accident

ತಮಿಳುನಾಡಿನಲ್ಲಿ ಭೀಕರ ಅಪಘಾತ: ಎರಡು ಬಸ್'ಗಳು ಮುಖಾಮುಖಿ ಡಿಕ್ಕಿ, ಇಬ್ಬರ ಸಾವು, 30 ಮಂದಿಗೆ ಗಾಯ
ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಕನಿಷ್ಠ 30 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಬೆಂಗಳೂರು: ಬೈಕ್‌ಗೆ ಕಾರು ಡಿಕ್ಕಿ ಹೊಡೆದು 100 ಮೀಟರ್ ಎಳೆದೊಯ್ದು ಡೆಲಿವರಿ ಬಾಯ್ ಸಾವು!
ಬೆಂಗಳೂರಿನ ರಾಜರಾಜೇಶ್ವರಿನಗರ ಮೆಟ್ರೋ ನಿಲ್ದಾಣದ ಬಳಿ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು 100 ಮೀಟರ್‌ವರೆಗೆ ಎಳೆದೊಯ್ದ ಪರಿಣಾಮ ಡೆಲಿವರಿ ಬಾಯ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೈಸೂರು-ಹಾಸನ ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ಯುವಕರ ದುರ್ಮರಣ
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ಕೆ.ಆರ್. ಪೇಟೆ ತಾಲೂಕಿನ ಹಿರೀಕಳಲೆ ಗ್ರಾಮದ ಬಳಿ ಮೈಸೂರು-ಹಾಸನ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.

ಛತ್ತೀಸ್‌ಗಢ: ಸೇತುವೆಗೆ ಡಿಕ್ಕಿ ಹೊಡೆದ ಬಸ್, 26 ಮಂದಿಗೆ ಗಾಯ
ಬಸ್ ವೊಂದು ಸೇತವೆಗೆ ಡಿಕ್ಕೆ ಹೊಡೆದ ಪರಿಣಾಮ ಕನಿಷ್ಠ 26 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ಘರ್‌ಘೋಡಾ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

ಆಂಧ್ರ ಪ್ರದೇಶ: ಕಾರು-ಸರಕು ವಾಹನ ಡಿಕ್ಕಿ, ನಾಲ್ವರ ಸಾವು
ಪೂರ್ವ ಗೋದಾವರಿ ಜಿಲ್ಲೆಯ ಮಡಿಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಸರಕು ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಬೆಳಗಾವಿ ಭೀಕರ ಸರಣಿ ಅಪಘಾತ: ಇಬ್ಬರು ಸಾವು
ಕಾರು, ಕಂಟೇನರ್‌ಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ಸ್ವಾಮೀಜಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಶನಿವಾರ ನಡೆದಿದೆ.

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಟ್ರಕ್ ನಡುವೆ ಡಿಕ್ಕಿ, ಮೂವರ ದುರ್ಮರಣ
ಮಧ್ಯಪ್ರದೇಶದ ಮೊರೆನಾದ ದೇವ್ ಪುರಿ ಬಾಬಾ ಪ್ರದೇಶದಲ್ಲಿ ಭೀಕರ ರಸ್ತೆ ಅಫಘಾತ ಸಂಭವಿಸಿದ್ದು, ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿದ ಪರಿಣಾಮ ಮೂವರು ದುರ್ಮರಣವನ್ನಪ್ಪಿ, 7 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ತುಮಕೂರು: ಆ್ಯಕ್ಸೆಲ್ ಬ್ಲೇಡ್ ಕಟ್ ಆಗಿ ಆಟೋಗೆ ಗುದ್ದಿದ ಕ್ಯಾಂಟರ್; ಮದುವೆ ಮುಗಿಸಿ ವಾಪಸಾಗುತ್ತಿದ್ದ ತಾಯಿ-ಮಗಳು ಸಾವು
ಕ್ಯಾಂಟರ್ ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗಳು ದುರಂತ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಕಾನ್ಪುರ: ಪಿಡಬ್ಲ್ಯುಡಿ ಅಧಿಕಾರಿ ಕಾರು ಡಿಕ್ಕಿಯಾಗಿ ಮೂವರು ವೃದ್ಧ ರೈತರು ಸಾವು, ಚಾಲಕನ ಬಂಧನ!
ಕಾನ್ಪುರ ಜಿಲ್ಲೆಯ ಬಿಲ್ಹೌರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಡಬ್ಲ್ಯುಡಿ ಅಧಿಕಾರಿಗೆ ಸೇರಿದ ಕಾರು ಡಿಕ್ಕಿಯಾಗಿ ಮೂವರು ವೃದ್ಧ ರೈತರು ಮೃತಪಟ್ಟಿದ್ದಾರೆ.

