- Tag results for VHP
![]() | ಸೌಜನ್ಯ ಕೊಲೆ ಪ್ರಕರಣ: 'ನಾವು ತಪ್ಪು ಮಾಡಿಲ್ಲ.. ತಪ್ಪಿತಸ್ಥರನ್ನು ಶಿಕ್ಷಿಸು': ಅಣ್ಣಪ್ಪ ಸ್ವಾಮಿ ಮುಂದೆ ಆಣೆಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ತಪ್ಪು ಮಾಡಿಲ್ಲ.. ತಪ್ಪಿತಸ್ಥರನ್ನು ಶಿಕ್ಷಿಸು ಎಂದು ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ದೇಗುಲದ ಮುಂದೆ ನಿಂತು ಧೀರಜ್ ಕೆಲ್ಲಾ, ಮಲ್ಲಿಕ್ ಮತ್ತು ಉದಯ್ ಜೈನ್ ಪ್ರಮಾಣ ಮಾಡಿದ್ದಾರೆ. |
![]() | ಹರಿಯಾಣ: ಆಗಸ್ಟ್ 28ರಂದು ವಿಎಚ್‌ಪಿಯಿಂದ ಯಾತ್ರೆ; ನುಹ್‌ನಲ್ಲಿ ಇಂಟರ್ನೆಟ್ ಸೇವೆ ಸ್ಥಗಿತವಿಶ್ವ ಹಿಂದೂ ಪರಿಷತ್ ಆಗಸ್ಟ್ 28ರಂದು ತಮ್ಮ ಬ್ರಿಜ್ ಮಂಡಲ್ ಜಲ ಅಭಿಷೇಕ್ ಯಾತ್ರೆಯನ್ನು ಮುಂದುವರಿಸುವುದಾಗಿ ಹೇಳಿದ ನಂತರ ಹರಿಯಾಣದ ನುಹ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ ಎಸ್ಎಂಎಸ್ ಸೇವೆಗಳನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. |
![]() | ಉತ್ತರ ಪ್ರದೇಶ: ವಿಶ್ವ ಹಿಂದೂ ಪರಿಷತ್ ಮುಖಂಡನ ಮೇಲೆ ಗುಂಡಿನ ದಾಳಿ!ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಗಗಲ್ಹೇರಿ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ವಿಎಚ್‌ಪಿ ಪದಾಧಿಕಾರಿಯೊಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಪ್ರಚೋದನಕಾರಿ ಭಾಷಣ ಆರೋಪ: ವಿಎಚ್‌ಪಿ ಮುಖಂಡರು, ಬಿಜೆಪಿ ಮಹಿಳಾ ನಾಯಕಿ ವಿರುದ್ಧ ಪ್ರಕರಣ ದಾಖಲುಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಆಗ್ರಹಿಸಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ವಿಶ್ವ ಹಿಂದೂ ಪರಿಷತ್ ನ ಇಬ್ಬರು ಮುಖಂಡರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | ವಿಎಚ್‌ಪಿ-ಭಜರಂಗ ದಳ ಪ್ರತಿಭಟನಾ ಮೆರವಣಿಗೆಗೆ 'ಸುಪ್ರೀಂ' ಸಮ್ಮತಿ; ಶಾಂತಿ ಕಾಪಾಡುವಂತೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ಸೂಚನೆನುಹ್ ಹಿಂಸಾಚಾರದ ವಿರುದ್ಧ ದೆಹಲಿ-ಎನ್‌ಸಿಆರ್‌ನಾದ್ಯಂತ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಲು ವಿಎಚ್‌ಪಿ ಮತ್ತು ಬಜರಂಗದಳಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದರೆ, ಈ ವೇಳೆ ಯಾವುದೇ ದ್ವೇಷ ಭಾಷಣ ಅಥವಾ ಯಾವುದೇ ರೀತಿಯಲ್ಲಿ ಹಿಂಸಾಚಾರ ನಡೆಯದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. |
![]() | ಹರ್ಯಾಣ: ವಿಎಚ್ ಪಿ ಮೆರವಣಿಗೆ ವೇಳೆ ಘರ್ಷಣೆ, ಸಾವಿನ ಸಂಖ್ಯೆ 4ಕ್ಕೆ ಏರಿಕೆ, 30ಕ್ಕೂ ಅಧಿಕ ಮಂದಿಗೆ ಗಾಯಮಣಿಪುರ ಹಿಂಸಾಚಾರ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ಇತ್ತ ದೆಹಲಿಗೆ ಕೂಗಳತೆ ದೂರದಲ್ಲಿರುವ ಹರ್ಯಾಣದಲ್ಲೂ ಕೋಮು ಹಿಂಸಾಚಾರದ ಸುದ್ದಿ ಕೇಳಿಬಂದಿದ್ದು, 4 ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. |
![]() | ಹರಿಯಾಣ: ವಿಎಚ್‌ಪಿ ಮೆರವಣಿಗೆ ಮೇಲೆ ಕಲ್ಲು ತೂರಾಟ; ಇಬ್ಬರು ಹೋಮ್ ಗಾರ್ಡ್ ಸಾವುಹರ್ಯಾಣದ ನುಹ್ ಜಿಲ್ಲೆಯಲ್ಲಿ ಸೋಮವಾರ ನಡೆದ ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಹೋಮ್ ಗಾರ್ಡ್‌ಗಳು ಸಾವನ್ನಪ್ಪಿದ್ದಾರೆ ಮತ್ತು ಹಲವು ಪೊಲೀಸರು... |
![]() | ಜೈನ ಮುನಿ ಹತ್ಯೆಗೆ ತೀವ್ರ ಖಂಡನೆ, ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗಳೇ ಕಾರಣ: ವಿಎಚ್‌ಪಿ ಆರೋಪಜೈನಮುನಿ ಕಾಮಕುಮಾರನಂದಿ ಮಹಾರಾಜ ಅವರ ಭೀಕರ ಹತ್ಯೆ ಪ್ರಕರಣವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಭಾನುವಾರ ತೀವ್ರವಾಗಿ ಖಂಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದೆ. |
![]() | ಮತಾಂತರ ನಿಷೇಧ ಕಾಯ್ದೆ ವಾಪಸ್: ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ವಿಹೆಚ್ ಪಿ ಪ್ರತಿಭಟನೆಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಖಂಡಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಬೆಂಗಳೂರಿನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು. |
![]() | ಬೆಂಗಳೂರು: ಮತಾಂತರ ನಿಷೇಧ ಕಾನೂನು ಹಿಂಪಡೆದಿರುವುದನ್ನು ವಿರೋಧಿಸಿ ವಿಎಚ್‌ಪಿ ಪ್ರತಿಭಟನೆಹಿಂದಿನ ಬಿಜೆಪಿ ಆಡಳಿತದಲ್ಲಿ ಜಾರಿಗೆ ತಂದ ಮತಾಂತರ ನಿಷೇಧ ಕಾನೂನನ್ನು ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಲಿದೆ. |
![]() | ಮದರಸಾಗಳು ಲವ್ ಜಿಹಾದ್‌ನ ಕೇಂದ್ರವಾಗಿದ್ದು ಅವುಗಳನ್ನು ಮುಚ್ಚಿದರೆ ಶಾಂತಿ ನೆಲೆಸುತ್ತದೆ: ಸಾಧ್ವಿ ಪ್ರಾಚಿಮಸೀದಿ, ಮದರಸಾಗಳು ಲವ್ ಜಿಹಾದ್ ನ ಕೇಂದ್ರಗಳಾಗಿದ್ದು ಅವುಗಳನ್ನು ಮುಚ್ಚುವುದರಿಂದ ಶಾಂತಿ ನೆಲೆಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ಹೇಳಿದ್ದಾರೆ. |
![]() | ಮಡಿಕೇರಿ: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ, ಪ್ರಾಣಾಪಾಯದಿಂದ ಪಾರುವಿಶ್ವ ಹಿಂದೂ ಪರಿಷತ್‌ನ ಕೊಡಗು ಜಿಲ್ಲಾಧ್ಯಕ್ಷರ ಕಾರಿನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. |
![]() | ಆಜಾನ್ ವಿವಾದ: ಡಿಸಿ ಕಚೇರಿಗೆ ಬಜರಂಗದಳ, ವಿಎಚ್‌ಪಿ ಕಾರ್ಯಕರ್ತರಿಂದ ಗೋಮೂತ್ರ ಸಿಂಪಡಣೆಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದ ಸ್ಥಳವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಸೋಮವಾರ ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದರು. |
![]() | 'ಪಠಾಣ್'ಗೆ ಹತ್ತಾರು ವಿಘ್ನ: ಗುಜರಾತ್ ನಲ್ಲಿ ಬಜರಂಗ ದಳ, ವಿಹೆಚ್ ಪಿ ಕಾರ್ಯಕರ್ತರ ಪ್ರತಿಭಟನೆ, ಶಾರೂಕ್ ಪೋಸ್ಟರ್ ಹರಿದು ಹಾಕಿ ಆಕ್ರೋಶಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಈ ತಿಂಗಳಾಂತ್ಯಕ್ಕೆ ಬಿಡುಗಡೆಗೆ ಸಿದ್ದವಾಗಿರುವ 'ಪಠಾಣ್' ಚಿತ್ರಕ್ಕೆ ಮತ್ತೆ ವಿಘ್ನ ಎದುರಾಗಿದೆ. ಬೇಷರಂ ರಂಗ್ ಹಾಡಿನ ಬಿಡುಗಡೆಯಿಂದ ಆರಂಭವಾದ ವಿವಾದದ ಕಿಚ್ಚು ಇನ್ನೂ ತಣ್ಣಗಾಗಿಲ್ಲ, ದಿನಗಳೆದಂತೆ ಹೆಚ್ಚಾಗುತ್ತಿದೆ. |
![]() | ಆರೆಸ್ಸೆಸ್ ಅನ್ನು ತಾಲಿಬಾನ್ ಜೊತೆ ಹೋಲಿಸುವುದು ಹಿಂದೂ ಸಂಸ್ಕೃತಿ ಅವಮಾನಿಸಿದಂತೆ: ಜಾವೆದ್ ಅಖ್ತರ್ ವಿರುದ್ಧ ಶಿವಸೇನಾ ಆಕ್ರೋಶತಾಲಿಬಾನ್ ಮನೋಧರ್ಮ ಅತ್ಯಂತ ಅಪಾಯಕಾರಿಯಾದದ್ದು ಹಾಗೆಯೇ ಆರೆಸ್ಸೆಸ್, ವಿಎಚ್ ಪಿ ಮತ್ತು ಭಜರಂಗದಳ ಎಂದು ಜಾವೆದ್ ಅಖ್ತರ್ ಹೇಳಿಕೆ ನೀಡಿದ್ದರು. |