social_icon
  • Tag results for anticipatory bail

ಕಿರುಕುಳ ಪ್ರಕರಣ: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಹೈಕೋರ್ಟ್

ಅಸ್ಸಾಂ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಛಾಟಿಸಲಾಗಿರುವ ಅಂಕಿತಾ ದತ್ತಾ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ  ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ವಿ. ಶ್ರೀನಿವಾಸ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಸ್ಸಾಂ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

published on : 5th May 2023

ಕರ್ನಾಟಕ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ!

ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಬಿಜೆಪಿ ಶಾಸಕರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ.

published on : 27th March 2023

ನಿರೀಕ್ಷಣಾ ಜಾಮೀನಿನ ವಿರುದ್ಧ ಲೋಕಾಯುಕ್ತ ಅರ್ಜಿ; ಮಾಡಾಳ್ ವಿರೂಪಾಕ್ಷಪ್ಪ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಟೆಂಡರ್ ಮಂಜೂರು ಮಾಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿರುವ ಅರ್ಜಿ ಕುರಿತು ಸೋಮವಾರ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಳಿದೆ.

published on : 27th March 2023

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಿಚಾರಣೆ ಪೂರ್ಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತಕ್ಕೆ (ಕೆಎಸ್‌ಡಿಎಲ್) ಕಚ್ಚಾ ತೈಲ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಶುಕ್ರವಾರ ಕಾಯ್ದಿರಿಸಿದೆ.

published on : 18th March 2023

ಲಂಚ ಪ್ರಕರಣದ ಆರೋಪಿ ಮಾಡಾಳ್ ಗೆ ತ್ವರಿತ ವಿಚಾರಣೆ, ಜಾಮೀನು: ವಕೀಲರ ಸಂಘ ಖಂಡನೆ, ಸಿಜೆಐ ಗೆ ಪತ್ರ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ಮಾಡಿರುವುದು ಹಾಗೂ ಒಂದೇ ದಿನದಲ್ಲಿ ಇತ್ಯರ್ಥಗೊಳಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ನ್ಯಾಯಾಂಗದ ನಡೆಗೆ ವಕೀಲರ ಸಂಘ ತೀವ್ರ ಆಘಾತ ವ್ಯಕ್ತಪಡಿಸಿದೆ. 

published on : 8th March 2023

'ಸ್ಯಾಂಟ್ರೋ ರವಿ' ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜ.17ಕ್ಕೆ ಮುಂದೂಡಿಕೆ

'ಸ್ಯಾಂಟ್ರೋ' ರವಿಯನ್ನು ಕೂಡಲೇ ಬಂಧಿಸಬೇಕು ಎಂಬ ಕೂಗು ಎಲ್ಲೆಡೆಯಿಂದ ಕೇಳಿಬರುತ್ತಿರುವ ಬೆನ್ನಲ್ಲೇ, ಮೈಸೂರಿನ 6ನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸ್ಯಾಂಟ್ರೋ ರವಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನವರಿ 17ಕ್ಕೆ ಮುಂದೂಡಿದೆ.

published on : 13th January 2023

ಅಶ್ಲೀಲ ಚಿತ್ರ ನಿರ್ಮಾಣ ಆರೋಪ: ರಾಜ್ ಕುಂದ್ರಾ, ಇತರರಿಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು

ಅಶ್ಲೀಲ ಚಿತ್ರ ನಿರ್ಮಾಣ ಆರೋಪದಲ್ಲಿ ದಾಖಲಾಗಿರುವ ಎಫ್‌ಆಆರ್‌ಗೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ಮತ್ತು ನಟರಾದ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಸೇರಿದಂತೆ ಇತರರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಿದೆ.

published on : 13th December 2022

ಮತದಾರರ ಮಾಹಿತಿ ಕಳವು ಪ್ರಕರಣ: ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಎಂಬ ಎನ್‌ಜಿಒಗೆ ಪೊಲೀಸರು ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೆಟ್ಟಿಲೇರಿರುವ ಬೆಂಗಳೂರು ನಗರ ಡಿಸಿ ಕೆ ಶ್ರೀನಿವಾಸ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿದೆ.

published on : 9th December 2022

ಇಸ್ರೋ ಬೇಹುಗಾರಿಕೆ ಪ್ರಕರಣ: ನಾಲ್ವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಕೇರಳ ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

1994ರ ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸೇರಿದಂತೆ ನಾಲ್ವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಕೇರಳ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

published on : 2nd December 2022

ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಮುರುಘಾ ಶ್ರೀ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಬಂಧನ ಭೀತಿ ಎದುರಿಸುತ್ತಿದ್ದು, ಸೋಮವಾರ ನಿರೀಕ್ಷಣಾ ಜಾಮೀನು ಕೋರಿ...

published on : 29th August 2022

ನಟಿಯ ಮೇಲೆ ಅತ್ಯಾಚಾರ ಆರೋಪ: ಮಲಯಾಳಂ ನಟ ವಿಜಯ್ ಬಾಬುಗೆ ನಿರೀಕ್ಷಣಾ ಜಾಮೀನು

ನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಲಯಾಳಂ ನಟ ವಿಜಯ್ ಬಾಬು ಅವರಿಗೆ ಕೇರಳ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

published on : 22nd June 2022

ವೀಸಾ ಹಗರಣ ಕೇಸ್: ಕಾರ್ತಿ ಚಿದಂಬರಂಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಿರಾಕರಣೆ

ಚೀನಾ ಪ್ರಜೆಗಳಿಗೆ ವೀಸಾ ನೀಡಿಕೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿಯ ನ್ಯಾಯಾಲಯವೊಂದು ಶುಕ್ರವಾರ ವಜಾಗೊಳಿಸಿದೆ.

published on : 3rd June 2022

ಪಿಎಸ್‌ಐ ನೇಮಕಾತಿ ಹಗರಣ: ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಐಡಿ ಆಕ್ಷೇಪ

ಪಿಎಸ್‌ಐ ನೇಮಕಾತಿ ಹಗರಣದ ಆರೋಪಿ ದಿವ್ಯಾ ಹಾಗರಗಿ ಸೇರಿದಂತೆ ಐವರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಗೆ ಪಿಎಸ್‌ಐ ಸಿಇಟಿ ಹಗರಣದ ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ಇಲಾಖೆ (ಸಿಐಡಿ) ಸೋಮವಾರ ಆಕ್ಷೇಪಣೆ ಸಲ್ಲಿಸಿದೆ.

published on : 26th April 2022

ಎನ್ಎಸ್ಇ ಮಾಜಿ ಎಂಡಿ ಚಿತ್ರಾ ರಾಮಕೃಷ್ಣನ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ವಿಶೇಷ ಸಿಬಿಐ ಕೋರ್ಟ್

ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE)ದ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿತ್ರಾ ರಾಮಕೃಷ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿಯ ವಿಶೇಷ ಸಿಬಿಐ ಕೋರ್ಟ್ ಶನಿವಾರ ವಜಾಗೊಳಿಸಿದೆ.

published on : 5th March 2022

ನಟಿ ಅಪಹರಣ ಪ್ರಕರಣದ ತನಿಖಾಧಿಕಾರಿ ಕೊಲೆ ಯತ್ನ ಕೇಸ್: ಮಲಯಾಳಂ ನಟ ದಿಲೀಪ್ ಗೆ ನಿರೀಕ್ಷಣಾ ಜಾಮೀನು

2017 ರ ನಟ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತನಿಖಾಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ನಟ ದಿಲೀಪ್ ಮತ್ತು ಇತರ ಆರೋಪಿಗಳಿಗೆ ಕೇರಳ ಹೈಕೋರ್ಟ್ ಸೋಮವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

published on : 7th February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9