• Tag results for Suresh Angadi

ರಾಜಕೀಯ ಕಾರ್ಯಕ್ರಮದಲ್ಲಿ ಸುರೇಶ್ ಅಂಗಡಿ ಪುತ್ರಿ ಭಾಗಿ: ಉಪ ಚುನಾವಣೆ ಸ್ಪರ್ಧೆಗೆ ಪೂರ್ವ ತಯಾರಿ?

ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಅವರ ಪುತ್ರಿ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರ ಸೊಸೆ ಶ್ರದ್ಧಾ ಶೆಟ್ಟರ್‌ ಅವರು ಇದೇ ಮೊದಲ ಬಾರಿಗೆ ಬಿಜೆಪಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮುಖಂಡರೊಂದಿಗೆ ವೇದಿಕೆ ಹಂಚಿಕೊಂಡರು.

published on : 26th December 2020

ಸುರೇಶ್ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರ: ಕುಟುಂಬಸ್ಥರಿಗೆ ಟಿಕೆಟ್ ನೀಡಲು ಹೆಚ್ಚಿದ ಒತ್ತಡ

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ಸ್ಥಾನ ತೆರವಾಗಿದೆ. ಈ ನಿಟ್ಟಿನಲ್ಲಿ ಉಪ ಚುನಾವಣೆ ನಡೆಯಲಿದ್ದು ಕೆಲವು ಬಿಜೆಪಿ ನಾಯಕರು ಶತಾಯಗತಾಯ ತಮಗೆ ಟಿಕೆಟ್ ಸಿಗಬೇಕೆಂದು ಪ್ರಯತ್ನಿಸುತ್ತಿದ್ದಾರೆ.

published on : 14th October 2020

ಸುರೇಶ್ ಅಂಗಡಿ ನಿವಾಸಕ್ಕೆ ಮುಖ್ಯಮಂತ್ರಿ ಭೇಟಿ, ಕುಟುಂಬ ಸದಸ್ಯರಿಗೆ ಸಾಂತ್ವನ

ಇತ್ತೀಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಬೆಳಗಾವಿಯ ನಿವಾಸಕ್ಕೆ ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

published on : 7th October 2020

ಅಗಲಿದ ಸಚಿವ ಸುರೇಶ್ ಅಂಗಡಿ ಕುಟುಂಬಕ್ಕೆ ರಾಜ್ಯಪಾಲರ ವಜುಭಾಯಿ ವಾಲಾ ಸಾಂತ್ವನ

ಇತ್ತೀಚೆಗೆ ನಿಧನರಾದ ರೈಲ್ವೆ ಸಚಿವ ಸುರೇಶ್ ಅಂಗಡಿಯವರ ಕುಟುಂಬ ಸದಸ್ಯರಿಗೆ ರಾಜ್ಯಪಾಲ ವಜುಭಾಯಿ ವಾಲಾ ಇಂದು ಬೆಳಗಾವಿಯಲ್ಲಿ ಸಾಂತ್ವನ ಹೇಳಿದರು.

published on : 5th October 2020

ಸುರೇಶ್ ಅಂಗಡಿ ಕೇಂದ್ರ ಸಚಿವರಾಗಿದ್ದರೂ ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಸರ್ಕಾರಕ್ಕೆ ಸಾಧ್ಯವಾಗಲಿಲ್ಲ: ಡಿಕೆ.ಶಿವಕುಮಾರ್

ಸುರೇಶ್ ಅಂಗಡಿಯವರು ಕೇಂದ್ರದಲ್ಲಿ ಸಚಿವರಾಗಿದ್ದರು. ಅಲ್ಲದೇ, ಬೆಳಗಾವಿಯಲ್ಲಿ ಮಿಲಿಟರ್ ಬೇಸ್ ಇದ್ದರೂ ಪಾರ್ಥೀವ ಶರೀರವನ್ನು ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ ಎಂದು ಡಿ.ಕೆ.ಶಿವಕುಮಾರ್ ಅವರು ಟೀಕಿಸಿದ್ದಾರೆ. 

published on : 2nd October 2020

ಸುರೇಶ್ ಅಂಗಡಿ ಸಮಾಧಿ, ರುದ್ರಭೂಮಿಗೆ ತಡೆಗೋಡೆ ನಿರ್ಮಿಸಿ: ಸಿಎಂ ಯಡಿಯೂರಪ್ಪಗೆ ಮನವಿ

ಇತ್ತೀಚೆಗೆ ನಿಧನರಾದ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ನಡೆಸಿದ ದೆಹಲಿಯ ವೀರಶೈವ ಲಿಂಗಾಯತ ರುದ್ರಭೂಮಿಗೆ ತಡೆಗೋಡೆ ನಿರ್ಮಿಸುವಂತೆ ಸುರೇಶ್ ಅಂಗಡಿ ಅವರ ಅಳಿಯಂದಿರಾದ ಸಂಕಲ್ಪ ಶೆಟ್ಟರ್ ಹಾಗೂ ಡಾ. ರಾಹುಲ್ ಪಾಟೀಲ್ ಅವರು ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

published on : 30th September 2020

ಬೆಳಗಾವಿ ಉಪಚುನಾವಣೆಗೆ ಬಿಜೆಪಿ ತಾಲೀಮು: ಶಂಕರಗೌಡ ಪಾಟೀಲ್ ಗೆ ಟಿಕೆಟ್?

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮುಂದಿನ ಆರು ತಿಂಗಳ ಒಳಗೆ ಉಪ ಚುನಾವಣೆ ನಡೆಯಬೇಕಾಗಿದೆ, ಹೀಗಾಗಿ ಸುರೇಶ್ ಅಂಗಡಿ ಕುಟುಂಬಸ್ಥರು ಅಥವಾ ಪಕ್ಷದ ಬೇರೆ ನಾಯಕರಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚಿಸುತ್ತಿದೆ. 

published on : 29th September 2020

ಬಿಜೆಪಿಯಿಂದ ಸುರೇಶ್ ಅಂಗಡಿ ಪತ್ನಿ ಅಥವಾ ಪುತ್ರಿಯನ್ನು ಕಣಕ್ಕಿಳಿಸಲು ಶೆಟ್ಟರ್ ಆಸಕ್ತಿ

ಸುರೇಶ್ ಅಂಗಡಿ ನಿಧನರಾಗಿ ಇನ್ನೂ ವಾರವೂ ಕಳೆದಿಲ್ಲ. ಆಗಲೇ ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ. 

published on : 27th September 2020

ಸೆಲ್ಫೀ ಕೇಳುವವರು, ವಿಧಾನಸೌಧಕ್ಕೆ ಭೇಟಿ ನೀಡುವವರಿಂದ ನಮಗೆ ಅಪಾಯ: ಕೊರೋನಾ ಕುರಿತು ರಾಜಕೀಯ ನಾಯಕರ ಆತಂಕ

ಚುನಾಯಿತ ಜನಪ್ರತಿನಿಧಿಗಳಾಗಿರುವುದರಿಂದ ಜನರು ನಮ್ಮೊಂದಿಗೆ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ... ವಿಧಾನಸೌಧಕ್ಕೆ ನಮ್ಮನ್ನು ಭೇಟಿ ಮಾಡಲು ಸಾಕಷ್ಟು ಜನರು ಬರುತ್ತಿರುವುದರಿಂದ ನಮ್ಮ ಜೀವ ಅಪಾಯಕ್ಕೆ ಸಿಲುಕಿದೆ ಎಂದು ಕೊರೋನಾ ಸೋಂಕು ಹರಡುವಿಕೆ ಕುರಿತು ರಾಜಕೀಯ ನಾಯಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

published on : 25th September 2020

ದೆಹಲಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಸಚಿವ ಸುರೇಶ್ ಅಂಗಡಿ ಅಂತ್ಯಕ್ರಿಯೆ

ಕೊರೋನಾ ವೈರಸ್ ನಿಂದ ಬುಧವಾರ ರಾತ್ರಿ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಗುರುವಾರ ದೆಹಲಿಯಲ್ಲಿಯೇ ನಡೆಸಲಾಯಿತು.

published on : 24th September 2020

ವಿಧಾನಸಭೆಯಲ್ಲಿ ಸುರೇಶ್ ಅಂಗಡಿಗೆ ಸಂತಾಪ: ಒಡನಾಟ ಸ್ಮರಿಸಿದ ಸದಸ್ಯರು

ನಿನ್ನೆ ನಿಧನರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರಿಗೆ ವಿಧಾನಸಭೆಯಲ್ಲಿಂದು ಸಂತಾಪ ನಿರ್ಣಯ ಮಂಡಿಸಿ ಸದಸ್ಯರು ಗೌರವ ಸಲ್ಲಿಸಿದರು. ಎಲ್ಲ ಸದಸ್ಯರು ಒಂದು ನಿಮಿಷ ಮೌನಾಚರಿಸಿ ಗೌರವ ಸಲ್ಲಿಸಿದರು.

published on : 24th September 2020

ಜಮ್ಮು-ಕಾಶ್ಮೀರ, ಲಡಾಖ್ ಪ್ರದೇಶಗಳ ಸೇರಿದಂತೆ 43 ಮಹತ್ವದ ಸೇತುವೆ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ

ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ ಮಹತ್ವದ 17 ಹೊಸ ಸೇತುವೆಗಳು ಸೇರಿದಂತೆ ಸೇರಿದಂತೆ ಏಳು ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 43 ಸೇತುವೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಮುಂದೂಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

published on : 24th September 2020

ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದ ಸುರೇಶ್ ಅಂಗಡಿ

ಕೋವಿಡ್-19ನಿಂದ ಮೃತಪಟ್ಟಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಬೆಳಗಾವಿ ಕ್ಷೇತ್ರದಿಂದ 2004ರಿಂದ ಸತತ ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಗೆದ್ದುಬಂದ ಸರದಾರ.

published on : 24th September 2020

ಗ್ರಾಮೀಣ ಮಕ್ಕಳಿಗಾಗಿ ಉತ್ತರ ಕರ್ನಾಟಕದಲ್ಲಿ ಉತ್ತಮ ಶಾಲೆಗಳನ್ನು ಸ್ಥಾಪಿಸಲು ಬಯಸಿದ್ದರು ಸುರೇಶ್ ಅಂಗಡಿ

ಕೊರೋನಾದಿಂದ ಸಾವನ್ನಪ್ಪಿದ ಕೇಂದ್ರ ಸಚಿವ ಸುರೇಶ್ ಅಂಗಡಿ ತಮ್ಮ ಕಾನೂನು ಪದವಿ ಪೂರ್ಣ ಗೊಳಿಸಿದ ನಂತರ ಬೆಳಗಾವಿಯಲ್ಲಿ ವಾಸವದತ್ತ ಸಿಮೆಂಟ್ ಅಂಗಡಿ ತೆರೆದು ಪ್ರಸಿದ್ದರಾದರು

published on : 24th September 2020

ಪಾರ್ಥೀವ ಶರೀರ ತರಲು ನಿಯಮ ಅಡ್ಡಿ: ದೆಹಲಿಯಲ್ಲಿಯೇ ಸುರೇಶ್ ಅಂಗಡಿ ಅಂತ್ಯಕ್ರಿಯೆ

ಕೋವಿಡ್‌ನಿಂದ ನವದೆಹಲಿಯ ಏಮ್ಸ್‌ ಅಸ್ಪತ್ರೆಯಲ್ಲಿ ಬುಧವಾರ ನಿಧನರಾದ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸಲು ನಿರ್ಧರಿಸಲಾಗಿದೆ

published on : 24th September 2020
1 2 >