• Tag results for Test cricket

ಬಾಕ್ಸಿಂಗ್ ಡೇ ಟೆಸ್ಟ್: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಜಗತ್ತಿನಾದ್ಯಂತ ಭೀತಿ ಹುಟ್ಟಿಸಿರುವ ಓಮಿಕ್ರಾನ್ ಕೊರೋನಾ ರೂಪಾಂತರ ಭೀತಿ ನಡುವೆಯೇ ದಕ್ಷಿಣ ಆಫ್ರಿಕಾ ಪ್ರವಾಸ ಆರಂಭಿಸಿರುವ ಭಾರತ ಇಂದು ಮೊದಲ ಟೆಸ್ಟ್ ಪಂದ್ಯವನ್ನಾಡುತ್ತಿದ್ದು, ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿಕೊಂದ್ದಾರೆ.

published on : 26th December 2021

ವಿಶ್ವದ ಅತಿ ಹಿರಿಯ ಟೆಸ್ಟ್ ಕ್ರಿಕೆಟ್ ಆಟಗಾರ್ತಿ ನಿಧನ: ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಸಂತಾಪ

ವಿಶ್ವಮಹಾಯುದ್ಧ ಸಮಯದಲ್ಲಿ ಎಲೀನ್ ಅವರು ಇಂಗ್ಲೆಂಡ್ ಪರ ಬೇಹುಗಾರಿಕೆಯನ್ನೂ ಮಾಡಿದ್ದರು ಎನ್ನುವುದು ತುಂಬಾ ಅಚ್ಚರಿಯ ಸಂಗತಿ.

published on : 5th December 2021

ಹರ್ಭಜನ್ ಸಿಂಗ್ ದಾಖಲೆ ಮುರಿದ ಆರ್ ಅಶ್ವಿನ್, ಟೆಸ್ಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ 3ನೇ ಯಶಸ್ವಿ ಬೌಲರ್

ಟೀಂ ಇಂಡಿಯಾದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಸೋಮವಾರ ಸ್ಪಿನ್ ದಿಗ್ಗಜ ಹರ್ಭಜನ್ ಸಿಂಗ್ ಅವರ ದಾಖಲೆಯನ್ನು ಮುರಿಯುವ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದಾರೆ.

published on : 29th November 2021

ಟೆಸ್ಟ್ ಕ್ರಿಕೆಟ್ ಗೆ ಇಂಗ್ಲೆಂಡ್ ಆಲ್ರೌಂಡರ್ ಮೋಯಿನ್ ಅಲಿ ವಿದಾಯ

ಟೆಸ್ಟ್ ಕ್ರಿಕೆಟ್ ಗೆ ಇಂಗ್ಲೆಂಡ್ ಆಲ್ ರೌಂಡರ್ ಮೋಯಿನ್ ಅಲಿ ನಿವೃತ್ತಿ ಘೋಷಿಸಿದ್ದಾರೆ. ಆದಾಗ್ಯೂ ಅವರು ಸೀಮಿತ ಓವರ್ ಗಳ ಕ್ರಿಕೆಟ್ ನಲ್ಲಿ ರಾಷ್ಟ್ರೀಯ ತಂಡದಲ್ಲಿ ಆಡುವುದನ್ನು ಮುಂದುವರಿಸುತ್ತಾರೆ. ಇದನ್ನು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಖಚಿತಪಡಿಸಿದೆ.

published on : 27th September 2021

ಜಗತ್ತಿನ ಅತ್ಯಂತ ಹಿರಿಯ ಟೆಸ್ಟ್ ಕ್ರಿಕೆಟಿಗ ಜಾನ್‌ ವಾಟ್ಕಿನ್ಸ್‌ ಇನ್ನಿಲ್ಲ

ವಿಶ್ವದ ಅತ್ಯಂತ ಹಿರಿಯ ಟೆಸ್ಟ್ ಕ್ರಿಕೆಟಿಗ, ದಕ್ಷಿಣ ಆಫ್ರಿಕಾದ ಮಾಜಿ ಆಲ್ ರೌಂಡರ್ ಜಾನ್ ವಾಟ್ಕಿನ್ಸ್ (98) ನಿಧನ ಹೊಂದಿದ್ದಾರೆ. 

published on : 7th September 2021

ಟೆಸ್ಟ್ ಕ್ರಿಕೆಟ್ ನಲ್ಲಿ ಅನಿಲ್ ಕುಂಬ್ಳೆ ದಾಖಲೆ ಮುರಿದ ವೇಗಿ ಜೇಮ್ಸ್ ಆಂಡರ್ಸನ್

ಇಂಗ್ಲೆಂಡ್ ವೇಗಿ ಆಂಡರ್ಸನ್  ಟೆಸ್ಟ್ ಕ್ರಿಕೆಟ್ ನಲ್ಲಿ  ಭಾರತದ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದು, ಅತಿ ಹೆಚ್ಚು ವಿಕೆಟ್ ಪಡೆದವರ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ. 

published on : 7th August 2021

ಇಂಗ್ಲೆಂಡ್ ಪ್ರವಾಸದಲ್ಲಿರುವ ಕೊಹ್ಲಿ ಪಡೆಯ ಇಬ್ಬರು ಆಟಗಾರರಿಗೆ ಕೊರೋನಾ ಸೋಂಕು!

ನ್ಯೂಜಿಲ್ಯಾಂಡ್​ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಫೈನಲ್​​ ಮುಕ್ತಾಯದ ಬಳಿಕ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿ ಆಡಲು ವಿರಾಟ್​ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಆಂಗ್ಲರ ನಾಡಿನಲ್ಲಿ ಉಳಿದುಕೊಂಡಿದ್ದು, ಇದೀಗ ತಂಡದ ಇಬ್ಬರು ಆಟಗಾರರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ತಿಳಿದು ಬಂದಿದೆ.

published on : 15th July 2021

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಸ್ಟೀವ್ ಸ್ಮಿತ್ ಮತ್ತೆ ಅಗ್ರ ಸ್ಥಾನಕ್ಕೆ; 4ನೇ ಸ್ಥಾನಕ್ಕೆ ಜಿಗಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

ಬಹು ನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಐಸಿಸಿ ತನ್ನ ಆಟಗಾರರ ರ್ಯಾಂಕಿಂಗ್ ಪಟ್ಟಿಯನ್ನು ಮತ್ತೆ ಪರಿಷ್ಕರಣೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೆ ಜಿಗಿದಿದ್ದು, ಆಸಿಸ್  ದೈತ್ಯ ಸ್ಟೀವ್ ಸ್ಮಿತ್ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ.

published on : 16th June 2021

ಐಸಿಸಿ ಟೆಸ್ಟ್ ರ್ಯಾಂಕಿಂಗ್: 5ನೇ ಸ್ಥಾನದಲ್ಲಿ ಕೊಹ್ಲಿ ಮುಂದುವರಿಕೆ, ಜಂಟಿ 6ನೇ ಸ್ಥಾನದಲ್ಲಿ ರೋಹಿತ್-ರಿಷಬ್ ಪಂತ್

ಬಹು ನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಐಸಿಸಿ ತನ್ನ ಆಟಗಾರರ ರ್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲಿ ಕೊಹ್ಲಿ ಮುಂದುವರೆದಿದ್ದಾರೆ.

published on : 9th June 2021

ಐಪಿಎಲ್ ಗಾಗಿ ಟೆಸ್ಟ್ ಸರಣಿ ಬೇಗ ಮುಗಿಸುವಂತೆ ಬಿಸಿಸಿಐ ವಿನಂತಿಸಿಲ್ಲ: ಇಸಿಬಿ

ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2021ರ ಆವೃತ್ತಿ ನಡೆಸಲು ಅನುವು ಆಗುವಂತೆ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿ ಮುಂಚಿತವಾಗಿ ನಡೆಸುವಂತೆ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಬೋರ್ಡ್(ಇಸಿಬಿ)ಗೆ ಬಿಸಿಸಿಐ ವಿನಂತಿಸಿಲ್ಲ ಎಂದು ಇಸಿಬಿ ಸ್ಪಷ್ಟಪಡಿಸಿವೆ.

published on : 22nd May 2021

ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ ಉಳಿಸಿಕೊಂಡ ಟೀಂ ಇಂಡಿಯಾ

ಐಸಿಸಿ ತಂಡದ ಶ್ರೇಯಾಂಕದ ವಾರ್ಷಿಕ ನವೀಕರಣದ ನಂತರ ಟೀಂ ಇಂಡಿಯಾ ಟೆಸ್ಟ್ ತಂಡ ಪ್ರಥಮ ಸ್ಥಾನ ಉಳಿಸಿಕೊಂಡಿದೆ. 

published on : 13th May 2021

ಟೆಸ್ಟ್ ಕ್ರಿಕೆಟ್ ನಿಂದ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ದಿಢೀರ್ ನಿವೃತ್ತಿ ಘೋಷಣೆ

ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಇದಕ್ಕೆ ಮುನ್ನ ಅವರು ಎಲ್ಲಾ ಮಾದರಿಯ ಕ್ರಿಕೆಟ್ ನ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

published on : 17th February 2021

ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಕ್ರಿಕೆಟ್ ತಂಡ ಭಾರತಕ್ಕೆ ಆಗಮನ

ಆಸ್ಟ್ರೇಲಿಯಾ ಟೆಸ್ಟ್  ಗೆದ್ದು ಉತ್ಸಾಹದಲ್ಲಿರುವ ಟೀಂ ಇಂಡಿಯಾ ಮತ್ತೊಂದು ಟೆಸ್ಟ್  ಸರಣಿಗೆ ಸಜ್ಜಾಗುತ್ತಿದೆ. ಇಲ್ಲಿನ ಚಿದಂಬರಂ ಕ್ರೀಡಾಂಗಣದಲ್ಲಿ ಫೆಬ್ರವರಿ 5 ರಿಂದ ಇಂಗ್ಲೆಡ್ ವಿರುದ್ಧದ ಸರಣಿ ಆರಂಭವಾಗಲಿದೆ. ನಾಲ್ಕು ಪಂದ್ಯಗಳ ಸರಣಿಗಾಗಿ ಇಂಗ್ಲೆಂಡ್ ಆಟಗಾರರು ಭಾರತಕ್ಕೆ ಆಗಮಿಸಿದ್ದಾರೆ.

published on : 27th January 2021

ಜನಾಂಗೀಯ ನಿಂದನೆ ಒಪ್ಪಲು ಸಾಧ್ಯವಿಲ್ಲ: ಸಿರಾಜ್, ಟೀಂ ಇಂಡಿಯಾ ಬಳಿ ಕ್ಷಮೆಯಾಚಿಸಿದ ವಾರ್ನರ್

ಜನಾಂಗೀಯ ನಿಂದನೆ ಒಪ್ಪಲು ಸಾಧ್ಯವಿಲ್ಲ, ಘಟನೆ ಸಂಬಂಧ ಮೊಹಮ್ಮದ್ ಸಿರಾಜ್ ಹಾಗೂ ಟೀಂ ಇಂಡಿಯಾ ಬಳಿ ಕ್ಷಮೆಯಾಚಿಸುತ್ತೇನೆಂದು ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಅವರು ಹೇಳಿದ್ದಾರೆ. 

published on : 12th January 2021

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿ ನ್ಯೂಜಿಲ್ಯಾಂಡ್ ನಂ.1 ಸ್ಥಾನಕ್ಕೆ!

ಪಾಕಿಸ್ತಾನವನ್ನು ಇನ್ನಿಂಗ್ಸ್ ಮತ್ತು 176 ರನ್‌ಗಳಿಂದ ಸೋಲಿಸಿದ ನಂತರ ನ್ಯೂಜಿಲ್ಯಾಂಡ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

published on : 6th January 2021
1 2 > 

ರಾಶಿ ಭವಿಷ್ಯ