Andhra, Karnataka

ಸಂಸತ್ ನಲ್ಲಿ ಕನ್ನಡ ಕಲರವ: ರಾಜ್ಯದ 27 ಸಂಸದರು ಕನ್ನಡದಲ್ಲಿ, ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣವಚನ!
ಬಹುತೇಕರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಪ್ರಿಯಾಂಕಾ ಜಾರಕಿಹೊಳಿ (ಚಿಕ್ಕೋಡಿ) ಸಂವಿಧಾನದ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ
ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಪೆಟ್ರೋಲ್ 7 ರೂ. ಚೀಪ್: ಗೋವಾ ಗಡಿ ಬಂಕ್ ಗಳಲ್ಲಿ ರಾಜ್ಯದ ವಾಹನಗಳು ಸಾಲು!
ಗೋವಾದಲ್ಲಿ ರಾಜ್ಯಕ್ಕೆ ಹೋಲಿಕೆ ಮಾಡಿದರೆ ಅಲ್ಲಿನ ಪೆಟ್ರೋಲ್ ಬೆಲೆ ಸುಮಾರು 7 ರೂ. ಕಡಿಮೆಯಿದೆ. ಡೀಸೆಲೆ ಬೆಲೆ ಕೂಡ 1.50ರೂ ಕಡಿಮೆಯಿದೆ.

ಸನಾತನ ಧರ್ಮ ಕುರಿತು ಸ್ಟಾಲಿನ್ ಹೇಳಿಕೆ: ಕಾರ್ಯಕ್ರಮದ ಆಯೋಜಕರ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ
ʼಸನಾತನ ಧರ್ಮ ನಿರ್ಮೂಲನೆ ಅಗತ್ಯʼ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್ ಅವರು ಹೇಳಿಕೆ ನೀಡಿದ್ದಾರೆ ಎನ್ನಲಾದ ಕಾರ್ಯಕ್ರಮದ ಆಯೋಜಕರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ದಲಿತರಿಗೆ ಬಿಜೆಪಿಯಲ್ಲಿ ಸೂಕ್ತ ಪ್ರಾತಿನಿಧ್ಯ, ನ್ಯಾಯ ಸಿಗುತ್ತಿಲ್ಲ: ನಾಯಕರ ಅಭಿಮತ
ಕರ್ನಾಟಕದಿಂದ ಏಳು ಬಾರಿ ಸಂಸದರಾಗಿದ್ದ ರಮೇಶ್ ಜಿಗಜಿಣಗಿ ಮತ್ತು ಮೊದಲ ಬಾರಿಗೆ ಸಂಸದರಾಗಿರುವ ಮಾಜಿ ಡಿಸಿಎಂ ಗೋವಿಂದ್ ಕಾರಜೋಳ ಅವರು ದಲಿತ ನಾಯಕರಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಸಿಗುತ್ತದೆ ಎಂದು ನಿರೀಕ್ಷಿಸಿದ್ದೆವು ಆದರೆ ಅವರಿಗೆ ಏನೂ ಹುದ್ದೆಗಳು ಸಿಗಲಿಲ್ಲ.

ಉಪಚುನಾವಣೆಯಲ್ಲಿ ರಾಜ್ಯದ ಜನತೆ ಮತ್ತೆ ಕಾಂಗ್ರೆಸ್ ತಿರಸ್ಕರಿಸಲಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಂದಲೇ ಗೆಲುವು ಸಾಧಿಸುತ್ತೇವೆಂದು ಕಾಂಗ್ರೆಸ್ ತಿಳಿದಿದೆ. ಆದರೆ, ಜನರು ಈ ಯೋಜನೆಗಳನ್ನು ತಿರಸ್ಕಿರಿಸಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಹೆಚ್ಚುವರಿ ಡಿಸಿಎಂ ಬೇಡಿಕೆ ಮತ್ತೆ ಮುನ್ನಲೆಗೆ: ಕೇಳೋದರಲ್ಲಿ ತಪ್ಪೇನು ಇಲ್ಲ ಎಂದ ಸಚಿವ ರಾಜಣ್ಣ
ಜಮೀರ್ ಅಹಮದ್ ಖಾನ್, ಸತೀಶ್ ಜಾರಕಿಹೊಳಿ ಅವರ ಬಳಿಕ ಇದೀಗ ಕೆಎನ್ ರಾಜಣ್ಣ ಅವರು ಈ ಬಗ್ಗೆ ಮಾತನಾಡಿದ್ದಾರೆ. ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಹೆಚ್ಚು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು: ಕಗ್ಗದಾಸಪುರ ಕೆರೆ ಅಭಿವೃದ್ಧಿ ಕಾಮಗಾರಿ ಡಿಸೆಂಬರ್ ವೇಳೆಗೆ ಪೂರ್ಣ!
ಕಗ್ಗದಾಸಪುರ ಕೆರೆ ಅಭಿವೃದ್ಧಿ ಕಾರ್ಯ ವೇಗ ಪಡೆದುಕೊಂಡಿದ್ದು, ಕಾಮಗಾರಿಯು ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ತಿಳಿದುಬಂದಿದೆ.

94 ಮಂದಿ ಕನ್ನಡಿಗರಿಗೆ ವಿದೇಶದಲ್ಲಿ ಉದ್ಯೋಗ: KSDC ಹೊಸ ಯೋಜನೆ ನೆರವು!
ಬಿಇ, ಡಿಪ್ಲೋಮಾ, ಐಟಿಐ ಮತ್ತಿತರ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ 94 ಯುವಕರಿಗೆ ಸ್ಲೋವಾಕಿಯಾ ರಾಷ್ಟ್ರದಲ್ಲಿ ಉದ್ಯೋಗ ಕೊಡಿಸುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮ ಯಶಸ್ವಿಯಾಗಿದೆ.

