• Tag results for Yeddyurappa

ಕಳೆದ 2-3 ದಿನದಲ್ಲಿ ಸಿಎಂ ಬಿಎಸ್ ವೈ ರನ್ನು ಭೇಟಿ ಮಾಡಿದ ಎಲ್ಲರಿಗೂ ಕೊರೋನಾ ಪರೀಕ್ಷೆ: ಆರೋಗ್ಯ ಇಲಾಖೆ

ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಕಳೆದ 2-3 ದಿನಗಳಿಂದ ಅವರನ್ನು ಭೇಟಿ ಮಾಡಿದ ಎಲ್ಲರನ್ನೂ ಕೋವಿಡ್-19 ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

published on : 3rd August 2020

ಸಿಎಂ ಯಡಿಯೂರಪ್ಪಗೆ ಕೊರೋನಾ ಸೋಂಕು: ಗಣ್ಯರಿಂದ ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಕೆ

ಮುಖ್ಯಮಂತ್ರಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿರುವ ವರದಿ ತಿಳಿಯುತ್ತಿದ್ದಂತೆಯೇ ಹಲವು ಗಣ್ಯರು ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿದ್ದಾರೆ. 

published on : 3rd August 2020

ಸಿಎಂ ಯಡಿಯೂರಪ್ಪ ಬಳಿಕ ಅವರ ಪುತ್ರಿಯಲ್ಲೂ ಕೊರೋನಾ ವೈರಸ್ ದೃಢ!

ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಕೊರೋನಾ ದೃಢಪಟ್ಟ ಬೆನ್ನಲ್ಲೇ ಅವರ ಪುತ್ರಿಯೊಬ್ಬರಲ್ಲೂ ಕೊರೋನಾ ಪಾಸಿಟಿವ್ ಬಂದಿದೆ ಎಂದು ಮೂಲಗಳಿಂದ ಸೋಮವಾರ ತಿಳಿದುಬಂದಿದೆ.

published on : 3rd August 2020

ಸಿಎಂ ಯಡಿಯೂರಪ್ಪ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಆರೋಗ್ಯ ಸ್ಥಿರವಾಗಿದೆ: ಮಣಿಪಾಲ್ ಆಸ್ಪತ್ರೆ

ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದನೆ ನೀಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ. 

published on : 3rd August 2020

ಐಟಿ-ಬಿಟಿ ಸ್ಟಾರ್ಟ್‌ಅಪ್‌ ಇನ್‌ಕ್ಯೂಬೇಷನ್ ಕೇಂದ್ರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ

ರಾಜ್ಯದ ಯುವ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಸುಮಾರು 34 ಕೋಟಿ ರೂ. ವೆಚ್ಚದಲ್ಲಿ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ನಿರ್ಮಿಸಿರುವ ಸುಸಜ್ಜಿತ ಐಟಿ-ಬಿಟಿ ಸ್ಟಾರ್ಟ್‌ಅಪ್ ಮತ್ತು ಇನ್‌ಕ್ಯೂಬೇಷನ್ ಕೇಂದ್ರವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು ಲೋಕಾರ್ಪಣೆ ಮಾಡಿದರು.

published on : 1st August 2020

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ: ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ರಾಜ್ಯಪಾಲ ವಜುಭಾಯ್ ವಾಲಾ ಸಭೆ

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 72,000ಕ್ಕೆ ಏರಿಕೆಯಾಗಿದ್ದು, ಈ ನಡುವಲ್ಲೇ ರಾಜ್ಯದ ಪರಿಸ್ಥಿತಿ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ರಾಜ್ಯಪಾಲ ವಜುಭಾಯ್ ವಾಲಾ ಅವರು ಸಭೆ ಮಾತುಕತೆ ನಡೆಸಿದ್ದಾರೆ. 

published on : 1st August 2020

ಲೈಫ್ ಸೈನ್ಸ್ ಪಾರ್ಕ್'ನಿಂದ 50 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ: ಸಿಎಂ ಯಡಿಯೂರಪ್ಪ

150ಕ್ಕೂ ಹೆಚ್ಚು ಜೈವಿಕ ತಂತ್ರಜ್ಞಾನ ಸ್ಥಾಪನೆಗೆ ಅನುವು ಮಾಡಿಕೊಡುವ ಲೈಫ್ ಸೈನ್ಸ್ ಕಂಪನಿ ಪಾರ್ಕ್ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು. 

published on : 30th July 2020

ಆತ್ಮ ನಿರ್ಬರ್ ನಿಧಿ ಮೂಲಕ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತಷ್ಟು ಉತ್ತೇಜನ ನೀಡಿ: ಸಿಎಂಗೆ ನಡ್ಡಾ ಸೂಚನೆ

ಆತ್ಮ ನಿರ್ಬರ್ ನಿಧಿ ಮೂಲಕ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತಷ್ಟು ಉತ್ತೇಜನ ನೀಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ. ನಡ್ಡಾ ಅವರು ಮಂಗಳವಾರ ಸೂಚನೆ ನೀಡಿದ್ದಾರೆ. 

published on : 29th July 2020

ಮುಖ್ಯಮಂತ್ರಿಗಳಿಂದ 'ಶಿವಪದ ರತ್ನಕೋಶ' ಗ್ರಂಥ ಲೋಕಾರ್ಪಣೆ

ಮೈಸೂರಿನ ಜಗದ್ಗುರು ಶಿವರಾತ್ರೀಶ್ವರ ಮಹಾವಿದ್ಯಾಪೀಠ ಹೊರತಂದಿರುವ “ಶಿವಪದ ರತ್ನಕೋಶ” ಗ್ರಂಥವನ್ನು ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಇಂದು ಆನ್ ಲೈನ್ ಮೂಲಕ ಬಿಡುಗಡೆ ಮಾಡಿದರು. 

published on : 28th July 2020

ಅತೃಪ್ತಿ ಶಮನಕ್ಕೆ ಯತ್ನ: ಸಚಿವಕಾಂಕ್ಷಿಗಳಿಗೆ ನಿಗಮ -ಮಂಡಳಿ ಅಧ್ಯಕ್ಷ ಸ್ಥಾನ; 4 ಶಾಸಕರಿಂದ ರಿಜೆಕ್ಟ್

ಸಂಪುಟ ಪುನಾರಚನೆ ಕಾರ್ಯ ರಾಜ್ಯ ಸರ್ಕಾರದಲ್ಲಿ ಚುರುಕುಗೊಳ್ಳುತ್ತಿದ್ದು, ಈ ನಡುವೆ ಭುಗಿಲೇಳಲಿರುವ ಅತೃಪ್ತಿಯನ್ನು ಶಮನ ಮಾಡಲು ಯತ್ನಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ವರ್ಷ ಪೂರೈಸಿದ ಖುಷಿಯಲ್ಲಿಯೇ 24 ಮಂದಿ ಶಾಸಕರಿಗೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ನೀಡಿ ಆದೇಶ ಹೊರಡಿಸಿದ್ದಾರೆ.

published on : 28th July 2020

ಕೋವಿಡ್-19 ನಿಂದ ರಾಜ್ಯದ ಅಭಿವೃದ್ಧಿ ವೇಗಕ್ಕೆ ಕಂಟಕವಾಗಿರುವ ನೋವು ನನಗಿದೆ: ಸಿಎಂ ಬಿ.ಎಸ್. ಯಡಿಯೂರಪ್ಪ

ಕೋವಿಡ್ 19 ಸೋಂಕಿನಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನೆಡೆಯಾಗಿದ್ದು, ಕೋವಿಡ್ ಸಂಕಷ್ಟ ಬರದೇ ಇದ್ದಿದ್ದರೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಬಹುದಿತ್ತು. ಪ್ರಗತಿಯಲ್ಲಿ ಹಿನ್ನೆಡೆ ಕಂಡ ನೋವು ನನಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ.

published on : 27th July 2020

ಕರ್ನಾಟಕ ಆರ್ ಟಿಐ ವೆಬ್ ಸೈಟ್ ಸ್ಥಗಿತ, ತಿಂಗಳಾದರೂ ಕ್ರಮ ಕೈಗೊಳ್ಳದ ಸರ್ಕಾರ, 'ಉದ್ದೇಶಪೂರ್ವಕ' ಎಂದ ಕಾರ್ಯಕರ್ತರು!

ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಮಾಹಿತಿ ಪಡೆಯಲು ಇದ್ದ ಸರ್ಕಾರದ ಮಾಹಿತಿ ಹಕ್ಕು ವೆಬ್ ಸೈಟ್ ಸ್ಥಗಿತವಾಗಿ ಒಂದು ತಿಂಗಳೇ ಕಳೆದರೂ ಸೈಟ್ ದುರಸ್ತಿ ಮಾಡುವ ಕಾರ್ಯಕ್ಕೆ ಸರ್ಕಾರ ಮುಂದಾಗದೇ ಇರುವುದು ಇದೀಗ ಮಾಹಿತಿ ಹಕ್ಕು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. 

published on : 27th July 2020

ಎಪಿಜೆ ಅಬ್ದುಲ್ ಕಲಾಂ ಪುಣ್ಯತಿಥಿ: ಮುಖ್ಯಮಂತ್ರಿ, ಸಚಿವರಿಂದ ಗೌರವ ನಮನ

ಮಾಜಿ ರಾಷ್ಟ್ರಪತಿ, ಮಿಸೈಲ್ ಮ್ಯಾನ್‌ ಎಂದೇ ಖ್ಯಾತರಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.

published on : 27th July 2020

'ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ': ಬಿಎಸ್'ವೈ ಸರ್ಕಾರಕ್ಕೆ ವರ್ಷದ ಸಂಭ್ರಮ, ಇಂದು ಸಾಧನೆಯ ಪುಸ್ತಕ ಬಿಡುಗಡೆ

ರಾಜ್ಯದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾಧನೆಯ ಪುಸ್ತಕ ಬಿಡುಗಡೆಗೊಳಿಸಿ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.

published on : 27th July 2020

ಸವಾಲು-ಸಂಕಷ್ಟಗಳ ನಡುವೆಯೂ 1 ವರ್ಷ ಪೂರ್ಣಗೊಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ

ದಕ್ಷಿಣ ಭಾರತದಲ್ಲಿ 2ನೇ ಬಾರಿಗೆ ಅಧಿಕಾರ ಹಿಡಿದಿರುವೋ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಪೂರ್ಣಗೊಂಡಿದೆ. 

published on : 26th July 2020
1 2 3 4 5 6 >