• Tag results for Serum Institute Of India

ಸೆರಂ ಇನ್ ಸ್ಟಿಟ್ಯೂಟ್ ನಿಂದ ಸೆಪ್ಟೆಂಬರ್‌ನಿಂದ ಸ್ಪುಟ್ನಿಕ್‌ ವಿ ಕೋವಿಡ್ ಲಸಿಕೆ ತಯಾರಿಕೆ: ವರದಿ

ಮುಂಬರುವ ಸೆಪ್ಟೆಂಬರ್‌ ತಿಂಗಳಿನಿಂದ ರಷ್ಯಾದ ಸ್ಪುಟ್ನಿಕ್‌ ವಿ ಕೋವಿಡ್ ಲಸಿಕೆ ತಯಾರಿಕೆ ಆರಂಭಿಸಲಾಗುತ್ತದೆ ಎಂದು ಸೆರಂ ಇನ್ ಸ್ಟಿಟ್ಯೂಟ್ ಮಾಹಿತಿ ನೀಡಿದೆ.

published on : 14th July 2021

ಸ್ಪುಟ್ನಿಕ್ ವಿ ಲಸಿಕೆ ತಯಾರಿಕೆಗೆ ಅನುಮತಿ ಕೋರಿದ ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ

ರಷ್ಯಾದ ಕೋವಿಡ್ ಲಸಿಕೆ ಸ್ಪುಟ್ನಿಕ್ ವಿ ಲಸಿಕೆ ತಯಾರಿಕೆಗೆ ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಸಂಸ್ಥೆ ಅನುಮತಿ ಕೋರಿ ಗುರುವಾರ ಭಾರತೀಯ ಔಷಧ ನಿಯಂತ್ರಣ ಮಹಾ ನಿರ್ದೇಶನಾಲಯಕ್ಕೆ (ಡಿಸಿಜಿಐ) ಅರ್ಜಿ ಸಲ್ಲಿಸಿದೆ.

published on : 3rd June 2021

ಇಷ್ಟಕ್ಕೂ ಏನಿದು 'ಇಂಡೆಮಿನಿಟಿ ಪ್ರೊಟೆಕ್ಷನ್'? ಲಸಿಕೆ ತಯಾರಿಕಾ ಸಂಸ್ಥೆಗಳ ವಾದವೇನು? ಸರ್ಕಾರದ ನಿಲುವೇನು?

ವಿದೇಶಿ ಲಸಿಕೆ ತಯಾರಕಾ ಸಂಸ್ಥೆಗಳಾದ ಫೈಜರ್ ಮತ್ತು ಮೊಡೆರ್ನಾ ಸಂಸ್ಥೆಗಳು ಭಾರತಕ್ಕೆ ಲಸಿಕೆ ಪೂರೈಕೆ ಮಾಡಲು 'ಇಂಡೆಮಿನಿಟಿ ಪ್ರೊಟೆಕ್ಷನ್ ಅಥವಾ ಕೋರ್ಟ್ ವಿಚಾರಣೆಯಿಂದ ರಕ್ಷಣೆ' ಕೇಳಿ ಹೊಸದೊಂದು ಚರ್ಚೆ ಹುಟ್ಟುಹಾಕಿವೆ.. ಇಷ್ಟಕ್ಕೂ ಏನಿದು 'ಇಂಡೆಮಿನಿಟಿ ಪ್ರೊಟೆಕ್ಷನ್'..?, ಲಸಿಕೆ  ತಯಾರಿಕಾ ಸಂಸ್ಥೆಗಳ ವಾದವೇನು? ಸರ್ಕಾರದ ನಿಲುವೇನು? ಇಲ್ಲಿದೆ ಉತ್ತರ.

published on : 3rd June 2021

ಜೂನ್‌ನಲ್ಲಿ 10 ಕೋಟಿ ಕೋವಿಶೀಲ್ಡ್ ಡೋಸ್ ಉತ್ಪಾದಿಸಿ ಪೂರೈಸುತ್ತೇವೆ: ಕೇಂದ್ರಕ್ಕೆ ಸೀರಮ್ ಇನ್‌ಸ್ಟಿಟ್ಯೂಟ್ ಪತ್ರ

ಜೂನ್‌ನಲ್ಲಿ ಒಂಬತ್ತರಿಂದ 10 ಕೋಟಿ ಕೋವಿಶೀಲ್ಡ್ ಡೋಸ್ ಗಳನ್ನು ಉತ್ಪಾದನೆ ಮಾಡಲು ಮತ್ತು ಪೂರೈಸಲು ಸಾಧ್ಯವಾಗಲಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸರ್ಕಾರಕ್ಕೆ ಮಾಹಿತಿ ನೀಡಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

published on : 30th May 2021

ಬ್ರಿಟನ್ ಗೆ ರಫ್ತಾಗಬೇಕಿದ್ದ 50 ಲಕ್ಷ ಡೋಸ್ ಕೋವಿಡ್ ಲಸಿಕೆ ಭಾರತದಲ್ಲೇ ಬಳಕೆಗೆ ಅನುಮತಿ!

ಬ್ರಿಟನ್ ಗೆ ರಫ್ತಾಗಬೇಕಿದ್ದ 50 ಲಕ್ಷ ಡೋಸ್ ಕೋವಿಡ್ ಲಸಿಕೆಯನ್ನು ಭಾರತದಲ್ಲೇ ಬಳಕೆ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದ್ದು, ಇದರಿಂದ ಭಾರತ ಸರ್ಕಾರದ 18 ವರ್ಷಕ್ಕೂ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಯೋಜನೆಗೆ ಬೆಂಬಲ ಲಭಿಸಿದಂತಾಗಿದೆ.

published on : 7th May 2021

ಬ್ರಿಟನ್‌ನಲ್ಲಿ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿರುವ ಸೀರಮ್ ಇನ್ಸ್ಟಿಟ್ಯೂಟ್ ಸಿಇಒ ಆದಾರ್ ಪೂನವಾಲಾ

ಬ್ರಿಟನ್‌ನಲ್ಲಿ ಲಸಿಕೆ ಉತ್ಪಾದನೆ, ಪ್ರಯೋಗ ಸೇರಿದಂತೆ ವಿವಿಧ ಚಟುವಟಿಕೆಗಳಿಗಾಗಿ ಭಾರತದ ಪುಣೆಯಲ್ಲಿರುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ. 

published on : 4th May 2021

'ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ರಾತ್ರೋರಾತ್ರಿ ಲಸಿಕೆ ಉತ್ಪಾದನೆ ದ್ವಿಗುಣಗೊಳಿಸಲು ಸಾಧ್ಯವಿಲ್ಲ': ಆದಾರ್ ಪೂನಾವಾಲ

ಕೋವಿಡ್ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸುವಂತೆ ನಿರಂತರವಾಗಿ ಕೇಳಿಬರುತ್ತಿರುವ ಒತ್ತಡಗಳಿಗೆ ತಿರುಗೇಟು ನೀಡಿರುವ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಸಿಇಒ ಆದಾರ್ ಪೂನಾವಾಲ ಅವರು, ರಾತ್ರೋ-ರಾತ್ರಿ ಲಸಿಕೆ ಉತ್ಪಾದನೆಯನ್ನು ದ್ವಿಗುಣ ಮಾಡಲು ಸಾಧ್ಯವಿಲ್ಲ ಎಂದು  ಹೇಳಿದ್ದಾರೆ.

published on : 3rd May 2021

11 ಕೋಟಿ ಕೋವಿಶೀಲ್ಡ್ ಲಸಿಕೆಗಾಗಿ ಕೇಂದ್ರದಿಂದ 1,732 ಕೋಟಿ ರೂ. ನಮಗೆ ತಲುಪಿದೆ: ಸೀರಮ್ ಕಂಪನಿ

ಮೇ, ಜೂನ್ ಮತ್ತು ಜುಲೈನಲ್ಲಿ ಕೋವಿಶೀಲ್ಡ್ ಲಸಿಕೆಯ 11 ಕೋಟಿ ಡೋಸ್‌ಗಳಿಗೆ ಏಪ್ರಿಲ್ 28ರಂದು ಕಂಪನಿಗೆ 1,732.50 ಕೋಟಿ ರೂಪಾಯಿಯನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ ಎಂಬ ಸರ್ಕಾರದ ಹೇಳಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ಸೋಮವಾರ ಅನುಮೋದಿಸಿದೆ.

published on : 3rd May 2021

ಕೋವಿಡ್ ಲಸಿಕೆಗಳನ್ನು ಖರೀದಿಸಲಿಲ್ಲ ಎಂಬ ಆರೋಪವನ್ನು ತಳ್ಳಿಹಾಕಿದ ಕೇಂದ್ರ

ಮೇ, ಜೂನ್ ಮತ್ತು ಜುಲೈ ತಿಂಗಳಲ್ಲಿ 11 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆಗಾಗಿ 1732.50 ಕೋಟಿ ರೂಪಾಯಿಗಳನ್ನು ಮುಂಗಡವಾಗಿ ಏಪ್ರಿಲ್ 28ರಂದೇ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

published on : 3rd May 2021

ಬೆದರಿಕೆ ಹಾಕುತ್ತಿರುವವರ ಹೆಸರು ಬಹಿರಂಗ ಪಡಿಸಿ: ಆದಾರ್ ಪೂನಾವಾಲಗೆ ಕಾಂಗ್ರೆಸ್ ಒತ್ತಾಯ

ಲಸಿಕೆ ವಿಚಾರವಾಗಿ ಬೆದರಿಕೆ ಹಾಕುತ್ತಿರುವವರ ಹೆಸರು ಬಹಿರಂಗಗೊಳಿಸಿ ಎಂದು ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆದಾರ್ ಪೂನಾವಾಲಗೆ ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

published on : 3rd May 2021

18 ವರ್ಷ ಮೇಲ್ಪಟ್ಟವರಿಗೂ ಲಸಿಕೆ; 'ಅತೀ ದೊಡ್ಡ ಜವಾಬ್ದಾರಿ ನನ್ನ ಮೇಲಿದೆ': ಆಧಾರ್ ಪೂನಾವಾಲ

18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಘೋಷಣೆ ಮಾಡಿದ್ದು ಎಲ್ಲ ಜವಾಬ್ದಾರಿ ನನ್ನ ಮೇಲಿದೆ ಎಂದು ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಆಧಾರ್ ಪೂನಾವಾಲ ಹೇಳಿದ್ದಾರೆ.

published on : 1st May 2021

ಲಸಿಕೆ ಉತ್ಪಾದನೆ ಹೆಚ್ಚಳಕ್ಕೆ ಕ್ರಮ: ಉತ್ಪಾದಕರಿಗೆ ಕೇಂದ್ರದಿಂದ 4,500 ಕೋಟಿ ರೂಪಾಯಿ ಆರ್ಥಿಕ ನೆರವು

ಕೊರೋನಾ ಲಸಿಕೆಯನ್ನು ಮೇ.1 ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ನೀಡುವುದಕ್ಕಾಗಿ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದ್ದು, ಲಸಿಕೆ ತಯಾರಿಕೆ ಹೆಚ್ಚಳಕ್ಕೆ ಕ್ರಮ ಕೈಗೊಂಡಿದೆ. 

published on : 20th April 2021

ಕೋವಿಡ್ ಲಸಿಕೆ ಉತ್ಪಾದನೆ ಹೆಚ್ಚಳಕ್ಕೆ ಕಚ್ಚಾ ವಸ್ತುಗಳ ರಫ್ತು ನಿಷೇಧ ತೆಗೆಯಿರಿ: ಅಮೆರಿಕ ಅಧ್ಯಕ್ಷರಿಗೆ ಆದಾರ್ ಪೂನವಾಲಾ ಆಗ್ರಹ

ಕೋವಿಡ್ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಲು ನೆರವಾಗುವಂತೆ ಕಚ್ಚಾ ವಸ್ತುಗಳ ರಫ್ತಿಗೆ ಅಮೆರಿಕ ವಿಧಿಸಿರುವ ನಿರ್ಬಂಧವನ್ನು ತೆಗೆದುಹಾಕಬೇಕಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸಿಇಒ ಆದಾರ್ ಪೂನವಾಲಾ ಹೇಳಿದ್ದಾರೆ.

published on : 16th April 2021

ಅಗ್ನಿ ಅವಘಡದಿಂದ ರೂ.1 ಸಾವಿರ ಕೋಟಿ ನಷ್ಟ: ಕೊರೋನಾ ಲಸಿಕಾ ತಯಾರಿಕಾ ಸಂಸ್ಥೆ ಸೀರಮ್ ಹೇಳಿಕೆ!

ಕೋವಿಶೀಲ್ಡ್ ಲಸಿಕೆ ತಯಾರಿಸುವ ಮೂಲಕ ಜಗತ್ತಿನ ಗಮನ ಸೆಳೆದಿರುವ ಮಹಾರಾಷ್ಟ್ರದ ಪುಣೆಯಲ್ಲಿನ ಸೀರಮ್ ಕಂಪನಿಯಲ್ಲಿ ಗುರುವಾರ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ ರೂ.1 ಕೋಟಿ ನಷ್ಟ ಎದುರಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

published on : 23rd January 2021

ಪುಣೆ: ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಘಟಕದಲ್ಲಿ ಭಾರಿ ಅಗ್ನಿ ಅವಘಡ, ಐವರ ಸಾವು!

ದೇಶದಲ್ಲಿ ಕೋವಿಡ್ ಲಸಿಕೆ ತಯಾರಿಕೆಯ ಹೊಣೆ ಹೊತ್ತಿರುವ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಪುಣೆಯ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ಐವರು ಮೃತಪಟ್ಟಿದ್ದಾರೆ.

published on : 21st January 2021
1 2 > 

ರಾಶಿ ಭವಿಷ್ಯ