• Tag results for Tejasvi Surya

ಲಾಕ್ಡೌನ್ ನಿಯಮ ಉಲ್ಲಂಘನೆ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ನೃಪತುಂಗ ರಸ್ತೆಯಲ್ಲಿರುವ ಹೋಟೆಲ್ ವೊಂದರಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ನಗರದಲ್ಲಿ ದೂರು ದಾಖಲಾಗಿದೆ.

published on : 18th June 2021

ಸಂಸದ ತೇಜಸ್ವೀ ಸೂರ್ಯ ರಿಂದ ಉಚಿತ ಕೋವಿಡ್ ಲಸಿಕಾ ಅಭಿಯಾನ, 1 ಸಾವಿರಕ್ಕೂ ಅಧಿಕ ಆಟೋ ಚಾಲಕರಿಗೆ ಲಸಿಕೆ

ಸಾವಿರಕ್ಕೂ ಅಧಿಕ ಆಟೋ ಚಾಲಕರು ಇಂದು ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವೀ ಸೂರ್ಯ ರವರು ಜಯನಗರ & ಬೊಮ್ಮನಹಳ್ಳಿಯಲ್ಲಿ ಆಯೋಜನೆಗೊಳಿಸಿದ್ದ ಒಂದು ದಿನದ ಉಚಿತ ಸಾಮೂಹಿಕ ಲಸಿಕಾ ಅಭಿಯಾನದಲ್ಲಿ  ಪಾಲ್ಗೊಂಡು ಉಚಿತ ಕೋವಿಡ್‌ ಲಸಿಕೆ ಪಡೆದುಕೊಂಡಿರುತ್ತಾರೆ.

published on : 30th May 2021

ಲಸಿಕೆ ಮಾರಿ ಸಂಸದ ತೇಜಸ್ವಿ ಸೂರ್ಯ ಮತ್ತು ಅವರ ಚಿಕ್ಕಪ್ಪ ರವಿ ಸುಬ್ರಮಣ್ಯರಿಂದ ಹಣ ಸಂಪಾದನೆ: ಕಾಂಗ್ರೆಸ್ ಆರೋಪ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಅವರ ಚಿಕ್ಕಪ್ಪ ರವಿ ಸುಬ್ರಮಣ್ಯ ಕೊರೋನಾ ಲಸಿಕೆಗಳನ್ನು ಮಾರಿ ಆ ಮೂಲಕ ಹಣ ಸಂಪಾದಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

published on : 30th May 2021

ಬೆಡ್ ಬ್ಲಾಕಿಂಗ್ ದಂಧೆ: ಶಾಸಕ ಸತೀಶ್ ರೆಡ್ಡಿ ಆಪ್ತನ ಬಂಧನ

ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎನ್ನುವವರನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ.

published on : 25th May 2021

ಬಿಬಿಎಂಪಿ ಸಾರ್ವಜನಿಕ ಡ್ಯಾಶ್ ಬೋರ್ಡ್ ಆರಂಭ, ಪಾರದರ್ಶಕತೆಯೆಡೆಗೆ ಮತ್ತೊಂದು ಹೆಜ್ಜೆ: ಸಂಸದ ತೇಜಸ್ವಿ ಸೂರ್ಯ

ಬಿಬಿಎಂಪಿ ಯು ಇಂದು ಬೆಡ್ ಹಂಚಿಕೆ, ವಲಯವಾರು ರೋಗಿಗಳ ನೋಂದಣಿ, ಡಿಸ್ಚಾರ್ಜ್ ಸಂಬಂಧಿತ ರಿಯಲ್ ಟೈಮ್ ಡ್ಯಾಶ್ ಬೋರ್ಡ್ ಅನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ.

published on : 20th May 2021

ಕೇವಲ 100 ಘಂಟೆಗಳಲ್ಲಿ ಬಿಬಿಎಂಪಿ ಬೆಡ್ ಬುಕ್ಕಿಂಗ್ ವಿಧಾನದಲ್ಲಿ ಮಹತ್ವದ 4 ಸುಧಾರಣೆಗಳು: ತೇಜಸ್ವಿ ಸೂರ್ಯ

ಬಿಬಿಎಂಪಿ ಬೆಡ್ ಹಂಚಿಕೆ ಪದ್ಧತಿಯಲ್ಲಿ  ಹಲವು ಸುಧಾರಣೆಗಳಿಗೆ ಕೋರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಅವರಿಗೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ಕೇವಲ 100 ಘಂಟೆಗಳಲ್ಲಿ ಮಹತ್ವದ ನಾಲ್ಕು ಸುಧಾರಣೆಗಳು ಕಾರ್ಯರೂಪಕ್ಕೆ ಬಂದಿರುವುದಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

published on : 10th May 2021

ಎಂ.ಪಿ. ಆಕ್ಸಿ ಬ್ಯಾಂಕ್ ಗೆ ಸಂಸದ ತೇಜಸ್ವೀ ಸೂರ್ಯ ಚಾಲನೆ

ಕೋವಿಡ್ ಸೋಂಕಿತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 250 ಯೂನಿಟ್ ಗಳ  ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್ ಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ಭಾನುವಾರ ಚಾಲನೆ ನೀಡಿದರು. 

published on : 10th May 2021

ರಾಜಕೀಯ ಭಿನ್ನಾಭಿಪ್ರಾಯ ಮರೆತು ಒಂದಾದ ಯುವ ಸಂಸದರು: ಮುಚ್ಚಿದ್ದ ಆಸ್ಪತ್ರೆ ಪುನಾರಂಭ! ವಿಡಿಯೋ

ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಬಿಜೆಪಿಯ ಯುವ ಸಂಸದ ತೇಜಸ್ವಿ ಸೂರ್ಯ ಹಾಗೂ ಕಾಂಗ್ರೆಸ್ ಪಕ್ಷದ ಸಂಸದ ಡಿ.ಕೆ.ಸುರೇಶ್ ತಮ್ಮ ರಾಜಕೀಯ ಭಿನ್ನಾಭಿಪ್ರಾಯ ಮರೆತು ಒಂದಾಗಿ ಬೆಂಗಳೂರಿನಲ್ಲಿ ಮುಚ್ಚಿದ್ದ ಆಸ್ಪತ್ರೆಯೊಂದನ್ನು ಪುನಾರಂಭ ಮಾಡಿದ್ದಾರೆ.

published on : 8th May 2021

ಸಂಸದ ತೇಜಸ್ವಿ ಸೂರ್ಯ ಮೇಲೆ ಯಾಕಿಂಥ ದಾಳಿ? ಮಂಡ್ಯ-ಚಾಮರಾಜನಗರ ನಮ್ಮ ಸೋದರ ಜಿಲ್ಲೆಗಳು: ಪ್ರತಾಪ್ ಸಿಂಹ 

ಬೆಡ್ ಬುಕ್ಕಿಂಗ್ ದಂಧೆ ಬಯಲಿಗೆಳೆದ ಯುವ ಸಂಸದ ತೇಜಸ್ವಿ ಸೂರ್ಯ ಅವರನ್ನು ಅಭಿನಂದಿಸುವ ಬದಲು ಕುಂಟು ನೆಪ ಇಟ್ಟುಕೊಂಡು ಅವರ ವಿರುದ್ಧ ದಾಳಿ ನಡೆಸುತ್ತಿರುವುದು ಏಕೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

published on : 8th May 2021

ವಾರ್ ರೂಂ ಭೇಟಿ ವೇಳೆ ನಾನು ಕ್ಷಮೆ ಕೇಳಿಲ್ಲ: ಸಂಸದ ತೇಜಸ್ವಿ ಸೂರ್ಯ ಸ್ಪಷ್ಟನೆ

ಬಿಬಿಎಂಪಿಯ ದಕ್ಷಿಣ ವಲಯದ ಕೋವಿಡ್‌ ವಾರ್ಡ್‌ ರೂಮ್‌ಗೆ ಗುರುವಾರ ಸಂಜೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಮುಸ್ಲಿಂ ಸಿಬ್ಬಂದಿಯ ಕ್ಷಮೆ ಕೋರಿದ್ದೇನೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಈ ರೀತಿ ಯಾರದೇ ಕ್ಷಮೆ ಕೇಳಿಲ್ಲ.

published on : 8th May 2021

ಬೆಡ್ ಬ್ಲಾಕಿಂಗ್ ಹಗರಣ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಉಲ್ಲೇಖಿಸಿರುವವರನ್ನು ಬಂಧಿಸಿಲ್ಲ - ಮೂಲಗಳು

ಕೋವಿಡ್ ರೋಗಿಗಳಿಗಾಗಿ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಬ್ಲಾಕ್ ಮಾಡಲಾಗಿದೆ ಎಂಬ ಆರೋಪ ಸಂಬಂಧ ಈವರೆಗೆ ಐದು ಜನರನ್ನು ಮಾತ್ರ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

published on : 7th May 2021

ತೇಜಸ್ವಿ ಸೂರ್ಯ ಮಾಡಿರುವ ಕೆಲಸಕ್ಕೆ ಸರ್ಕಾರದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ: ಸಿಎಂ ಯಡಿಯೂರಪ್ಪ

ಸಂಸದ ತೇಜಸ್ವಿ ಸೂರ್ಯ ಅವರು ಬಹಳ ಕಷ್ಟಪಟ್ಟು ರಿಸ್ಕ್ ತೆಗೆದುಕೊಂಡು ನಗರದಲ್ಲಿ ಬೆಡ್ ಹಂಚಿಕೆಯಲ್ಲಿ ಅವ್ಯವಹಾರ ನಡೆಯುತ್ತಿದ್ದ ವಿಷಯವನ್ನು ಬಯಲಿಗೆಳೆದಿದ್ದಾರೆ. ಸರ್ಕಾರದ ಗಮನಕ್ಕೆ ತಂದು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶ್ಲಾಘಿಸಿದ್ದಾರೆ

published on : 7th May 2021

ಬೆಡ್ ಬುಕ್ಕಿಂಗ್ ಹಗರಣ ಬಯಲಿಗೆ ಬಂದದ್ದು ಹೇಗೆ, ಕೋಮುವಾದಕ್ಕೆ ತಿರುಗಲು ಕಾರಣವೇನು, ಬಿಬಿಎಂಪಿ ಅಧಿಕಾರಿಗಳು ಹೇಳುವುದೇನು?

ರಾಜಕೀಯ ನಾಯಕರು ತಮ್ಮ ಕ್ಷೇತ್ರದ ಜನರಿಗೆ ಆಸ್ಪತ್ರೆಗಳಲ್ಲಿ ಬೆಡ್ ಕೇಳಿದಾಗ ಸಿಗದಿದ್ದುದು ಬೆಡ್ ಹಂಚಿಕೆ ಹಗರಣ ಬೆಳಕಿಗೆ ಬರಲು ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಮೂಲಕವೇ ಹಗರಣವನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ಸತೀಶ್ ರೆಡ್ಡಿ ಬಯಲಿಗೆಳೆದಿದ್ದಾರೆ ಎಂದು ಹೇಳಲಾಗುತ್ತಿದೆ.

published on : 7th May 2021

ಕೋವಿಡ್ ಬೆಡ್ ಬ್ಲಾಕಿಂಗ್ ಹಗರಣ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ

ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರತಿಪಕ್ಷ ಕಾಂಗ್ರೆಸ್, ನಗರದಲ್ಲಿನ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ಬ್ಲಾಕಿಂಗ್ ಹಗರಣದ ಹಿಂದಿರುವ ಆರೋಪದ ಮೇರೆಗೆ ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದೆ.

published on : 6th May 2021

ಸೋಷಿಯಲ್ ಮೀಡಿಯಾಗಳಲ್ಲಿ ಕೋಮು ಬಣ್ಣಕ್ಕೆ ತಿರುಗಿದ ಅಕ್ರಮ ಬೆಡ್ ಬುಕ್ಕಿಂಗ್ ಹಗರಣ: ಹಲವು ಆಯಾಮಗಳಲ್ಲಿ ತನಿಖೆ

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಇತರ ಕೆಲ ಬಿಜೆಪಿ ನಾಯಕರು ಬಹಿರಂಗಪಡಿಸಿರುವ ಬೆಡ್ ಹಗರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 6th May 2021
1 2 3 >