arrested

ಬೆಂಗಳೂರು: ಕೋವಿಡ್ ರೋಗಿಯ ಶವವನ್ನು ಫುಟ್ ಪಾತ್ ನಲ್ಲಿ ಇಟ್ಟು ಹೋಗಿದ್ದ ಆ್ಯಂಬುಲೆನ್ಸ್ ಚಾಲಕನ ಬಂಧನ
ಹೆಚ್ಚು ಹಣ ಕೊಡದಿದ್ದಕ್ಕೆ ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಫುಟ್ ಪಾತ್ ನಲ್ಲಿ ಇಟ್ಟು ಪರಾರಿಯಾಗಿದ್ದ ಖಾಸಗಿ ಆ್ಯಂಬುಲೆನ್ಸ್ ಚಾಲಕನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಮೊಬೈಲ್ ಕಳ್ಳತನ ಪ್ರಕರಣ: ಆರೋಪಿ ಬಂಧನ
ಮಡಿಕೇರಿ ಕೋವಿಡ್ ಆಸ್ಪತ್ರೆಯಿಂದ ಮೊಬೈಲ್ ಫೋನ್ ಕಳ್ಳತನ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೆಡಿ ಸುಮಂತ್ (24) ಬಂಧಿತ ಆರೋಪಿಯಾಗಿದ್ದಾನೆ.

ಪತ್ನಿ ಆತ್ಮಹತ್ಯೆ ಪ್ರಕರಣ ಸಂಬಂಧ ಮಲಯಾಳಂ ನಟ ಉನ್ನಿ ದೇವ್ ಬಂಧನ!
ಪತ್ನಿ ಪ್ರಿಯಾಂಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಉನ್ನಿ ದೇವ್ ಅವರನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬೆಂಗಳೂರು: ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ, ಇಬ್ಬರ ಬಂಧನ
ಕಾಳ ಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದ ಇಬ್ಬರೂ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅಕ್ರಮವಾಗಿ ರೆಮಿಡಿಸಿವಿರ್ ಮಾರಾಟ: ಬೆಂಗಳೂರಿನಲ್ಲಿ ಸ್ಟಾಫ್ ನರ್ಸ್ ಬಂಧನ
ನಗರದಲ್ಲಿ ಅಕ್ರಮವಾಗಿ ರೆಮಿಡಿಸಿವಿರ್ ಮಾರಾಟ ಮಾಡುತ್ತಿದ್ದ ಮತ್ತೋರ್ವ ಆರೋಪಿಯನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮನು (26) ಬಂಧಿತ ಆರೋಪಿ.

ಪ್ರಧಾನಿ ಮೋದಿಯನ್ನು ಟೀಕಿಸುವ ಫೋಸ್ಟರ್ ಗಳು: 15 ಜನರ ಬಂಧನ, 17 ಎಫ್ ಐ ಆರ್ ದಾಖಲು
ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಪೋಸ್ಟರ್ ಗಳನ್ನು ದೆಹಲಿಯ ವಿವಿಧೆಡೆ ಅಂಟಿಸಿದ್ದ ಆರೋಪದ ಮೇರೆಗೆ ದೆಹಲಿ ಪೊಲೀಸರು 15 ಮಂದಿಯನ್ನು ಬಂಧಿಸಿದ್ದು, 17 ಎಫ್ ಐಆರ್ ಗಳನ್ನು ಹಾಕಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಬೆಂಗಳೂರು: ಸೋಂಕಿತರಿಗೆ ಐಸಿಯು ಬೆಡ್ ಕೊಡಿಸುವುದಾಗಿ ವಂಚಿಸುತ್ತಿದ್ದವನ ಬಂಧನ
ಕೋವಿಡ್ -19 ಸೋಂಕಿತರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಐಸಿಯು ಬೆಡ್ ಕೊಡಿಸುವುದಾಗಿ ಹೇಳಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪಿ ಓರ್ವನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

ಒಎನ್ ಜಿಸಿ ಉದ್ಯೋಗಿಗಳ ಅಪಹರಣ ಪ್ರಕರಣ: ಪೊಲೀಸ್ ಪೇದೆ ಸೇರಿ ಮೂವರ ಬಂಧನ
ಅಸ್ಸಾಂ ನಲ್ಲಿ ಒಎನ್ ಜಿಸಿ ಉದ್ಯೋಗಿಗಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆ ಸೇರಿ ಮೂವರನ್ನು ಬಂಧಿಸಲಾಗಿದೆ.

ಸೋಲಾರ್ ಹಗರಣ: ಉದ್ಯಮಿ ಸರಿತಾ ನಾಯರ್ ಬಂಧನ
ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಮಹಿಳಾ ಉದ್ಯಮಿ ಸರಿತಾ ನಾಯರ್ ಅವರನ್ನು ಕೋಜಿಕ್ಕೋಡ್ ಪೊಲೀಸರು ಬಂಧಿಸಿದ್ದಾರೆ.

