ದೇಶಅಂಫಾನ್ ಚಂಡಮಾರುತಕ್ಕೆ 76 ಮಂದಿ ಬಲಿ: ವೈಮಾನಿಕ ಸಮೀಕ್ಷೆಗೆ ಪಶ್ಚಿಮ ಬಂಗಾಳಕ್ಕೆ ತೆರಳಿದ ಪ್ರಧಾನಿ ಮೋದಿ
ಗಂಟೆಗೆ 190 ಕಿಲೋಮೀಟರ್ ವೇಗದ ಬಿರುಗಾಳಿ ಸಹಿತ ಮಳೆಯೊಂದಿಗೆ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಅಪ್ಪಳಿಸಿರುವ ಅಂಫಾನ್ ಚಂಡಮಾರುತ ಘೋರ ಅನಾಹುತವನ್ನೇ ಸೃಷ್ಟಿಸಿದೆ. ಪ್ರಮುಖವಾಗಿ ಕಳೆದ 100 ವರ್ಷಗಳ ಇತಿಹಾಸದಲ್ಲಿ ಬಂಗಾಳ ಕಂಡ ಅತ್ಯಂತ ತೀಕ್ಷ್ಣ ಸ್ವರೂಪದ ಚಂಡಮಾರುತ ಇದಾಗಿದ್ದು, ಕೊರೋನಾದಿಂದ ನಲುಗಿದ್ದ ರಾಜ್ಯವನ್ನು ಮತ್ತಷ್ಟು ಕಂಗೆಡಿಸಿದೆ.