• Tag results for Supreme Court

ಪ್ರತಿಯೊಬ್ಬರಿಗೂ ತಮ್ಮ ಮತ, ಧರ್ಮ ಅನುಸರಿಸಲು ಹಕ್ಕಿದೆ: ಸುಪ್ರೀಂ ಕೋರ್ಟ್

ಭಾರತ ಮತ ನಿರಪೇಕ್ಷ ದೇಶವಾಗಿದ್ದು ಪ್ರತಿಯೊಬ್ಬರಿಗೂ ತಮ್ಮ ತಮ್ಮ ಮತಗಳನ್ನು ಅನುಸರಿಸುವ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

published on : 5th December 2022

ನೋಂದಾಯಿತರು ಆಸ್ಪತ್ರೆ-ಔಷಧಾಲಯ ನಿರ್ವಹಿಸುವಂತೆ ನೋಡಿಕೊಳ್ಳುವುದು ಫಾರ್ಮಸಿ ಕೌನ್ಸಿಲ್, ಸರ್ಕಾರದ ಕರ್ತವ್ಯ: ಸುಪ್ರೀಂ

ನಕಲಿ ಆಸ್ಪತ್ರೆಗಳು, ಔಷಧಾಲಯಗಳು ಮತ್ತು ಮೆಡಿಕಲ್ ಸ್ಟೋರ್‌ಗಳನ್ನು ನಡೆಸುವುದು ಅಂತಿಮವಾಗಿ ನಾಗರಿಕರ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಟೀಕಿಸಿದ ಸುಪ್ರೀಂ ಕೋರ್ಟ್, ಆಸ್ಪತ್ರೆಗಳು/ಮೆಡಿಕಲ್ ಸ್ಟೋರ್‌ಗಳನ್ನು ನೋಂದಾಯಿತರು ನಿರ್ವಹಿಸುವಂತೆ ನೋಡಿಕೊಳ್ಳುವುದು ಫಾರ್ಮಸಿ ಕೌನ್ಸಿಲ್ ಮತ್ತು ರಾಜ್ಯ ಸರ್ಕಾರಗಳ ಕರ್ತವ್ಯ ಎಂದು ಅಭಿಪ್ರಾಯಪಟ್ಟಿದೆ. 

published on : 3rd December 2022

ನಮ್ಮದು ಸ್ತ್ರೀ ಸಂವೇದಿ ಸಂವಿಧಾನ; ಸಮಾನ ಮತದಾನದ ಹಕ್ಕಿನಿಂದಾಗಿ ಮಹಿಳೆಯರ ಸಬಲೀಕರಣ: ಸಿಜೆಐ ಚಂದ್ರಚೂಡ್

ಭಾರತದ ಸಂವಿಧಾನವು ಸ್ತ್ರೀ ಸಂವೇದಿ ಸಂವಿಧಾನವಾಗಿದ್ದು, ಇದು ಭಾರತೀಯ ಕಲ್ಪನೆಯ ನೈಜ ಉತ್ಪನ್ನವಾಗಿದೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹೇಳಿದ್ದಾರೆ.

published on : 3rd December 2022

ನಿವೃತ್ತಿಯ ನಂತರ ವ್ಯವಸ್ಥೆಯನ್ನು ಟೀಕಿಸುವುದು ಕೆಲವರಿಗೆ ಫ್ಯಾಶನ್ ಆಗಿದೆ: ಕೊಲಿಜಿಯಂ ಮಾಜಿ ಸದಸ್ಯರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ವ್ಯವಸ್ಥೆಯನ್ನು ಟೀಕಿಸುವ ಕೆಲವು ಮಾಜಿ ಕೊಲಿಜಿಯಂ ಸದಸ್ಯರನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ನ್ಯಾಯಾಧೀಶರು ನಿವೃತ್ತಿಯ ನಂತರ ಈ ರೀತಿ ಟೀಕಿಸುವುದು ಇತ್ತೀಚೆಗೆ ಫ್ಯಾಶನ್ ಆಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದೆ.

published on : 3rd December 2022

ಇಸ್ರೋ ಬೇಹುಗಾರಿಕೆ ಪ್ರಕರಣ: ನಾಲ್ವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಕೇರಳ ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

1994ರ ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸೇರಿದಂತೆ ನಾಲ್ವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಕೇರಳ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

published on : 2nd December 2022

ತಪ್ಪಿನ ವಿರುದ್ಧ ಮತ್ತೆ ಹೋರಾಡುತ್ತೇನೆ: ಅತ್ಯಾಚಾರಿಗಳ ಬಿಡುಗಡೆ ಬಗ್ಗೆ ಬಿಲ್ಕಿಸ್ ಬಾನೊ

ತಪ್ಪಿನ ವಿರುದ್ಧ, ಸರಿಯಾದುದ್ದರ ಪರವಾಗಿ ಮತ್ತೆ ಹೋರಾಡುತ್ತೇನೆ ಎಂದು ಅತ್ಯಾಚಾರಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಬಿಲ್ಕಿಸ್ ಬಾನು ಹೇಳಿದ್ದಾರೆ. 

published on : 1st December 2022

ವೈವಾಹಿಕ ವಿವಾದ ಪ್ರಕರಣಗಳಿಗಾಗಿ ಸುಪ್ರೀಂ ಕೋರ್ಟ್ ನಿಂದ ಮಹಿಳಾ ಪೀಠ ರಚನೆ

ವೈವಾಹಿಕ ವಿವಾದ, ಜಾಮೀನು ವಿಚಾರ ಸೇರಿದಂತೆ ಮತ್ತಿತರ ಅರ್ಜಿಗಳ ವಿಚಾರಣೆಗಾಗಿ ಕರ್ನಾಟಕದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ. ವಿ. ನಾಗರತ್ನ ಸೇರಿದಂತೆ ಎಲ್ಲಾ ಮಹಿಳೆಯರನ್ನೊಳಗೊಂಡ ಪೀಠವೊಂದನ್ನು ಮುಖ್ಯ ನ್ಯಾಯಮೂರ್ತಿ ಡಿ. ವೈ.ಚಂದ್ರಚೂಡ್ ಇಂದು ರಚಿಸಿದ್ದಾರೆ.

published on : 1st December 2022

ಗಡಿ ವಿವಾದ ಕುರಿತು ರಾಜ್ಯದ ನಿಲುವು ಸ್ಪಷ್ಟ, ಸಾಂವಿಧಾನಿಕ ಮತ್ತು ಕಾನೂನು ಬದ್ಧವಾಗಿದೆ: ಸಿಎಂ ಬೊಮ್ಮಾಯಿ

ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದ ಸಂಬಂಧ ರಾಜ್ಯದ ನಿಲುವು ಸ್ಪಷ್ಟವಾಗಿದ್ದು, ನಮ್ಮ ನಿಲುವು ಸಾಂವಿಧಾನಿಕ ಹಾಗೂ ಕಾನೂನು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ.

published on : 1st December 2022

ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೊ ಮೇಲ್ಮನವಿ: ಅರ್ಜಿ ವಿಚಾರಣೆಗೆ ಸುಪ್ರೀಂ ಪರಿಗಣನೆ

2002ರ ಗುಜರಾತ್ ಗಲಭೆಯ ವೇಳೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಪರಿಗಣಿಸಿದೆ.

published on : 30th November 2022

ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ: ಸುಪ್ರೀಂ ಕೋರ್ಟ್ ಗೆ ಸಂತ್ರಸ್ಥೆ ಬಿಲ್ಕಿಸ್ ಬಾನೋ ಮೇಲ್ಮನವಿ

2002ರ ಗೋಧ್ರಾ ಹತ್ಯಾಕಾಂಡ ಸಂದರ್ಭ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೋ ಇಂದು ಬುಧವಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. 

published on : 30th November 2022

'ದಿ ಕಾಶ್ಮೀರ್ ಫೈಲ್ಸ್' ವಿರುದ್ಧ ಐಎಫ್ ಎಫ್ಐ ಜ್ಯೂರಿ ಮುಖ್ಯಸ್ಥ ಅವಹೇಳನಕಾರಿ ಟೀಕೆ: ಸುಪ್ರೀಂ ಕೋರ್ಟ್ ವಕೀಲರಿಂದ ಕೇಸು ದಾಖಲು

'ದಿ ಕಾಶ್ಮೀರ್ ಫೈಲ್ಸ್' ಚಿತ್ರದ  ಬಗ್ಗೆ ಜ್ಯೂರಿ ಮುಖ್ಯಸ್ಥರು ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ತೀವ್ರ ಟೀಕೆಗಳು ಕೇಳಿಬರುತ್ತಿರುವುದರ ಮಧ್ಯೆ ಸುಪ್ರೀಂ ಕೋರ್ಟ್ ನಲ್ಲಿ ಅಭ್ಯಾಸನಿರತ ವಕೀಲರೊಬ್ಬರು ಮಂಗಳವಾರ ಗೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

published on : 29th November 2022

ಗಡಿ ವಿವಾದ: ಸುಪ್ರೀಂ ನಲ್ಲಿ ನಾಳೆ ವಿಚಾರಣೆ, ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆಯಿದೆ- ಸಿಎಂ ಬೊಮ್ಮಾಯಿ

ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದ್ದು, ಈ  ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ, ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 29th November 2022

ಧಾರ್ಮಿಕ ಸ್ವಾತಂತ್ರ್ಯವೆಂದರೆ ಇತರರನ್ನು ಮತಾಂತರ ಮಾಡುವ ಹಕ್ಕು ಅಲ್ಲ: ಸುಪ್ರೀಂ ಗೆ ಕೇಂದ್ರ

ಧಾರ್ಮಿಕ ಸ್ವಾತಂತ್ರ್ಯವೆಂದರೆ ಇತರರರನ್ನು ಮತಾಂತರ ಮಾಡುವುದಕ್ಕೆ ಇರುವ ಹಕ್ಕು ಅಂತ ಅಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಹೇಳಿದೆ.

published on : 28th November 2022

ಹೀಗಾಗಬಾರದಿತ್ತು: ಕೊಲಿಜಿಯಂ ಕುರಿತು ಕಾನೂನು ಸಚಿವ ಕಿರಣ್ ರಿಜಿಜು ಹೇಳಿಕೆ ಖಂಡಿಸಿದ ಸುಪ್ರೀಂ ಕೋರ್ಟ್

ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅದು ನಡೆಯಬಾರದಿತ್ತು ಎಂದು ಹೇಳಿದೆ.

published on : 28th November 2022

ಸರ್ಕಾರಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌; ಕೇಂದ್ರ, ರಾಜ್ಯಗಳ ಪ್ರತಿಕ್ರಿಯೆ ಕೇಳಿದ 'ಸುಪ್ರೀಂ'

ದೇಶದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 6 ರಿಂದ 12 ನೇ ತರಗತಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುವ ನಿರ್ದೇಶನಗಳನ್ನು ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ಕೇಳಿದೆ.

published on : 28th November 2022
1 2 3 4 5 6 > 

ರಾಶಿ ಭವಿಷ್ಯ