ವಿದೇಶಗಾಜಾ ಆಸ್ಪತ್ರೆ ಮೇಲೆ ವೈಮಾನಿಕ ದಾಳಿ: ಮೃತರ ಸಂಖ್ಯೆ 500ಕ್ಕೆ ಏರಿಕೆ, ಮುಂದುವರೆದ ರಕ್ಷಣಾ ಕಾರ್ಯ!
ದಕ್ಷಿಣ ಗಾಜಾದಲ್ಲಿರುವ ಅಲ್ ಅಹ್ಲಿ ಆಸ್ಪತ್ರೆಯ ಮೇಲೆ ಮಂಗಳವಾರ ಇಸ್ರೇಲ್ ನಡೆಸಿದ ಭಾರೀ ಪ್ರಮಾಣದ ವಾಯು ದಾಳಿಯಲ್ಲಿ ಮೃತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇದು ಇಸ್ರೇಲ್-ಹಮಾಸ್ ಸಂಘರ್ಷ ಆರಂಭವಾದ ಬಳಿಕ ಒಂದೇ ಸ್ಥಳದಲ್ಲಿ ದಾಖಲಾದ ಹೆಚ್ಚಿನ ಸಾವಿನ ಪ್ರಮಾಣವಾಗಿದೆ.