- Tag results for Threat call
![]() | ಸ್ಥಳೀಯ ರೈಲುಗಳಲ್ಲಿ 'ಸರಣಿ ಬಾಂಬ್ ಸ್ಫೋಟ' ಕುರಿತು ಮುಂಬೈ ಪೊಲೀಸರಿಗೆ ಬೆದರಿಕೆ ಕರೆ; ವ್ಯಕ್ತಿ ಬಂಧನಮುಂಬೈ ಪೊಲೀಸರಿಗೆ ಭಾನುವಾರ ಬೆಳಗ್ಗೆ ಸ್ಥಳೀಯ ರೈಲುಗಳಲ್ಲಿ 'ಸರಣಿ ಬಾಂಬ್ ಸ್ಫೋಟ' ಸಂಭವಿಸುವ ಕುರಿತು ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ನೈಸ್ ಸಂಸ್ಥೆಯ ಅಕ್ರಮಗಳ ಕುರಿತು ವರದಿ: ಮಾಜಿ ಸಚಿವ ಟಿಬಿ ಜಯಚಂದ್ರಗೆ ಬೆದರಿಕೆ ಕರೆ2014 ಮತ್ತು 2016ರ ನಡುವೆ ನಂದಿ ಮೂಲಸೌಕರ್ಯ ಕಾರಿಡಾರ್ ಎಂಟರ್‌ಪ್ರೈಸಸ್‌ನಲ್ಲಿ (ನೈಸ್) ನಡೆದಿರುವ ಅಕ್ರಮಗಳ ಕುರಿತು ವರದಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಮತ್ತು ನವದೆಹಲಿಯ ರಾಜ್ಯದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರಿಗೆ ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬರುತ್ತಿವೆ. |
![]() | RDX ತುಂಬಿದ ಟ್ಯಾಂಕರ್ ನೊಂದಿಗೆ ಗೋವಾಗೆ ಇಬ್ಬರು ಪಾಕ್ ಪ್ರಜೆಗಳ ಪ್ರಯಾಣ: ಮುಂಬೈ ಪೊಲೀಸರಿಗೆ ಬೆದರಿಕೆ ಕರೆಆರ್ಡಿಎಕ್ಸ್ ತುಂಬಿದ ಟ್ಯಾಂಕರ್ ಬಗ್ಗೆ ಮುಂಬೈ ಪೊಲೀಸರಿಗೆ ಕರೆ ಬಂದಿದ್ದು ಈ ಟ್ಯಾಂಕರ್ 2 ಪಾಕಿಸ್ತಾನಿ ಪ್ರಜೆಗಳೊಂದಿಗೆ ಮುಂಬೈನಿಂದ ಗೋವಾಕ್ಕೆ ಹೊರಟಿದೆ ಎಂದು ಕರೆ ಮಾಡಿದವರು ಹೇಳಿದ್ದಾರೆ. |
![]() | ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಬೆಳಗಾವಿಯ ಹಿಂಡಲಗಾ ಜೈಲಿನಿಂದ ನಾಗ್ಪುರಕ್ಕೆ ಉಗ್ರನ ಸ್ಥಳಾಂತರ!ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆಗಳಿಗೆ ಸಂಬಂಧಿಸಿದಂತೆ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿರುವ ಭಯೋತ್ಪಾದಕ ಅಫ್ಸರ್ ಪಾಷಾನನ್ನು ಎನ್‌ಐಎ ಕಸ್ಟಡಿಗೆ ತೆಗೆದುಕೊಂಡಿದೆ. ಹಿಂಡಲಗಾ ಜೈಲಿನಲ್ಲಿರುವ ಮತ್ತೊಬ್ಬ ಕೈದಿ ಜಯೇಶ್ ಪೂಜಾರಿಯನ್ನು ಈ ವರ್ಷದ ಮಾರ್ಚ್‌ನಲ್ಲಿ ಬೆದರಿಕೆ ಕರೆ ಸಂಬಂಧ ನಾಗ್ಪುರ ಪೊಲೀಸರು ಬಂಧಿಸಿದ್ದರು. |
![]() | ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಬೆಳಗಾವಿ ಜೈಲಿನಲ್ಲಿದ್ದ ಪಾಷಾ ಜೊತೆ ಬಂಧಿತ ಆರೋಪಿ ಜಯೇಶ್ ಪೂಜಾರಿ ಸಂಪರ್ಕ!ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಜಯೇಶ್ ಪೂಜಾರಿ ಮತ್ತು ಬೆಂಗಳೂರು ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಆರೋಪಿಯಾಗಿ ಕರ್ನಾಟಕದ ಜೈಲಿನಲ್ಲಿರುವ ಅಫ್ಸರ್ ಪಾಷಾ ನಡುವೆ ಸಂಪರ್ಕವಿರುವುದು ತನಿಖೆಯಿಂದ ಪತ್ತೆಯಾಗಿದೆ. |
![]() | ಸೀಮಾ ಹೈದರ್ ಪಾಕ್'ಗೆ ಮರಳದಿದ್ದರೆ 26/11 ಮಾದರಿ ದಾಳಿ: ಮುಂಬೈ ಪೊಲೀಸರಿಗೆ ಬೆದರಿಕೆ ಕರೆ'ಪಬ್‌ಜಿ' ಮೂಲಕ ಅಂಕುರಿಸಿದ ಪ್ರೀತಿಗಾಗಿ ಗಂಡನನ್ನು ಬಿಟ್ಟು 4 ಮಕ್ಕಳ ಸಹಿತ ಭಾರತಕ್ಕೆ ಅಕ್ರಮ ಪ್ರವೇಶ ಮಾಡಿದ ಮಹಿಳೆ ಸೀಮಾ ಹೈದರ್‌ಳನ್ನು ಪಾಕಿಸ್ತಾನಕ್ಕೆ ವಾಪಸ್ ಕಳುಹಿಸದೆ ಇದ್ದರೆ 26/11 ಮಾದರಿ ದಾಳಿ ನಡೆಸಲಾಗುವುದು ಬೆದರಿಕೆ ಕರೆಯೊಂದು ಬಂದಿದೆ. |
![]() | ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ; 16 ವರ್ಷದ ಬಾಲಕನನ್ನು ಬಂಧಿಸಿದ ಪೊಲೀಸರುಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ನೆರೆಯ ಥಾಣೆ ಜಿಲ್ಲೆಯ 16 ವರ್ಷದ ಬಾಲಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. |
![]() | ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬೆದರಿಕೆ ಕರೆ; ಪುಣೆಯ 42 ವರ್ಷದ ವ್ಯಕ್ತಿಯ ಬಂಧನಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಹಾನಿ ಮಾಡುವುದಾಗಿ ಬೆದರಿಕೆ ಒಡ್ಡಿದ ಆರೋಪದ ಮೇಲೆ ಪುಣೆಯ 42 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. |
![]() | ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಹಿಂಡಲಗಾ ಜೈಲಿನಿಂದ ಎರಡನೇ ಬಾರಿ ಬೆದರಿಕೆ ಕರೆ!ಕೆಲ ವಾರಗಳ ಹಿಂದೆ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ, ಅದೇ ಸ್ಥಳದಿಂದ ಗಡ್ಕರಿ ಅವರ ಕಚೇರಿಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ. |
![]() | ರಾಮಜನ್ಮಭೂಮಿ ಕಾಂಪ್ಲೆಕ್ಸ್ ಸ್ಫೋಟಿಸುವುದಾಗಿ ಬೆದರಿಕೆ ಕರೆಅನಾಮಿಕ ವ್ಯಕ್ತಿಯೋರ್ವ ಅಯೋಧ್ಯೆಯಲ್ಲಿರುವ ರಾಮ ಮಂದಿರ ಕಾಂಪ್ಲೆಕ್ಸ್ ನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ್ದಾನೆ. |
![]() | ಶಾಸಕ ಹ್ಯಾರಿಸ್ ಪರವಾಗಿ ಕೆಎಎಸ್ ಅಧಿಕಾರಿಯಿಂದ ಬೆದರಿಕೆ ಕರೆ: ಎಎಪಿ ಮುಖಂಡ ಆರೋಪಕೆಎಎಸ್ ಅಧಿಕಾರಿ ಎಲಿಶ ಆ್ಯಂಡ್ರಿವ್ಸ್‌ರವರು ಬೆದರಿಕೆ ಹಾಕಿದ್ದಾರೆಂದು ಆಮ್ ಆದ್ಮಿ ಪಾರ್ಟಿ ರಾಜ್ಯ ವಕ್ತಾರ ಕೆ.ಮಥಾಯಿ ಆರೋಪಿಸಿದ್ದು, ಈ ಬಗ್ಗೆ ಆಡಿಯೋ ಬಿಡುಗಡೆ ಮಾಡಿದ್ದಾರೆ. |
![]() | ನಿತಿನ್ ಗಡ್ಕರಿ ಕಚೇರಿಗೆ ಬೆದರಿಕೆ ಕರೆ ಪ್ರಕರಣ: ಹಿಂಡಲಗಾ ಜೈಲಿನ ಕೈದಿ ವಿಚಾರಣೆ- ಆರಗ ಜ್ಞಾನೇಂದ್ರಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಬೆಳಗಾವಿ ಹಿಂಡಲಗಾ ಜೈಲಿನ ಕೈದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. |
![]() | ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಹಿಂಡಲಗಾ ಜೈಲಿನಲ್ಲಿ ಪತ್ತೆಯಾಗಿಲ್ಲ ಫೋನ್; ಎಷ್ಟೇ ಶೋಧಿಸಿದ್ರು ಸಿಕ್ತಿಲ್ಲ ಸುಳಿವು!ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿ ಜಯೇಶ್ ಪೂಜಾರಿ ಕೈಗೆ ಮೊಬೈಲ್ ಫೋನ್ ಕೊಟ್ಟಿದ್ದು ಯಾರು? ಜೈಲಿನೊಳಗೆ ಮೊಬೈಲ್ ಫೋನ್ ಹೋಗಿದ್ದು ಹೇಗೆ? ಎಂಬ ಬಗ್ಗೆ ಅಧಿಕಾರಿಗಳಿಗೆ ಇನ್ನೂ ಸುಳಿವು ಸಿಕ್ಕಿಲ್ಲ. |
![]() | ಬೆಳಗಾವಿಯ ಹಿಂಡಲಗಾ ಜೈಲಿನಿಂದ ನಿತಿನ್ ಗಡ್ಕರಿಗೆ ಬೆದರಿಕೆ ಕರೆ; ಕೂಲಂಕಷ ತನಿಖೆ ನಡೆಸುತ್ತೇವೆ ಎಂದ ಸಿಎಂ ಬೊಮ್ಮಾಯಿಬೆಳಗಾವಿಯ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸರ್ಕಾರವು ಕೂಲಂಕಷವಾಗಿ ತನಿಖೆ ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ. |
![]() | ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ, ಬಿಗಿ ಭದ್ರತೆಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಶನಿವಾರ ಜೀವ ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಗಳು ನಿತಿನ್ ಗಡ್ಕರಿ ಹತ್ಯೆ ಮಾಡುವುದಾಗಿ ಬೆಳಗ್ಗೆ ಎರಡು ಬಾರಿ ಕರೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. |