- Tag results for Test
![]() | ಕಾವೇರಿ ಹೋರಾಟ: ಸುತ್ತೂರು ಮಠದ ಶ್ರೀಗಳ ಬೆಂಬಲಕಾವೇರಿ ನದಿ ನೀರು ವಿವಾದ ಸಂಬಂಧ ರಾಜ್ಯದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಬೆಂಬಲ ವ್ಯಕ್ತಪಡಿಸಿದ್ದು, ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುವ ಮೊದಲು ರಾಜ್ಯದ ನೀರಿನ ಅವಶ್ಯಕತೆಗಳನ್ನು ಪೂರೈಸಬೇಕು ಎಂದು ಹೇಳಿದ್ದಾರೆ. |
![]() | ಕಾವೇರಿ ಬಿಕ್ಕಟ್ಟು: ಬಿಜೆಪಿ-ಜೆಡಿಎಸ್ ಪ್ರತಿಭಟನೆ; ಸಿದ್ದರಾಮಯ್ಯ, ಡಿಕೆಶಿ ತಮಿಳುನಾಡಿನ ಏಜೆಂಟರು ಎಂದ ಬಿಎಸ್ ಯಡಿಯೂರಪ್ಪತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅವರನ್ನು ತಮಿಳುನಾಡು ಮತ್ತು ಡಿಎಂಕೆ ಏಜೆಂಟ್ ಎಂದು ಕರೆದರು. |
![]() | ಕರ್ನಾಟಕ ಬಂದ್ ಹಿಂಪಡೆಯುವುದಿಲ್ಲ- ಕನ್ನಡಪರ ಹೋರಾಟಗಾರರು; ಇಂದು ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಹಿರಿಯ ಚಳವಳಿಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಡಿದ್ದು ಅಂದರೆ ಸೆಪ್ಟೆಂಬರ್ 29ರಂದು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. |
![]() | ಮಣಿಪುರದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್: 45 ಮಂದಿಗೆ ಗಾಯ!ಮಣಿಪುರದಲ್ಲಿ ಜುಲೈ ನಲ್ಲಿ ಅಪಹರಣಕ್ಕೆ ಒಳಗಾಗಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, 45 ವಿದ್ಯಾರ್ಥಿಗಳಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ. |
![]() | ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆ; ಭಾರೀ ಪ್ರತಿಭಟನೆ, ಮತ್ತೆ ಇಂಟರ್ನೆಟ್ ಸೇವೆ ಸ್ಥಗಿತಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ಮಂಗಳವಾರ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. |
![]() | ಕಾವೇರಿ ವಿವಾದ: ಬಾಯಿಯಲ್ಲಿ ಇಲಿ ಹಿಡಿದುಕೊಂಡು ತಮಿಳುನಾಡು ರೈತರ ಪ್ರತಿಭಟನೆತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆಗ್ರಹಿಸಿ ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ರೈತರು ಮಂಗಳವಾರ ತಿರುಚ್ಚಿಯಲ್ಲಿ ಬಾಯಿಯಲ್ಲಿ ಇಲಿಗಳನ್ನು ಹಿಡಿದು ಅನಿರೀಕ್ಷಿತ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. |
![]() | 'ನಮ್ಮ ಜಲ, ನಮ್ಮ ಹಕ್ಕು' ಕಾವೇರಿ ಹೋರಾಟಕ್ಕೆ ಕಿಚ್ಚ ಸುದೀಪ್ ಬೆಂಬಲ!ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದರ ವಿರುದ್ದ ರೈತರು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ ಎಂದಿದ್ದಾರೆ. |
![]() | ರಾಮನಗರ: ತಮಿಳುನಾಡು ಸಿಎಂ ಸ್ಟಾಲಿನ್ ಭಾವಚಿತ್ರಕ್ಕೆ ಎಡೆ ಇಟ್ಟು ಶ್ರದ್ಧಾಂಜಲಿ, ಆಕ್ರೋಶಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಒತ್ತಾಯಿಸಿ ಕನ್ನಡ ಜನಪರ ವೇದಿಕೆ ಕಾರ್ಯಕರ್ತರು ಮಂಗಳವಾರ ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. |
![]() | ಮಂಡ್ಯದಲ್ಲಿ ಮುಂದುವರೆದ ಕಾವೇರಿ ಪ್ರತಿಭಟನೆ: ಇಳಿ ವಯಸ್ಸಿನಲ್ಲೂ ಹೋರಾಟಕ್ಕಿಳಿದ ಹಿರಿಯ ನಟಿ ಲೀಲಾವತಿತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಮಂಡ್ಯದ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. |
![]() | ಕಾವೇರಿ ವಿವಾದ: ತಮಿಳುನಾಡಿನಲ್ಲೂ ಮುಂದುವರೆದ ರೈತರ ಪ್ರತಿಭಟನೆ!ತಮಿಳುನಾಡಿನಲ್ಲಿಯೂ ಕಾವೇರಿ ಹೋರಾಟ ತೀವ್ರಗೊಂಡಿದೆ. ತಮ್ಮ ರಾಜ್ಯಕ್ಕೆ ನದಿ ನೀರು ಬಿಡುವಂತೆ ಒತ್ತಾಯಿಸಿ ತಿರುಚ್ಚಿಯ ರೈತರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕರ್ನಾಟಕವನ್ನು ಒತ್ತಾಯಿಸಿದರು. |
![]() | ಕಾವೇರಿ ಜಲ ವಿವಾದ; ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಒತ್ತಾಯಿಸಿ ತಿರುಚಿ ರೈತರ ಪ್ರತಿಭಟನೆಕರ್ನಾಟಕದೊಂದಿಗೆ ನಡೆಯುತ್ತಿರುವ ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ತಿರುಚ್ಚಿಯಲ್ಲಿ ರೈತರ ಗುಂಪೊಂದು ಭಾನುವಾರ ಪ್ರತಿಭಟನೆ ನಡೆಸಿತು. ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ರೈತರು ಒತ್ತಾಯಿಸುತ್ತಿದ್ದರು. |
![]() | ಬಿಗ್ ಬಾಸ್ ಕನ್ನಡ ಸೀಸನ್ 10ರ ಮೊದಲ ಸ್ಪರ್ಧಿ ಯಾರು ಗೊತ್ತೆ?ಅಕ್ಟೋಬರ್ 8ರಿಂದ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ಪ್ರಾರಂಭವಾಗುತ್ತಿದೆ. ಆದರೆ ಈ ಬಾರಿ ಬಿಗ್ ಬಾಸ್ ಸಾಮಾನ್ಯವಾಗಿರುವುದಿಲ್ಲ. |
![]() | ಕಾವೇರಿ ವಿವಾದ: ರಾಜ್ಯ ಸರ್ಕಾರ ಪ್ರತಿಭಟನೆಗಳನ್ನು ತಡೆಯುವುದಿಲ್ಲ; ಸಿಎಂ ಸಿದ್ದರಾಮಯ್ಯಕಾವೇರಿ ನದಿ ನೀರು ವಿವಾದ ಸಂಬಂಧ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ರಾಜ್ಯ ಸರ್ಕಾರ ತಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. |
![]() | ಹೆಚ್ಚಿದ 'ಕಾವೇರಿ' ಕಿಚ್ಚು: ವಿವಿಧ ಸಂಘಟನೆಗಳಿಂದ ಬೆಂಗಳೂರು ಬಂದ್ ಗೆ ಕರೆಕಾವೇರಿ ನೀರನ್ನು ನಂಬಿಕೊಂಡಿರುವ ಜಿಲ್ಲೆಗಳಲ್ಲಿ 'ಕಾವೇರಿ' ಕಿಚ್ಚು ಜೋರಾಗಿದೆ. ಇಂದು ಶನಿವಾರ ಮಂಡ್ಯ ಬಂದ್ ಬಹುತೇಕ ಯಶಸ್ವಿಯಾಗಿದ್ದು ಇದೀಗ ಬೆಂಗಳೂರು ಬಂದ್ ಗೂ ಕರೆ ನೀಡಲಾಗಿದೆ. |
![]() | ಕಾವೇರಿ ವಿವಾದ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ, ಬೊಮ್ಮಾಯಿ, ಯಡಿಯೂರಪ್ಪ ವಶಕ್ಕೆಕಾವೇರಿ ನೀರಿನ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ. |