• Tag results for Sedition Case

ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್‌ಶೀಟ್ ಸಲ್ಲಿಸಲು ವಿಳಂಬ: ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್‌ಪೆಕ್ಟರ್ ಅಮಾನತು

ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ವಿಳಂಬ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಓರ್ವರನ್ನು ಅಮಾನತು ಮಾಡಲಾಗಿದೆ.

published on : 12th June 2020

ದೇಶದ್ರೋಹ ಪ್ರಕರಣ: ಆರ್ದ್ರಾಗೆ ಜಾಮೀನು

ಬೆಂಗಳೂರು ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಫ್ರೀ ಕಾಶ್ಮೀರ ಫಲಕ ಪ್ರದರ್ಶಿಸಿ ಬಂಧನಕ್ಕೊಳಗಾಗಿದ್ದ ಆರ್ದ್ರಾಗೆ ಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ.

published on : 24th March 2020

ದೇಶದ್ರೋಹ ಕೇಸು: ಅಮೂಲ್ಯ ಲಿಯೊನಾ ಬಂಧನ ಅವಧಿ ಮಾ.5ರವರೆಗೆ ವಿಸ್ತರಣೆ 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ರ್ಯಾಲಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಬಂಧಿತರಾಗಿರುವ ವಿದ್ಯಾರ್ಥಿನಿ ಅಮೂಲ್ಯ ಲಿಯೊನಾರ ನ್ಯಾಯಾಂಗ ಬಂಧನ ಅವಧಿ ಮಾರ್ಚ್ 5ರವರೆಗೆ ವಿಸ್ತರಣೆಯಾಗಿದೆ.

published on : 1st March 2020

ದೇಶದ್ರೋಹ ಪ್ರಕರಣ: ಆರ್ದ್ರಾ ಜಾಮೀನು ವಿಚಾರಣೆ ಮುಂದೂಡಿಕೆ

ನಗರದ ಟೌನ್ ಹಾಲ್ ಬಳಿ ಫ್ರೀ ಕಾಶ್ಮೀರಿ  ಭಿತ್ತಿ ಫಲಕ ಪ್ರದರ್ಶಿಸಿದ ಆರ್ದ್ರಾ ಜಾಮೀನು ಕೋರಿ ಸಲ್ಲಿಸಿದ ವಿಚಾರಣೆಯನ್ನು ನ್ಯಾಯಾಲಯ ಮಾರ್ಚ್ 2ಕ್ಕೆ ಮುಂದೂಡಿದೆ.

published on : 29th February 2020

ದೇಶದ್ರೋಹ ಪ್ರಕರಣ:  ಬಂಧಿತ ಕಾಶ್ಮೀರಿ ವಿದ್ಯಾರ್ಥಿಗಳನ್ನು ಭೇಟಿಯಾದ ಬೆಂಗಳೂರು ವಕೀಲರು

ಬೆಂಗಳೂರು ವಕೀಲರ ಸಂಘದ ವಕೀಲರು ಶುಕ್ರವಾರ, ದೇಶದ್ರೋಹ ಪ್ರಕರಣದಲ್ಲಿ ಹಿಂಡಲಗಾ ಜೈಲಿನಲ್ಲಿರುವ ಕಾಶ್ಮೀರದ ಮೂರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಭೇಟಿ ಮಾಡಿದರು. 

published on : 28th February 2020

ಹುಬ್ಬಳ್ಳಿ ವಿದ್ಯಾರ್ಥಿಗಳ ಪರ ವಕೀಲರ ವಕಾಲತು ವಹಿಸಲು ವಕೀಲರ ನಕಾರ; ಹೈಕೋರ್ಟ್ ಅಸಮಾಧಾನ

ಪಾಕಿಸ್ತಾನ ಜಿಂದಾಬಾದ್‌' ಎಂದು ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿರುವ ಹುಬ್ಬಳ್ಳಿಯ ಕೆಎಲ್‌ಇ ಎಂಜಿನಿಯರಿಂಗ್ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಲು ನಿರಾಕರಿಸಿದ ಹುಬ್ಬಳ್ಳಿ ವಕೀಲರ ಸಂಘದ ನಡೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

published on : 27th February 2020

ಅಮೂಲ್ಯ ಎನ್ಕೌಂಟರ್ ಮಾಡಿದವರಿಗೆ ರೂ.10 ಲಕ್ಷ ಇನಾಮು: ರಾಮಸೇನೆ ಮುಖಂಡ 

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಿಎಎ ಮತ್ತು ಎನ್ಆರ್'ಸಿ ವಿರುದ್ಧ ನಡೆದ ಪ್ರತಿಭಟನೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ ಅವರನ್ನು ಬಿಡುಗಡೆ ಮಾಡಿದರೆ ನಾವು ಎನ್ಕೌಂಟರ್ ಮಾಡುತ್ತೇವೆ, ಅಷ್ಟೇ ಅಲ್ಲ ಅವರನ್ನು ಎನ್ಕೌಂಟರ್ ಮಾಡಿದವರಿಗೆ ರೂ.10 ಲಕ್ಷ ಬಹುಮಾನ ಕೊಡುತ್ತೇವೆಂದು ಶ್ರೀರಾಮಸೇನೆ ಮುಖಂಡ ಸಂಜೀವ ಮರಡಿ ವಿವಾದಾತ್ಮಕ ಘೋಷಣೆ ಮಾಡಿದ್ದಾರೆ. 

published on : 23rd February 2020

ಮಾರ್ಚ್ 5ರವರೆಗೆ ಆರ್ದ್ರಾಗೆ ನ್ಯಾಯಾಂಗ ಬಂಧನ

ಪ್ರತಿಭಟನೆ ವೇಳೆ ಕಾಶ್ಮೀರ ಮುಕ್ತ ಎಂಬ ಬರಹವುಳ್ಳ ಭಿತ್ತಿ ಪತ್ರ ಪ್ರದರ್ಶಿಸಿದ ಯುವತಿ ಆರ್ದ್ರಾಗೆ ಮಾರ್ಚ್ 5ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

published on : 21st February 2020

ಮಂಗಳೂರು ಗೋಲಿಬಾರ್ ಮತ್ತು ದೇಶದ್ರೋಹ ಕೇಸ್ ಪ್ರಕರಣ: ವಿಧಾನಸಭೆಯಲ್ಲಿ ಕೋಲಾಹಲ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್‌ ಹಾಗೂ ಬೀದರ್‌ ಶಾಹೀನ್‌ ಕಾಲೇಜು ವಿದ್ಯಾರ್ಥಿನಿ, ಮುಖ್ಯ ಶಿಕ್ಷಕಿ ಮೇಲೆ ದೇಶದ್ರೋಹ ಪ್ರಕರಣ ದಾಖಲು ವಿಚಾರವನ್ನು ವಿಪಕ್ಷ ಕಾಂಗ್ರೆಸ್‌ ಮಂಗಳವಾರ ವಿಧಾನಸಭೆಯಲ್ಲಿ ಪ್ರಸ್ತಾವಿಸಿದ್ದು, ಎರಡು ಸದನಗಳಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

published on : 19th February 2020

ಹುಬ್ಬಳ್ಳಿ: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಪ್ರಕರಣ: ಆರೋಪಿಗಳಿಗೆ ಮಾ.2 ವರೆಗೆ ನ್ಯಾಯಾಂಗ ಬಂಧನ

ಭಾರತ ಸರ್ಕಾರದ ವಿದ್ಯಾರ್ಥಿ ವೇತನ ಪಡೆದು ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿದ್ದು ಈ ಸಂಬಂಧ ಕೋರ್ಟ್ ಆರೋಪಿಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

published on : 17th February 2020

ಹುಬ್ಬಳ್ಳಿಯಲ್ಲಿ ಪಾಕ್ ಪರ ಘೋಷಣೆ: ದೇಶದ್ರೋಹ ಕೇಸ್ ಹಾಕಿದ್ದರೂ ಮೂವರು ವಿದ್ಯಾರ್ಥಿಗಳ ಬಿಡುಗಡೆ!

ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣದಡಿ ಬಂಧಿಸಲಾಗಿದ್ದ ಹುಬ್ಬಳ್ಳಿಯ ಕೆಎಲ್ಇ ಕಾಲೇಜಿನ ವಿದ್ಯಾರ್ಥಿಗಳನ್ನು ಪೊಲೀಸರು ಬಾಂಡ್ ಬರೆಸಿಕೊಂಡು ಬಿಡುಗಡೆ ಮಾಡಿದೆ.

published on : 16th February 2020

ದೇಶ ದ್ರೋಹದಡಿ ಶಾಲಾ ಮಕ್ಕಳ ವಿಚಾರಣೆ: ರಾಜ್ಯ ಸರ್ಕಾರ, ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಬೀದರ್ ನ ಶಾಹಿನ್ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ - ಸಿಎಎ ವಿರೋಧಿಸಿ ನಾಟಕ ಪ್ರದರ್ಶಿಸಿದ್ದ ವಿದ್ಯಾರ್ಥಿಗಳನ್ನು ದೇಶದ್ರೋಹ ಆರೋಪದಡಿ ವಿಚಾರಣೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

published on : 14th February 2020

ದೇಶದ್ರೋಹ ಪ್ರಕರಣ: ವಿಚಾರಣೆಗೆ ಹಾಜರಾಗದೆ ನ್ಯಾಯಾಂಗಕ್ಕೆ ಅಗೌರವ, ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಬಂಧನ

2015 ರ ದೇಶದ್ರೋಹ ಪ್ರಕರಣವೊಂದರಲ್ಲಿ ವಿಚಾರಣೆಗೆ ಹಾಜರಾಗಲು ವಿಫಲವಾದ ಕಾರಣ  ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಅವರನ್ನು ಗುಜರಾತ್‌ನ ಅಹಮದಾಬಾದ್ ಜಿಲ್ಲೆಯ ವಿರಮ್‌ಗಮ್ ತಾಲ್ಲೂಕಿನಲ್ಲಿ  ಶನಿವಾರ ರಾತ್ರಿ ಬಂಧಿಸಲಾಗಿದೆ.

published on : 18th January 2020

ಪಿಎಂ ಮೋದಿಗೆ ಬಹಿರಂಗ ಪತ್ರ: 49 ಗಣ್ಯರ ವಿರುದ್ಧದ ದೇಶದ್ರೋಹ ಪ್ರಕರಣ ಮುಚ್ಚಲು ಬಿಹಾರ ಪೊಲೀಸರು ಆದೇಶ

ಗುಂಪು ಹಲ್ಲೆಗೆ ಸಂಬಂಧಿಸಿದಂತೆ ಧ್ವನಿ ಎತ್ತಿ  ಮಧ್ಯಸ್ಥಿಕೆಗೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಗೆ ಬಹಿರಂಗವಾಗಿ ಪತ್ರ ಬರೆದಿದ್ದ 49 ಗಣ್ಯರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣವನ್ನು ಮುಚ್ಚಲು ಬಿಹಾರದ ಮುಜಾಫರ್ ಪುರ್ ಪೊಲೀಸರು ಆದೇಶಿಸಿದ್ದಾರೆ 

published on : 10th October 2019

ಗುಂಪು ಹತ್ಯೆ ಕುರಿತು ಮೋದಿಗೆ ಬಹಿರಂಗ ಪತ್ರ: ಅಪರ್ಣ, ರಾಮಚಂದ್ರ ಗುಹಾ ಸೇರಿ 49 ಗಣ್ಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ದೇಶದಲ್ಲಿ ಹೆಚ್ಚುತ್ತಿರುವ ಗುಂಪು ಹತ್ಯೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬಹಿರಂಗ ಪತ್ರ ಬರೆದಿದ್ದ ಮಣಿರತ್ನಂ, ರಾಮಚಂದ್ರ ಗುಹಾ, ಅಪರ್ಣ ಸೇನ್ ಸೇರಿದಂತೆ 49 ಗಣ್ಯರ ವಿರುದ್ಧ ಮುಜಾಫರ್ ಪುರದಲ್ಲಿ ಶುಕ್ರವಾರ ದೇಶದ್ರೋಹ ಪ್ರಕರಣ ದಾಖಲಾಗಿದೆ. 

published on : 4th October 2019
1 2 >