• Tag results for Shivakumar

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಮತ್ತೆ ಮುಂದೂಡಿಕೆ: ರಾಜಕೀಯ ಹುನ್ನಾರವೆಂದ ಡಿಕೆಶಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ‌‌.ಶಿವಕುಮಾರ್ ಅಧಿಕೃತವಾಗಿ ಅಧಿಕಾರ ಸ್ವೀಕರಿಸುವ ಕಾರ್ಯಕ್ರಮ ಮತ್ತೆ ಮುಂದೂಡಿಕೆಯಾಗಿದೆ.

published on : 1st June 2020

ಬಿಜೆಪಿಯ ಹೇಳಿಕೆಗಳಿಗೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮಾತ್ರ ಪ್ರತಿಕ್ರಿಯಿಸಲು ಫರ್ಮಾನು!

ಬಿಜೆಪಿಯಲ್ಲಿ ಭುಗಿಲೆದ್ದಿರುವ ಅಸಮಾಧಾನ, ಬಿಜೆಪಿ ನಾಯಕರ ಹೇಳಿಕೆಗೆ ತಾವು ಹಾಗೂ ವಿಪಕ್ಷ ನಾಯಕರು ಮಾತ್ರ ಪ್ರತಿಕ್ರಿಯೆ ನೀಡಬೇಕೇ ಹೊರತು ಕಾರ್ಯಕರ್ತರಾಗಲೀ, ಉಳಿದ ನಾಯಕರಾಗಲೀ ಯಾರೂ ಹೇಳಿಕೆ ಕೊಡುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಫರ್ಮಾನು ಹೊರಡಿಸಿದ್ದಾರೆ.

published on : 30th May 2020

ಮೋದಿ ಆಡಳಿತ ಭಾರತವನ್ನು ಶೂನ್ಯಸ್ಥಿತಿಗೆ ಕೊಂಡೊಯ್ದಿದೆ: ಡಿ.ಕೆ. ಶಿವಕುಮಾರ್ 

ಕಳೆದ 50 ವರ್ಷಗಳಲ್ಲಿ ನಿರ್ಮಾಣವಾಗಿದ್ದ ಹೊಸ ಭಾರತವನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಆಡಳಿತಾವಧಿಯಲ್ಲಿ ಶೂನ್ಯಸ್ಥಿತಿಗೆ ಕೊಂಡೊಯ್ದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.  

published on : 30th May 2020

ಅಧಿಕಾರಕ್ಕಾಗಿ ಪಕ್ಷಾಂತರದ ಪ್ರವೃತ್ತಿಗೆ ಕಡಿವಾಣ ಹಾಕಬೇಕು: ಡಿ.ಕೆ. ಶಿವಕುಮಾರ್

ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವುದು, ಪಕ್ಷಾಂತರ ಮಾಡಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ನಂತರ ವಾಪಸ್ ತೆಗೆದುಕೊಳ್ಳುವುದು, ಒಂದು ಪಕ್ಷದಲ್ಲಿದ್ದು, ಮತ್ತೊಂದು ಪಕ್ಷವನ್ನು ಅಧಿಕಾರಕ್ಕೆ ತರಲು ರಾಜೀನಾಮೆ ನೀಡುವ ಪ್ರವೃತ್ತಿಗೆ ಕಡಿವಾಣ ಹಾಕದಿದ್ದರೆ  ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ. ಯಾರು ಗೆಲ್ಲುತ್ತಾರೋ ಅವರು ಅಧಿಕಾರ ಪಡೆಯಲಿ, ಆದರೆ ಅಧಿಕಾರ ಹಸ್ತಾಂತರಕ್ಕೆ ಪಕ್ಷಾಂತರ ಮಾಡುವುದು ವ್ಯವಸ್ಥೆಗೆ ವಿರುದ್ಧವಾದುದು. ಇದಕ್ಕೆ ಅವಕಾಶ ನೀಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಪ್ರತಿಪಾದಿಸಿದ್ದಾರೆ.

published on : 28th May 2020

ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಲು ಡಿ.ಕೆ. ಶಿವಕುಮಾರ್ ಆಸಕ್ತಿ?

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ರಾಜ್ಯಸಭೆಗೆ ಕಳುಹಿಸಲು ಒಂದು ಕಾಲದ ಅವರ ಸಾಂಪ್ರದಾಯಿಕ ಎದುರಾಳಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಂತ್ರಗಾರಿಕೆ ರೂಪಿಸಿದ್ದಾರೆ. 

published on : 26th May 2020

ಸಿಎಂ ಯೋಗಿ ಆದಿತ್ಯನಾಥ ವಜಾಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹ

ಉತ್ತರ ಪ್ರದೇಶ ಕಾರ್ಮಿಕರು ಅನ್ಯ ರಾಜ್ಯಗಳಿಗೆ ಹೋಗಿ ಕೆಲಸ ಮಾಡುವಂತಿಲ್ಲ ಎಂದು ನಿರ್ದೇಶಿಸುವ ಮೂಲಕ ಈ ದೇಶದ ಒಕ್ಕೂಟ ವ್ಯವಸ್ಥೆ ಹಾಗೂ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತಂದಿರುವ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ವಜಾ ಮಾಡಬೇಕು.

published on : 26th May 2020

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೀಡುಬಿಟ್ಟ ವಲಸಿಗರು: ಕಾರ್ಮಿಕರ ಸಂಕಷ್ಟಕ್ಕೆ ಮರುಕಪಟ್ಟ ಡಿಕೆಶಿ

ಲಾಕ್‌ಡೌನ್‌ನಿಂದ ಸಿಲುಕಿಕೊಂಡು ಇದೀಗ ತಮ್ಮ ಊರುಗಳಿಗೆ ವಾಪಸ್ಸಾಗಲು ಹೆಸರು ನೋಂದಾವಣಿಗಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಮಾಯಿಸಿದ್ದ ಹೊರ ರಾಜ್ಯಗಳ ವಲಸಿಗರನ್ನು ಇಂದು ಬೆಳಗ್ಗೆ ಭೇಟಿಯಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಿದರು.

published on : 23rd May 2020

ಜೂನ್ 7 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ ಪದಗ್ರಹಣ

ಕೊರೋನಾ ಲಾಕ್‌ ಡೌನ್ ‌ನಿಂದಾಗಿ ಮುಂದೂಡಲ್ಪಟ್ಟಿದ್ದ ಡಿ‌.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪದಗ್ರಹಣ ಕಾರ್ಯಕ್ರಮಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.

published on : 23rd May 2020

ಜನರು ಬಹಳ ಕಷ್ಟದಲ್ಲಿದ್ದಾರೆ, ಸಹಾಯ ಮಾಡಲು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ: ಡಿ.ಕೆ. ಶಿವಕುಮಾರ್

ಕೋವಿಡ್-19 ಬಿಕ್ಕಟ್ಟನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವಕಾಶಕ್ಕೆ ಬಳಸುತ್ತಿರುವಂತೆ ಕಾಣುತ್ತಿದೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರ ಯಶಸ್ಸಿನ ಎಳೆಯನ್ನು ತೆಗೆದುಕೊಂಡು ಕೊರೋನಾ ಸಂದರ್ಭದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಜನರಿಗೆ ಹತ್ತಿರವಾಗಲು ಡಿ ಕೆ ಶಿವಕುಮಾರ್ ನೋಡುತ್ತಿದ್ದಾರೆ.

published on : 20th May 2020

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಭಾನುವಾರದ ಲಾಕ್ ಡೌನ್ ಅಡ್ಡಿ!

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡುವ ಸಮಾರಂಭದ ಮೇಲೆ ಭಾನುವಾರದ ಸಂಪೂರ್ಣ ಲಾಕ್ ಡೌನ್ ಕರಿನೆರಳಾಗಿ ಪರಿಣಮಿಸಿದೆ.

published on : 19th May 2020

ಮರೆಯಾದ ವೈರತ್ವ: ಡಿಕೆ ಶಿವಕುಮಾರ್ ಜೊತೆ ಹುಟ್ಟುಹಬ್ಬದ ಊಟ ಸವಿದ ದೇವೇಗೌಡರು!

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜೆಡಿಎಸ್ ಪರಮೋಚ್ಚ ನಾಯಕ ಎಚ್.ಡಿ ದೇವೇಗೌಡ ಈ ಬಾರಿ ಹುಟ್ಟುಹಬ್ಬ ಸರಳವಾಗಿ ಆಚರಿಸಿಕೊಂಡರು.  ಈ ಬಾರಿ ತಾವು ಹುಟ್ಟು ಹಬ್ಬ ಆಚರಿಸಿಕೊಳ್ಳುವುದಿಲ್ಲ, ಹೀಗಾಗಿ ಬೆಂಬಲಿಗರು ಮತ್ತು ಅಭಿಮಾನಿಗಳು ಮನೆ ಹತ್ತಿರ ಬರಬಾರದೆಂದು ದೇವೇಗೌಡರು  ಪತ್ರದ ಮೂಲಕ ಮನವಿ ಮಾಡಿದ್ದರು.

published on : 19th May 2020

ಪ್ರತೀಯೊಬ್ಬ ವಲಸಿಗನನ್ನು ತಲುಪುವುದೇ ನಮ್ಮ ಪ್ರಮುಖ ಆದ್ಯತೆ: ಡಿ.ಕೆ.ಶಿವಕುಮಾರ್

ರಾಜ್ಯದಲ್ಲಿರುವ ಪ್ರತೀಯೊಬ್ಬ ವಲಸಿಗನನ್ನು ತಲುಪುವುದೇ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ. 

published on : 17th May 2020

ಡಿಕೆ ಬ್ರದರ್ಸ್ ವಿರುದ್ಧ ಎಚ್ ಸಿ ಬಾಲಕೃಷ್ಣ ಗರಂ: ಕಮಲ ಹಿಡಿಯಲಿದ್ದಾರಾ ಕೈ ನಾಯಕ?

ನನಗೆ ನನ್ನ ಕ್ಷೇತ್ರದ ಜನರಷ್ಟೇ ಮುಖ್ಯ, ಪಕ್ಷದ ನಾಯಕರಲ್ಲ ಎಂದು ಕಾಂಗ್ರೆಸ್‌ನ ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಪಕ್ಷದ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 14th May 2020

ಜನ್ಮ ದಿನಕ್ಕೆ ಶುಭಾಶಯ ಕೋರಲು ಆಗಮಿಸದಂತೆ ಡಿಕೆಶಿ ಮನವಿ

ಮೇ 15ರಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ಹುಟ್ಟುಹಬ್ಬ. ಅಂದು ತಾವು  ಊರಲ್ಲಿ ಇಲ್ಲದಿರುವುದರಿಂದ ಜನ್ಮದಿನದ ಶುಭಾಶಯ ಕೋರಲು ಯಾರೂ  ಬರಬಾರದೆಂದು ಅವರು ಮನವಿ ಮಾಡಿದ್ದಾರೆ. 

published on : 10th May 2020

ಹೊರ ರಾಜ್ಯದ ಕನ್ನಡಿಗರನ್ನೂ ತಾಯ್ನಾಡಿಗೆ ಕರೆಯಿಸಿಕೊಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಹೊರದೇಶ, ಹೊರರಾಜ್ಯದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ಮರಳಿ ಕರ್ನಾಟಕಕ್ಕೆ ಬರಲು ಲಕ್ಷಾಂತರ ಮಂದಿ ಮನವಿ ಮಾಡಿಕೊಂಡಿದ್ದು, ರಾಜ್ಯ ಸರ್ಕಾರ ಇದಕ್ಕೆ ಸ್ಪಂದಿಸದೇ ಇರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

published on : 9th May 2020
1 2 3 4 5 6 >