• Tag results for West Bengal

ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸೋಮೆನ್ ಮಿತ್ರಾ ವಿಧಿವಶ

ಕಿಡ್ನಿ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದ ಮಿತ್ರಾ ಅವರು ಕೊಲ್ಕೋತಾ ಆಸ್ಪತ್ರೆಗೆ ದಾಖಲಾಗಿದ್ದಾರೆ, ಜುಲೈ 30ರ ಮಧ್ಯರಾತ್ರಿ 1.30 ರ ಸಮಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

published on : 30th July 2020

ಪಶ್ಚಿಮ ಬಂಗಾಳದಲ್ಲಿ ವಾರದಲ್ಲಿ ಎರಡು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ದೀದಿ ಸರ್ಕಾರ

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪಶ್ಚಿಮ ಬಂಗಾಳ ಸರ್ಕಾರ ರಾಜ್ಯದಲ್ಲಿ ವಾರದಲ್ಲಿ ಎರಡು ದಿನ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಿದೆ.

published on : 20th July 2020

ಪಶ್ವಿಮ ಬಂಗಾಳ: ಬಿಜೆಪಿ ಹಿರಿಯ ಮುಖಂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ 

 ಪಶ್ಚಿಮ ಬಂಗಾಳ ಬಿಜೆಪಿಯ ಹಿರಿಯ ಮುಖಂಡ ದೇಬೇಂದ್ರ ನಾಥ್ ರೇ ಅವರು ಸೋಮವಾರ ಬೆಳಿಗ್ಗೆ ಉತ್ತರ ದಿನಾಜ್‌ಪುರ ಜಿಲ್ಲೆಯ ಹೇಮತಾಬಾದ್ ಪ್ರದೇಶದ ತಮ್ಮ ಮನೆಯ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

published on : 13th July 2020

ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ, ಇಬ್ಬರು ಸಾವು

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

published on : 4th July 2020

30 ವರ್ಷದ ಮಹಿಳೆಗೆ ಹೊಟ್ಟೆನೋವು, ವೈದ್ಯಕೀಯ ಪರೀಕ್ಷೆ ಬಳಿಕ ತಿಳಿದದ್ದು... ಅವಳು ಹುಟ್ಟಿನಿಂದಲೇ 'ಅವಳಲ್ಲ.. ಅವನು'!

30 ವರ್ಷದ ಬಳಿಕ ಮಹಿಳೆಯೊಬ್ಬಳು ತಾನು 'ಅವಳಲ್ಲ... ಅವನು' ಎಂಬ ಸತ್ಯ ತಿಳಿದ ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ.

published on : 26th June 2020

ಜು.31 ವರೆಗೆ ಲಾಕ್ ಡೌನ್ ವಿಸ್ತರಿಸಿದ ಪಶ್ಚಿಮ ಬಂಗಾಳ 

ಕೋವಿಡ್-19  ಹರಡುವಿಕೆ ತಡೆಗಟ್ಟುವುದಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಲಾಕ್ ಡೌನ್ ನ್ನು ಜು..31 ವರೆಗೆ ವಿಸ್ತರಿಸಿದ್ದಾರೆ. 

published on : 25th June 2020

ಪಶ್ಚಿಮ ಬಂಗಾಳದಲ್ಲಿ ಜುಲೈ 31ರ ವರೆಗೆ ಶಾಲಾ, ಕಾಲೇಜ್ ಗಳು ಬಂದ್: ಮಮತಾ ಬ್ಯಾನರ್ಜಿ

ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ರಾಜ್ಯದಲ್ಲಿ ಶಾಲಾ, ಕಾಲೇಜ್ ಗಳನ್ನು ಜುಲೈ 31ರ ವರೆಗೆ ಬಂದ್ ಮಾಡಲು ನಿರ್ಧರಿಸಿದೆ.

published on : 23rd June 2020

ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಕಳ್ಳನ ಬಂಧನ, 1.16 ಗ್ರಾಂ ಚಿನ್ನಾಭರಣ ವಶ

 ಜ್ಯೂವೆಲರಿ ಶಾಪ್ ನಲ್ಲಿ ಕಳವು ಮಾಡಿದ್ದ ಆರೋಪಿಯನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿ, 1ಕೆಜಿ 16 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

published on : 13th June 2020

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣಾಸ್‌ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬನನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 10th June 2020

ಇಡೀ ದೇಶದಲ್ಲಿ ಪಶ್ಚಿಮ ಬಂಗಾಳದಲ್ಲಿ ಮಾತ್ರ ಹಿಂಸಾತ್ಮಕ ರಾಜಕೀಯಕ್ಕೆ ಪ್ರಚೋದನೆ: ಅಮಿತ್ ಶಾ

ಪಶ್ಚಿಮ ಬಂಗಾಳದಲ್ಲಿ ಹಿಂಸಾತ್ಮಕ ರಾಜಕೀಯದ ಸಂಸ್ಕೃತಿ ಇದೆ ಎಂಬ ಆರೋಪದೊಂದಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಆದಾಗ್ಯೂ, ಉಗ್ರರ ವಾತವಾರಣವಿರುವ ಟಿಎಂಸಿ ಆಡಳಿತದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ವಿಸ್ತರಿಸಲು ಬಯಸುವುದಾಗಿ ಅವರು ಹೇಳಿದ್ದಾರೆ.

published on : 9th June 2020

ಕೊರೋನಾ ವೈರಸ್: ಬಂಗಾಳದಲ್ಲಿ ಜೂನ್ 30ರವರೆಗೂ ಲಾಕ್ ಡೌನ್ ವಿಸ್ತರಿಸಿದ ಸಿಎಂ ಮಮತಾ ಬ್ಯಾನರ್ಜಿ

ದಿನೇ ದಿನೇ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಜೂನ್ 30ರವರೆಗೂ ಲಾಕ್ ಡೌನ್ ವಿಸ್ತರಿಸಿದ್ದಾರೆ.

published on : 8th June 2020

ಪಶ್ಚಿಮ ಬಂಗಾಳ: ಲಾಕ್ ಡೌನ್ ವೇಳೆ ಕೆಲಸವಿಲ್ಲದೆ ಎರಡೂವರೆ ತಿಂಗಳ ಮಗುವನ್ನು 3 ಸಾವಿರ ರೂ. ಗೆ ಮಾರಿದ ದಂಪತಿ

ಕೊರೋನಾ ಲಾಕ್ ಡೌನ್ ನಿಂದ ಮೂರು ತಿಂಗಳ ಹಿಂದೆ ಉದ್ಯೋಗ ಕಳೆದುಕೊಂಡು ಜೀವನೋಪಾಯಕ್ಕೆ ದಿಕ್ಕು ತೋಚದೆ ಪಶ್ಚಿಮ ಬಂಗಾಳದ ಮಿಡ್ನಾಪುರ್ ಜಿಲ್ಲೆಯಲ್ಲಿ ದಿನಗೂಲಿ ದಂಪತಿ ಎರಡೂವರೆ ತಿಂಗಳ ಮಗುವನ್ನು 3 ಸಾವಿರ ರೂಪಾಯಿಗೆ ಮಾರಾಟ ಮಾಡಿದ ಹೃದಯ ವಿದ್ರಾವಕ ಘಟನೆ ನಡೆದಿದೆ.

published on : 6th June 2020

ಪಶ್ಚಿಮ ಬಂಗಾಳ ಸಚಿವರಿಗೆ ಕೊರೋನಾ ಪಾಸಿಟಿವ್, ಇಂದು ದಾಖಲೆಯ 344 ಹೊಸ ಪ್ರಕರಣ ಪತ್ತೆ

ಪಶ್ಟಿಮ ಬಂಗಾಳದ ಸಚಿವರೊಬ್ಬರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಈ ಮೂಲಕ ಮಮತಾ ಬ್ಯಾನರ್ಜಿ ಸಂಪುಟಕ್ಕೂ ಮಹಾಮಾರಿ ವಕ್ಕರಿಸಿದೆ. 

published on : 29th May 2020

ನಾವು ಕೊರೋನಾ ಸಮಸ್ಯೆಯನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಎನ್ನುವುದಾದರೆ ಅವರೇ ಮಾಡಲಿ: ಅಮಿತ್ ಶಾಗೆ ಮಮತಾ ತಿರುಗೇಟು

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕೇಂದ್ರ ಸರ್ಕಾರದ ನಡುವೆ ವಾಗ್ಯುದ್ಧ ಮುಂದುವರಿದಿದೆ. ಕೊರೋನಾ ವೈರಸ್ ಬಿಕ್ಕಟ್ಟನ್ನು ನಿಭಾಯಿಸುವ ವಿಚಾರದಲ್ಲಿ ಆರಂಭದಿಂದಲೂ ಟೀಕೆ ಪ್ರತಿಟೀಕೆಗಳನ್ನು ಎದುರಿಸುತ್ತಲೇ ಬಂದಿರುವ ಮಮತಾ ಬ್ಯಾನರ್ಜಿ ಅಮಿತ್ ಶಾಗೆ ತಿರುಗೇಟು ನೀಡಿದ್ದಾರೆ.

published on : 28th May 2020

ಅಂಫಾನ್ ಚಂಡಮಾರುತ: ಮೇ 26 ರವರೆಗೂ ಶ್ರಮಿಕ್ ರೈಲು ಕಳಿಸಬೇಡಿ; ರೈಲ್ವೇಗೆ ಪಶ್ಚಿಮ ಬಂಗಾಳ ಸರ್ಕಾರ ಮನವಿ

ಅಂಫಾನ್ ಚಂಡಮಾರುತದಿಂದಾಗಿ ಈಗಾಗಲೇ ರಾಜ್ಯ ಸಾಕಷ್ಟು ಸಂಕಷ್ಟಕ್ಕೆ ಈಡಾಗಿದ್ದು, ಇಂತಹ ಸಂದರ್ಭದಲ್ಲಿ ಶ್ರಮಿಕ್ ವಿಶೇಷ ರೈಲು ರವಾನೆ ಮಾಡಬೇಡಿ ಎಂದು ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ ರೈಲ್ವೇ ಇಲಾಖೆಗೆ ಮನವಿ ಮಾಡಿದೆ.

published on : 23rd May 2020
1 2 3 4 5 6 >