Andhra, Karnataka

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್: ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಆದೇಶ..!
ಈವರೆಗೆ ಕರ್ನಾಟಕ ತನ್ನ ಪಾಲಿನ ನೀರನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಿಲ್ಲ ಎಂದು ತಮಿಳುನಾಡು ಆಕ್ಷೇಪಿಸಿದ್ದು, ಹೆಚ್ಚಿನ ಪ್ರಮಾಣದ ನೀರು ಹರಿಸುವಂತೆ ಮನವಿ ಸಲ್ಲಿಸಿತು.

ಪೋಲೆಂಡ್ ಪ್ರಧಾನಿ ಎರಡನೇ ಬಾರಿ ಬೆಂಗಳೂರಿಗೆ ಭೇಟಿ ನೀಡಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಷಯ; AI-Aerospace ಕ್ಷೇತ್ರಗಳಲ್ಲಿ ಸಹಕಾರ: ಸಿಎಂ; Video
ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರನ್ನು ಇಂದು ಬೆಂಗಳೂರಿನಲ್ಲಿ ಸ್ವಾಗತಿಸಿ ಆತಿಥ್ಯ ನೀಡಿದ ಬಳಿಕ ಚರ್ಚೆ ನಡೆಸಿದರು. ಈ ಭೇಟಿಯಿಂದ ಅಂತಾರಾಷ್ಟ್ರೀಯ ಹೂಡಿಕೆಯನ್ನು ಆಕರ್ಷಿಸಲು ಮತ್ತು ಪೋಲೆಂಡ್‌ನ ಕಂಪನಿಗಳೊಂದಿಗೆ ಸಹಕಾರವನ್ನು ವಿಸ್ತರಿಸಲು ಅವಕಾಶ ದೊರೆಯಲಿದೆ ಎಂದು ಹೇಳಿದರು.

ಮಧ್ಯಪ್ರಾಚ್ಯ ಉದ್ವಿಗ್ನತೆ ಎಫೆಕ್ಟ್: ಸೌದಿ ಅರೇಬಿಯಾದಲ್ಲಿ ಕರ್ನಾಟಕದ 500ಕ್ಕೂ ಹೆಚ್ಚು ಯಾತ್ರಿಕರು ಸಂಕಷ್ಟದಲ್ಲಿ; ರಕ್ಷಣೆಗೆ ಸರ್ಕಾರ ಕಸರತ್ತು..!
ಸೌದಿ ರಿಯಾಲ್‌ಗೆ ಹೋಲಿಸಿದರೆ ಭಾರತೀಯ ರೂಪಾಯಿಯ ವಿನಿಮಯ ಮೌಲ್ಯ ಕಡಿಮೆ ಇರುವುದರಿಂದ ಒಬ್ಬರಿಗೆ ದಿನಕ್ಕೆ ಊಟಕ್ಕಾಗಿ ಸುಮಾರು 1,500 ರೂಪಾಯಿ ಖರ್ಚಾಗುತ್ತಿದೆ. ಅಗತ್ಯಬಿದ್ದರೆ ಆಹಾರದ ವ್ಯವಸ್ಥೆ ಮಾಡುತ್ತೇವೆ.

ರಾಜವೈಭವದ ಸುವರ್ಣ ರಥ ಮತ್ತೆ ಸಂಚಾರ: ಹೊಸ ರೂಪದಲ್ಲಿ Golden Chariot ರೈಲು; ಮೊದಲ ಪ್ರಯಾಣದ ಟಿಕೆಟ್ ಸೋಲ್ಡ್ ಔಟ್..!
ಹೊಸ ರೂಪದೊಂದಿಗೆ ವನ್ಯಜೀವಿ, ರಾಜವೈಭವ, ವಿಶ್ವ ಪರಂಪರೆಯ ತಾಣಗಳು, ಕಾಫಿ ನಾಡು ಮತ್ತು ಕರಾವಳಿ ಪ್ರವಾಸದ ಅನುಭವಗಳನ್ನು ಒಳಗೊಂಡ ವಿಶೇಷ ಪ್ರವಾಸಗಳನ್ನು ಈ ಬಾರಿ ಆಯೋಜಿಸಲಾಗಿದೆ.

ಗ್ರಾಮೀಣ ಭಾಗದಲ್ಲಿ ಬರಗಾಲ: ಹೊಟ್ಟೆಪಾಡಿಗಾಗಿ ನಗರಗಳತ್ತ ಮುಖ ಮಾಡಿದ ಕುಟುಂಬಗಳು..!
ಬೆಳೆ ನಷ್ಟ ಮತ್ತು ಆದಾಯದ ಕೊರತೆಯಿಂದ ಬದುಕು ನಡೆಸುವುದೇ ಕಷ್ಟವಾಗಿರುವ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಉದ್ಯೋಗ ಅರಸಿ ಬೆಂಗಳೂರು, ಹೈದರಾಬಾದ್, ಮುಂಬೈ ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಇದರಿಂದ ಗ್ರಾಮದಲ್ಲಿ ವೃದ್ಧರೇ ಹೆಚ್ಚಿನ ಸಂಖ್ಯೆಯಲ್ಲಿ ಉಳಿಯುವಂತಾಗಿದೆ.

ರಾಜ್ಯದಲ್ಲಿ ಭೀಕರ ಬರ: ₹62,481 ಕೋಟಿ ಮೌಲ್ಯದ ಬೆಳೆ ನಷ್ಟ; ನೆರವು ಕೋರಿ ಪ್ರಧಾನಿ ಮೋದಿಗೆ DCM ಪರಮೇಶ್ವರ್ ಪತ್ರ
ರಾಜ್ಯದ 57.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಸಂಭವಿಸಿದೆ. ಹಾನಿಯ ಪ್ರಮಾಣ ಶೇ.33ರಿಂದ ಶೇ.100ರ ವರೆಗೆ ಇದ್ದು, ಬಹುತೇಕ ಪೀಡಿತ ಪ್ರದೇಶಗಳಲ್ಲಿ ಶೇ.50ಕ್ಕಿಂತ ಹೆಚ್ಚಿನ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಮುಂದಿನ ಐದು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯ ಅನೇಕ ಕಡೆಗಳಲ್ಲಿ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಪೊಲೀಸ್ ಸಿಬ್ಬಂದಿಗೆ ಬಿಗ್ ಗಿಫ್ಟ್: ಬ್ರಿಟಿಷ್ ಕಾಲದ ಮೆಟಲ್ ಪರಿಕರಗಳಿಗೆ ಗುಡ್‌ಬೈ ಹೇಳಲು ಸರ್ಕಾರ ಮುಂದು; ಹೊಸ whistle guards ಘೋಷಣೆ..!
ಪೊಲೀಸರು ನಮ್ಮನ್ನು ರಕ್ಷಿಸಲು ಎಲ್ಲ ರೀತಿಯ ಹವಾಮಾನ ಪರಿಸ್ಥಿತಿಗಳಲ್ಲೂ ಕರ್ತವ್ಯ ನಿರ್ವಹಿಸುತ್ತಾರೆ. ಅವರ ಸೇವೆಯನ್ನು ಗುರುತಿಸಿ ನಮ್ಮ ಸರ್ಕಾರ ಈ ಹೊಸ ವಿಸಿಲ್ ಗಾರ್ಡ್‌ಗಳನ್ನು ಉಡುಗೊರೆಯಾಗಿ ನೀಡುತ್ತಿದೆ.

ಶೇ.70 ರಷ್ಟು ಅಂತರ್ಜಲ ಬಳಕೆ: ಅಂತರ್ಜಲ ಮಟ್ಟ ಮತ್ತಷ್ಟು ಕುಸಿಯುವ ಆತಂಕ; ಬರಗಾಲದ ಸಮಯದಲ್ಲಿ ಮತ್ತಷ್ಟು ಸಂಕಷ್ಟ
ಈ ವರ್ಷ ಅಂತರ್ಜಲವನ್ನು ಹೆಚ್ಚು ಪ್ರಮಾಣದಲ್ಲಿ ಹೊರತೆಗೆಯುತ್ತಿರುವುದರಿಂದ, ಈ ಸಂಖ್ಯೆಗಳು ಇನ್ನಷ್ಟು ಹೆಚ್ಚಾಗಲಿವೆ. ಇದು ಮೂತ್ರಪಿಂಡ, ಯಕೃತ್ತು, ಮೂಳೆಗಳು ಮತ್ತು ಇತರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವ ಮೂಲಕ ಮಾನವನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

