂಧ ಸಡಿಲಿಕೆ: ನೈಟ್ ಕರ್ಫ್ಯೂ ತೆರವು, ಸೆಕ್ಷನ್ 144 ಮುಂದುವರಿಕೆ: ಡಿಸಿ ಕೆ.ವಿ. ರಾಜೇಂದ್ರ

ಕರಾವಳಿಯಲ್ಲಿ ನಡೆದಿದ್ದ ಅಹಿತಕರ ಘಟನೆಗಳು ಮತ್ತು ಸರಣಿ ಹತ್ಯೆಗಳ ಬಳಿಕ ಹೇರಲಾಗಿದ್ದ ನಿರ್ಬಂಧಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಅವರು ಸಡಿಲಿಸಿದ್ದಾರೆ.

published on : 7th August 2022

ಫಾಜಿಲ್ ಯಾವುದೇ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರಲಿಲ್ಲ; ಮಂಗಳೂರಿನಲ್ಲಿ 144 ಸೆಕ್ಷನ್‌ ಜಾರಿ: ಪೊಲೀಸ್ ಆಯುಕ್ತ

ಗುರುವಾರ ರಾತ್ರಿ ಸುರತ್ಕಲ್‌ನಲ್ಲಿ ಕೊಲೆಯಾದ ಫಾಜಿಲ್ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಶುಕ್ರವಾರ ಹೇಳಿದ್ದಾರೆ.

published on : 29th July 2022

ಸುರತ್ಕಲ್ ಫಾಜಿಲ್ ಕೊಲೆ: 4 ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ; ಹಲವು ಆಯಾಮಗಳಲ್ಲಿ ತನಿಖೆ

ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣ ಸಂಬಂಧ ಪೊಲೀಸರಿಗೆ ಸಿಕ್ಕಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಈ ಕೊಲೆಯ ಹಿಂದೆ ಯಾವುದೇ ಕೋಮು ದ್ವೇಷವಿಲ್ಲ ಮತ್ತು ಇದು ಪ್ರತೀಕಾರದ ಕೊಲೆ ಅಲ್ಲ ಎನ್ನಲಾಗಿದೆ.

published on : 29th July 2022

ಕರಾವಳಿಯಲ್ಲಿ ಮತ್ತೊಂದು ಕೊಲೆ: 4 ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ, ಮದ್ಯದಂಗಡಿ ಬಂದ್!

ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೊಂದು ಕೊಲೆಯಾದ ಬೆನ್ನಲ್ಲೇ ಮಂಗಳೂರಿನ 4 ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

published on : 28th July 2022

ವಿಹೆಚ್'ಪಿಯಿಂದ 'ಮೂಲ ಮಂದಿರ ಚಲೋ'ಗೆ ಕರೆ: ಶ್ರೀರಂಗಪಟ್ಟಣದಲ್ಲಿ ಸೆಕ್ಷನ್ 144 ಜಾರಿ, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಶನಿವಾರ ಆಂಜನೇಯಸ್ವಾಮಿ ಮೂಲ ಮಂದಿರ ಚಲೋಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಸೆಕ್ಷನ್ 144 ಜಾರಿ ಗೊಳಿಸಲಾಗಿದೆ.

published on : 4th June 2022

ಮಂಗಳೂರು: ಮಳಲಿಯಲ್ಲಿರುವುದು ದರ್ಗಾವೋ, ದೇಗುಲವೋ?; ದೈವ ಸಾನಿಧ್ಯ ಪತ್ತೆಗೆ ಇಂದು ತಾಂಬೂಲ ಪ್ರಶ್ನೆ, ಮಸೀದಿ ಸುತ್ತಮುತ್ತ ಸೆಕ್ಷನ್ 144 ಜಾರಿ

ಮಂಗಳೂರಿನ ಹೊರವಲಯದ ಮಳಲಿ ಮಸೀದಿ ನವೀಕರಣ ವೇಳೆ ದೇವಾಲಯ ಮಾದರಿಯ ಕಂಬ,. ವಿನ್ಯಾಸ ಇತ್ಯಾದಿ ಪತ್ತೆಯಾದ ಹಿನ್ನೆಲೆಯಲ್ಲಿ ದೈವ ಸಾನಿಧ್ಯ ಪತ್ತೆಗಾಗಿ ಬುಧವಾರ ಬೆಳಿಗ್ಗೆ 8 ಗಂಟೆಯಿಂದ ತಾಂಬೂಲ ಪ್ರಶ್ನೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಯಾವುದೇ ರೀತಿಯ ಅಹಿತಕರ ವಾತಾವರಣ...

published on : 25th May 2022

ಹುಬ್ಬಳ್ಳಿ ಗಲಭೆ ಪ್ರಕರಣ: 88 ಮಂದಿ ಬಂಧನ, ಸೆಕ್ಷನ್ 144 ಮುಂದುವರಿಕೆ

ಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್​ ವಿರೋಧಿಸಿ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಕಾರ್ಪೊರೇಟರ್ ಪತಿ ಸೇರಿದಂತೆ ಇದುವರೆಗೆ 88 ಮಂದಿಯನ್ನು ಬಂಧಿಸಲಾಗಿದೆ. 

published on : 18th April 2022

ಹಿಜಾಬ್ ವಿವಾದ: ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳ ಸಮೀಪ ಮಾರ್ಚ್ 8ರ ತನಕ ಸೆಕ್ಷನ್ 144 ವಿಸ್ತರಣೆ

ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರದ ತನಕ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿತ್ತು. 

published on : 21st February 2022

ಹಿಜಾಬ್ ವಿವಾದ: ಉಡುಪಿಯ ಎಲ್ಲಾ ಪ್ರೌಢ ಶಾಲಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಮರಕ್ಕೆ ಕಡಿವಾಣ ಹಾಕಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆ ಎಲ್ಲಾ ಪ್ರೌಢ ಶಾಲಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಆದೇಶಿಸಿದ್ದಾರೆ.

published on : 13th February 2022

ಹಿಜಾಬ್- ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ

ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿಜಾಬ್ – ಕೇಸರಿ ಹೋರಾಟದ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗಿದ್ದು, ಕಲ್ಲು ತೂರಾಟ ನಡೆದ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

published on : 8th February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9